ಲೂಕನು 24 : 1 (ERVKN)
ಯೇಸುವಿನ ಪುನರುತ್ಥಾನ (ಮತ್ತಾಯ 28:1-10; ಮಾರ್ಕ 16:1-8; ಯೋಹಾನ 20:1-10) ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು.
ಲೂಕನು 24 : 2 (ERVKN)
ಬಂಡೆ ಉರಳಿಸಲ್ಪಟ್ಟಿರುವುದನ್ನು ಕಂಡ ಅವರು ಒಳಗೆ ಹೋದರು.
ಲೂಕನು 24 : 3 (ERVKN)
ಆದರೆ ಪ್ರಭು ಯೇಸುವಿನ ದೇಹವನ್ನು ಅವರು ಕಾಣಲಿಲ್ಲ.
ಲೂಕನು 24 : 4 (ERVKN)
ಸ್ತ್ರೀಯರಿಗೆ ಇದು ಅರ್ಥವಾಗದೆ ಆಶ್ಚರ್ಯಪಡುತ್ತಿರಲು, ಹೊಳೆಯುವ ಉಡುಪುಗಳನ್ನು ಧರಿಸಿಕೊಂಡಿದ್ದ ಇಬ್ಬರು (ದೇವದೂತರು) ಅವರ ಬಳಿಯಲ್ಲಿ ನಿಂತರು.
ಲೂಕನು 24 : 5 (ERVKN)
ಆ ಸ್ತ್ರೀಯರು ಬಹಳವಾಗಿ ಹೆದರಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬಗ್ಗಿಸಿಕೊಂಡು ನಿಂತರು. ಆ ಮನುಷ್ಯರು, “ಬದುಕಿರುವ ವ್ಯಕ್ತಿಯನ್ನು ಇಲ್ಲಿ ಹುಡುಕುವುದೇಕೆ? ಇದು ಸತ್ತ ಜನರನ್ನು ಇಡುವ ಸ್ಥಳ!
ಲೂಕನು 24 : 6 (ERVKN)
ಯೇಸು ಇಲ್ಲಿಲ್ಲ. ಆತನು ಜೀವಂತವಾಗಿ ಎದ್ದಿದ್ದಾನೆ! ಆತನು ಗಲಿಲಾಯದಲ್ಲಿದ್ದಾಗ ಹೇಳಿದ ವಿಷಯ ಜ್ಞಾಪಕವಿಲ್ಲವೋ?
ಲೂಕನು 24 : 7 (ERVKN)
ಮನುಷ್ಯಕುಮಾರನು ಕೆಡುಕರ ವಶಕ್ಕೆ ಒಪ್ಪಿಸಲ್ಪಟ್ಟು; ಶಿಲುಬೆಯ ಮೇಲೆ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು ಎಂದು ಯೇಸು ತಿಳಿಸಲಿಲ್ಲವೇ!” ಎಂದು ಹೇಳಿದರು.
ಲೂಕನು 24 : 8 (ERVKN)
ಆಗ ಆ ಸ್ತ್ರೀಯರು ಯೇಸುವಿನ ಮಾತುಗಳನ್ನು ಜ್ಞಾಪಿಸಿಕೊಂಡರು.
ಲೂಕನು 24 : 9 (ERVKN)
ಆ ಸ್ತ್ರೀಯರು ಸಮಾಧಿಯಿಂದ ಹೊರಟು ಹನ್ನೊಂದು ಮಂದಿ ಅಪೊಸ್ತಲರ ಮತ್ತು ಇತರ ಹಿಂಬಾಲಕರ ಬಳಿಗೆ ಹೋದರು. ಆ ಸ್ತ್ರೀಯರು ಸಮಾಧಿಯ ಬಳಿ ನಡೆದ ಸಂಗತಿಗಳನ್ನೆಲ್ಲಾ ಅವರಿಗೆ ಹೇಳಿದರು.
ಲೂಕನು 24 : 10 (ERVKN)
ಈ ಸ್ತ್ರೀಯರು ಯಾರೆಂದರೆ: ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಬೇರೆ ಕೆಲವು ಸ್ತ್ರೀಯರು. ನಡೆದ ಪ್ರತಿಯೊಂದನ್ನೂ ಈ ಸ್ತ್ರೀಯರು ಅಪೊಸ್ತಲರಿಗೆ ತಿಳಿಸಿದರು.
ಲೂಕನು 24 : 11 (ERVKN)
ಆದರೆ ಅಪೊಸ್ತಲರು ನಂಬಲಿಲ್ಲ. ಅವರಿಗೆ ಅದು ಹರಟೆಮಾತಾಗಿ ತೋರಿತು.
ಲೂಕನು 24 : 12 (ERVKN)
ಆದರೆ ಪೇತ್ರನು ಎದ್ದು ಇದು ನಿಜವೇ ಎಂದು ನೋಡಲು ಸಮಾಧಿಗೆ ಓಡಿಹೋದನು. ಅವನು ಒಳಗೆ ಹೋಗಿ ಬಗ್ಗಿ ನೋಡಿದಾಗ ಯೇಸುವಿನ ದೇಹಕ್ಕೆ ಸುತ್ತಿದ್ದ ಬಟ್ಟೆಯನ್ನು ಮಾತ್ರ ನೋಡಿದನು. ಕೇವಲ ಬಟ್ಟೆಯು ಅಲ್ಲಿ ಬಿದ್ದಿತ್ತು. ನಡೆದ ಈ ಸಂಗತಿಯ ಬಗ್ಗೆ ಪೇತ್ರನು ಆಶ್ಚರ್ಯಪಡುತ್ತಾ ಹೊರಟುಹೋದನು.
ಲೂಕನು 24 : 13 (ERVKN)
ಎಮ್ಮಾಹುವಿನ ದಾರಿಯಲ್ಲಿ (ಮಾರ್ಕ 16:12-13) ಅದೇ ದಿನ ಯೇಸುವಿನ ಶಿಷ್ಯರಲ್ಲಿ ಇಬ್ಬರು ಎಮ್ಮಾಹು ಎಂಬ ಪಟ್ಟಣಕ್ಕೆ ಹೋಗುತ್ತಿದ್ದರು. ಅದು ಜೆರುಸಲೇಮಿನಿಂದ ಏಳು ಮೈಲಿ ದೂರದಲ್ಲಿತ್ತು.
ಲೂಕನು 24 : 14 (ERVKN)
ನಡೆದ ಪ್ರತಿಯೊಂದು ಸಂಗತಿಯ ಕುರಿತು ಅವರು ಮಾತಾಡುತ್ತಿದ್ದರು.
ಲೂಕನು 24 : 15 (ERVKN)
ಆಗ ಯೇಸು ತಾನೇ ಅವರ ಹತ್ತಿರಕ್ಕೆ ಬಂದು, ಅವರ ಜೊತೆಯಲ್ಲಿ ಹೋದನು.
ಲೂಕನು 24 : 16 (ERVKN)
(ಆದರೆ ಅವರಿಗೆ ಆತನ ಗುರುತು ಸಿಕ್ಕಲಿಲ್ಲ.)
ಲೂಕನು 24 : 17 (ERVKN)
ಯೇಸು ಅವರಿಗೆ, “ನೀವು ಯಾವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರಿಬ್ಬರು ಅಲ್ಲೇ ನಿಂತರು. ಅವರ ಮುಖಗಳು ಬಹಳ ದುಃಖದಿಂದ ತುಂಬಿಹೋಗಿದ್ದವು.
ಲೂಕನು 24 : 18 (ERVKN)
ಅವರಲ್ಲಿ ಕ್ಲೆಯೋಫನೆಂಬುವನು, “ಇತ್ತೀಚೆಗೆ ಜೆರುಸಲೇಮಿನಲ್ಲಿ ನಡೆದ ಸಂಗತಿಯನ್ನು ತಿಳಿಯದಿರುವ ವ್ಯಕ್ತಿ ಎಂದರೆ ನೀನೊಬ್ಬನೇ ಇರಬೇಕು” ಎಂದು ಉತ್ತರಿಸಿದನು.
ಲೂಕನು 24 : 19 (ERVKN)
ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು.
ಲೂಕನು 24 : 20 (ERVKN)
ನಮ್ಮ ನಾಯಕರು ಮತ್ತು ಮಹಾಯಾಜಕರು ಆತನಿಗೆ ಮರಣದಂಡನೆ ವಿಧಿಸಲು ಒಪ್ಪಿಸಿಕೊಟ್ಟು ಶಿಲುಬೆಗೆ ಜಡಿಸಿದರು.
ಲೂಕನು 24 : 21 (ERVKN)
ಯೇಸುವೇ ಇಸ್ರೇಲ್ ಜನರನ್ನು (ಯೆಹೂದ್ಯರನ್ನು) ಬಿಡಿಸುತ್ತಾನೆಂದು ನಾವು ನಿರೀಕ್ಷಿಸಿಕೊಂಡಿದ್ದೆವು. ಆದರೆ ಇದೆಲ್ಲಾ ನಡೆದುಹೋಯಿತು. “ಈಗ ಮತ್ತೊಂದು ಸಂಗತಿಯಾಗಿದೆ. ಈಗಾಗಲೇ ಆತನು ಸತ್ತು ಮೂರು ದಿನಗಳಾದವು.
ಲೂಕನು 24 : 22 (ERVKN)
ಇಂದು ನಮ್ಮ ಕೆಲವು ಸ್ತ್ರೀಯರು ಆಶ್ಚರ್ಯಕರವಾದ ಸಂಗತಿಗಳನ್ನು ಹೇಳಿದರು. ಮುಂಜಾನೆ ಬೆಳಗಾಗುವಾಗ, ಯೇಸುವಿನ ದೇಹವನ್ನು ಇಟ್ಟಿದ್ದ ಸಮಾಧಿಯ ಬಳಿಗೆ ಆ ಸ್ತ್ರೀಯರು ಹೋಗಿದ್ದರು.
ಲೂಕನು 24 : 23 (ERVKN)
ಆದರೆ ಅವರು ಆತನ ದೇಹವನ್ನು ಅಲ್ಲಿ ಕಾಣಲಿಲ್ಲ. ಆ ಸ್ತ್ರೀಯರು ಹಿಂತಿರುಗಿ ಬಂದು ತಮಗೆ ದೇವದೂತರಿಬ್ಬರ ದರ್ಶನವಾಯಿತೆಂದೂ ಯೇಸು ಬದುಕಿದ್ದಾನೆಂದೂ ತಮಗೆ ಇದನ್ನು ದೇವದೂತರೇ ತಿಳಿಸಿದರೆಂದೂ ನಮಗೆ ಹೇಳಿದರು.
ಲೂಕನು 24 : 24 (ERVKN)
ಆದ್ದರಿಂದ ನಮ್ಮ ಗುಂಪಿನಲ್ಲಿದ್ದ ಕೆಲವರು ಸಹ ಸಮಾಧಿಯ ಬಳಿಗೆ ಹೋದರು. ಸ್ತ್ರೀಯರು ಹೇಳಿದ ಹಾಗೆಯೇ ಸಮಾಧಿಯು ಬರಿದಾಗಿತ್ತು. ನಾವು ಸುತ್ತಮುತ್ತ ನೋಡಿದೆವು. ಆದರೆ ನಮ್ಮಲ್ಲಿ ಯಾರಿಗೂ ಆತನು (ಯೇಸು) ಕಾಣಲಿಲ್ಲ” ಎಂದು ಹೇಳಿದರು.
ಲೂಕನು 24 : 25 (ERVKN)
ಆಗ ಯೇಸು ಅವರಿಗೆ, “ನೀವು ಬುದ್ಧಿಹೀನರು ಮತ್ತು ಸತ್ಯವನ್ನು ಗ್ರಹಿಸುವುದರಲ್ಲಿ ಮಂದಗತಿಗಳು! ಪ್ರವಾದಿಗಳು ಹೇಳಿದ ಪ್ರತಿಯೊಂದನ್ನೂ ನೀವು ನಂಬಬೇಕು.
ಲೂಕನು 24 : 26 (ERVKN)
ಕ್ರಿಸ್ತನು ತನ್ನ ಮಹಿಮೆಯನ್ನು ಪ್ರವೇಶಿಸುವ ಮೊದಲು ಇಂಥ ಶ್ರಮೆಗಳನ್ನು ಅನುಭವಿಸಬೇಕು ಎಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.
ಲೂಕನು 24 : 27 (ERVKN)
ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು.
ಲೂಕನು 24 : 28 (ERVKN)
ಅವರು ಎಮ್ಮಾಹು ಊರಿನ ಹತ್ತಿರಕ್ಕೆ ಬಂದಾಗ ಆತನು ತಾನು ಅಲ್ಲಿ ಇಳಿದುಕೊಳ್ಳದವನಂತೆ ನಟಿಸಿದನು.
ಲೂಕನು 24 : 29 (ERVKN)
ಆದರೆ ಅವರು ಆತನಿಗೆ, “ಈಗ ಹೊತ್ತಾಯಿತು, ರಾತ್ರಿಯಾಗುತ್ತಾ ಬಂದಿದೆ. ನಮ್ಮೊಂದಿಗೆ ಇರು” ಎಂದು ಬೇಡಿಕೊಂಡರು. ಆದ್ದರಿಂದ ಆತನು ಅವರೊಂದಿಗಿರಲು ಊರೊಳಗೆ ಹೋದನು.
ಲೂಕನು 24 : 30 (ERVKN)
ಯೇಸು ಅವರ ಸಂಗಡ ಕುಳಿತುಕೊಂಡು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ಆಹಾರಕ್ಕಾಗಿ ದೇವರಿಗೆ ಸೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟನು.
ಲೂಕನು 24 : 31 (ERVKN)
ಆಗ ಅವರು ಯೇಸುವನ್ನು ಗುರುತಿಸಿದರು. ಆದರೆ ಆತನೇ ಯೇಸುವೆಂದು ಅವರು ತಿಳಿದಾಕ್ಷಣವೇ ಆತನು ಅವರ ಕಣ್ಣಿಗೆ ಮಾಯವಾದನು.
ಲೂಕನು 24 : 32 (ERVKN)
ಅವರಿಬ್ಬರು, “ಯೇಸು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗ ನಮ್ಮಲ್ಲಿ ಬೆಂಕಿ ಉರಿದಂತಾಯಿತಲ್ಲವೇ? ಪವಿತ್ರ ಗ್ರಂಥದ ನಿಜ ಅರ್ಥವನ್ನು ಆತನು ವಿವರಿಸಿದಾಗ, ಬಹಳ ರೋಮಾಂಚಕಾರಿಯಾಗಿರಲಿಲ್ಲವೇ?” ಎಂದು ಮಾತಾಡಿಕೊಂಡರು.
ಲೂಕನು 24 : 33 (ERVKN)
ಆ ಕೂಡಲೇ ಅವರಿಬ್ಬರೂ ಎದ್ದು ಜೆರುಸಲೇಮಿಗೆ ಹಿಂತಿರುಗಿ ಹೋದರು. ಜೆರುಲೇಮಿನಲ್ಲಿ ಯೇಸುವಿನ ಶಿಷ್ಯರು ಒಟ್ಟಾಗಿ ಸೇರಿಬಂದಿದ್ದರು. ಹನ್ನೊಂದು ಮಂದಿ ಅಪೊಸ್ತಲರು ಮತ್ತು ಅವರ ಸಂಗಡ ಇದ್ದ ಆ ಜನರು,
ಲೂಕನು 24 : 34 (ERVKN)
“ಪ್ರಭುವು (ಯೇಸು) ಸತ್ತವರೊಳಗಿಂದ ನಿಜವಾಗಿ ಎದ್ದಿದ್ದಾನೆ! ಆತನು ಸೀಮೋನನಿಗೆ (ಪೇತ್ರ) ಕಾಣಿಸಿಕೊಂಡನು” ಎಂದು ಹೇಳಿದರು.
ಲೂಕನು 24 : 35 (ERVKN)
ಆಗ ಆ ಇಬ್ಬರು ದಾರಿಯಲ್ಲಿ ನಡೆದ ಸಂಗತಿಗಳನ್ನು ತಿಳಿಸಿದರು. ಆತನು ರೊಟ್ಟಿ ಮುರಿದಾಗ ತಾವು ಆತನನ್ನು ಗುರುತಿಸಿದ್ದಾಗಿ ಅವರು ಹೇಳಿದರು. (ಮತ್ತಾಯ 28:16-20; ಮಾರ್ಕ 16:14-18; ಯೋಹಾನ 20:19-23; ಅಪೊ. ಕಾರ್ಯ. 1:6-8)
ಲೂಕನು 24 : 36 (ERVKN)
ಯೇಸು ತನ್ನ ಶಿಷ್ಯರಿಗೆ ಕಾಣಿಸಿಕೊಂಡನು ಅವರಿಬ್ಬರೂ ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಯೇಸುವು ಶಿಷ್ಯರ ಗುಂಪಿನ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ನಿಮಗೆ ಶಾಂತಿಯಾಗಲಿ” ಅಂದನು.
