ಲೂಕನು 17 : 1 (ERVKN)
ಪಾಪ (ಮತ್ತಾಯ 18:6-7 21-22; ಮಾರ್ಕ 9:42) ಯೇಸು ತನ್ನ ಶಿಷ್ಯರಿಗೆ, “ಜನರನ್ನು ಪಾಪಕ್ಕೆ ನಡೆಸುವಂಥ ಸಂಗತಿಗಳು ಖಂಡಿತವಾಗಿ ಬರುತ್ತವೆ. ಆದರೆ ಅವುಗಳನ್ನು ಬರಮಾಡುವವನ ಗತಿಯನ್ನು ಏನು ಹೇಳಲಿ!
ಲೂಕನು 17 : 2 (ERVKN)
ಬಲಹೀನರಾದ ಇವರನ್ನು ಪಾಪಕ್ಕೆ ನಡೆಸುವವನು ತನ್ನ ಕುತ್ತಿಗೆಗೆ ಒಂದು ದೊಡ್ಡ ಕಲ್ಲನ್ನು ಕಟ್ಟಿಕೊಂಡು ನೀರಿನಲ್ಲಿ ಮುಳುಗುವುದೇ ಉತ್ತಮ.
ಲೂಕನು 17 : 3 (ERVKN)
ಆದ್ದರಿಂದ ಎಚ್ಚರಿಕೆಯಾಗಿರಿ! “ನಿನ್ನ ಸಹೋದರನು ಪಾಪಮಾಡಿದರೆ, ಅವನನ್ನು ಖಂಡಿಸು. ಒಂದುವೇಳೆ ಅವನೇನಾದರೂ ತನ್ನ ತಪ್ಪಿಗಾಗಿ ಪಶ್ಚಾತ್ತಾಪಪಟ್ಟರೆ ಅವನನ್ನು ಕ್ಷಮಿಸು.
ಲೂಕನು 17 : 4 (ERVKN)
ನಿನ್ನ ಸಹೋದರನು ನಿನಗೆ ಒಂದು ದಿನದಲ್ಲಿ ಏಳು ಸಲ ತಪ್ಪುಮಾಡಿ, ಪ್ರತಿಸಲವೂ, ‘ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ, ನೀನು ಅವನನ್ನು ಕ್ಷಮಿಸಬೇಕು” ಎಂದು ಹೇಳಿದನು. ನಿಮ್ಮ ನಂಬಿಕೆ ಎಷ್ಟು ದೊಡ್ಡದು?
ಲೂಕನು 17 : 5 (ERVKN)
ಅಪೊಸ್ತಲರು ಪ್ರಭುವಿಗೆ (ಯೇಸು), “ನಮ್ಮ ನಂಬಿಕೆಯನ್ನು ಹೆಚ್ಚಿಸು!” ಎಂದು ಕೇಳಿಕೊಂಡರು.
ಲೂಕನು 17 : 6 (ERVKN)
ಪ್ರಭುವು ಅವರಿಗೆ ಹೀಗೆಂದನು: “ನಿಮ್ಮ ನಂಬಿಕೆ ಸಾಸಿವೆ ಕಾಳಷ್ಟು ದೊಡ್ಡದಾಗಿದ್ದರೆ, ನೀವು ಈ ಅತ್ತಿಮರಕ್ಕೆ, ‘ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿದರೂ ಅದು ನಿಮಗೆ ವಿಧೇಯವಾಗುತ್ತದೆ.
ಲೂಕನು 17 : 7 (ERVKN)
ಒಳ್ಳೆಯ ಸೇವಕರಾಗಿರಿ “ನಿಮ್ಮಲ್ಲಿ ಒಬ್ಬನಿಗೆ ಹೊಲದಲ್ಲಿ ಕೆಲಸ ಮಾಡುವಂಥ ಒಬ್ಬ ಸೇವಕನಿದ್ದಾನೆಂದು ಭಾವಿಸಿಕೊಳ್ಳೋಣ. ಆ ಸೇವಕನು ಭೂಮಿಯನ್ನು ಉಳುತ್ತಿರುತ್ತಾನೆ ಅಥವಾ ಕುರಿಗಳನ್ನು ಮೇಯಿಸುತ್ತಿರುತ್ತಾನೆ. ಆ ಸೇವಕನು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬಂದಾಗ ನೀನು ಅವನಿಗೆ ಏನು ಹೇಳುವೆ? ‘ಒಳಗೆ ಬಾ! ಊಟಕ್ಕೆ ಕುಳಿತುಕೊ’ ಎಂದು ಹೇಳುವಿಯೋ?
ಲೂಕನು 17 : 8 (ERVKN)
ಇಲ್ಲ! ನೀನು ಅವನಿಗೆ, ‘ನನಗೋಸ್ಕರ ಅಡಿಗೆ ಮಾಡು. ಬಳಿಕ ಶುಭ್ರವಾದ ಬಟ್ಟೆಯನ್ನು ಧರಿಸಿಕೊಂಡು ಬಂದು ನನಗೆ ಊಟಬಡಿಸು. ನಾನು ತಿಂದು ಕುಡಿದ ಮೇಲೆ ನೀನು ಊಟಮಾಡು’ ಎಂದು ಹೇಳುವೆಯಷ್ಟೇ.
ಲೂಕನು 17 : 9 (ERVKN)
ಆ ಸೇವಕನು ತನ್ನ ಕೆಲಸ ಮಾಡಿದ್ದಕ್ಕಾಗಿ ನೀನೇನೂ ಅವನಿಗೆ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಬೇಕಾಗಿಲ್ಲ. ಸೇವಕನಿರುವುದು ಯಜಮಾನನು ಹೇಳಿದ್ದನ್ನು ಮಾಡುವುದಕ್ಕಾಗಿಯಷ್ಟೇ.
ಲೂಕನು 17 : 10 (ERVKN)
ಇದೇ ನಿಯಮ ನಿಮಗೂ ಅನ್ವಯಿಸುತ್ತದೆ. ನಿಮಗೆ ನೇಮಿಸಿದ ಕೆಲಸಗಳನ್ನು ನೀವು ಮಾಡಿ ಪೂರೈಸಿದಾಗ, ‘ನಾವು ಆಳುಗಳು, ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ’ ಎಂದು ಹೇಳಬೇಕು.”
ಲೂಕನು 17 : 11 (ERVKN)
ಕೃತಜ್ಞತೆಯುಳ್ಳವರಾಗಿರಿ ಯೇಸುವು ಜೆರುಸಲೇಮಿಗೆ ಪ್ರಯಾಣಮಾಡುತ್ತಾ ಗಲಿಲಾಯದಿಂದ ಸಮಾರ್ಯಕ್ಕೆ ಹೋದನು.
ಲೂಕನು 17 : 12 (ERVKN)
ಅಲ್ಲಿ ಆತನು ಒಂದು ಗ್ರಾಮಕ್ಕೆ ಬಂದನು. ಅಲ್ಲಿ ಹತ್ತು ಜನರು ಆತನನ್ನು ಭೇಟಿಯಾದರು. ಅವರು ಯೇಸುವಿನ ಸಮೀಪಕ್ಕೆ ಬರಲಿಲ್ಲ. ಏಕೆಂದರೆ ಅವರೆಲ್ಲರೂ ಕುಷ್ಠರೋಗಿಗಳಾಗಿದ್ದರು.
ಲೂಕನು 17 : 13 (ERVKN)
ಆದರೆ ಅವರು, “ಯೇಸುವೇ! ಗುರುವೇ! ದಯಮಾಡಿ ನಮಗೆ ಸಹಾಯಮಾಡು!” ಎಂದು ಕೂಗಿಕೊಂಡರು.
ಲೂಕನು 17 : 14 (ERVKN)
ಯೇಸು ಅವರನ್ನು ನೋಡಿ, “ಹೋಗಿ, ನಿಮ್ಮನ್ನು ಯಾಜಕರಿಗೆ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಯಾಜಕರ ಬಳಿಗೆ ಹೋಗುತ್ತಿದ್ದಾಗ ಅವರಿಗೆ ವಾಸಿಯಾಯಿತು.
ಲೂಕನು 17 : 15 (ERVKN)
ಅವರಲ್ಲಿ ಒಬ್ಬನು ತನಗೆ ಗುಣವಾದುದ್ದನ್ನು ಕಂಡು ಯೇಸುವಿನ ಬಳಿಗೆ ಹಿಂತಿರುಗಿ ಬಂದು ಗಟ್ಟಿಯಾದ ಧ್ವನಿಯಿಂದ ದೇವರನ್ನು ಕೊಂಡಾಡಿದನು.
ಲೂಕನು 17 : 16 (ERVKN)
ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ಆತನಿಗೆ ವಂದನೆ ಸಲ್ಲಿಸಿದನು. (ಅವನು ಸಮಾರ್ಯದವನು, ಯೆಹೂದ್ಯನಲ್ಲ.)
ಲೂಕನು 17 : 17 (ERVKN)
ಯೇಸು, “ಹತ್ತು ಜನರಿಗೆ ವಾಸಿಯಾಯಿತಲ್ಲಾ! ಇನ್ನುಳಿದ ಒಂಭತ್ತು ಮಂದಿ ಎಲ್ಲಿ?
ಲೂಕನು 17 : 18 (ERVKN)
ದೇವರಿಗೆ ಕೃತಜ್ಞತೆ ಸಲ್ಲಿಸಲು ಈ ಸಮಾರ್ಯದವನನ್ನು ಬಿಟ್ಟು ಬೇರೆ ಯಾರೂ ಬರಲಿಲ್ಲವೇ?” ಎಂದು ಕೇಳಿದನು.
ಲೂಕನು 17 : 19 (ERVKN)
ಬಳಿಕ ಯೇಸು ಅವನಿಗೆ, “ಎದ್ದೇಳು! ಈಗ ನೀನು ಮನೆಗೆ ಹೋಗು! ನೀನು ನಂಬಿದ್ದರಿಂದಲೇ ನಿನಗೆ ವಾಸಿಯಾಯಿತು” ಅಂದನು.
ಲೂಕನು 17 : 20 (ERVKN)
ದೇವರ ರಾಜ್ಯವು ನಿಮ್ಮೊಳಗಿದೆ (ಮತ್ತಾಯ 24:23-28; 37-41) ಫರಿಸಾಯರಲ್ಲಿ ಕೆಲವರು ಯೇಸುವನ್ನು, “ದೇವರ ರಾಜ್ಯವು ಯಾವಾಗ ಬರುವುದು?” ಎಂದು ಕೇಳಿದರು. ಯೇಸು ಅವರಿಗೆ, “ದೇವರ ರಾಜ್ಯವು ಬರುತ್ತಿದೆ, ಆದರೆ ನಿಮ್ಮ ಕಣ್ಣುಗಳಿಗೆ ಕಾಣಿಸುವಂತೆ ಅದು ಬರುವುದಿಲ್ಲ.
ಲೂಕನು 17 : 21 (ERVKN)
‘ಇಗೋ, ದೇವರ ರಾಜ್ಯವು ಇಲ್ಲಿದೆ!’ ‘ಅಗೋ ಅಲ್ಲಿದೆ!’ ಎಂದು ಜನರು ಹೇಳುವಂತಿಲ್ಲ. ದೇವರ ರಾಜ್ಯವು ನಿಮ್ಮೊಳಗೇ ಇದೆ” ಎಂದು ಉತ್ತರಿಸಿದನು.
