ಲೂಕನು 20 : 1 (ERVKN)
{ಯೆಹೂದ್ಯನಾಯಕರು ಯೇಸುವಿಗೆ ಕೇಳಿದ ಪ್ರಶ್ನೆ} (ಮತ್ತಾಯ 21:23-27; ಮಾರ್ಕ 11:27-33) [PS] ಒಂದು ದಿನ ಯೇಸು ದೇವಾಲಯದಲ್ಲಿದ್ದನು. ಆತನು ಜನರಿಗೆ ಉಪದೇಶಿಸುತ್ತಾ ಸುವಾರ್ತೆಯನ್ನು ತಿಳಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರು ಯೇಸುವಿನ ಬಳಿಗೆ ಬಂದು,
ಲೂಕನು 20 : 2 (ERVKN)
“ನಮಗೆ ಹೇಳು! ನೀನು ಯಾವ ಅಧಿಕಾರದಿಂದ ಈ ಸಂಗತಿಗಳನ್ನು ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು?” ಎಂದು ಕೇಳಿದರು. [PE][PS]
ಲೂಕನು 20 : 3 (ERVKN)
ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ.
ಲೂಕನು 20 : 4 (ERVKN)
ಜನರಿಗೆ ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ದೇವರಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ? ನನಗೆ ಹೇಳಿರಿ” ಎಂದು ಉತ್ತರಕೊಟ್ಟನು. [PE][PS]
ಲೂಕನು 20 : 5 (ERVKN)
ಅವರೆಲ್ಲರೂ ಇದರ ಬಗ್ಗೆ ಒಟ್ಟಾಗಿ ಚರ್ಚಿಸಿ ಒಬ್ಬರಿಗೊಬ್ಬರು, “ ‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತು’ ಎಂದು ಉತ್ತರಕೊಟ್ಟರೆ, ‘ಹಾಗಾದರೆ ನೀವು ಯೋಹಾನನನ್ನು ಏಕೆ ನಂಬಲಿಲ್ಲ?’ ಎಂದು ಆತನು ಕೇಳುವನು.
ಲೂಕನು 20 : 6 (ERVKN)
‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂದಿತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು.
ಲೂಕನು 20 : 7 (ERVKN)
ಬಳಿಕ ಅವರು, “ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. [PE][PS]
ಲೂಕನು 20 : 8 (ERVKN)
ಯೇಸು ಅವರಿಗೆ, “ಹಾಗಾದರೆ, ಈ ಸಂಗತಿಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂಬುದನ್ನು ನಾನೂ ನಿಮಗೆ ಹೇಳುವುದಿಲ್ಲ” ಅಂದನು. [PE][PS]
ಲೂಕನು 20 : 9 (ERVKN)
{ದೇವರು ತನ್ನ ಮಗನನ್ನು ಕಳುಹಿಸಿದನು} (ಮತ್ತಾಯ 21:33-46; ಮಾರ್ಕ 12:1-12) [PS] ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ಮನುಷ್ಯನು ಒಂದು ದ್ರಾಕ್ಷಿತೋಟವನ್ನು ಮಾಡಿ ಅದನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟನು. ಬಳಿಕ ಅವನು ಅಲ್ಲಿಂದ ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
ಲೂಕನು 20 : 10 (ERVKN)
ಸ್ವಲ್ಪಕಾಲದ ನಂತರ ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂತು. ಆದ್ದರಿಂದ ಅವನು ತನ್ನ ಪಾಲಿನ ಹಣ್ಣನ್ನು ತೆಗೆದುಕೊಂಡು ಬರುವುದಕ್ಕಾಗಿ ತನ್ನ ಸೇವಕನನ್ನು ಆ ರೈತರ ಬಳಿಗೆ ಕಳುಹಿಸಿದನು. ಆದರೆ ಆ ರೈತರು ಆ ಸೇವಕನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
ಲೂಕನು 20 : 11 (ERVKN)
ಆದ್ದರಿಂದ ಅವನು ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನೂ ಹೊಡೆದು, ಅವಮಾನ ಮಾಡಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
ಲೂಕನು 20 : 12 (ERVKN)
ಆದ್ದರಿಂದ ಅವನು ಮೂರನೆಯ ಸಲ ತನ್ನ ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ಆ ರೈತರು ಅವನನ್ನೂ ಗಾಯವಾಗುವಷ್ಟು ಹೊಡೆದು ಹೊರಗೆ ಅಟ್ಟಿದರು. [PE][PS]
ಲೂಕನು 20 : 13 (ERVKN)
“ಆಗ ತೋಟದ ಯಜಮಾನನು, ‘ನಾನೀಗ ಏನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನು ಕಳುಹಿಸುವೆನು. ಒಂದುವೇಳೆ, ಆ ರೈತರು ಅವನಿಗೆ ಮರ್ಯಾದೆ ಕೊಡಬಹುದು’ ಅಂದುಕೊಂಡನು.
ಲೂಕನು 20 : 14 (ERVKN)
ಆ ರೈತರು ಮಗನನ್ನು ನೋಡಿ, ಒಬ್ಬರಿಗೊಬ್ಬರು, ‘ಇವನು ಧಣಿಯ ಮಗನು. ಈ ಹೊಲ ಇವನಿಗೇ ಸೇರುತ್ತದೆ. ನಾವು ಇವನನ್ನು ಕೊಂದರೆ, ಆಗ ಹೊಲವೆಲ್ಲಾ ನಮ್ಮದಾಗುತ್ತದೆ’ ಎಂದು ಮಾತಾಡಿಕೊಂಡರು.
ಲೂಕನು 20 : 15 (ERVKN)
ಬಳಿಕ ಆ ಮಗನನ್ನು ತೋಟದಿಂದ ಹೊರಕ್ಕೆ ನೂಕಿಕೊಂಡು ಹೋಗಿ ಕೊಂದುಹಾಕಿದರು. [PE][PS] “ಆಗ ತೋಟದ ಯಜಮಾನನು ಏನು ಮಾಡುವನು?
ಲೂಕನು 20 : 16 (ERVKN)
ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” [PE][PS] ಜನರು ಈ ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು.
ಲೂಕನು 20 : 17 (ERVKN)
ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, “ಹಾಗಾದರೆ, ‘ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು’ ಕೀರ್ತನೆ. 118:22] ಎಂಬ ವಚನದ ಅರ್ಥವೇನು?
ಲೂಕನು 20 : 18 (ERVKN)
ಆ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ನಿಮ್ಮ ಮೇಲೆ ಬಿದ್ದರೆ ಅದು ನಿಮ್ಮನ್ನು ಜಜ್ಜಿಹಾಕುವುದು!” ಎಂದು ಹೇಳಿದನು. [PE][PS]
ಲೂಕನು 20 : 19 (ERVKN)
ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯ ನಾಯಕರು ಕೇಳಿದರು. ತಮ್ಮನ್ನು ಕುರಿತಾಗಿಯೇ ಆತನು ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದುಕೊಂಡರು. ಆದ್ದರಿಂದ ಅವರು ಆಗಲೇ ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಅವರು ಜನರಿಗೆ ಭಯಪಟ್ಟು ಆತನನ್ನು ಬಂಧಿಸಲಿಲ್ಲ. [PE][PS]
ಲೂಕನು 20 : 20 (ERVKN)
{ಯೇಸುವನ್ನು ಮೋಸಗೊಳಿಸಲು ಯೆಹೂದ್ಯ ನಾಯಕರ ಪ್ರಯತ್ನ} (ಮತ್ತಾಯ 22:15-22; ಮಾರ್ಕ 12:13-17) [PS] ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)
ಲೂಕನು 20 : 21 (ERVKN)
ಆದ್ದರಿಂದ ಅವರು ಯೇಸುವಿಗೆ, “ಉಪದೇಶಕನೇ, ನೀನು ಸತ್ಯವನ್ನೇ ಹೇಳುವೆ ಮತ್ತು ಉಪದೇಶಿಸುವೆ ಎಂದು ನಮಗೆ ಗೊತ್ತಿದೆ. ನೀನು ಮುಖದಾಕ್ಷಿಣ್ಯ ಮಾಡುವವನಲ್ಲ. ದೇವರ ಮಾರ್ಗದ ಕುರಿತಾಗಿ ನೀನು ಯಾವಾಗಲೂ ಸತ್ಯವನ್ನೇ ಬೋಧಿಸುವೆ!
ಲೂಕನು 20 : 22 (ERVKN)
ಈಗ ಹೇಳು, ನಾವು ಸೀಸರನಿಗೆ [*ಸೀಸರ ರೋಮಿನ ಚಕ್ರವರ್ತಿಗೆ ಕೊಡಲ್ಪಟ್ಟ ಹೆಸರು.] ತೆರಿಗೆ ಕೊಡುವುದು ಸರಿಯೋ? ತಪ್ಪೋ?” ಎಂದು ಕೇಳಿದರು. [PE][PS]
ಲೂಕನು 20 : 23 (ERVKN)
ಆದರೆ ಈ ಜನರು ತನಗೆ ಮೋಸಮಾಡಲು ಪ್ರಯತ್ನಿಸುತ್ತಿದ್ದಾರೆಂದು ಯೇಸುವಿಗೆ ತಿಳಿದಿತ್ತು.
ಲೂಕನು 20 : 24 (ERVKN)
ಆದ್ದರಿಂದ ಯೇಸು ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಆ ನಾಣ್ಯದ ಮೇಲೆ ಯಾರ ಹೆಸರಿದೆ? ಅದರ ಮೇಲೆ ಯಾರ ಮುಖಚಿತ್ರವಿದೆ?” ಎಂದು ಕೇಳಿದನು. [PE][PS] ಅವರು, “ಸೀಸರನದು” ಎಂದು ಹೇಳಿದರು. [PE][PS]
ಲೂಕನು 20 : 25 (ERVKN)
ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದನು. [PE][PS]
ಲೂಕನು 20 : 26 (ERVKN)
ಆ ಜನರು ಆತನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿ ಆಶ್ಚರ್ಯಪಟ್ಟು ಮರುಪ್ರಶ್ನೆ ಕೇಳದಂತಾದರು. ಜನರ ಮುಂದೆ ಯೇಸುವನ್ನು ಮಾತಿನಲ್ಲಿ ಸಿಕ್ಕಿಸಲು ಅವರಿಂದಾಗಲಿಲ್ಲ. [PE][PS]
ಲೂಕನು 20 : 27 (ERVKN)
{ಯೇಸುವನ್ನು ಮೋಸಗೊಳಿಸಲು ಕೆಲವು ಸದ್ದುಕಾಯರ ಪ್ರಯತ್ನ} (ಮತ್ತಾಯ 22:23-33; ಮಾರ್ಕ 12:18-27) [PS] ಕೆಲವು ಸದ್ದುಕಾಯರು [†ಸದ್ದುಕಾಯರು ಯೆಹೂದ್ಯರ ಪ್ರಾಮುಖ್ಯ ಧಾರ್ಮಿಕ ಗುಂಪು. ಅವರು ಹಳೆ ಒಡಂಬಡಿಕೆಯ ಮೊದಲಿನ ಐದು ಪುಸ್ತಕಗಳನ್ನು ಮಾತ್ರ ಅಂಗೀಕರಿಸಿದವರಾಗಿದ್ದರು.] ಯೇಸುವಿನ ಬಳಿಗೆ ಬಂದರು. (ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದು ಸದ್ದುಕಾಯರು ನಂಬುತ್ತಾರೆ.) ಅವರು ಯೇಸುವಿಗೆ,
ಲೂಕನು 20 : 28 (ERVKN)
“ಉಪದೇಶಕನೇ, ಮದುವೆಯಾದ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ಆ ಸ್ತ್ರೀಯನ್ನು ಮದುವೆಯಾಗಿ, ಸತ್ತುಹೋದ ಸಹೋದರನಿಗಾಗಿ ಮಕ್ಕಳನ್ನು ಪಡೆಯಬೇಕೆಂದು [‡ಮದುವೆ … ಪಡೆಯಬೇಕೆಂದು ನೋಡಿರಿ: ಧರ್ಮೋಪದೇಶ. 25:5, 6] ಮೋಶೆಯು ಬರೆದಿದ್ದಾನಷ್ಟೆ.
ಲೂಕನು 20 : 29 (ERVKN)
ಒಂದು ಕಾಲದಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯ ಸಹೋದರನು ಒಬ್ಬ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ.
ಲೂಕನು 20 : 30 (ERVKN)
ಆಗ ಎರಡನೆಯ ಸಹೋದರನು ಆ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು.
ಲೂಕನು 20 : 31 (ERVKN)
ಆಗ ಮೂರನೆಯ ಸಹೋದರನು ಆ ಸ್ತ್ರೀಯನ್ನು ಮದುವೆಯಾದನು. ಬಳಿಕ ಅವನೂ ಸತ್ತುಹೋದನು. ಇನ್ನುಳಿದ ಸಹೋದರರಿಗೂ ಹೀಗೆಯೇ ಆಯಿತು. ಅವರೆಲ್ಲರೂ ಮಕ್ಕಳಿಲ್ಲದೆ ಸತ್ತರು.
ಲೂಕನು 20 : 32 (ERVKN)
ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.
ಲೂಕನು 20 : 33 (ERVKN)
ಆದರೆ ಆ ಏಳು ಮಂದಿ ಸಹೋದರರೂ ಆಕೆಯನ್ನು ಮದುವೆಯಾಗಿದ್ದರು. ಹೀಗಿರಲಾಗಿ, ಸತ್ತವರು ಪುನರುತ್ಥಾನ ಹೊಂದುವಾಗ, ಆ ಸ್ತ್ರೀಯು ಯಾರ ಹೆಂಡತಿಯಾಗಿರುವಳು?” ಎಂದು ಕೇಳಿದರು. [PE][PS]
ಲೂಕನು 20 : 34 (ERVKN)
ಯೇಸು ಸದ್ದುಕಾಯರಿಗೆ, “ಭೂಲೋಕದಲ್ಲಿ ಜನರು ಒಬ್ಬರನ್ನೊಬ್ಬರು ಮದುವೆ ಆಗುತ್ತಾರೆ.
ಲೂಕನು 20 : 35 (ERVKN)
ಪುನರುತ್ಥಾನಕ್ಕೆ ಯೋಗ್ಯರಾದ ಕೆಲವು ಜನರು ಜೀವಂತವಾಗಿ ಎದ್ದುಬಂದು ಮತ್ತೆ ಜೀವಿಸುತ್ತಾರೆ. ಆ ಹೊಸ ಜೀವನದಲ್ಲಿ ಅವರು ಮದುವೆ ಆಗುವುದಿಲ್ಲ.
ಲೂಕನು 20 : 36 (ERVKN)
ಆ ಜೀವನದಲ್ಲಿ ಅವರು ದೇವದೂತರಂತಿರುತ್ತಾರೆ. ಅವರಿಗೆ ಮರಣವೂ ಇರುವುದಿಲ್ಲ. ಅವರು ದೇವರ ಮಕ್ಕಳಾಗಿರುತ್ತಾರೆ, ಏಕೆಂದರೆ ಅವರು ಪುನರುತ್ಥಾನ ಹೊಂದಿದವರಾಗಿದ್ದಾರೆ.
ಲೂಕನು 20 : 37 (ERVKN)
ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯು ಸ್ಪಷ್ಟವಾಗಿ ತೋರಿಸಿದ್ದಾನೆ. ಉರಿಯುವ ಪೊದೆಯ [§ಉರಿಯುವ ಪೊದೆ ನೋಡಿರಿ: ವಿಮೋಚನ. 3:1-12.] ಕುರಿತು ಮೋಶೆ ಬರೆಯುವಾಗ ‘ಪ್ರಭುವಾದ ದೇವರೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
ಲೂಕನು 20 : 38 (ERVKN)
ದೇವರು ಅವರೆಲ್ಲರಿಗೆ ದೇವರಾಗಿರುವುದರಿಂದ ಅವರೆಲ್ಲರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ ದೇವರು ಜೀವಿಸುವ ಜನರಿಗೇ ದೇವರಾಗಿದ್ದಾನೆ. ದೇವರಿಗೆ ಸೇರಿದವರೆಲ್ಲರೂ ಜೀವಂತರಾಗಿದ್ದಾರೆ” ಎಂದು ಹೇಳಿದನು. [PE][PS]
ಲೂಕನು 20 : 39 (ERVKN)
ಧರ್ಮೋಪದೇಶಕರಲ್ಲಿ ಕೆಲವರು, “ಬೋಧಕನೇ, ನೀನು ಒಳ್ಳೆಯ ಉತ್ತರವನ್ನು ಕೊಟ್ಟಿರುವೆ” ಎಂದು ಹೇಳಿದರು.
ಲೂಕನು 20 : 40 (ERVKN)
ಇನ್ನೊಂದು ಪ್ರಶ್ನೆಯನ್ನು ಆತನಿಗೆ ಕೇಳುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ. ಕ್ರಿಸ್ತನು ದಾವೀದನ ಮಗನೋ? (ಮತ್ತಾಯ 22:41-46; ಮಾರ್ಕ 12:35-37) [PE][PS]
ಲೂಕನು 20 : 41 (ERVKN)
ಆಗ ಯೇಸು, “ಕ್ರಿಸ್ತನು ದಾವೀದನ ಮಗನೆಂದು ಜನರು ಏಕೆ ಹೇಳುತ್ತಾರೆ?
ಲೂಕನು 20 : 42 (ERVKN)
ಕೀರ್ತನೆಗಳ ಪುಸ್ತಕದಲ್ಲಿ ಸ್ವತಃ ದಾವೀದನೇ ಇಂತೆಂದಿದ್ದಾನೆ: ‘ಪ್ರಭುವು (ದೇವರು) ನನ್ನ ಪ್ರಭುವಿಗೆ (ಕ್ರಿಸ್ತನಿಗೆ) ಹೇಳಿದ್ದೇನೆಂದರೆ, [QBR]
ಲೂಕನು 20 : 43 (ERVKN)
ನಾನು ನಿನ್ನ ವೈರಿಗಳನ್ನು ನಿನ್ನ ಪಾದಪೀಠವನ್ನಾಗಿ ಮಾಡುವ ತನಕ [QBR2] ನನ್ನ ಬಲಗಡೆಯಲ್ಲೇ ಕುಳಿತುಕೊಂಡಿರು.’ ಕೀರ್ತನೆ. 110:1]
ಲೂಕನು 20 : 44 (ERVKN)
ದಾವೀದನು ಕ್ರಿಸ್ತನನ್ನು ‘ಪ್ರಭು’ವೆಂದು ಕರೆದ ಮೇಲೆ ಆತನು ಅವನಿಗೆ ಮಗನಾಗಲು ಹೇಗೆ ಸಾಧ್ಯ?” ಎಂದು ಹೇಳಿದನು. (ಮತ್ತಾಯ 23:1-36; ಮಾರ್ಕ 12:38-40, ಲೂಕ 11:37-54) [PE][PS]
ಲೂಕನು 20 : 45 (ERVKN)
{ಧರ್ಮೋಪದೇಶಕರ ಬಗ್ಗೆ ಎಚ್ಚರಿಕೆ} [PS] ಜನರೆಲ್ಲರೂ ಯೇಸುವಿನ ಮಾತನ್ನು ಆಲಿಸಿದರು. ಯೇಸು ತನ್ನ ಶಿಷ್ಯರಿಗೆ,
ಲೂಕನು 20 : 46 (ERVKN)
“ಧರ್ಮೋಪದೇಶಕರ ಕುರಿತು ಎಚ್ಚರಿಕೆಯಾಗಿರಿ. ಅವರು ಪ್ರಾಮುಖ್ಯ ವ್ಯಕ್ತಿಗಳಂತೆ ಬಟ್ಟೆ ಧರಿಸಿಕೊಂಡು ತಿರುಗಾಡುತ್ತಾರೆ. ಮಾರುಕಟ್ಟೆಗಳಲ್ಲಿ ಜನರಿಂದ ಗೌರವ ಹೊಂದಲು ಆಶಿಸುತ್ತಾರೆ. ಸಭಾಮಂದಿರಗಳಲ್ಲಿ ಮತ್ತು ಔತಣಕೂಟಗಳಲ್ಲಿ ಉನ್ನತವಾದ ಆಸನಗಳನ್ನು ಆಶಿಸುತ್ತಾರೆ.
ಲೂಕನು 20 : 47 (ERVKN)
ಆದರೆ ಅವರು ವಿಧವೆಯರಿಗೆ ಮೋಸಮಾಡಿ ಅವರ ಮನೆಗಳನ್ನು ಕಸಿದುಕೊಳ್ಳುತ್ತಾರೆ. ಬಳಿಕ ಉದ್ದವಾದ ಪ್ರಾರ್ಥನೆಗಳನ್ನು ಮಾಡಿ ಒಳ್ಳೆಯವರಂತೆ ನಟಿಸುತ್ತಾರೆ. ದೇವರು ಇವರನ್ನು ಕಠಿಣವಾದ ದಂಡನೆಗೆ ಗುರಿಪಡಿಸುತ್ತಾನೆ” ಎಂದು ಹೇಳಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47

BG:

Opacity:

Color:


Size:


Font: