ಲೂಕನು 2 : 1 (ERVKN)
ಯೇಸುವಿನ ಜನನ (ಮತ್ತಾಯ 1:18-25) ಆ ಕಾಲದಲ್ಲಿ ಚಕ್ರವರ್ತಿ ಅಗಸ್ಟಸ್ ಸೀಸರನು ರೋಮನ್ನರ ಆಳ್ವಿಕೆಗೆ ಒಳಪಟ್ಟಿದ್ದ ಎಲ್ಲಾ ದೇಶಗಳಲ್ಲಿ ಜನಗಣತಿ ಆಗಬೇಕೆಂದು ಆಜ್ಞಾಪಿಸಿದನು.
ಲೂಕನು 2 : 2 (ERVKN)
ಇದು ಮೊಟ್ಟಮೊದಲನೆಯ ಜನಗಣತಿಯಾಗಿತ್ತು. ಕುರೇನ್ಯನು ಸಿರಿಯ ದೇಶದ ರಾಜ್ಯಪಾಲನಾಗಿದ್ದಾಗ ಇದು ಸಂಭವಿಸಿತು.
ಲೂಕನು 2 : 3 (ERVKN)
ಜನರೆಲ್ಲರೂ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ತಮ್ಮತಮ್ಮ ಊರುಗಳಿಗೆ ಪ್ರಯಾಣ ಮಾಡಿದರು.
ಲೂಕನು 2 : 4 (ERVKN)
ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು.
ಲೂಕನು 2 : 5 (ERVKN)
ಅವನು ತನ್ನೊಂದಿಗೆ ಮರಿಯಳನ್ನೂ ಕರೆದುಕೊಂಡು ಹೋದನು. ಆಕೆಗೆ ಅವನೊಂದಿಗೆ ನಿಶ್ಚಿತಾರ್ಥವಾಗಿತ್ತು. (ಮರಿಯಳು ಆಗ ಗರ್ಭಿಣಿಯಾಗಿದ್ದಳು.)
ಲೂಕನು 2 : 6 (ERVKN)
ಅವರು ಬೆತ್ಲೆಹೇಮಿನಲ್ಲಿದ್ದಾಗ ಮರಿಯಳಿಗೆ ಹೆರಿಗೆಕಾಲ ಬಂತು.
ಲೂಕನು 2 : 7 (ERVKN)
ಆಕೆ ತನ್ನ ಚೊಚ್ಚಲಮಗುವನ್ನು (ಯೇಸು) ಹೆತ್ತಳು. ಅವರಿಗೆ ಇಳಿದುಕೊಳ್ಳಲು ಛತ್ರದಲ್ಲಿ ಸ್ಥಳ ದೊರೆಯಲಿಲ್ಲ. ಆದ್ದರಿಂದ ಮರಿಯಳು ಮಗುವನ್ನು ಬಟ್ಟೆಯಿಂದ ಸುತ್ತಿ ದನದ ಕೊಟ್ಟಿಗೆಯಲ್ಲಿ ಮೇವು ಹಾಕುತ್ತಿದ್ದ ತೊಟ್ಟಿಯಲ್ಲಿ ಮಲಗಿಸಿದಳು.
ಲೂಕನು 2 : 8 (ERVKN)
ಕುರುಬರಿಗೆ ದೊರೆತ ಸಂದೇಶ ಆ ರಾತ್ರಿ, ಕೆಲವು ಕುರುಬರು ಹೊಲಗಳ ಸಮೀಪದಲ್ಲಿ ತಮ್ಮ ಕುರಿಗಳನ್ನು ಕಾಯುತ್ತಿದ್ದರು.
ಲೂಕನು 2 : 9 (ERVKN)
ಪ್ರಭುವಿನ ದೂತನೊಬ್ಬನು ಕುರುಬರ ಮುಂದೆ ನಿಂತನು. ಅವರ ಸುತ್ತಲೂ ಪ್ರಭುವಿನ ಪ್ರಭೆಯು ಪ್ರಕಾಶಿಸಿತು. ಕುರುಬರು ಬಹಳವಾಗಿ ಹೆದರಿದರು.
ಲೂಕನು 2 : 10 (ERVKN)
ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ:
ಲೂಕನು 2 : 11 (ERVKN)
ಈ ದಿನ ನಿಮಗೋಸ್ಕರ ದಾವೀದನ ಊರಿನಲ್ಲಿ ರಕ್ಷಕನು ಜನಿಸಿದ್ದಾನೆ. ಆತನೇ ಪ್ರಭುವಾದ ಕ್ರಿಸ್ತನು.
ಲೂಕನು 2 : 12 (ERVKN)
ಬಟ್ಟೆಯಲ್ಲಿ ಸುತ್ತಿರುವ ಒಂದು ಮಗು ದನದ ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ನೀವು ಆತನನ್ನು ಗೊತ್ತುಪಡಿಸಿಕೊಳ್ಳಲು ಅದೇ ಗುರುತಾಗಿದೆ” ಎಂದು ಹೇಳಿದನು.
ಲೂಕನು 2 : 13 (ERVKN)
ತಕ್ಷಣವೇ ಪರಲೋಕದಿಂದ ದೇವದೂತರು ಬಹು ದೊಡ್ಡ ಗುಂಪಾಗಿ ಬಂದು ಮೊದಲನೆಯ ದೇವದೂತನೊಡನೆ ಸೇರಿಕೊಂಡರು. ಅವರೆಲ್ಲರೂ,
ಲೂಕನು 2 : 14 (ERVKN)
“ಮೇಲಿನಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.
ಲೂಕನು 2 : 15 (ERVKN)
ದೇವದೂತರು ಕುರುಬರ ಬಳಿಯಿಂದ ಪರಲೋಕಕ್ಕೆ ಹಿಂತಿರುಗಿದ ಮೇಲೆ ಕುರುಬರು, “ನಾವು ಈಗಲೇ ಬೆತ್ಲೆಹೇಮಿಗೆ ಹೋಗಿ, ಪ್ರಭುವು ನಮಗೆ ತಿಳಿಸಿದ ಈ ಘಟನೆಯನ್ನು ನೋಡೋಣ” ಎಂದು ಮಾತಾಡಿಕೊಂಡರು.
ಲೂಕನು 2 : 16 (ERVKN)
ಆದ್ದರಿಂದ ಕುರುಬರು ಬೇಗನೆ ಹೋಗಿ ಮರಿಯಳನ್ನೂ ಯೋಸೇಫನನ್ನೂ ದನದ ಕೊಟ್ಟಿಗೆಯಲ್ಲಿ ಮಲಗಿದ್ದ ಮಗುವನ್ನೂ ಕಂಡುಕೊಂಡರು.
ಲೂಕನು 2 : 17 (ERVKN)
ಕುರುಬರು ಮಗುವನ್ನು ನೋಡಿದಾಗ ಅದರ ವಿಷಯವಾಗಿ ತಮಗೆ ದೇವದೂತರು ತಿಳಿಸಿದ್ದನ್ನು ಅವರಿಗೆ ತಿಳಿಯಪಡಿಸಿದರು.
ಲೂಕನು 2 : 18 (ERVKN)
ಕುರುಬರು ತಿಳಿಸಿದ್ದನ್ನು ಕೇಳಿದ ಅವರೆಲ್ಲರೂ ಆಶ್ಚರ್ಯಪಟ್ಟರು.
ಲೂಕನು 2 : 19 (ERVKN)
ಮರಿಯಳು ಈ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡು, ಅವುಗಳ ಬಗ್ಗೆ ಯೋಚಿಸತೊಡಗಿದಳು.
ಲೂಕನು 2 : 20 (ERVKN)
ಕುರುಬರು ತಾವು ಕಂಡು ಕೇಳಿದ ಪ್ರತಿಯೊಂದು ಸಂಗತಿಗಾಗಿ ದೇವರನ್ನು ಕೊಂಡಾಡುತ್ತಾ ಆತನನ್ನು ಸ್ತುತಿಸುತ್ತಾ ತಮ್ಮ ಕುರಿಗಳಿದ್ದಲ್ಲಿಗೆ ಮರಳಿಹೋದರು. ದೇವದೂತರು ಅವರಿಗೆ ತಿಳಿಸಿದಂತೆಯೇ ಪ್ರತಿಯೊಂದು ಸಂಗತಿಯೂ ನಡೆದಿತ್ತು.
ಲೂಕನು 2 : 21 (ERVKN)
ಮಗುವಿಗೆ ಎಂಟು ದಿನವಾದಾಗ ಸುನ್ನತಿ *ಸುನ್ನತಿ ಜನನಾಂಗದ ಮುಂದೊಗಲನ್ನು ಕತ್ತರಿಸುವುದು. ಪ್ರತಿ ಯೆಹೂದ್ಯ ಗಂಡುಮಗುವಿಗೆ ಹೀಗೆ ಮಾಡುತ್ತಿದ್ದರು. ದೇವರು ಅಬ್ರಹಾಮನೊಂದಿಗೆ ಮಾಡಿದ ಒಡಂಬಡಿಕೆಗೆ ಅದು ಸೂಚನೆಯಾಗಿತ್ತು. ಆದಿಕಾಂಡ 17:9-14. ಆಯಿತು ಮತ್ತು ಆತನಿಗೆ “ಯೇಸು” ಎಂದು ಹೆಸರಿಡಲಾಯಿತು. ಮರಿಯಳ ಗರ್ಭದಲ್ಲಿ ಮಗುವು ಬೆಳೆಯುವುದಕ್ಕೆ ಪ್ರಾರಂಭಿಸುವ ಮೊದಲೇ ದೇವದೂತನು ಈ ಹೆಸರನ್ನೇ ಕೊಡಬೇಕೆಂದು ಸೂಚಿಸಿದ್ದನು.
ಲೂಕನು 2 : 22 (ERVKN)
ದೇವಾಲಯದಲ್ಲಿ ಯೇಸುವಿನ ಪ್ರತಿಷ್ಠೆ ಶುದ್ಧೀಕರಣದ ಶುದ್ಧೀಕರಣ ಯೆಹೂದ್ಯ ಸ್ತ್ರೀಯು ಮಗುವನ್ನು ಹೆತ್ತು ನಲವತ್ತು ದಿನಗಳಾದ ನಂತರ ದೇವಾಲಯದಲ್ಲಿ ನಡೆಸುವ ಒಂದು ಸಂಸ್ಕಾರದ ಮೂಲಕ ಶುದ್ಧಿಯಾಗಬೇಕು ಎಂದು ಮೋಶೆಯ ಧರ್ಮಶಾಸ್ತ್ರ ಹೇಳಿದೆ. ನೋಡಿರಿ: ಯಾಜಕ. 12:2-8. ಬಗ್ಗೆ ಮೋಶೆಯ ಧರ್ಮಶಾಸ್ತ್ರವು ಬೋಧಿಸಿದ್ದ ಕಾರ್ಯಗಳನ್ನು ಮರಿಯಳು ಮತ್ತು ಯೋಸೇಫನು ಮಾಡುವ ಸಮಯ ಬಂತು. ಯೇಸುವನ್ನು ಪ್ರಭುವಿಗೆ (ದೇವರಿಗೆ) ಪ್ರತಿಷ್ಠಿಸಲು ಯೋಸೇಫನು ಮತ್ತು ಮರಿಯಳು ಆತನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದರು.
ಲೂಕನು 2 : 23 (ERVKN)
ಏಕೆಂದರೆ “ಪ್ರತಿ ಕುಟುಂಬದಲ್ಲಿ, ‘ಚೊಚ್ಚಲು ಗಂಡುಮಗುವನ್ನು ಪ್ರಭುವಿಗೆ ಪ್ರತಿಷ್ಠಿಸಬೇಕು’ ” ಪ್ರತಿ … ಪ್ರತಿಷ್ಠಿಸಬೇಕು ನೋಡಿರಿ: ವಿಮೋಚನ. 13:2. ಎಂದು ಪ್ರಭುವಿನ ಧರ್ಮಶಾಸ್ತ್ರದಲ್ಲಿ ಬರೆದಿದೆ.
ಲೂಕನು 2 : 24 (ERVKN)
“ಎರಡು ಪಾರಿವಾಳಗಳನ್ನು ಅಥವಾ ಎರಡು ಬೆಳವಕ್ಕಿಗಳನ್ನು ಯಜ್ಞವಾಗಿ ಸಮರ್ಪಿಸಬೇಕು” ಉಲ್ಲೇಖನ: ಯಾಜಕ. 12:8. ಎಂದು ಸಹ ಪ್ರಭುವಿನ ಧರ್ಮಶಾಸ್ತ್ರವು ಹೇಳುತ್ತದೆ. ಆದ್ದರಿಂದ ಯೋಸೇಫನು ಮತ್ತು ಮರಿಯಳು ಜೆರುಸಲೇಮಿಗೆ ಹೋದರು.
ಲೂಕನು 2 : 25 (ERVKN)
ಸಿಮೆಯೋನನು ಯೇಸುವನ್ನು ನೋಡಿದನು ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.
ಲೂಕನು 2 : 26 (ERVKN)
ಪ್ರಭುವು ಕಳುಹಿಸುವ ಕ್ರಿಸ್ತನನ್ನು ನೋಡುವ ತನಕ ನೀನು ಸಾಯುವುದಿಲ್ಲ ಎಂದು ಪವಿತ್ರಾತ್ಮನು ಸಿಮೆಯೋನನಿಗೆ ತಿಳಿಸಿದ್ದನು.
ಲೂಕನು 2 : 27 (ERVKN)
ಸಿಮೆಯೋನನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಯೆಹೂದ್ಯರ ಧರ್ಮಶಾಸ್ತ್ರದ ವಿಧಿಗಳನ್ನು ಪೂರೈಸಲು ಮರಿಯಳು ಮತ್ತು ಯೋಸೇಫನು ದೇವಾಲಯಕ್ಕೆ ಹೋದರು. ಅವರು ಮಗು ಯೇಸುವನ್ನು ದೇವಾಲಯಕ್ಕೆ ತಂದರು.
ಲೂಕನು 2 : 28 (ERVKN)
ಸಿಮೆಯೋನನು ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರಿಗೆ ಹೀಗೆಂದು ಸ್ತೋತ್ರ ಸಲ್ಲಿಸಿದನು:
ಲೂಕನು 2 : 29 (ERVKN)
“ಪ್ರಭುವೇ, ನಿನ್ನ ವಾಗ್ದಾನದಂತೆ ಸಮಾಧಾನದಿಂದ ಸಾಯಲು ನಿನ್ನ ದಾಸನಿಗೆ ಅಪ್ಪಣೆಯಾಗಲಿ.
ಲೂಕನು 2 : 30 (ERVKN)
ನೀನು ದಯಪಾಲಿಸಿದ ರಕ್ಷಕನನ್ನು §ರಕ್ಷಕ ಅಕ್ಷರಶಃ, ರಕ್ಷಣೆ. ಯೇಸು ಅಂದರೆ ರಕ್ಷಣೆ. ಕಣ್ಣಾರೆಕಂಡೆನು.
ಲೂಕನು 2 : 31 (ERVKN)
ನೀನು ಆತನನ್ನು ಜನರೆಲ್ಲರಿಗೆ ಪ್ರತ್ಯಕ್ಷ ಮಾಡಿರುವೆ.
ಲೂಕನು 2 : 32 (ERVKN)
ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”
ಲೂಕನು 2 : 33 (ERVKN)
ಸಿಮೆಯೋನನು ಮಗುವಿನ ಕುರಿತಾಗಿ ಹೇಳಿದ ಮಾತುಗಳನ್ನು ಕೇಳಿ ತಂದೆತಾಯಿಗಳಿಗೆ ಆಶ್ಚರ್ಯವಾಯಿತು.
ಲೂಕನು 2 : 34 (ERVKN)
ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು.
ಲೂಕನು 2 : 35 (ERVKN)
ಜನರು ಗುಟ್ಟಾಗಿ ಯೋಚಿಸುವ ಸಂಗತಿಗಳು ಬಯಲಾಗುವವು. ಮುಂದೆ ಸಂಭವಿಸುವ ಸಂಗತಿಗಳಿಂದ ನಿನ್ನ ಹೃದಯಕ್ಕೆ ಅಲಗು ನಾಟಿದಂತಾಗುವುದು” ಎಂದು ಹೇಳಿದನು.
ಲೂಕನು 2 : 36 (ERVKN)
ಅನ್ನಳು ಯೇಸುವನ್ನು ನೋಡಿದಳು ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ *ಪ್ರವಾದಿನಿ ದೇವರ ಸಂದೇಶವನ್ನು ತಿಳಿಸುವ ಸ್ತ್ರೀ. ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು.
ಲೂಕನು 2 : 37 (ERVKN)
ತನ್ನ ಉಳಿದ ಜೀವಮಾನವೆಲ್ಲಾ ವಿಧವೆಯಾಗಿದ್ದ ಆಕೆಗೆ ಈಗ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ಅನ್ನಳು ಯಾವಾಗಲೂ ದೇವಾಲಯದಲ್ಲಿಯೇ ಇದ್ದಳು. ಆಕೆ ಬೇರೆಲ್ಲಿಗೂ ಹೋಗುತ್ತಿರಲಿಲ್ಲ. ಆಕೆ ಉಪವಾಸ ಮಾಡುತ್ತಾ ಮತ್ತು ಹಗಲಿರುಳು ಪ್ರಾರ್ಥಿಸುತ್ತಾ ದೇವರನ್ನು ಆರಾಧಿಸುತ್ತಿದ್ದಳು.
ಲೂಕನು 2 : 38 (ERVKN)
ಅವಳು ಅದೇ ಸಮಯದಲ್ಲಿ ಅಲ್ಲಿಗೆ ಬಂದು, ದೇವರಿಗೆ ಸ್ತೋತ್ರ ಸಲ್ಲಿಸಿ ದೇವರು ಜೆರುಸಲೇಮಿಗೆ ದಯಪಾಲಿಸುವ ಬಿಡುಗಡೆಯನ್ನು ಎದುರುನೋಡುತ್ತಿದ್ದ ಜನರಿಗೆ ಯೇಸುವಿನ ವಿಷಯವಾಗಿ ತಿಳಿಸಿದಳು.
ಲೂಕನು 2 : 39 (ERVKN)
ಯೋಸೇಫನು ಮತ್ತು ಮರಿಯಳು ಮನೆಗೆ ಮರಳಿದರು ಪ್ರಭುವಿನ ಧರ್ಮಶಾಸ್ತ್ರದ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಯೋಸೇಫ ಮತ್ತು ಮರಿಯಳು ಗಲಿಲಾಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಂತ ಊರಾದ ನಜರೇತಿಗೆ ಹಿಂತಿರುಗಿದರು.
ಲೂಕನು 2 : 40 (ERVKN)
ಬಾಲಕ ಯೇಸು ಬೆಳೆದು ಬಲಗೊಂಡು ಸಂಪೂರ್ಣ ಜ್ಞಾನಿಯಾದನು. ದೇವರ ಆಶೀರ್ವಾದವು ಆತನೊಡನೆ ಇತ್ತು.
ಲೂಕನು 2 : 41 (ERVKN)
ಬಾಲಕ ಯೇಸು ಪ್ರತಿವರ್ಷ ಯೇಸುವಿನ ತಂದೆತಾಯಿಗಳು ಪಸ್ಕಹಬ್ಬಕ್ಕಾಗಿ ಪಸ್ಕಹಬ್ಬ ಯೆಹೂದ್ಯರಿಗೆ ಪ್ರಾಮುಖ್ಯವಾದ ಪರಿಶುದ್ಧ ದಿನ. ಮೋಶೆಯ ಕಾಲದಲ್ಲಿ ದೇವರು ಅವರನ್ನು ಈಜಿಪ್ಟಿನ ದಾಸತ್ವದಿಂದ ಬಿಡಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ಪ್ರತಿ ವರ್ಷ ಈ ದಿನದಲ್ಲಿ ವಿಶೇಷ ಹಬ್ಬವನ್ನು ಆಚರಿಸುತ್ತಿದ್ದರು. ಜೆರುಸಲೇಮಿಗೆ ಹೋಗುತ್ತಿದ್ದರು.
ಲೂಕನು 2 : 42 (ERVKN)
ಯೇಸುವಿಗೆ ಹನ್ನೆರಡು ವರ್ಷವಾಗಿದ್ದಾಗ ಎಂದಿನಂತೆ ಅವರು ಪಸ್ಕ ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದರು.
ಲೂಕನು 2 : 43 (ERVKN)
ಹಬ್ಬದ ದಿನಗಳು ಮುಗಿದ ನಂತರ ಅವರು ಮನೆಗೆ ಹೋದರು. ಆದರೆ ಬಾಲಕನಾದ ಯೇಸು ಜೆರುಸಲೇಮಿನಲ್ಲಿ ಉಳಿದುಕೊಂಡನು. ಆತನ ತಂದೆತಾಯಿಗಳಿಗೆ ಇದು ತಿಳಿದಿರಲಿಲ್ಲ. ಯೇಸುವು ಯಾತ್ರಿಕರ ಗುಂಪಿನಲ್ಲಿರಬಹುದೆಂದು ಭಾವಿಸಿಕೊಂಡ
ಲೂಕನು 2 : 44 (ERVKN)
ಯೋಸೇಫನು ಮತ್ತು ಮರಿಯಳು ಒಂದು ದಿನವೆಲ್ಲ ಪ್ರಯಾಣ ಮಾಡಿದರು. ನಂತರ ಮಗನನ್ನು ಕಾಣದೆ ತಮ್ಮ ಕುಟುಂಬದವರ ಮತ್ತು ಆಪ್ತಸ್ನೇಹಿತರ ಮಧ್ಯದಲ್ಲಿ ಆತನಿಗಾಗಿ ಹುಡುಕತೊಡಗಿದರು.
ಲೂಕನು 2 : 45 (ERVKN)
ಆದರೆ ಅಲ್ಲೆಲ್ಲೂ ಕಾಣದೆ ಯೇಸುವನ್ನು ಹುಡುಕಲು ಜೆರುಸಲೇಮಿಗೆ ಮರಳಿಹೋದರು.
ಲೂಕನು 2 : 46 (ERVKN)
ಮೂರು ದಿನಗಳಾದ ಮೇಲೆ ಆತನನ್ನು ಕಂಡುಕೊಂಡರು. ಯೇಸುವು ದೇವಾಲಯದಲ್ಲಿ ಧಾರ್ಮಿಕ ಉಪದೇಶಕರೊಡನೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಮತ್ತು ಅವರಿಗೆ ಪ್ರಶೆಗಳನ್ನು ಕೇಳುತ್ತಾ ಇದ್ದನು.
ಲೂಕನು 2 : 47 (ERVKN)
ಆತನ ಮಾತುಗಳನ್ನು ಕೇಳಿ ಆತನ ತಿಳುವಳಿಕೆಗೂ ಆತನ ಬುದ್ಧಿವಂತಿಕೆಯ ಉತ್ತರಗಳಿಗೂ ಅವರೆಲ್ಲರೂ ಆಶ್ಚರ್ಯಪಟ್ಟರು.
ಲೂಕನು 2 : 48 (ERVKN)
ಯೇಸುವಿನ ತಂದೆತಾಯಿಗಳು ಆತನನ್ನು ಅಲ್ಲಿ ಕಂಡು ಆಶ್ಚರ್ಯಪಟ್ಟರು. ಮರಿಯಳು ಆತನಿಗೆ, “ಮಗನೇ, ನೀನು ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆ ಮತ್ತು ನಾನು ನಿನಗಾಗಿ ಬಹಳ ಚಿಂತಿಸುತ್ತಿದ್ದೆವು. ನಿನಗೋಸ್ಕರ ನಾವು ಹುಡುಕುತ್ತಿದ್ದೆವು” ಎಂದು ಹೇಳಿದಳು.
ಲೂಕನು 2 : 49 (ERVKN)
ಯೇಸು ಅವರಿಗೆ, “ನೀವು ನನಗೋಸ್ಕರ ಏಕೆ ಹುಡುಕಬೇಕಿತ್ತು? ನನ್ನ ತಂದೆಯ (ದೇವರ) ಕೆಲಸ ಎಲ್ಲಿರುತ್ತದೋ ಅಲ್ಲಿ ನಾನು ಇರಬೇಕು ಎಂಬುದನ್ನು ನೀವು ತಿಳಿದಿರಬೇಕಾಗಿತ್ತು!” ಎಂದು ಹೇಳಿದನು.
ಲೂಕನು 2 : 50 (ERVKN)
ಆದರೆ ಆತನ ಮಾತು ಅವರಿಗೆ ಅರ್ಥವಾಗಲಿಲ್ಲ.
ಲೂಕನು 2 : 51 (ERVKN)
ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು.
ಲೂಕನು 2 : 52 (ERVKN)
ಯೇಸುವು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು. ದೇವರಿಗೂ ಜನರಿಗೂ ಅಚ್ಚುಮೆಚ್ಚಾದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52