ಯಾಜಕಕಾಂಡ 4 : 1 (ERVKN)
ಯೆಹೋವನು ಮೋಶೆಯೊಡನೆ ಮಾತನಾಡಿ ಹೇಳಿದ್ದೇನೆಂದರೆ:
ಯಾಜಕಕಾಂಡ 4 : 2 (ERVKN)
“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ:
ಯಾಜಕಕಾಂಡ 4 : 3 (ERVKN)
“ಅಭಿಷಿಕ್ತನಾದ ಯಾಜಕನು ತಪ್ಪುಮಾಡಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಅರ್ಪಿಸಬೇಕು.
ಯಾಜಕಕಾಂಡ 4 : 4 (ERVKN)
ಅಭಿಷಿಕ್ತನಾದ ಯಾಜಕನು ಹೋರಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
ಯಾಜಕಕಾಂಡ 4 : 5 (ERVKN)
ಬಳಿಕ ಅವನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗೆ ಹೋಗಬೇಕು.
ಯಾಜಕಕಾಂಡ 4 : 6 (ERVKN)
ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಮಹಾ ಪವಿತ್ರಸ್ಥಳದ ಪರದೆಯ ಮುಂಭಾಗದಲ್ಲಿರುವ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮಿಕಿಸಬೇಕು.
ಯಾಜಕಕಾಂಡ 4 : 7 (ERVKN)
ಯಾಜಕನು ಸ್ವಲ್ಪ ರಕ್ತವನ್ನು ಧೂಪವೇದಿಕೆಯ ಮೂಲೆಗಳಿಗೆ ಹಚ್ಚಬೇಕು. (ಈ ವೇದಿಕೆಯು ಯೆಹೋವನ ಸನ್ನಿಧಿಯಲ್ಲಿರುವ ದೇವದರ್ಶನಗುಡಾರದಲ್ಲಿದೆ.) ಯಾಜಕನು ಹೋರಿಯ ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿಯಬೇಕು. (ಈ ವೇದಿಕೆಯು ದೇವದರ್ಶನಗುಡಾರದ ಬಾಗಿಲಲ್ಲಿ ಇರುತ್ತದೆ.)
ಯಾಜಕಕಾಂಡ 4 : 8 (ERVKN)
ಅವನು ಪಾಪಪರಿಹಾರಕ ಯಜ್ಞಕ್ಕಾಗಿ ತಂದಿರುವ ಹೋರಿಯ ಕೊಬ್ಬನ್ನೆಲ್ಲಾ ತೆಗೆಯಬೇಕು. ಅವನು ಅದರ ಒಳಗಿನ ಭಾಗಗಳ ಮೇಲೆ ಮತ್ತು ಅವುಗಳ ಸುತ್ತಲೂ ಇರುವ ಕೊಬ್ಬನ್ನೂ
ಯಾಜಕಕಾಂಡ 4 : 9 (ERVKN)
ಅದರ ಎರಡು ಮೂತ್ರಪಿಂಡಗಳನ್ನೂ ಅವುಗಳ ಸೊಂಟದವರೆಗೆ ಆವರಿಸಿರುವ ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ತೆಗೆಯಬೇಕು. ಅವನು ಮೂತ್ರ ಪಿಂಡಗಳೊಡನೆ ಪಿತ್ತಾಶಯವನ್ನೂ ತೆಗೆಯಬೇಕು.
ಯಾಜಕಕಾಂಡ 4 : 10 (ERVKN)
ಯಾಜಕನು ಈ ಭಾಗಗಳನ್ನು ಸಮಾಧಾನಯಜ್ಞ ಸಮರ್ಪಣೆಯಲ್ಲಿ ಹೋರಿಯ ಭಾಗಗಳನ್ನು ಅರ್ಪಿಸುವ ರೀತಿಯಲ್ಲಿಯೇ ಅರ್ಪಿಸಬೇಕು. ಯಾಜಕನು ಪಶುವಿನ ಭಾಗಗಳನ್ನು ಸರ್ವಾಂಗಹೋಮಮಾಡುವ ವೇದಿಕೆಯ ಮೇಲೆ ಹೋಮ ಮಾಡಬೇಕು.
ಯಾಜಕಕಾಂಡ 4 : 11 (ERVKN)
[This verse may not be a part of this translation]
ಯಾಜಕಕಾಂಡ 4 : 12 (ERVKN)
[This verse may not be a part of this translation]
ಯಾಜಕಕಾಂಡ 4 : 13 (ERVKN)
“ಇಸ್ರೇಲರ ಇಡೀ ಜನಾಂಗವೆಲ್ಲಾ ತಿಳಿಯದೆ ಪಾಪಮಾಡುವ ಸ್ಥಿತಿ ಸಂಭವಿಸಬಹುದು. ಯೆಹೋವನು ಮಾಡಬಾರದೆಂದು ಆಜ್ಞಾಪಿಸಿದವುಗಳಲ್ಲಿ ಯಾವುದಾದರೊಂದನ್ನು ಅವರು ಮಾಡಿದರೆ ಅವರು ದೋಷಿಗಳಾಗುವರು.
ಯಾಜಕಕಾಂಡ 4 : 14 (ERVKN)
ಆ ಪಾಪದ ಕುರಿತು ಅವರಿಗೆ ತಿಳಿದುಬಂದರೆ ಆಗ ಅವರು ಒಂದು ಹೋರಿಯನ್ನು ಇಡೀ ಜನಾಂಗದ ಪಾಪಪರಿಹಾರ ಮಾಡುವ ಸಮರ್ಪಣೆಯಾಗಿ ಅರ್ಪಿಸಬೇಕು. ಅವರು ಹೋರಿಯನ್ನು ದೇವದರ್ಶನಗುಡಾರಕ್ಕೆ ತರಬೇಕು.
ಯಾಜಕಕಾಂಡ 4 : 15 (ERVKN)
ಜನರ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು. ತರುವಾಯ ಒಬ್ಬನು ಯೆಹೋವನ ಸನ್ನಿಧಿಯಲ್ಲಿ ಹೋರಿಯನ್ನು ವಧಿಸಬೇಕು.
ಯಾಜಕಕಾಂಡ 4 : 16 (ERVKN)
ಬಳಿಕ ಅಭಿಷಿಕ್ತನಾದ ಯಾಜಕನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗೆ ಹೋಗಬೇಕು.
ಯಾಜಕಕಾಂಡ 4 : 17 (ERVKN)
ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ತೆರೆಯ ಮುಂದೆ ಏಳು ಸಾರಿ ಚಿಮಿಕಿಸಬೇಕು.
ಯಾಜಕಕಾಂಡ 4 : 18 (ERVKN)
ಬಳಿಕ ಯಾಜಕನು ರಕ್ತದಲ್ಲಿ ಸ್ವಲ್ಪವನ್ನು ವೇದಿಕೆಯ ಮೂಲೆಗಳಲ್ಲಿ ಹಾಕಬೇಕು. (ಈ ವೇದಿಕೆಯು ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇರುತ್ತದೆ.) ಯಾಜಕನು ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿದುಬಿಡಬೇಕು. (ಈ ವೇದಿಕೆಯು ದೇವದರ್ಶನ ಗುಡಾರದ ಬಾಗಿಲಲ್ಲಿ ಇರುತ್ತದೆ.)
ಯಾಜಕಕಾಂಡ 4 : 19 (ERVKN)
ತರುವಾಯ ಯಾಜಕನು ಪಶುವಿನಿಂದ ಕೊಬ್ಬನ್ನೆಲ್ಲಾ ತೆಗೆದು ಅದನ್ನು ವೇದಿಕೆಯ ಮೇಲೆ ಹೋಮಮಾಡಬೇಕು.
ಯಾಜಕಕಾಂಡ 4 : 20 (ERVKN)
ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು.
ಯಾಜಕಕಾಂಡ 4 : 21 (ERVKN)
ಯಾಜಕನು ಈ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ, ಆ ಮೊದಲನೆಯ ಹೋರಿಯನ್ನು ಸುಟ್ಟುಹಾಕಿದ ಸ್ಥಳದಲ್ಲಿಯೇ ಅದನ್ನು ಸುಡಬೇಕು. ಇದು ಇಡೀ ಸಮೂಹದ ಪಾಪವನ್ನು ಪರಿಹಾರ ಮಾಡುವ ಸಮರ್ಪಣೆಯಾಗಿದೆ.
ಯಾಜಕಕಾಂಡ 4 : 22 (ERVKN)
“ಒಬ್ಬ ಅಧಿಪತಿಯು ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದಾದರೊಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗುತ್ತಾನೆ.
ಯಾಜಕಕಾಂಡ 4 : 23 (ERVKN)
ಅಧಿಪತಿಯು ತನ್ನ ಪಾಪದ ಕುರಿತು ತಿಳಿದುಕೊಂಡರೆ, ಅಂಗದೋಷವಿಲ್ಲದ ಹೋತವನ್ನು ತರಬೇಕು. ಅದು ಅವನ ಕಾಣಿಕೆಯಾಗಿರುವುದು.
ಯಾಜಕಕಾಂಡ 4 : 24 (ERVKN)
ಅಧಿಪತಿಯು ತನ್ನ ಕೈಯನ್ನು ಹೋತದ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮ ಪಶುಗಳನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪಪರಿಹಾರಕ ಯಜ್ಞವಾಗಿದೆ.
ಯಾಜಕಕಾಂಡ 4 : 25 (ERVKN)
ಯಾಜಕನು ಪಾಪಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದು,
ಯಾಜಕಕಾಂಡ 4 : 26 (ERVKN)
ಹೋತದ ಕೊಬ್ಬನ್ನೆಲ್ಲಾ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಸಮಾಧಾನ ಯಜ್ಞವಾಗಿದೆ. ಕೊಬ್ಬನ್ನು ಹೋಮಮಾಡುವಂತೆ ಅದನ್ನು ಹೋಮಮಾಡಬೇಕು. ಹೀಗೆ ಯಾಜಕನು ಅಧಿಪತಿಯನ್ನು ಶುದ್ಧಗೊಳಿಸುವನು. ಆಗ ದೇವರು ಆ ಅಧಿಪತಿಯನ್ನು ಕ್ಷಮಿಸುವನು.
ಯಾಜಕಕಾಂಡ 4 : 27 (ERVKN)
“ಸಾಮಾನ್ಯ ಜನರಲ್ಲಿ ಒಬ್ಬನು ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದಾದರೊಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗಿದ್ದಾನೆ.
ಯಾಜಕಕಾಂಡ 4 : 28 (ERVKN)
ಆ ವ್ಯಕ್ತಿ ತನ್ನ ಪಾಪದ ಕುರಿತು ತಿಳಿದುಕೊಂಡರೆ, ಆಗ ಅವನು ಅಂಗದೋಷವಿಲ್ಲದ ಒಂದು ಆಡನ್ನು ತರಬೇಕು. ಅದು ಅವನ ಪಾಪಪರಿಹಾರಕ ಯಜ್ಞವಾಗಿದೆ. ಅವನು ತಾನು ಮಾಡಿದ ಪಾಪಕ್ಕಾಗಿ ಆಡನ್ನು ತರಬೇಕು.
ಯಾಜಕಕಾಂಡ 4 : 29 (ERVKN)
ಅವನು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಸರ್ವಾಂಗಹೋಮಮಾಡುವ ಸ್ಥಳದಲ್ಲಿ ಅದನ್ನು ವಧಿಸಬೇಕು.
ಯಾಜಕಕಾಂಡ 4 : 30 (ERVKN)
ಬಳಿಕ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಆಡಿನ ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು.
ಯಾಜಕಕಾಂಡ 4 : 31 (ERVKN)
ಯಾಜಕನು ಸಮಾಧಾನ ಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.
ಯಾಜಕಕಾಂಡ 4 : 32 (ERVKN)
“ಆ ವ್ಯಕ್ತಿಯು ಕುರಿಮರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ತರುವುದಾದರೆ ಅದು ದೋಷವಿಲ್ಲದ ಹೆಣ್ಣು ಕುರಿಮರಿಯಾಗಿರಬೇಕು.
ಯಾಜಕಕಾಂಡ 4 : 33 (ERVKN)
ಅವನು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಅದನ್ನು ಸರ್ವಾಂಗಹೋಮದ ಯಜ್ಞಪಶುಗಳನ್ನು ವಧಿಸುವ ಸ್ಥಳದಲ್ಲಿ ಪಾಪಪರಿಹಾರಕಯಜ್ಞವಾಗಿ ವಧಿಸಬೇಕು.
ಯಾಜಕಕಾಂಡ 4 : 34 (ERVKN)
ಯಾಜಕನು ಪಾಪಪರಿಹಾರಕಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಕುರಿಮರಿಯ ರಕ್ತವನ್ನೆಲ್ಲಾ ವೇದಿಕೆಯ ಬುಡದಲ್ಲಿ ಸುರಿಯಬೇಕು.
ಯಾಜಕಕಾಂಡ 4 : 35 (ERVKN)
ಯಾಜಕನು ಸಮಾಧಾನ ಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಈ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35

BG:

Opacity:

Color:


Size:


Font: