ಲೂಕನು 22 : 1 (ERVKN)
ಯೇಸುವನ್ನು ಕೊಲ್ಲಲು ಯೆಹೂದ್ಯನಾಯಕರ ಸಂಚು ಯೆಹೂದ್ಯರ ಹುಳಿಯಿಲ್ಲದ ರೊಟ್ಟಿಯ ಹಬ್ಬ ಅಂದರೆ ಪಸ್ಕಹಬ್ಬವು ಹತ್ತಿರವಾಗಿತ್ತು.
ಲೂಕನು 22 : 2 (ERVKN)
ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸುತ್ತಾ ಜನರ ಭಯದಿಂದ ತಕ್ಕ ಮಾರ್ಗವನ್ನು ಹುಡುಕತೊಡಗಿದರು.
ಲೂಕನು 22 : 3 (ERVKN)
ಯೇಸುವಿನ ವಿರುದ್ಧ ಯೂದನು ಮಾಡಿದ ಸಂಚು ಯೇಸುವಿನ ಹನ್ನೆರಡು ಅಪೊಸ್ತಲರಲ್ಲಿ ಇಸ್ಕರಿಯೋತ ಯೂದನು ಒಬ್ಬನಾಗಿದ್ದನು. ಸೈತಾನನು ಇವನೊಳಗೆ ಪ್ರವೇಶಿಸಿ ಕೆಟ್ಟಕಾರ್ಯವೊಂದನ್ನು ಮಾಡುವಂತೆ ಪ್ರೇರೇಪಿಸಿದನು.
ಲೂಕನು 22 : 4 (ERVKN)
ಯೂದನು ಮಹಾಯಾಜಕರ ಮತ್ತು ದೇವಾಲಯವನ್ನು ಕಾಯುತ್ತಿದ್ದ ಕೆಲವು ಸೈನಿಕರ ಬಳಿಗೆ ಹೋಗಿ, ಯೇಸುವನ್ನು ಹಿಡಿದುಕೊಡುವುದರ ಬಗ್ಗೆ ಅವರೊಂದಿಗೆ ಮಾತಾಡಿದನು.
ಲೂಕನು 22 : 5 (ERVKN)
ಯಾಜಕರಿಗೆ ಬಹಳ ಸಂತೋಷವಾಯಿತು. ಯೇಸುವನ್ನು ತಮಗೆ ಹಿಡಿದುಕೊಟ್ಟರೆ ಹಣ ಕೊಡುವುದಾಗಿ ಅವರು ಯೂದನಿಗೆ ಮಾತುಕೊಟ್ಟರು.
ಲೂಕನು 22 : 6 (ERVKN)
ಯೂದನು ಅದಕ್ಕೆ ಒಪ್ಪಿದನು. ಬಳಿಕ ಯೇಸುವನ್ನು ಅವರಿಗೆ ಹಿಡಿದುಕೊಡಲು ಉತ್ತಮವಾದ ಸಮಯಕ್ಕಾಗಿ ಕಾಯತೊಡಗಿದನು. ತನ್ನ ಈ ಕಾರ್ಯವನ್ನು ಯಾರಿಗೂ ತಿಳಿಯದಂಥ ಸಮಯದಲ್ಲಿ ಮಾಡಬೇಕೆಂಬುದು ಅವನ ಬಯಕೆಯಾಗಿತ್ತು.
ಲೂಕನು 22 : 7 (ERVKN)
ಪಸ್ಕದ ಊಟಕ್ಕೆ ಸಿದ್ಧತೆ (ಮತ್ತಾಯ 26:17-25; ಮಾರ್ಕ 14:12-21; ಯೋಹಾನ 13:21-30) ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನ ಬಂತು. ಯೆಹೂದ್ಯರು ಪಸ್ಕದ ಕುರಿಮರಿಗಳನ್ನು ಕೊಯ್ಯುವ ದಿನ ಅದಾಗಿತ್ತು.
ಲೂಕನು 22 : 8 (ERVKN)
ಯೇಸುವು ಪೇತ್ರ ಮತ್ತು ಯೋಹಾನರಿಗೆ, “ಹೋಗಿ, ಪಸ್ಕದ ಊಟವನ್ನು ನಮಗಾಗಿ ಸಿದ್ಧಮಾಡಿರಿ” ಎಂದು ಹೇಳಿದನು.
ಲೂಕನು 22 : 9 (ERVKN)
ಪೇತ್ರ ಮತ್ತು ಯೋಹಾನರು, “ಊಟವನ್ನು ಎಲ್ಲಿ ಸಿದ್ಧಮಾಡಬೇಕು?” ಎಂದು ಯೇಸುವಿಗೆ ಕೇಳಿದರು.
ಲೂಕನು 22 : 10 (ERVKN)
ಯೇಸು ಅವರಿಗೆ, “ಕೇಳಿರಿ! ನೀವು ಪಟ್ಟಣದೊಳಗೆ (ಜೆರುಸಲೇಮಿಗೆ) ಹೋದನಂತರ, ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನನ್ನು ನೋಡುವಿರಿ. ಅವನನ್ನೇ ಹಿಂಬಾಲಿಸಿರಿ. ಅವನು ಒಂದು ಮನೆಯೊಳಗೆ ಹೋಗುವನು. ನೀವು ಅವನೊಂದಿಗೆ ಹೋಗಿರಿ.
ಲೂಕನು 22 : 11 (ERVKN)
ಆ ಮನೆಯ ಯಜಮಾನನಿಗೆ, ‘ಗುರುವು ತನ್ನ ಶಿಷ್ಯರೊಂದಿಗೆ ಯಾವ ಕೋಣೆಯಲ್ಲಿ ಪಸ್ಕದ ಊಟವನ್ನು ಮಾಡಬೇಕೆಂಬುದನ್ನು ದಯಮಾಡಿ ತೋರಿಸು’ ಎಂದು ಹೇಳಿರಿ.
ಲೂಕನು 22 : 12 (ERVKN)
ಆಗ ಮನೆಯ ಯಜಮಾನನು ಮೇಲಂತಸ್ತಿನಲ್ಲಿ ಒಂದು ದೊಡ್ಡ ಕೋಣೆಯನ್ನು ತೋರಿಸುವನು. ಈ ಕೋಣೆಯು ನಿಮಗಾಗಿ ಸಿದ್ಧವಾಗಿರುವುದು. ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿರಿ” ಅಂದನು.
ಲೂಕನು 22 : 13 (ERVKN)
ಆದ್ದರಿಂದ ಪೇತ್ರ ಮತ್ತು ಯೋಹಾನ ಹೊರಟರು. ಯೇಸು ಹೇಳಿದ ಹಾಗೆ ಪ್ರತಿಯೊಂದೂ ನಡೆಯಿತು. ಅವರು ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿದರು. (ಮತ್ತಾಯ 26:26-30; ಮಾರ್ಕ 14:22-26; 1 ಕೊರಿಂಥ, 11:23-25)
ಲೂಕನು 22 : 14 (ERVKN)
ಪ್ರಭುವಿನ ರಾತ್ರಿ ಭೋಜನ ಪಸ್ಕದ ಊಟಮಾಡುವ ಸಮಯ ಬಂತು. ಯೇಸು ಮತ್ತು ಅಪೊಸ್ತಲರು ಮೇಜಿನ ಸುತ್ತಲೂ ಊಟಕ್ಕೆ ಕುಳಿತುಕೊಂಡರು.
ಲೂಕನು 22 : 15 (ERVKN)
ಯೇಸು ಅವರಿಗೆ, “ನಾನು ಸಾಯುವ ಮೊದಲು ಈ ಪಸ್ಕದ ಊಟ ಮಾಡಲು ಬಹಳವಾಗಿ ಅಪೇಕ್ಷಿಸಿದ್ದೇನೆ.
ಲೂಕನು 22 : 16 (ERVKN)
ಇದರ ನಿಜವಾದ ಅರ್ಥವು ದೇವರ ರಾಜ್ಯದಲ್ಲಿ ನೆರವೇರುವ ತನಕ, ನಾನೆಂದಿಗೂ ಇನ್ನೊಂದು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಅಂದನು.
ಲೂಕನು 22 : 17 (ERVKN)
ಬಳಿಕ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಆತನು, “ಈ ಪಾತ್ರೆಯಲ್ಲಿರುವ ದ್ರಾಕ್ಷಾರಸವನ್ನು ನೀವೆಲ್ಲರೂ ಹಂಚಿಕೊಳ್ಳಿರಿ.
ಲೂಕನು 22 : 18 (ERVKN)
ದೇವರ ರಾಜ್ಯ ಬರುವ ತನಕ, ನಾನೆಂದಿಗೂ ತಿರುಗಿ ದ್ರಾಕ್ಷಾರಸ ಕುಡಿಯುವುದಿಲ್ಲ” ಅಂದನು.
ಲೂಕನು 22 : 19 (ERVKN)
ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು.
ಲೂಕನು 22 : 20 (ERVKN)
ಅದೇ ರೀತಿಯಾಗಿ, ಊಟವಾದ ನಂತರ, ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಇದು ಸೂಚಿಸುತ್ತದೆ. ನಾನು ನಿಮಗಾಗಿ ಕೊಡುತ್ತಿರುವ ರಕ್ತದಿಂದ ಈ ಹೊಸ ಒಡಂಬಡಿಕೆ ಪ್ರಾರಂಭವಾಗುತ್ತದೆ” ಅಂದನು. ಯೇಸುವಿಗೆ ಯಾರು ವಿರೋಧಿಗಳಾಗುವರು?
ಲೂಕನು 22 : 21 (ERVKN)
ಯೇಸು, “ನನಗೆ ದ್ರೋಹ ಬಗೆಯುವವನು ನನ್ನೊಂದಿಗೆ ಇದೇ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದಾನೆ.
ಲೂಕನು 22 : 22 (ERVKN)
ಮನುಷ್ಯಕುಮಾರನು ದೇವರ ಯೋಜನೆಗನುಸಾರವಾಗಿ ಮರಣಹೊಂದುವನು. ಆದರೆ ಮನುಷ್ಯಕುಮಾರನನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಡುವ ವ್ಯಕ್ತಿಗೆ ಬಹಳ ಕೇಡಾಗುವುದು” ಎಂದು ಹೇಳಿದನು.
ಲೂಕನು 22 : 23 (ERVKN)
ಆಗ ಅಪೊಸ್ತಲರು, “ನಮ್ಮಲ್ಲಿ ಯಾವನು ಇಂಥ ದುಷ್ಕೃತ್ಯ ಮಾಡುವನು?” ಎಂದು ಒಬ್ಬರನ್ನೊಬ್ಬರು ಕೇಳಿಕೊಂಡರು.
ಲೂಕನು 22 : 24 (ERVKN)
ಸೇವಕರಂತಿರಿ ಬಳಿಕ ಅಪೊಸ್ತಲರು ತಮ್ಮಲ್ಲಿ ಯಾರು ಅತಿ ಶ್ರೇಷ್ಠರೆಂದು ವಾದ ಮಾಡತೊಡಗಿದರು.
ಲೂಕನು 22 : 25 (ERVKN)
ಆಗ ಯೇಸು ಅವರಿಗೆ, “ಈ ಲೋಕದ ಅರಸರು ತಮ್ಮ ಜನರ ಮೇಲೆ ದೊರೆತನ ಮಾಡುತ್ತಾರೆ. ಜನರ ಮೇಲೆ ಅಧಿಕಾರ ಹೊಂದಿರುವವರನ್ನು ಧರ್ಮಿಷ್ಠರೆಂದು ಕರೆಯುತ್ತಾರೆ.
ಲೂಕನು 22 : 26 (ERVKN)
ಆದರೆ ನೀವು ಹಾಗಾಗಬಾರದು. ಅತ್ಯಂತ ದೊಡ್ಡ ವ್ಯಕ್ತಿಯು ಅತ್ಯಂತ ಚಿಕ್ಕ ವ್ಯಕ್ತಿಯಾಗಬೇಕು. ನಾಯಕರು ಸೇವಕರಂತಿರಬೇಕು.
ಲೂಕನು 22 : 27 (ERVKN)
ಶ್ರೇಷ್ಠನಾದವನು ಯಾರು? ಊಟಕ್ಕೆ ಕುಳಿತವನೋ? ಅಥವಾ ಅವನಿಗೆ ಸೇವೆ ಮಾಡುವವನೋ? ಊಟಕ್ಕೆ ಕುಳಿತಿರುವವನೇ ಶ್ರೇಷ್ಠನೆಂದು ನೀವು ಭಾವಿಸುತ್ತೀರೋ? ಆದರೆ ನಾನು ನಿಮ್ಮಲ್ಲಿ ಸೇವಕನಂತಿದ್ದೇನೆ!
ಲೂಕನು 22 : 28 (ERVKN)
“ನೀವು ನನ್ನ ಅನೇಕ ಕಷ್ಟಗಳಲ್ಲಿ ನನ್ನ ಸಂಗಡ ಇದ್ದವರು.
ಲೂಕನು 22 : 29 (ERVKN)
ನನ್ನ ತಂದೆ ನನಗೆ ರಾಜ್ಯವನ್ನು ಕೊಟ್ಟಿದ್ದಾನೆ. ನನ್ನ ಸಂಗಡ ಆಳುವುದಕ್ಕೆ ನಾನು ಸಹ ನಿಮಗೆ ಅಧಿಕಾರ ಕೊಡುತ್ತೇನೆ.
ಲೂಕನು 22 : 30 (ERVKN)
ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. ನಿಮ್ಮ ನಂಬಿಕೆಯನ್ನು ಕಳೆದುಕೊಳ್ಳಬೇಡಿರಿ! (ಮತ್ತಾಯ 26:31-35; ಮಾರ್ಕ 14:27-31; ಯೋಹಾನ 13:36-38)
ಲೂಕನು 22 : 31 (ERVKN)
“ಒಬ್ಬ ರೈತನು ತನ್ನ ಗೋಧಿಯನ್ನು ತೂರುವಂತೆ ಸೈತಾನನು ನಿಮ್ಮನ್ನು ಶೋಧಿಸಲು ಕೇಳಿಕೊಂಡನು. ಸೀಮೋನನೇ, ಸೀಮೋನನೇ (ಪೇತ್ರ)
ಲೂಕನು 22 : 32 (ERVKN)
ನಿನ್ನ ನಂಬಿಕೆಯು ಕುಂದಿಹೋಗಬಾರದೆಂದು ನಾನು ಪ್ರಾರ್ಥಿಸಿದೆನು! ನೀನು ಪರಿವರ್ತನೆಗೊಂಡ ನಂತರ ನಿನ್ನ ಸಹೋದರರನ್ನು ಬಲಪಡಿಸು” ಎಂದು ಹೇಳಿದನು.
ಲೂಕನು 22 : 33 (ERVKN)
ಅದಕ್ಕೆ ಪೇತ್ರನು ಯೇಸುವಿಗೆ, “ಪ್ರಭುವೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಎಂದು ಹೇಳಿದನು.
ಲೂಕನು 22 : 34 (ERVKN)
ಅದಕ್ಕೆ ಯೇಸು, “ಪೇತ್ರನೇ, ನಾಳೆ ಬೆಳಿಗ್ಗೆ ಕೋಳಿ ಕೂಗುವ ಮೊದಲು ನನ್ನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವೆ!” ಅಂದನು.
ಲೂಕನು 22 : 35 (ERVKN)
ಕಷ್ಟವನ್ನು ಎದುರಿಸಲು ಸಿದ್ಧರಾಗಿರಿ ಬಳಿಕ ಯೇಸು ಅಪೊಸ್ತಲರಿಗೆ, “ಜನರಿಗೆ ಬೋಧಿಸುವುದಕ್ಕೆ ನಾನು ನಿಮ್ಮನ್ನು ಹಣವಿಲ್ಲದೆ, ಚೀಲವಿಲ್ಲದೆ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದೆನು. ಆದರೆ ನಿಮಗೆ ಏನಾದರೂ ಕೊರತೆ ಆಯಿತೇ?” ಎಂದು ಕೇಳಿದನು. ಅಪೊಸ್ತಲರು, “ಇಲ್ಲ” ಅಂದರು.
ಲೂಕನು 22 : 36 (ERVKN)
ಯೇಸು ಅವರಿಗೆ, “ಆದರೆ ಈಗ ನಿಮ್ಮಲ್ಲಿ ಹಣವಾಗಲಿ ಚೀಲವಾಗಲಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿರಿ. ನಿಮ್ಮಲ್ಲಿ ಖಡ್ಗವಿಲ್ಲದಿದ್ದರೆ, ನಿಮ್ಮ ಮೇಲಂಗಿಯನ್ನು ಮಾರಿ ಒಂದು ಖಡ್ಗವನ್ನು ಕೊಂಡುಕೊಳ್ಳಿರಿ.
ಲೂಕನು 22 : 37 (ERVKN)
‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಯೆಶಾಯ 53:12 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನನ್ನ ಬಗ್ಗೆ ಬರೆಯಲ್ಪಟ್ಟಿರುವ ಈ ಮಾತು ನೆರವೇರಬೇಕಾಗಿದೆ ಮತ್ತು ಈಗ ನೆರವೇರುತ್ತಿದೆ” ಎಂದು ಹೇಳಿದನು.
ಲೂಕನು 22 : 38 (ERVKN)
ಶಿಷ್ಯರು, “ಪ್ರಭುವೇ, ಇಲ್ಲಿ ನೋಡು, ಎರಡು ಖಡ್ಗಗಳಿವೆ” ಎಂದು ಹೇಳಿದರು. ಯೇಸು “ಅಷ್ಟು ಸಾಕು” ಅಂದನು.
ಲೂಕನು 22 : 39 (ERVKN)
ಅಪೊಸ್ತಲರ ಪ್ರಾರ್ಥನೆಯ ಅಗತ್ಯತೆ (ಮತ್ತಾಯ 26:36-46; ಮಾರ್ಕ 14:32-42) ಯೇಸು ಪಟ್ಟಣದಿಂದ (ಜೆರುಸಲೇಮ್) ಆಲಿವ್ ಮರಗಳ ಗುಡ್ಡಕ್ಕೆ ಹೋದನು.
ಲೂಕನು 22 : 40 (ERVKN)
ಆತನ ಶಿಷ್ಯರೂ ಆತನೊಡನೆ ಹೋದರು. (ಯೇಸು ಆಗಾಗ್ಗೆ ಅಲ್ಲಿಗೆ ಹೋಗುತ್ತಿದ್ದನು.) ಯೇಸು ತನ್ನ ಶಿಷ್ಯರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
ಲೂಕನು 22 : 41 (ERVKN)
ಬಳಿಕ ಯೇಸು ಅವರಿಂದ ಸುಮಾರು ನೂರೈವತ್ತು ಅಡಿ ದೂರ ಹೋದನು. ಆತನು ಮೊಣಕಾಲೂರಿ,
ಲೂಕನು 22 : 42 (ERVKN)
“ತಂದೆಯೇ, ನಿನಗೆ ಇಷ್ಟವಿದ್ದರೆ, ಈ ಶ್ರಮೆಯ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಇಷ್ಟದಂತಾಗದೆ ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.
ಲೂಕನು 22 : 43 (ERVKN)
ಆಗ ಪರಲೋಕದಿಂದ ಒಬ್ಬ ದೇವದೂತನು ಕಾಣಿಸಿಕೊಂಡನು. ಯೇಸುವನ್ನು ಬಲಪಡಿಸುವುದಕ್ಕಾಗಿ ಈ ದೇವದೂತನನ್ನು ಕಳುಹಿಸಲಾಗಿತ್ತು.
ಲೂಕನು 22 : 44 (ERVKN)
ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.
ಲೂಕನು 22 : 45 (ERVKN)
ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರ ಬಳಿ ಹೋದನು. ಅವರು ನಿದ್ರೆ ಮಾಡುತ್ತಿದ್ದರು. (ಅವರು ದುಃಖದಿಂದ ಆಯಾಸಗೊಂಡಿದ್ದರು.)
