ಯಾಜಕಕಾಂಡ 3 : 1 (ERVKN)
“ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ತನ್ನ ಪಶುಮಂದೆಯಿಂದ ಗಂಡುಪಶುವನ್ನಾಗಲಿ ಹೆಣ್ಣುಪಶುವನ್ನಾಗಲಿ ಅರ್ಪಿಸಬಹುದು. ಯೆಹೋವನ ಎದುರಿನಲ್ಲಿ ಅರ್ಪಿಸಲ್ಪಡುವ ಅದು ಅಂಗದೋಷವಿಲ್ಲದ್ದಾಗಿರಬೇಕು.
ಯಾಜಕಕಾಂಡ 3 : 2 (ERVKN)
ಆ ವ್ಯಕ್ತಿಯು ತನ್ನ ಕೈಯನ್ನು ಪಶುವಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಬಾಗಿಲಲ್ಲಿ ಅದನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ಆ ರಕ್ತವನ್ನು ಯಜ್ಞವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.
ಯಾಜಕಕಾಂಡ 3 : 3 (ERVKN)
[This verse may not be a part of this translation]
ಯಾಜಕಕಾಂಡ 3 : 4 (ERVKN)
[This verse may not be a part of this translation]
ಯಾಜಕಕಾಂಡ 3 : 5 (ERVKN)
ಬಳಿಕ ಆರೋನನ ಪುತ್ರರು ಕೊಬ್ಬನ್ನು ವೇದಿಕೆಗೆ ತಂದು ಅದನ್ನು ಬೆಂಕಿಯಲ್ಲಿ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮದ ಮೇಲಿಡಬೇಕು. ಅದು ಅಗ್ನಿಯ ಮೂಲಕ ಅರ್ಪಿಸುವ ಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
ಯಾಜಕಕಾಂಡ 3 : 6 (ERVKN)
“ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಯೆಹೋವನಿಗೆ ಸಮಾಧಾನಯಜ್ಞವಾಗಿ ಕೊಡುವಾಗ, ಆ ಪಶುವಿನಲ್ಲಿ ಯಾವ ದೋಷವೂ ಇರಬಾರದು. ಅದು ಗಂಡು ಅಥವಾ ಹೆಣ್ಣಾಗಿರಬಹುದು.
ಯಾಜಕಕಾಂಡ 3 : 7 (ERVKN)
ಅವನು ಕುರಿಮರಿಯನ್ನು ಅರ್ಪಿಸುವುದಾದರೆ, ಅದನ್ನು ಯೆಹೋವನ ಸನ್ನಿಧಿಗೆ ತರಬೇಕು.
ಯಾಜಕಕಾಂಡ 3 : 8 (ERVKN)
ಅವನು ತನ್ನ ಕೈಯನ್ನು ಪಶುವಿನ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ತರುವಾಯ ಆರೋನನ ಪುತ್ರರು ಅದರ ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.
ಯಾಜಕಕಾಂಡ 3 : 9 (ERVKN)
ಅವನು ಸಮಾಧಾನಯಜ್ಞ ಪಶುವಿನ ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನು ಕರುಳುಗಳ ಮೇಲಿರುವ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೆಲ್ಲಾ ಹೋಮಮಾಡಬೇಕು.
ಯಾಜಕಕಾಂಡ 3 : 10 (ERVKN)
ಅವನು ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಪಿತ್ತಕೋಶದ ಮೇಲೆ ಮೂತ್ರಪಿಂಡಗಳವರೆಗೆ ಇರುವ ಕೊಬ್ಬನ್ನೂ ಯಾಜಕನು ಯಜ್ಞವೇದಿಕೆಯ ಮೇಲೆ ಹೋಮಮಾಡಬೇಕು. ಸಮಾಧಾನ ಯಜ್ಞವನ್ನು ಅರ್ಪಿಸುವ ಕ್ರಮ
ಯಾಜಕಕಾಂಡ 3 : 11 (ERVKN)
ಅದು ಯೆಹೋವನಿಗೆ ಬೆಂಕಿಯ ಮೂಲಕ ಅರ್ಪಿಸಿದ ಆಹಾರವಾಗುವುದು.
ಯಾಜಕಕಾಂಡ 3 : 12 (ERVKN)
“ಸಮರ್ಪಿಸಲ್ಪಡುವ ಪಶು ಆಡಾಗಿದ್ದರೆ, ಸಮರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತರಬೇಕು.
ಯಾಜಕಕಾಂಡ 3 : 13 (ERVKN)
ಅವನು ತನ್ನ ಕೈಯನ್ನು ಆಡಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ಬಳಿಕ ಆರೋನನ ಗಂಡುಮಕ್ಕಳು ಆಡಿನ ರಕ್ತವನ್ನು ವೇದಿಕೆಯ ಮೇಲೆ ಅದರ ಸುತ್ತಲೂ ಚಿಮಿಕಿಸಬೇಕು.
ಯಾಜಕಕಾಂಡ 3 : 14 (ERVKN)
ಅವನು ಸಮಾಧಾನಯಜ್ಞದ ಪಶುವಿನ ವಪೆಯನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಪಿತ್ತಾಶಯದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನೂ ಯೆಹೋವನಿಗೋಸ್ಕರ ಸಮರ್ಪಿಸಬೇಕು.
ಯಾಜಕಕಾಂಡ 3 : 15 (ERVKN)
ಅವನು ಅದರ ಎರಡು ಮೂತ್ರಪಿಂಡಗಳನ್ನು ಮತ್ತು ಸೊಂಟದವರೆಗೆ ಅವುಗಳನ್ನು ಆವರಿಸಿರುವ ಕೊಬ್ಬನ್ನು ಸಮರ್ಪಿಸಬೇಕು. ಅವನು ಪಿತ್ತಾಶಯವನ್ನು ಮತ್ತು ಅದನ್ನು ಅವರಿಸಿರುವ ಕೊಬ್ಬನ್ನು ಸಮರ್ಪಿಸಬೇಕು. ಅವನು ಮೂತ್ರಪಿಂಡಗಳೊಂದಿಗೆ ಪಿತ್ತಾಶಯವನ್ನೂ ಸಮರ್ಪಿಸಬೇಕು.
ಯಾಜಕಕಾಂಡ 3 : 16 (ERVKN)
ಬಳಿಕ ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಇದು ಆಹಾರದ ರೂಪದಲ್ಲಿ ಯೆಹೋವನಿಗೆ ಅರ್ಪಿಸಿದ ಸುವಾಸನೆಯನ್ನು ಉಂಟುಮಾಡುವ ಸಮಾಧಾನಯಜ್ಞವಾಗಿರುತ್ತದೆ. ಆದರೆ ಅದರ ಕೊಬ್ಬು ಯೆಹೋವನಿಗೆ ಸೇರಿದೆ.
ಯಾಜಕಕಾಂಡ 3 : 17 (ERVKN)
ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”

1 2 3 4 5 6 7 8 9 10 11 12 13 14 15 16 17

BG:

Opacity:

Color:


Size:


Font: