ಯಾಜಕಕಾಂಡ 24 : 1 (ERVKN)
ದೀಪಸ್ತಂಭ ಮತ್ತು ಪವಿತ್ರ ರೊಟ್ಟಿ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
ಯಾಜಕಕಾಂಡ 24 : 2 (ERVKN)
“ಎಣ್ಣೆ ಮರದ ಕಾಯಿಗಳನ್ನು ಕುಟ್ಟಿ ತೆಗೆದ ಶುದ್ಧವಾದ ಎಣ್ಣೆಯನ್ನು ಇಸ್ರೇಲರು ನಿನ್ನ ಬಳಿಗೆ ತರಬೇಕೆಂದು ಆಜ್ಞಾಪಿಸು. ದೇವದರ್ಶನಗುಡಾರದಲ್ಲಿರುವ ದೀಪಗಳನ್ನು ಉರಿಸಲು ಆ ಎಣ್ಣೆ ಬೇಕಾಗಿರುತ್ತದೆ. ಆ ದೀಪಗಳು ಆರಿಹೋಗದೆ ಉರಿಯುತ್ತಲೇ ಇರಬೇಕು.
ಯಾಜಕಕಾಂಡ 24 : 3 (ERVKN)
ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೆ ದೀಪಗಳು ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸುವನು. ಇದು ತೆರೆಯ ಹೊರಗೆ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಇರುವುದು. ಈ ನಿಯಮ ಶಾಶ್ವತವಾದದ್ದು.
ಯಾಜಕಕಾಂಡ 24 : 4 (ERVKN)
ಶುದ್ಧಚಿನ್ನದಿಂದ ಮಾಡಿದ ದೀಪಸ್ತಂಭದಲ್ಲಿ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಉರಿಯುತ್ತಿರುವಂತೆ ಆರೋನನು ನೋಡಿಕೊಳ್ಳಬೇಕು.
ಯಾಜಕಕಾಂಡ 24 : 5 (ERVKN)
“ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿ ರೊಟ್ಟಿಯನ್ನು ಮಾಡಲು ಆರು ಸೇರು ಹಿಟ್ಟನ್ನು ಉಪಯೋಗಿಸಬೇಕು.
ಯಾಜಕಕಾಂಡ 24 : 6 (ERVKN)
ವುಗಳನ್ನು ಯೆಹೋವನ ಸನ್ನಿಧಿಯಲ್ಲಿರುವ ಚಿನ್ನದ ಮೇಜಿನ ಮೇಲೆ ಎರಡು ಸಾಲಾಗಿ ಇಡಬೇಕು. ಒಂದೊಂದು ಸಾಲಿನಲ್ಲಿ ಆರಾರು ರೊಟ್ಟಿಗಳಿರುವವು.
ಯಾಜಕಕಾಂಡ 24 : 7 (ERVKN)
ಪ್ರತಿ ಸಾಲಿನಲ್ಲಿ ಶುದ್ಧವಾದ ಧೂಪದ್ರವ್ಯವನ್ನಿಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಸಮರ್ಪಣೆಯನ್ನು ಯೆಹೋವನ ಜ್ಞಾಪಕಕ್ಕೆ ತರುವುದು.
ಯಾಜಕಕಾಂಡ 24 : 8 (ERVKN)
ರತಿ ಸಬ್ಬತ್‌ದಿನದಲ್ಲಿ ಆರೋನನು ಯೆಹೋವನ ಸನ್ನಿಧಿಯಲ್ಲಿ ರೊಟ್ಟಿಯನ್ನು ಕ್ರಮವಾಗಿ ಯಾವಾಗಲೂ ಇಡಬೇಕು. ಇಸ್ರೇಲರೊಂದಿಗೆ ಮಾಡಲ್ಪಟ್ಟ ಒಡಂಬಡಿಕೆಯು ಶಾಶ್ವತವಾದದ್ದು.
ಯಾಜಕಕಾಂಡ 24 : 9 (ERVKN)
ಆ ರೊಟ್ಟಿಯು ಆರೋನನಿಗೆ ಮತ್ತು ಅವನ ಪುತ್ರರಿಗೆ ಸಲ್ಲತಕ್ಕದ್ದು. ಅವರು ರೊಟ್ಟಿಯನ್ನು ಪವಿತ್ರಸ್ಥಳದಲ್ಲಿ ತಿನ್ನುವರು. ಯಾಕೆಂದರೆ ಅದು ಮಹಾ ಪವಿತ್ರವಾದದ್ದು. ಅದು ಅಗ್ನಿಯ ಮೂಲಕ ಅರ್ಪಿಸಿದ ಯಜ್ಞಗಳಲ್ಲಿ ಒಂದಾಗಿದೆ. ಆ ರೊಟ್ಟಿಯು ಶಾಶ್ವತವಾಗಿ ಆರೋನನಿಗೆ ಸಲ್ಲತಕ್ಕದ್ದು.”
ಯಾಜಕಕಾಂಡ 24 : 10 (ERVKN)
ದೇವರನ್ನು ಶಪಿಸಿದ ಮನುಷ್ಯನು ಇಸ್ರೇಲಿನ ಒಬ್ಬ ಸ್ತ್ರೀಗೆ ಒಬ್ಬ ಮಗನಿದ್ದನು. ಅವನ ತಂದೆ ಈಜಿಪ್ಟಿನವನು. ಪಾಳೆಯದಲ್ಲಿದ್ದ ಇಸ್ರೇಲರ ಮಧ್ಯದಿಂದ ಅವನು ಹೊರಬಂದನು. ಅವನು ಒಬ್ಬ ಇಸ್ರೇಲನೊಡನೆ ಜಗಳವಾಡತೊಡಗಿದನು.
ಯಾಜಕಕಾಂಡ 24 : 11 (ERVKN)
ಅವನು ದೂಷಿಸಲು ಪ್ರಾರಂಭಿಸಿ ಯೆಹೋವನ ನಾಮದ ಬಗ್ಗೆ ಕೆಟ್ಟಮಾತುಗಳನ್ನು ಹೇಳತೊಡಗಿದನು. ಆದ್ದರಿಂದ ಜನರು ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. (ಆ ಮನುಷ್ಯನ ತಾಯಿಯ ಹೆಸರು ಶೆಲೋಮೀತ್. ಅವಳು ದಾನ್ ಕುಲದವನಾದ ದಿಬ್ರೀಯನ ಮಗಳು.)
ಯಾಜಕಕಾಂಡ 24 : 12 (ERVKN)
ಜನರು ಅವನನ್ನು ಸೆರೆಹಿಡಿದು, ಯೆಹೋವನ ಸ್ಪಷ್ಟವಾದ ಆಜ್ಞೆಗಾಗಿ ಕಾದುಕೊಂಡಿದ್ದರು.
ಯಾಜಕಕಾಂಡ 24 : 13 (ERVKN)
ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
ಯಾಜಕಕಾಂಡ 24 : 14 (ERVKN)
“ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗಿರುವ ಸ್ಥಳಕ್ಕೆ ತನ್ನಿರಿ. ಬಳಿಕ ಅವನ ದೂಷಣೆ ಮಾತುಗಳನ್ನು ಕೇಳಿದ ಎಲ್ಲಾ ಜನರನ್ನು ಒಟ್ಟಾಗಿ ಕರೆಸಿರಿ. ಆ ಜನರು ತಮ್ಮ ಕೈಗಳನ್ನು ಅವನ ತಲೆಯ ಮೇಲೆ ಇಡುವರು. ಆ ಬಳಿಕ ಎಲ್ಲಾ ಜನರು ಅವನಿಗೆ ಕಲ್ಲೆಸೆದು ಕೊಲ್ಲಬೇಕು.
ಯಾಜಕಕಾಂಡ 24 : 15 (ERVKN)
ನೀನು ಇಸ್ರೇಲರಿಗೆ ಹೀಗೆ ಹೇಳಬೇಕು: ದೇವದೂಷಣೆ ಮಾಡಿದವನಿಗೆ ಶಿಕ್ಷೆಯಾಗಬೇಕು.
ಯಾಜಕಕಾಂಡ 24 : 16 (ERVKN)
ಯಾವನಾದರೂ ಯೆಹೋವನ ನಾಮದ ವಿರುದ್ಧ ಮಾತಾಡಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಜನರೆಲ್ಲರೂ ಅವನಿಗೆ ಕಲ್ಲೆಸೆದು ಕೊಲ್ಲಬೇಕು. ಯೆಹೋವನ ನಾಮವನ್ನು ನಿಂದಿಸುವ ಪರದೇಶಸ್ಥರಿಗೂ ಅದೇ ರೀತಿಯ ಶಿಕ್ಷೆಯಾಗಬೇಕು. ಯೆಹೋವನ ನಾಮವನ್ನು ನಿಂದಿಸುವವನಿಗೆ ಮರಣಶಿಕ್ಷೆಯಾಗಬೇಕು.
ಯಾಜಕಕಾಂಡ 24 : 17 (ERVKN)
“ಒಬ್ಬನು ಇನ್ನೊಬ್ಬನನ್ನು ಕೊಂದರೆ, ಕೊಂದವನಿಗೆ ಮರಣಶಿಕ್ಷೆಯಾಗಬೇಕು.
ಯಾಜಕಕಾಂಡ 24 : 18 (ERVKN)
ಇನ್ನೊಬ್ಬನಿಗೆ ಸೇರಿದ ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಇನ್ನೊಂದು ಪಶುವನ್ನು ಕೊಡಬೇಕು.
ಯಾಜಕಕಾಂಡ 24 : 19 (ERVKN)
“ಒಬ್ಬನು ತನ್ನ ನೆರೆಯವನನ್ನು ಅಂಗವಿಕಲನನ್ನಾಗಿ ಮಾಡಿದರೆ, ಅವನಿಗೂ ಅದೇ ರೀತಿ ಮಾಡಬೇಕು.
ಯಾಜಕಕಾಂಡ 24 : 20 (ERVKN)
ಮುರಿದ ಮೂಳೆಗೆ ಬದಲಾಗಿ ಅವನ ಮೂಳೆಯನ್ನು ಮುರಿಯಬೇಕು. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಯಬೇಕು.
ಯಾಜಕಕಾಂಡ 24 : 21 (ERVKN)
ಒಬ್ಬನು ಪಶುವೊಂದನ್ನು ಕೊಂದರೆ, ಅವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಆದರೆ ಒಬ್ಬನು ಇನ್ನೊಬ್ಬನನ್ನು ಕೊಂದರೆ, ಕೊಂದವನಿಗೆ ಮರಣಶಿಕ್ಷೆಯಾಗಬೇಕು.
ಯಾಜಕಕಾಂಡ 24 : 22 (ERVKN)
“ಈ ಕಟ್ಟಳೆ ನ್ಯಾಯವಾದದ್ದು. ಅದು ನಿಮ್ಮ ಸ್ವದೇಶದವರಿಗೆ ಅನ್ವಯಿಸುವಂತೆ ಪರದೇಶಸ್ಥರಿಗೂ ಅನ್ವಯಿಸುವುದು. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು!”
ಯಾಜಕಕಾಂಡ 24 : 23 (ERVKN)
ಬಳಿಕ ಮೋಶೆಯು ಇಸ್ರೇಲರೊಂದಿಗೆ ಮಾತಾಡಿದನು. ಆಗ ಅವರು ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಅವನಿಗೆ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.

1 2 3 4 5 6 7 8 9 10 11 12 13 14 15 16 17 18 19 20 21 22 23