ಲೂಕನು 22 : 46 (ERVKN)
ಯೇಸು ಅವರಿಗೆ, “ನೀವು ಏಕೆ ನಿದ್ರಿಸುತ್ತಿದ್ದೀರಿ? ಎದ್ದೇಳಿರಿ! ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
ಲೂಕನು 22 : 47 (ERVKN)
ಯೇಸುವಿನ ಬಂಧನ (ಮತ್ತಾಯ 26:47-56; ಮಾರ್ಕ 14:43-50; ಯೋಹಾನ 18:3-11) ಯೇಸು ಮಾತಾಡುತ್ತಿದ್ದಾಗ, ಜನರ ಒಂದು ಗುಂಪು ಅಲ್ಲಿಗೆ ಬಂದಿತು. ಹನ್ನೆರಡು ಅಪೊಸ್ತಲರಲ್ಲಿ ಒಬ್ಬನು ಆ ಗುಂಪಿಗೆ ಮುಂದಾಳಾಗಿದ್ದನು. ಅವನೇ ಯೂದನು. ಅವನು ಯೇಸುವಿಗೆ ಮುದ್ದಿಡುವಷ್ಟು ಹತ್ತಿರ ಬಂದನು.
ಲೂಕನು 22 : 48 (ERVKN)
ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುವಿಯೋ?” ಎಂದು ಕೇಳಿದನು.
ಲೂಕನು 22 : 49 (ERVKN)
ಯೇಸುವಿನ ಶಿಷ್ಯರು ಸಹ ಅಲ್ಲಿ ನಿಂತಿದ್ದರು. ಅಲ್ಲಿ ನಡೆಯುತ್ತಿದ್ದುದನ್ನು ಅವರು ನೋಡುತ್ತಿದ್ದರು. ಶಿಷ್ಯರು ಯೇಸುವಿಗೆ, “ಪ್ರಭುವೇ, ನಾವು ನಮ್ಮ ಖಡ್ಗಗಳನ್ನು ಉಪಯೋಗಿಸೋಣವೇ?” ಎಂದು ಕೇಳಿದರು.
ಲೂಕನು 22 : 50 (ERVKN)
ಶಿಷ್ಯರಲ್ಲಿ ಒಬ್ಬನು ತನ್ನ ಖಡ್ಗವನ್ನು ಬೀಸಿ ಮಹಾಯಾಜಕನ ಆಳಿನ ಬಲಗಿವಿಯನ್ನು ಕತ್ತರಿಸಿದನು.
ಲೂಕನು 22 : 51 (ERVKN)
ಯೇಸು ಅವನಿಗೆ, “ನಿಲ್ಲಿಸು” ಎಂದು ಹೇಳಿ, ಆ ಸೇವಕನ ಕಿವಿಯನ್ನು ಮುಟ್ಟಿ ಸ್ವಸ್ಥಗೊಳಿಸಿದನು.
ಲೂಕನು 22 : 52 (ERVKN)
ಯೇಸುವನ್ನು ಬಂಧಿಸಲು ಅಲ್ಲಿಗೆ ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಮತ್ತು ಯೆಹೂದ್ಯ ಸಿಪಾಯಿಗಳು ಬಂದಿದ್ದರು. ಯೇಸು ಅವರಿಗೆ, “ಖಡ್ಗಗಳನ್ನೂ ದೊಣ್ಣೆಗಳನ್ನೂ ಹಿಡಿದುಕೊಂಡು ಇಲ್ಲಿಗೆ ಬಂದದ್ದೇಕೆ? ನಾನು ಅಪರಾಧಿಯೆಂದು ನೀವು ಭಾವಿಸುತ್ತೀರೋ?
ಲೂಕನು 22 : 53 (ERVKN)
ಪ್ರತಿದಿನ ನಿಮ್ಮ ಸಂಗಡ ದೇವಾಲಯದಲ್ಲಿದ್ದೆನು. ನೀವು ನನ್ನನ್ನು ಅಲ್ಲಿ ಏಕೆ ಬಂಧಿಸಲಿಲ್ಲ? ಆದರೆ ಇದು ನಿಮ್ಮ ಸಮಯ. ಇದು ಅಂಧಕಾರದ (ಪಾಪ) ದೊರೆತನ” ಎಂದು ಹೇಳಿದನು. (ಮತ್ತಾಯ 26:57-58, 69-75; ಮಾರ್ಕ 14:53-54, 66-72; ಯೋಹಾನ 18:12-18, 25-27)
ಲೂಕನು 22 : 54 (ERVKN)
ಪೇತ್ರನ ವಿಶ್ವಾಸದ್ರೋಹ ಅವರು ಯೇಸುವನ್ನು ಬಂಧಿಸಿ ಪ್ರಧಾನಯಾಜಕನ ಮನೆಯೊಳಗೆ ಕರೆದುಕೊಂಡು ಬಂದರು. ಪೇತ್ರನು ಅವರನ್ನು ಹಿಂಬಾಲಿಸಿದನು. ಆದರೆ ಅವನು ಯೇಸುವಿನ ಹತ್ತಿರ ಬರಲಿಲ್ಲ.
ಲೂಕನು 22 : 55 (ERVKN)
ಸೈನಿಕರು ಅಂಗಳದ ಮಧ್ಯದಲ್ಲಿ ಬೆಂಕಿಯನ್ನು ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡರು. ಪೇತ್ರನೂ ಅವರ ಜೊತೆ ಕುಳಿತುಕೊಂಡನು.
ಲೂಕನು 22 : 56 (ERVKN)
ಪೇತ್ರನು ಅಲ್ಲಿ ಕುಳಿತಿರುವುದನ್ನು ಒಬ್ಬ ಸೇವಕಿ ನೋಡಿದಳು. ಬೆಂಕಿಯ ಬೆಳಕಿನಿಂದ ಆಕೆಯು ಪೇತ್ರನನ್ನು ಗುರುತಿಸಿದಳು. ಅವಳು ಪೇತ್ರನ ಮುಖವನ್ನೇ ಲಕ್ಷ್ಯವಿಟ್ಟು ನೋಡಿ, “ಈ ಮನುಷ್ಯನು ಆತನ (ಯೇಸು) ಸಂಗಡ ಇದ್ದವನು” ಅಂದಳು.
ಲೂಕನು 22 : 57 (ERVKN)
ಆದರೆ ಪೇತ್ರನು ಅದು ನಿಜವಲ್ಲವೆಂದು ಹೇಳಿದನು. ಅವನು ಅಕೆಗೆ, “ಅಮ್ಮಾ, ಆತನು ನನಗೆ ಗೊತ್ತೇ ಇಲ್ಲ” ಅಂದನು.
ಲೂಕನು 22 : 58 (ERVKN)
ಸ್ವಲ್ಪ ಸಮಯದ ನಂತರ ಇನ್ನೊಬ್ಬ ವ್ಯಕ್ತಿ ಪೇತ್ರನನ್ನು ನೋಡಿ, “ನೀನು ಯೇಸುವನ್ನು ಹಿಂಬಾಲಿಸುತ್ತಿದ್ದ ಜನರಲ್ಲಿ ಒಬ್ಬನಾಗಿದ್ದೆ!” ಎಂದು ಹೇಳಿದನು. ಆದರೆ ಪೇತ್ರನು, “ನಾನು ಆತನ ಹಿಂಬಾಲಕರಲ್ಲಿ ಒಬ್ಬನಲ್ಲ” ಅಂದನು.
ಲೂಕನು 22 : 59 (ERVKN)
ಸುಮಾರು ಒಂದು ತಾಸಿನ ನಂತರ ಇನ್ನೊಬ್ಬನು, “ಅದು ನಿಜ! ಈ ಮನುಷ್ಯನು ಆತನೊಡನೆ ಇದ್ದವನು. ಇವನು ಗಲಿಲಾಯದವನು!” ಎಂದು ದೃಢವಾಗಿ ಹೇಳಿದನು.
ಲೂಕನು 22 : 60 (ERVKN)
ಆಗ ಪೇತ್ರನು, “ನೀನು ಏನು ಹೇಳುತ್ತಿದ್ದೀಯೋ ನನಗೆ ಗೊತ್ತಿಲ್ಲ” ಅಂದನು. ಪೇತ್ರನು ಇನ್ನೂ ಮಾತಾಡುತ್ತಿದ್ದಾಗ ಕೋಳಿ ಕೂಗಿತು.
ಲೂಕನು 22 : 61 (ERVKN)
ಆಗ ಪ್ರಭುವು (ಯೇಸು) ಹಿಂತಿರುಗಿ ಪೇತ್ರನನ್ನು ದೃಷ್ಟಿಸಿ ನೋಡಿದನು. “ಮುಂಜಾನೆ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನನ್ನು ಅರಿಯೆನೆಂಬುದಾಗಿ ಮೂರು ಸಲ ಹೇಳುವೆ” ಎಂದು ಪ್ರಭುವು ಹೇಳಿದ ಮಾತನ್ನು ಪೇತ್ರನು ಆಗ ಜ್ಞಾಪಿಸಿಕೊಂಡನು.
ಲೂಕನು 22 : 62 (ERVKN)
ಬಳಿಕ ಪೇತ್ರನು ಹೊರಗೆ ಹೋಗಿ ಬಹು ದುಃಖದಿಂದ ಅತ್ತನು.
ಲೂಕನು 22 : 63 (ERVKN)
ಯೇಸುವಿಗೆ ಜನರು ಮಾಡಿದ ಅಪಹಾಸ್ಯ (ಮತ್ತಾಯ 26:67-68; ಮಾರ್ಕ 14:65) (63-64) ಕೆಲವು ಜನರು ಯೇಸುವನ್ನು ಹಿಡಿದುಕೊಂಡಿದ್ದರು. ಅವರು ಯೇಸುವಿನ ಮುಖಕ್ಕೆ ಮುಸುಕು ಹಾಕಿ, ಆತನನ್ನು ಹೊಡೆದು, “ನಿನ್ನನ್ನು ಹೊಡೆದವರ್ಯಾರು? ನಮಗೆ ಪ್ರವಾದನೆ ಹೇಳು” ಎಂದು ಗೇಲಿಮಾಡಿದರು.
ಲೂಕನು 22 : 64 (ERVKN)
ಲೂಕನು 22 : 65 (ERVKN)
ಅವರು ಹಲವಾರು ವಿಧದಲ್ಲಿ ಆತನನ್ನು ದೂಷಿಸಿ ನಿಂದಿಸಿದರು.
ಲೂಕನು 22 : 66 (ERVKN)
ಯೆಹೂದ್ಯನಾಯಕರ ಮುಂದೆ ಯೇಸು (ಮತ್ತಾಯ 26:59-66; ಮಾರ್ಕ 14:55-64; ಯೋಹಾನ 18:19-24) ಮರುದಿನ ಮುಂಜಾನೆ ಹಿರಿಯ ಜನನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಒಟ್ಟಾಗಿ ಸೇರಿಬಂದರು. ಅವರು ಯೇಸುವನ್ನು ನ್ಯಾಯಾಲಯಕ್ಕೆ ಕರೆದೊಯ್ದು,
ಲೂಕನು 22 : 67 (ERVKN)
“ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಎಂದು ಹೇಳಿದರು. ಯೇಸು ಅವರಿಗೆ, “ನಾನು ಕ್ರಿಸ್ತನೆಂದು ಹೇಳಿದರೂ ನೀವು ನನ್ನನ್ನು ನಂಬುವುದಿಲ್ಲ.
ಲೂಕನು 22 : 68 (ERVKN)
ನಾನು ನಿಮ್ಮನ್ನು ಕೇಳಿದರೂ ನೀವು ಉತ್ತರಕೊಡುವುದಿಲ್ಲ.
ಲೂಕನು 22 : 69 (ERVKN)
ಆದರೆ ಇಂದಿನಿಂದ ಮನುಷ್ಯಕುಮಾರನು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು.
ಲೂಕನು 22 : 70 (ERVKN)
ಅವರೆಲ್ಲರೂ, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಿದರು. ಯೇಸು ಅವರಿಗೆ, “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ” ಎಂದನು.
ಲೂಕನು 22 : 71 (ERVKN)
ಆಗ ಅವರು, “ಇನ್ನೇನು ಸಾಕ್ಷಿಬೇಕು? ಆತನು ಹೀಗೆ ಹೇಳುವುದನ್ನು ನಾವೇ ಕೇಳಿದೆವಲ್ಲಾ!” ಅಂದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66 67 68 69 70 71