ಲೂಕನು 17 : 22 (ERVKN)
ಬಳಿಕ ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನ ದಿನಗಳಲ್ಲೊಂದನ್ನು ನೀವು ನೋಡಬೇಕೆಂದು ಬಹಳವಾಗಿ ಆಶಿಸುವ ಕಾಲವು ಬರುವುದು, ಆದರೆ ನೀವು ಅದನ್ನು ನೋಡಲಾಗುವುದಿಲ್ಲ.
ಲೂಕನು 17 : 23 (ERVKN)
ಜನರು ನಿಮಗೆ, ‘ಅಗೋ, ಅಲ್ಲಿದ್ದಾನೆ, ಇಗೋ, ಇಲ್ಲಿದ್ದಾನೆ!’ ಎಂದು ಹೇಳುವರು. ನೀವು ಇದ್ದಲ್ಲಿಯೇ ಇರಿ. ಅವರನ್ನು ಹಿಂಬಾಲಿಸಿ ಹೋಗಿ ಹುಡುಕಬೇಡಿ.
ಲೂಕನು 17 : 24 (ERVKN)
ಯೇಸು ತಿರುಗಿ ಬರುವಾಗ ಲೋಕದ ಸ್ಥಿತಿ “ಮನುಷ್ಯಕುಮಾರನು ಬಂದಾಗ ನಿಮಗೇ ಗೊತ್ತಾಗುವುದು. ಆಕಾಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಹೊಳೆಯುವ ಮಿಂಚಿನಂತೆ ಆತನು ಬರುವನು.
ಲೂಕನು 17 : 25 (ERVKN)
ಆದರೆ ಅದಕ್ಕಿಂತಲೂ ಮೊದಲು, ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಿ ಈ ಕಾಲದ ಜನರಿಂದ ತಿರಸ್ಕರಿಸಲ್ಪಡುವನು.
ಲೂಕನು 17 : 26 (ERVKN)
“ಮನುಷ್ಯಕುಮಾರನು ತಿರುಗಿ ಬರುವ ದಿವಸಗಳಲ್ಲಿ ಈ ಲೋಕದ ಸ್ಥಿತಿಯು ನೋಹನ ಕಾಲದ ಸ್ಥಿತಿಯಂತೆಯೇ ಇರುವುದು.
ಲೂಕನು 17 : 27 (ERVKN)
ನೋಹನ ಕಾಲದಲ್ಲಿ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯನ್ನು ಪ್ರವೇಶಿಸಿದ ದಿನದಲ್ಲಿಯೂ ಅವರು ಹಾಗೆಯೇ ಮಾಡುತ್ತಿದ್ದರು. ಆಗ ಜಲಪ್ರಳಯ ಬಂದು ಎಲ್ಲಾ ಜನರನ್ನು ನಾಶಮಾಡಿತು.
ಲೂಕನು 17 : 28 (ERVKN)
“ಲೋಟನ ಕಾಲದಲ್ಲಿ ದೇವರು ಸೊದೋಮನ್ನು ನಾಶಮಾಡಿದಾಗ ಲೋಕದ ಸ್ಥಿತಿಯು ಹೇಗಿತ್ತೋ ಅದೇರೀತಿಯಲ್ಲಿ ಮುಂದೆಯೂ ಇರುವುದು. ಆ ಜನರು ತಿನ್ನುತ್ತಾ, ಕುಡಿಯುತ್ತಾ, ಕೊಂಡುಕೊಳ್ಳುತ್ತಾ, ಮಾರಾಟ ಮಾಡುತ್ತಾ, ಬೀಜ ಬಿತ್ತುತ್ತಾ ಮತ್ತು ತಮಗಾಗಿ ಮನೆಗಳನ್ನು ಕಟ್ಟಿಸಿಕೊಳ್ಳುತ್ತಾ ಇದ್ದರು.
ಲೂಕನು 17 : 29 (ERVKN)
ಲೋಟನು ಆ ಪಟ್ಟಣವನ್ನು ಬಿಟ್ಟು ಹೊರಟ ದಿನದಲ್ಲಿಯೂ ಜನರು ಹಾಗೆಯೇ ಮಾಡುತ್ತಿದ್ದರು. ಆಗ ಆಕಾಶದಿಂದ ಬೆಂಕಿಯ ಸುರಿಮಳೆಯಾಗಿ ಅವರೆಲ್ಲರನ್ನೂ ನಾಶಮಾಡಿತು.
ಲೂಕನು 17 : 30 (ERVKN)
ಮನುಷ್ಯಕುಮಾರನು ತಿರುಗಿ ಬರುವಾಗ ಲೋಕದ ಸ್ಥಿತಿ ಅದೇ ರೀತಿಯಲ್ಲಿರುವುದು.
ಲೂಕನು 17 : 31 (ERVKN)
“ಆ ದಿನದಲ್ಲಿ, ಮಾಳಿಗೆಯ ಮೇಲಿರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಹೋಗದಿರಲಿ. ಹೊಲದಲ್ಲಿರುವವನು ತನ್ನ ಮನೆಗೆ ಮರಳಿ ಹೋಗದಿರಲಿ.
ಲೂಕನು 17 : 32 (ERVKN)
ಲೋಟನ ಹೆಂಡತಿಗೆ *ಲೋಟನ ಹೆಂಡತಿ ಲೋಟನ ಹೆಂಡತಿಗೆ ಸಂಭವಿಸಿದ ಸಂಗತಿಯು ಆದಿಕಾಂಡ 19:15-17, 26ರಲ್ಲಿ ಇದೆ. ಸಂಭವಿಸಿದ್ದು ಜ್ಞಾಪಕವಿದೆಯೇ?
ಲೂಕನು 17 : 33 (ERVKN)
“ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಪ್ರಯತ್ನಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ತನ್ನ ಪ್ರಾಣವನ್ನು ಕೊಡುವವನು ಅದನ್ನು ಉಳಿಸಿಕೊಳ್ಳುವನು.
ಲೂಕನು 17 : 34 (ERVKN)
ನಾನು ತಿರುಗಿ ಬರುವಾಗ ಒಂದೇ ಕೋಣೆಯಲ್ಲಿ ಇಬ್ಬರು ಮಲಗಿದ್ದರೂ ಅವರಲ್ಲಿ ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.
ಲೂಕನು 17 : 35 (ERVKN)
ಇಬ್ಬರು ಸ್ತ್ರೀಯರು ಒಟ್ಟಿಗೆ ಕೆಲಸಮಾಡುತ್ತಿದ್ದರೂ ಅವರಲ್ಲಿ ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು.”
ಲೂಕನು 17 : 36 (ERVKN)
ಲೂಕನ ಸುವಾರ್ತೆಯ ಕೆಲವು ಗ್ರೀಕ್ ಪ್ರತಿಗಳಲ್ಲಿ 36ನೇ ವಚನ ಸೇರಿಸಲ್ಪಟ್ಟಿದೆ: “ಇಬ್ಬರು ಗಂಡಸರು ಒಂದೇ ಹೊಲದಲ್ಲಿರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಆದರೆ ಇನ್ನೊಬ್ಬನು ಬಿಡಲ್ಪಡುವನು.”
ಲೂಕನು 17 : 37 (ERVKN)
ಶಿಷ್ಯರು ಯೇಸುವಿಗೆ, “ಪ್ರಭುವೇ, ಇದೆಲ್ಲಾ ಎಲ್ಲಿ ಸಂಭವಿಸುವುದು?” ಎಂದು ಕೇಳಿದರು. ಯೇಸು ಅವರಿಗೆ, “ಹದ್ದುಗಳು ಎಲ್ಲಿ ಕೂಡಿಬಂದಿರುತ್ತವೆಯೋ ಅಲ್ಲಿ ಹೆಣ ಇದ್ದೇ ಇರುತ್ತದೆಯೆಂದು ಜನರು ತಿಳಿದುಕೊಳ್ಳುತ್ತಾರೆ” ಎಂದು ಉತ್ತರಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37