ಲೂಕನು 15 : 1 (ERVKN)
ಸ್ವರ್ಗದಲ್ಲಿ ಆನಂದ (ಮತ್ತಾಯ 18:12-14) ಅನೇಕ ಸುಂಕವಸೂಲಿಗಾರರು ಮತ್ತು ಪಾಪಿಗಳು ಯೇಸುವಿನ ಉಪದೇಶವನ್ನು ಕೇಳಲು ಬಂದಿದ್ದರು.
ಲೂಕನು 15 : 2 (ERVKN)
ಆಗ ಫರಿಸಾಯರು ಮತ್ತು ಧರ್ಮೋಪದೇಶಕರು, “ನೋಡಿರಿ! ಈ ಮನುಷ್ಯನು (ಯೇಸು) ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರ ಜೊತೆಯಲ್ಲಿ ಊಟಮಾಡುತ್ತಾನೆ!” ಎಂದು ದೂರು ಹೇಳತೊಡಗಿದರು.
ಲೂಕನು 15 : 3 (ERVKN)
ಆಗ ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು:
ಲೂಕನು 15 : 4 (ERVKN)
“ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳಿವೆ ಎಂದು ತಿಳಿದುಕೊಳ್ಳೋಣ. ಆ ಕುರಿಗಳಲ್ಲಿ ಒಂದು ಕಳೆದುಹೋದರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಅಲ್ಲೇ ಬಿಟ್ಟು ಕಳೆದುಹೋದ ಒಂದು ಕುರಿಗೋಸ್ಕರ ಹುಡುಕುತ್ತಾ ಹೋಗುವನು. ಆ ಕುರಿಯು ಸಿಕ್ಕುವ ತನಕ ಅವನು ಅದಕ್ಕಾಗಿ ಹುಡುಕುತ್ತಲೇ ಇರುವನು.
ಲೂಕನು 15 : 5 (ERVKN)
ಅವನು ಆ ಕುರಿಯನ್ನು ಕಂಡುಕೊಂಡಾಗ ಬಹು ಸಂತೋಷಪಡುವನು. ಅವನು ಆ ಕುರಿಯನ್ನು ತನ್ನ ಮನೆಗೆ ಹೊತ್ತುಕೊಂಡು ಹೋಗುವನು.
ಲೂಕನು 15 : 6 (ERVKN)
ಅವನು ತನ್ನ ಸ್ನೇಹಿತರ ಮತ್ತು ನೆರೆಹೊರೆಯವರ ಬಳಿಗೆ ಹೋಗಿ, ‘ನನ್ನೊಡನೆ ಸಂತೋಷಪಡಿರಿ, ಕಳೆದುಹೋದ ನನ್ನ ಕುರಿ ಸಿಕ್ಕಿತು’ ಎಂದು ಹೇಳುವನು.
ಲೂಕನು 15 : 7 (ERVKN)
ಅದೇ ರೀತಿಯಲ್ಲಿ, ಒಬ್ಬ ಪಾಪಿ ತನ್ನ ಹೃದಯವನ್ನು ಪರಿವರ್ತಿಸಿಕೊಂಡಾಗ ಸ್ವರ್ಗದಲ್ಲಿ ಬಹಳ ಸಂತೋಷವಾಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ತಮ್ಮ ಹೃದಯಗಳನ್ನು ಪರಿವರ್ತಿಸಲು ಅವಶ್ಯವಿಲ್ಲದ ತೊಂಭತ್ತೊಂಭತ್ತು ಒಳ್ಳೆಯ ಜನರಿಗಿಂತ ಆ ಒಬ್ಬ ಪಾಪಿಯ ವಿಷಯದಲ್ಲಿ ಹೆಚ್ಚು ಸಂತೋಷವಾಗುತ್ತದೆ.
ಲೂಕನು 15 : 8 (ERVKN)
“ಒಬ್ಬ ಸ್ತ್ರೀಯ ಬಳಿ ಹತ್ತು ಬೆಳ್ಳಿನಾಣ್ಯಗಳು ಇವೆಯೆಂದು ಭಾವಿಸಿಕೊಳ್ಳಿರಿ. ಆಕೆಯು ಅವುಗಳಲ್ಲಿ ಒಂದನ್ನು ಕಳೆದುಕೊಳ್ಳುತ್ತಾಳೆ. ಆಕೆ ದೀಪವನ್ನು ತಂದು ಮನೆಯನ್ನು ಗುಡಿಸುತ್ತಾಳೆ. ಆ ನಾಣ್ಯವು ಸಿಕ್ಕುವ ತನಕ ಆಕೆ ಎಚ್ಚರಿಕೆಯಿಂದ ಹುಡುಕುತ್ತಾಳೆ.
ಲೂಕನು 15 : 9 (ERVKN)
ಕಳೆದುಹೋದ ಆ ನಾಣ್ಯ ಸಿಕ್ಕಿದಾಗ ಆಕೆ ತನ್ನ ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕರೆದು, ‘ನನ್ನೊಡನೆ ಸಂತೋಷಪಡಿರಿ ಕಳೆದುಹೋಗಿದ್ದ ನನ್ನ ನಾಣ್ಯ ಸಿಕ್ಕಿತು’ ಎಂದು ಹೇಳುವಳು.
ಲೂಕನು 15 : 10 (ERVKN)
ಅದೇರೀತಿ ಒಬ್ಬ ಪಾಪಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವಾಗ ದೇವದೂತರ ಮುಂದೆ ಸಂತೋಷವಾಗುವುದು.”
ಲೂಕನು 15 : 11 (ERVKN)
ಮನೆ ಬಿಟ್ಟುಹೋದ ಮಗನು ಬಳಿಕ ಯೇಸು ಹೀಗೆಂದನು: “ಒಬ್ಬ ಮನುಷ್ಯನಿಗೆ ಇಬ್ಬರು ಗಂಡುಮಕ್ಕಳಿದ್ದರು.
ಲೂಕನು 15 : 12 (ERVKN)
ಕಿರಿಯ ಮಗನು ತಂದೆಗೆ, ‘ನಿನ್ನ ಆಸ್ತಿಯಲ್ಲಿ ನನಗೆ ಬರಬೇಕಾದ ಪಾಲನ್ನು ಕೊಡು’ ಎಂದು ಕೇಳಿದನು. ಆದ್ದರಿಂದ ತಂದೆಯು ತನ್ನ ಆಸ್ತಿಯನ್ನು ಹಂಚಿಕೊಟ್ಟನು.
ಲೂಕನು 15 : 13 (ERVKN)
“ಆಗ ಕಿರಿಮಗನು ತನಗೆ ದೊರೆತ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿದನು. ಅಲ್ಲಿ ಅವನು ಪಟಿಂಗನಾಗಿ ಬದುಕಿ ತನ್ನ ಹಣವನ್ನೆಲ್ಲಾ ಹಾಳುಮಾಡಿಕೊಂಡನು.
ಲೂಕನು 15 : 14 (ERVKN)
ಸ್ವಲ್ಪಕಾಲದ ನಂತರ, ಆ ದೇಶದಲ್ಲಿ ಕ್ಷಾಮ ಉಂಟಾಯಿತು. ಆ ದೇಶದ ಯಾವ ಭಾಗದಲ್ಲಿಯೂ ಸಾಕಷ್ಟು ಆಹಾರವಿರಲಿಲ್ಲ. ಅವನು ಬಹಳ ಹಸಿವೆಗೊಂಡಿದ್ದನು. ಅವನಿಗೆ ಹಣದ ಅಗತ್ಯತೆಯಿತ್ತು.
ಲೂಕನು 15 : 15 (ERVKN)
ಆದ್ದರಿಂದ ಅವನು ಆ ದೇಶದ ನಿವಾಸಿಯೊಬ್ಬನ ಬಳಿ ಕೂಲಿಕೆಲಸಕ್ಕೆ ಸೇರಿಕೊಂಡನು. ಆ ಮನುಷ್ಯನು ಹಂದಿ ಮೇಯಿಸುವುದ್ಕಕಾಗಿ ಅವನನ್ನು ಹೊಲಕ್ಕೆ ಕಳುಹಿಸಿದನು.
ಲೂಕನು 15 : 16 (ERVKN)
ಆಗ ಅವನು ಬಹಳ ಹಸಿವೆಗೊಂಡಿದ್ದನು. ಆದ್ದರಿಂದ ಹಂದಿಗಳು ತಿನ್ನುತ್ತಿದ್ದ ಕಾಯಿಗಳನ್ನೇ ತಿನ್ನಲು ಹಂಬಲಿಸಿದನು. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ.
ಲೂಕನು 15 : 17 (ERVKN)
“ಆಗ ಅವನಿಗೆ ತಾನು ಮಾಡಿದ ಬುದ್ಧಿಹೀನ ಕಾರ್ಯದ ಅರಿವಾಯಿತು. ಅವನು ತನ್ನೊಳಗೆ, ‘ನನ್ನ ತಂದೆಯ ಬಳಿಯಲ್ಲಿರುವ ಸೇವಕರಿಗೆ ಬೇಕಾದಷ್ಟು ಆಹಾರವಿದೆ. ನಾನಾದರೋ ಇಲ್ಲಿ ಊಟವಿಲ್ಲದೆ ಸಾಯುತ್ತಿದ್ದೇನೆ.
ಲೂಕನು 15 : 18 (ERVKN)
ನಾನು ಇಲ್ಲಿಂದ ನನ್ನ ತಂದೆಯ ಬಳಿಗೆ ಹೊರಟುಹೋಗುತ್ತೇನೆ. ನಾನು ನನ್ನ ತಂದೆಗೆ, ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪ ಮಾಡಿದ್ದೇನೆ.
ಲೂಕನು 15 : 19 (ERVKN)
ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ. ನೀನು ನನ್ನನ್ನು ನಿನ್ನ ಸೇವಕರಲ್ಲಿ ಒಬ್ಬನನ್ನಾಗಿ ಸೇರಿಸಿಕೊ ಎಂದು ಹೇಳುವೆನು’ ಅಂದುಕೊಂಡನು.
ಲೂಕನು 15 : 20 (ERVKN)
ಅಂತೆಯೇ ಅವನು ಹೊರಟು ತನ್ನ ತಂದೆಯ ಬಳಿಗೆ ಹೋದನು. “ಮಗನು ಇನ್ನೂ ಬಹುದೂರದಲ್ಲಿ ಬರುತ್ತಿರುವಾಗಲೇ ತಂದೆಯು ಅವನನ್ನು ಗುರುತಿಸಿ ಕನಿಕರದಿಂದ ಅವನ ಬಳಿಗೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು.
ಲೂಕನು 15 : 21 (ERVKN)
ಕಿರಿಮಗನು ಹಿಂತಿರುಗಿದನು ಮಗನು ತನ್ನ ತಂದೆಗೆ, ‘ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪಮಾಡಿದ್ದೇನೆ. ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
ಲೂಕನು 15 : 22 (ERVKN)
“ಆದರೆ ತಂದೆಯು ತನ್ನ ಸೇವಕರಿಗೆ, ‘ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.
ಲೂಕನು 15 : 23 (ERVKN)
ಕೊಬ್ಬಿದ ಕರುವನ್ನು ಕೊಯ್ದು ಉಲ್ಲಾಸಪಡೋಣ.
ಲೂಕನು 15 : 24 (ERVKN)
ನನ್ನ ಮಗನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತನಾಗಿ ಬಂದಿದ್ದಾನೆ! ಇವನು ತಪ್ಪಿಹೋಗಿದ್ದನು. ಈಗಲಾದರೋ ಮತ್ತೆ ಸಿಕ್ಕಿದ್ದಾನೆ!’ ಎಂದು ಹೇಳಿದನು. ಆದ್ದರಿಂದ ಅವರು ಉಲ್ಲಾಸಪಡುವುದಕ್ಕೆ ತೊಡಗಿದರು.
ಲೂಕನು 15 : 25 (ERVKN)
ಹಿರಿಮಗನು ಬಂದನು “ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಗೆ ಬರುತ್ತಿದ್ದಾಗ ವಾದ್ಯಗೋಷ್ಠಿಯ ಮತ್ತು ನೃತ್ಯದ ಶಬ್ದವನ್ನು ಕೇಳಿದನು.
ಲೂಕನು 15 : 26 (ERVKN)
ಆದ್ದರಿಂದ ಅವನು ತನ್ನ ಸೇವಕರಲ್ಲಿ ಒಬ್ಬನನ್ನು ಕರೆದು, ‘ಇದೇನು?’ ಎಂದು ವಿಚಾರಿಸಿದನು.
ಲೂಕನು 15 : 27 (ERVKN)
ಆ ಸೇವಕನು, ‘ನಿನ್ನ ತಮ್ಮ ಮರಳಿ ಬಂದಿದ್ದಾನೆ. ನಿನ್ನ ತಂದೆಯು ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ. ನಿನ್ನ ತಮ್ಮನು ಮನೆಗೆ ಸುರಕ್ಷಿತವಾಗಿ ಬಂದದ್ದಕ್ಕಾಗಿ ನಿನ್ನ ತಂದೆಯು ಸಂತೋಷಗೊಂಡಿದ್ದಾನೆ!’ ಎಂದು ಹೇಳಿದನು.
ಲೂಕನು 15 : 28 (ERVKN)
“ಆಗ ಹಿರಿಯ ಮಗನು ಕೋಪಗೊಂಡು ಔತಣಕೂಟಕ್ಕೆ ಹೋಗಲಿಲ್ಲ. ಆಗ ಅವನ ತಂದೆ ಹೊರಗೆ ಬಂದು ಅವನನ್ನು ಒಳಗೆ ಕರೆದನು.
ಲೂಕನು 15 : 29 (ERVKN)
ಹಿರಿಮಗನು ತಂದೆಗೆ, ‘ನಾನು ಗುಲಾಮನಂತೆ ನಿನಗೆ ಅನೇಕ ವರ್ಷಗಳವರೆಗೆ ಸೇವೆಮಾಡಿದೆನು! ನಾನು ಯಾವಾಗಲೂ ನಿನ್ನ ಅಪ್ಪಣೆಗಳಿಗೆ ವಿಧೇಯನಾದೆನು. ಆದರೆ ನೀನು ನನಗೋಸ್ಕರ ಎಂದೂ ಒಂದು ಆಡನ್ನಾಗಲಿ ಕೊಯ್ಯಲಿಲ್ಲ. ನನಗಾಗಿ ಮತ್ತು ನನ್ನ ಸ್ನೇಹಿತರಿಗಾಗಿ ನೀನೆಂದೂ ಒಂದು ಔತಣಕೂಟವನ್ನು ಏರ್ಪಡಿಸಲಿಲ್ಲ.
ಲೂಕನು 15 : 30 (ERVKN)
ಆದರೆ ನಿನ್ನ ಕಿರಿಯ ಮಗನು ನಿನ್ನ ಎಲ್ಲ ಹಣವನ್ನು ಸೂಳೆಯರಿಗೆ ಖರ್ಚುಮಾಡಿ ಮನೆಗೆ ಹಿಂತಿರುಗಿ ಬಂದಾಗ ನೀನು ಅವನಿಗಾಗಿ ಕೊಬ್ಬಿದ ಕರುವನ್ನು ಕೊಯ್ಸಿದ್ದಿ!’ ಅಂದನು.
ಲೂಕನು 15 : 31 (ERVKN)
“ಆದರೆ ತಂದೆಯು ಅವನಿಗೆ, ‘ಮಗನೇ, ನೀನು ಯಾವಾಗಲೂ ನನ್ನೊಂದಿಗೆ ಇರುತ್ತೀ. ನನಗಿರುವುದೆಲ್ಲಾ ನಿನ್ನದೇ.
ಲೂಕನು 15 : 32 (ERVKN)
ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32