ಯಾಜಕಕಾಂಡ 23 : 1 (ERVKN)
ವಿಶೇಷ ಹಬ್ಬದ ದಿನಗಳು ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
ಯಾಜಕಕಾಂಡ 23 : 2 (ERVKN)
“ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ಯೆಹೋವನಿಂದ ಆರಿಸಲ್ಪಟ್ಟ ಹಬ್ಬದದಿನಗಳಲ್ಲಿ ಪವಿತ್ರಸಭೆ ಕೂಡಬೇಕೆಂಬುದಾಗಿ ಪ್ರಕಟಿಸಬೇಕು. ಇವು ನನ್ನ ವಿಶೇಷ ಹಬ್ಬದ ದಿನಗಳು.
ಯಾಜಕಕಾಂಡ 23 : 3 (ERVKN)
ಸಬ್ಬತ್ತು “ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.
ಯಾಜಕಕಾಂಡ 23 : 4 (ERVKN)
ಪಸ್ಕಹಬ್ಬ “ಇವುಗಳು ಯೆಹೋವನಿಂದ ಆರಿಸಲ್ಪಟ್ಟ ಹಬ್ಬದ ದಿನಗಳು. ಆ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಟಗಳು ನಡೆಸಲ್ಪಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಿಸಬೇಕು.
ಯಾಜಕಕಾಂಡ 23 : 5 (ERVKN)
ಯೆಹೋವನ ಪಸ್ಕಹಬ್ಬವು ಮೊದಲನೆ ತಿಂಗಳ ಹದಿನಾಲ್ಕನೆಯ ದಿನದ ಸಾಯಂಕಾಲ ಅಂದರೆ ಸೂರ್ಯಸ್ತಮಾನವಾದ ಸಮಯದಲ್ಲಿ ನಡೆಯುತ್ತದೆ.
ಯಾಜಕಕಾಂಡ 23 : 6 (ERVKN)
ಹುಳಿಯಿಲ್ಲದ ರೊಟ್ಟಿಯ ಹಬ್ಬ “ಅದೇ ತಿಂಗಳ ಹದಿನೈದನೆಯ ದಿನದಲ್ಲಿ ಯೆಹೋವನ ಹುಳಿಯಿಲ್ಲದ ರೊಟ್ಟಿಯ ಹಬ್ಬವಿರುತ್ತದೆ. ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನುವಿರಿ.
ಯಾಜಕಕಾಂಡ 23 : 7 (ERVKN)
ಈ ಹಬ್ಬದ ದಿನದ ಮೊದಲನೆಯ ದಿನದಲ್ಲಿ ನೀವು ವಿಶೇಷ ಸಭೆಯಾಗಿ ಸೇರಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.
ಯಾಜಕಕಾಂಡ 23 : 8 (ERVKN)
ಏಳು ದಿನಗಳವರೆಗೆ ನೀವು ಯೆಹೋವನಿಗೆ ಹೋಮವನ್ನು ಅರ್ಪಿಸಬೇಕು. ಏಳನೆಯ ದಿನದಲ್ಲಿ ನೀವು ಇನ್ನೊಂದು ಬಾರಿ ವಿಶೇಷ ಸಭೆಯಾಗಿ ಸೇರಬೇಕು. ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.”
ಯಾಜಕಕಾಂಡ 23 : 9 (ERVKN)
ಪ್ರಥಮ ಬೆಳೆಗಳ ಹಬ್ಬ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
ಯಾಜಕಕಾಂಡ 23 : 10 (ERVKN)
“ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುವ ದೇಶದಲ್ಲಿ ನೀವು ನೆಲೆಸಿದ ನಂತರ ಅಲ್ಲಿ ಬೆಳೆಯನ್ನು ಕೊಯ್ಯುವಿರಿ. ಆ ಸಮಯದಲ್ಲಿ ನಿಮ್ಮ ಬೆಳೆಯ ಪ್ರಥಮ ಸಿವುಡನ್ನು ಯಾಜಕನ ಬಳಿಗೆ ತರಬೇಕು.
ಯಾಜಕಕಾಂಡ 23 : 11 (ERVKN)
ಯಾಜಕನು ಸಿವುಡನ್ನು ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಆಗ ನೀವು ಸ್ವೀಕೃತರಾಗಲು ಯೋಗ್ಯರಾಗುವಿರಿ. ಸಬ್ಬತ್ತಾದ ನಂತರ ಯಾಜಕನು ಸಿವುಡನ್ನು ಯೆಹೋವನಿಗೆ ನಿವಾಳಿಸುವನು.
ಯಾಜಕಕಾಂಡ 23 : 12 (ERVKN)
“ನೀವು ಸಿವುಡನ್ನು ನಿವಾಳಿಸುವ ದಿನದಲ್ಲಿ ಒಂದು ವರ್ಷದ ಗಂಡು ಕುರಿಮರಿಯನ್ನು ಅರ್ಪಿಸಬೇಕು. ಆ ಕುರಿಮರಿಯಲ್ಲಿ ಯಾವ ದೋಷವೂ ಇರಬಾರದು. ಅದು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿತವಾಗುವುದಕ್ಕಾಗಿ ನೇಮಿತವಾಗಿರುವುದು.
ಯಾಜಕಕಾಂಡ 23 : 13 (ERVKN)
ನೀವು ಎಣ್ಣೆ ಬೆರೆಸಿದ ಹದಿನಾರು ಬಟ್ಟಲು* ಹದಿನಾರು ಬಟ್ಟಲು ಅಕ್ಷರಶಃ, “2/10 ಏಫಾ.” ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯಸಮರ್ಪಣೆಗಾಗಿ ಅರ್ಪಿಸಬೇಕು. ನೀವು ಕಾಲುಭಾಗ † ಕಾಲುಭಾಗ ಅಕ್ಷರಶಃ, “1/4 ಹಿನ್.” ದ್ರಾಕ್ಷಾರಸವನ್ನು ಅರ್ಪಿಸಬೇಕು. ಆ ಯಜ್ಞದ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ.
ಯಾಜಕಕಾಂಡ 23 : 14 (ERVKN)
ನೀವು ಯಾವ ಹೊಸ ಧಾನ್ಯವನ್ನಾಗಲಿ ಹಣ್ಣನ್ನಾಗಲಿ ಹೊಸ ಧಾನ್ಯದಿಂದ ಮಾಡಿದ ರೊಟ್ಟಿಯನ್ನಾಗಲಿ ದೇವರಿಗೆ ಅರ್ಪಿಸುವ ಮೊದಲು ತಿನ್ನಬಾರದು. ಈ ನಿಯಮವು ನಿಮ್ಮ ಎಲ್ಲಾ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸ ಸ್ಥಾನಗಳಲ್ಲಿಯೂ ಶಾಶ್ವತವಾಗಿದೆ.
ಯಾಜಕಕಾಂಡ 23 : 15 (ERVKN)
ಪಂಚಾಶತ್ತಮ ಹಬ್ಬ “ಆ ಭಾನುವಾರ ಬೆಳಿಗ್ಗೆ ಮೊದಲುಗೊಂಡು ಅಂದರೆ ನೈವೇದ್ಯವಾಗಿ ನಿವಾಳಿಸುವುದಕ್ಕಾಗಿ ಸಿವುಡನ್ನು ತಂದ ದಿನದಿಂದ ಹಿಡಿದು ಏಳು ವಾರಗಳನ್ನು ಲೆಕ್ಕಿಸಿರಿ.
ಯಾಜಕಕಾಂಡ 23 : 16 (ERVKN)
ಏಳು ವಾರಗಳು ಮುಗಿದ ಭಾನುವಾರ ಅಂದರೆ ಐವತ್ತು ದಿನಗಳ ನಂತರ ನೀವು ಯೆಹೋವನಿಗೆ ಹೊಸಬೆಳೆಯನ್ನು ಸಮರ್ಪಿಸುವಿರಿ.
ಯಾಜಕಕಾಂಡ 23 : 17 (ERVKN)
ಆ ದಿನದಲ್ಲಿ ನಿಮ್ಮ ಮನೆಗಳಿಂದ ಎರಡು ರೊಟ್ಟಿಗಳನ್ನು ತನ್ನಿರಿ. ಆ ರೊಟ್ಟಿಗಳು ನೈವೇದ್ಯವಾಗಿ ನಿವಾಳಿಸಲ್ಪಡುವುದಕ್ಕಾಗಿದೆಯಷ್ಟೆ. ಹುಳಿಯನ್ನು ಉಪಯೋಗಿಸಿ ಹದಿನಾರು ಬಟ್ಟಲು ಹದಿನಾರು ಬಟ್ಟಲು ಅಕ್ಷರಶಃ, “2/10 ಏಫಾ.” ಗೋಧಿಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಿರಿ. ಅದು ನಿಮ್ಮ ಪ್ರಥಮ ಬೆಳೆಯಿಂದ ಯೆಹೋವನಿಗೆ ಸಮರ್ಪಿಸುವ ಕಾಣಿಕೆಯಾಗಿರುವುದು.
ಯಾಜಕಕಾಂಡ 23 : 18 (ERVKN)
“ಜನರು ಸಮರ್ಪಿಸುವ ರೊಟ್ಟಿ, ಧಾನ್ಯ ಮತ್ತು ದ್ರಾಕ್ಷಾರಸಗಳೊಂದಿಗೆ ಒಂದು ಹೋರಿ, ಎರಡು ಟಗರು ಮತ್ತು ಒಂದು ವರ್ಷದ ಏಳು ಕುರಿಮರಿಗಳನ್ನು ಅರ್ಪಿಸಲಾಗುವುದು. ಆ ಪಶುಗಳಲ್ಲಿ ಯಾವ ದೋಷವು ಇರಬಾರದು. ಅವುಗಳು ಯೆಹೋವನಿಗೆ ಅಗ್ನಿಯ ಮೂಲಕ ಅರ್ಪಿತವಾಗಲಿರುವ ಸಮರ್ಪಣೆಗಳಾಗಿವೆ. ಅದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿದೆ.
ಯಾಜಕಕಾಂಡ 23 : 19 (ERVKN)
ನೀವು ಪಾಪಪರಿಹಾರಕ ಸಮರ್ಪಣೆಯಾಗಿ ಒಂದು ಹೋತವನ್ನೂ ಸಮಾಧಾನಯಜ್ಞವಾಗಿ ಒಂದು ವರ್ಷದ ಎರಡು ಮರಿಟಗರುಗಳನ್ನೂ ಅರ್ಪಿಸಬೇಕು.
ಯಾಜಕಕಾಂಡ 23 : 20 (ERVKN)
“ಯಾಜಕನು ಅವುಗಳನ್ನು ಪ್ರಥಮ ಬೆಳೆಯಿಂದ ಮಾಡಿದ ರೊಟ್ಟಿಯೊಂದಿಗೆ ನೈವೇದ್ಯವಾಗಿ ಎರಡು ಕುರಿಮರಿಗಳೊಂದಿಗೆ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಅವು ಯೆಹೋವನಿಗೆ ಪವಿತ್ರವಾಗಿರುತ್ತವೆ. ಅವು ಯಾಜಕರಿಗೆ ಸಲ್ಲುತ್ತವೆ.
ಯಾಜಕಕಾಂಡ 23 : 21 (ERVKN)
ಅದೇ ದಿನದಲ್ಲಿ ನೀವು ಪವಿತ್ರಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಈ ನಿಯಮವು ಶಾಶ್ವತವಾಗಿರುವುದು.
ಯಾಜಕಕಾಂಡ 23 : 22 (ERVKN)
“ಅಲ್ಲದೆ ನಿಮ್ಮ ದೇಶದಲ್ಲಿ ಪೈರುಗಳನ್ನು ಕೊಯ್ಯುವಾಗ ಹೊಲದ ಮೂಲೆಗಳವರೆಗೆ ಇರುವುದನ್ನೆಲ್ಲಾ ಕೊಯ್ಯಬೇಡಿರಿ. ನೆಲದ ಮೇಲೆ ಬೀಳುವ ಧಾನ್ಯಗಳನ್ನು ಹಕ್ಕಲಾಯಬಾರದು. ಬಡವರಿಗಾಗಿಯೂ ನಿಮ್ಮ ದೇಶದ ಮೂಲಕ ಪ್ರಯಣಮಾಡುವ ಪರದೇಶಸ್ಥರಿಗಾಗಿಯೂ ಅವುಗಳನ್ನು ಬಿಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!”
ಯಾಜಕಕಾಂಡ 23 : 23 (ERVKN)
ತುತ್ತೂರಿಗಳ ಹಬ್ಬ ಯೆಹೋವನು ತಿರುಗಿ ಮೋಶೆಗೆ ಹೇಳಿದ್ದೇನೆಂದರೆ:
ಯಾಜಕಕಾಂಡ 23 : 24 (ERVKN)
“ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಮೊದಲಿನ ದಿನವು ನಿಮಗೆ ವಿಶ್ರಾಂತಿಯ ವಿಶೇಷ ದಿನವಾಗಿರಬೇಕು. ಆಗ ನೀವು ಪವಿತ್ರಸಭೆಯಾಗಿ ಸೇರಬೇಕು. ಜ್ಞಾಪಕಮಾಡುವ ವಿಶೇಷ ಸಮಯಕ್ಕಾಗಿ ನೀವು ತುತ್ತೂರಿಯನ್ನು ಊದಿಸಬೇಕು.
ಯಾಜಕಕಾಂಡ 23 : 25 (ERVKN)
ನೀವು ಯಾವ ಕೆಲಸವನ್ನೂ ಮಾಡಬಾರದು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯನ್ನು ಸಲ್ಲಿಸುವಿರಿ.”
ಯಾಜಕಕಾಂಡ 23 : 26 (ERVKN)
ದೋಷಪರಿಹಾರಕ ದಿನ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
ಯಾಜಕಕಾಂಡ 23 : 27 (ERVKN)
“ಏಳನೆಯ ತಿಂಗಳಿನ ಹತ್ತನೆಯ ದಿನವು ದೋಷಪರಿಹಾರಕ ದಿನವಾಗಿರುವುದು. ಆಗ ಪವಿತ್ರ ಸಭೆಯಾಗಿ ಸೇರಬೇಕು. ನೀವು ಆಹಾರವನ್ನು ತಿನ್ನಬಾರದು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಕಾಣಿಕೆಯನ್ನು ಸಲ್ಲಿಸಬೇಕು.
ಯಾಜಕಕಾಂಡ 23 : 28 (ERVKN)
ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಯಾಕೆಂದರೆ ಅದು ದೋಷಪರಿಹಾರಕ ದಿನವಾಗಿರುತ್ತದೆ. ಆ ದಿನದಲ್ಲಿ ಯಾಜಕರು ಯೆಹೋವನ ಸನ್ನಿಧಿಗೆ ಹೋಗಿ ಆಚಾರವಿಧಿಗಳ ಪ್ರಕಾರ ನಿಮಗಾಗಿ ಪ್ರಾಯಶ್ಚಿತ್ತ ಮಾಡುವರು.
ಯಾಜಕಕಾಂಡ 23 : 29 (ERVKN)
“ಈ ದಿನದಲ್ಲಿ ಯಾವನಾದರೂ ಉಪವಾಸ ಮಾಡದಿದ್ದರೆ ಅವನನ್ನು ಅವನ ಕುಲದಿಂದ ತೆಗೆದುಹಾಕಬೇಕು.
ಯಾಜಕಕಾಂಡ 23 : 30 (ERVKN)
ಈ ದಿನದಲ್ಲಿ ಕೆಲಸಮಾಡುವವನನ್ನು ಇಸ್ರೇಲರೊಂದಿಗೆ ಇರದಂತೆ ನಾಶಮಾಡುವೆನು.
ಯಾಜಕಕಾಂಡ 23 : 31 (ERVKN)
ನೀವು ಅಂದು ಯಾವ ಕೆಲಸವನ್ನೂ ಮಾಡಬಾರದು. ನೀವು ಎಲ್ಲೇ ವಾಸವಾಗಿದ್ದರೂ ಈ ಕಟ್ಟಳೆ ನಿಮಗೆ ಶಾಶ್ವತವಾಗಿದೆ.
ಯಾಜಕಕಾಂಡ 23 : 32 (ERVKN)
ಅದು ನಿಮಗಾಗಿ ವಿಶ್ರಾಂತಿಯ ವಿಶೇಷ ದಿನವಾಗಿರುವುದು. ನೀವು ಆಹಾರವನ್ನು ತಿನ್ನಬಾರದು.§ ನೀವು … ತಿನ್ನಬಾರದು ಅಕ್ಷರಶಃ, “ನಿಮ್ಮನ್ನು ದೀನರನ್ನಾಗಿ ಮಾಡಿಕೊಳ್ಳಬೇಕು.” ತಿಂಗಳಿನ ಒಂಭತ್ತನೆಯ ದಿನದ ನಂತರ ಸಾಯಂಕಾಲದಲ್ಲಿ ಈ ವಿಶ್ರಾಂತಿಯ ವಿಶೇಷ ದಿನವನ್ನು ಪ್ರಾರಂಭಿಸುವಿರಿ. ಈ ವಿಶ್ರಾಂತಿಯ ವಿಶೇಷ ದಿನವು ಆ ಸಾಯಂಕಾಲದಿಂದ ಹಿಡಿದು ಮರುದಿನ ಸಾಯಂಕಾಲದವರೆಗೆ ಮುಂದುವರಿಯುವುದು.”
ಯಾಜಕಕಾಂಡ 23 : 33 (ERVKN)
ಪರ್ಣಶಾಲೆಗಳ ಹಬ್ಬ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
ಯಾಜಕಕಾಂಡ 23 : 34 (ERVKN)
“ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಹದಿನೈದನೆಯ ದಿನವು ಪರ್ಣಶಾಲೆಗಳ ಹಬ್ಬವಾಗಿರುತ್ತದೆ. ಯೆಹೋವನ ಈ ಹಬ್ಬದ ಕಾಲವು ಏಳು ದಿನಗಳವರೆಗೆ ಮುಂದುವರಿಯುವುದು.
ಯಾಜಕಕಾಂಡ 23 : 35 (ERVKN)
ಮೊದಲನೆಯ ದಿನದಲ್ಲಿ ಪವಿತ್ರಸಭೆಯಾಗಿ ಸೇರಬೇಕು. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು.
ಯಾಜಕಕಾಂಡ 23 : 36 (ERVKN)
ನೀವು ಏಳು ದಿನಗಳವರೆಗೆ ಅಗ್ನಿಯ ಮೂಲಕ ಯೆಹೋವನಿಗೆ ಯಜ್ಞವನ್ನು ಅರ್ಪಿಸಬೇಕು. ಎಂಟನೆಯ ದಿನದಲ್ಲಿ ಇನ್ನೊಂದು ಬಾರಿ ಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯಜ್ಞವನ್ನು ಅರ್ಪಿಸಬೇಕು. ಇದು ಪವಿತ್ರಸಭೆಯಾಗಿರುವುದು. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು.
ಯಾಜಕಕಾಂಡ 23 : 37 (ERVKN)
“ಯೆಹೋವನಿಗೆ ವಿಶೇಷ ಹಬ್ಬದ ದಿನಗಳು ಇವುಗಳೇ. ಈ ವಿಶೇಷ ದಿನಗಳಲ್ಲಿ ನೀವು ಪವಿತ್ರಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾಗುವ ಸರ್ವಾಂಗಹೋಮ, ಧಾನ್ಯಸಮರ್ಪಣೆ, ಯಜ್ಞಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಬೇಕು. ನೀವು ಆ ಕಾಣಿಕೆಗಳನ್ನು ಸರಿಯಾದ ಸಮಯದಲ್ಲಿ ಅರ್ಪಿಸಬೇಕು.
ಯಾಜಕಕಾಂಡ 23 : 38 (ERVKN)
ಯೆಹೋವನನ್ನು ಜ್ಞಾಪಕಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಆ ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಆ ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು ನೆರವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮರ್ಪಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು.
ಯಾಜಕಕಾಂಡ 23 : 39 (ERVKN)
“ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ನಿಮ್ಮ ದೇಶದಲ್ಲಿ ಪೈರುಗಳನ್ನು ಸಂಗ್ರಹಿಸಿದ ನಂತರ, ಏಳು ದಿನಗಳವರೆಗೆ ನೀವು ಯೆಹೋವನ ಹಬ್ಬವನ್ನು ಆಚರಿಸಬೇಕು. ನೀವು ಮೊದಲನೆಯ ಮತ್ತು ಎಂಟನೆಯ ದಿನದಲ್ಲಿ ವಿಶ್ರಮಿಸಬೇಕು.
ಯಾಜಕಕಾಂಡ 23 : 40 (ERVKN)
ಪ್ರಥಮ ದಿನದಲ್ಲಿ ನೀವು ಮರಗಳಿಂದ ಉತ್ತಮ ಹಣ್ಣನ್ನೂ ಖರ್ಜೂರಮರದ ಗರಿಗಳನ್ನೂ ಎಲೆತುಂಬಿದ ಕೊಂಬೆಗಳನ್ನೂ ವಿಲೋಸಸ್ಯಗಳನ್ನೂ ತೆಗೆದುಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಈ ಹಬ್ಬದ ದಿನವನ್ನು ಏಳು ದಿನಗಳವರೆಗೆ ಆಚರಿಸಬೇಕು.
ಯಾಜಕಕಾಂಡ 23 : 41 (ERVKN)
ನೀವು ಪ್ರತಿ ವರ್ಷ ಏಳು ದಿನಗಳವರೆಗೆ ಈ ಹಬ್ಬದ ದಿನವನ್ನು ಆಚರಿಸಬೇಕು. ಈ ನಿಯಮ ಶಾಶ್ವತವಾಗಿದೆ. ಏಳನೆಯ ತಿಂಗಳಲ್ಲಿ ಈ ಹಬ್ಬದ ದಿನವನ್ನು ನೀವು ಆಚರಿಸಬೇಕು.
ಯಾಜಕಕಾಂಡ 23 : 42 (ERVKN)
ನೀವು ಏಳು ದಿನಗಳವರೆಗೆ ಪರ್ಣಶಾಲೆಗಳಲ್ಲಿ ವಾಸಿಸಬೇಕು. ಇಸ್ರೇಲರಲ್ಲಿ ಹುಟ್ಟಿದವರೆಲ್ಲರೂ ಆ ಪರ್ಣಶಾಲೆಗಳಲ್ಲಿ ವಾಸಿಸುವರು.
ಯಾಜಕಕಾಂಡ 23 : 43 (ERVKN)
ನಾನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ಕರೆದು ತಂದಾಗ, ಈ ಪರ್ಣಶಾಲೆಗಳಲ್ಲಿ ವಾಸಿಸುವಂತೆ ಮಾಡಿದವನು ನಾನೇ ಎಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು. ನಾನೇ ನಿಮ್ಮ ದೇವರಾದ ಯೆಹೋವನು!”
ಯಾಜಕಕಾಂಡ 23 : 44 (ERVKN)
ಆದ್ದರಿಂದ ಮೋಶೆಯು ಯೆಹೋವನನ್ನು ಸನ್ಮಾನಿಸುವುದಕ್ಕಾಗಿ ಸೇರಿಬರುವ ವಿಶೇಷ ಸಭೆಗಳ ಕುರಿತು ಜನರಿಗೆ ಹೇಳಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44