ಲೂಕನು 24 : 37 (ERVKN)
ಆಗ ಶಿಷ್ಯರು ಬೆರಗಾದರು. ಅವರಿಗೆ ಭಯವಾಯಿತು. ಅದು ಭೂತವೇ ಇರಬೇಕೆಂದು ಅವರು ಭಾವಿಸಿದರು.
ಲೂಕನು 24 : 38 (ERVKN)
ಆದರೆ ಯೇಸು, “ನೀವು ಏಕೆ ಗಲಿಬಿಲಿಗೊಂಡಿದ್ದೀರಿ? ನೀವು ಕಣ್ಣಾರೆ ಕಂಡರೂ ಏಕೆ ಸಂಶಯಪಡುತ್ತೀರಿ?
ಲೂಕನು 24 : 39 (ERVKN)
ನನ್ನ ಕೈಗಳನ್ನು ಮತ್ತು ಪಾದಗಳನ್ನು ನೋಡಿರಿ. ನಾನೇ ಅಲ್ಲವೇ! ನನ್ನನ್ನು ಮುಟ್ಟಿರಿ. ನನ್ನ ಈ ಜೀವಂತ ದೇಹವನ್ನು ನೀವೇ ನೋಡಿರಿ. ಭೂತಕ್ಕೆ ಈ ರೀತಿಯ ದೇಹವಿರುವುದಿಲ್ಲ” ಅಂದನು.
ಲೂಕನು 24 : 40 (ERVKN)
ಯೇಸು ಅವರಿಗೆ ಇದನ್ನು ಹೇಳಿದ ನಂತರ, ತನ್ನ ಕೈಗಳಲ್ಲಿ ಮತ್ತು ಪಾದಗಳಲ್ಲಿರುವ ಗಾಯದ ಗುರುತುಗಳನ್ನು ತೋರಿಸಿದನು.
ಲೂಕನು 24 : 41 (ERVKN)
ಶಿಷ್ಯರು ಅತ್ಯಾಶ್ಚರ್ಯಗೊಂಡರು ಮತ್ತು ಯೇಸುವನ್ನು ಜೀವಂತವಾಗಿ ಕಂಡು ಅತ್ಯಂತ ಸಂತೋಷಪಟ್ಟರು. ಆದರೆ ಅವರಿಗಿನ್ನೂ ನಂಬಲಾಗಲಿಲ್ಲ. ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದನು.
ಲೂಕನು 24 : 42 (ERVKN)
ಅವರು ಸುಟ್ಟ ಮೀನಿನ ತುಂಡನ್ನು ಕೊಟ್ಟರು.
ಲೂಕನು 24 : 43 (ERVKN)
ಶಿಷ್ಯರ ಕಣ್ಣೆದುರಿನಲ್ಲಿಯೇ, ಯೇಸು ಆ ಮೀನನ್ನು ತೆಗೆದುಕೊಂಡು ತಿಂದನು.
ಲೂಕನು 24 : 44 (ERVKN)
ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.
ಲೂಕನು 24 : 45 (ERVKN)
ಬಳಿಕ ಯೇಸು ಪವಿತ್ರ ಗ್ರಂಥವನ್ನು ತನ್ನ ಶಿಷ್ಯರಿಗೆ ವಿವರಿಸಿದನು. ತನ್ನ ಬಗ್ಗೆ ಬರೆದಿರುವ ಸಂಗತಿಗಳನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಹಾಯ ಮಾಡಿದನು.
ಲೂಕನು 24 : 46 (ERVKN)
ಬಳಿಕ ಯೇಸು ಅವರಿಗೆ, “ಕ್ರಿಸ್ತನು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಎದ್ದುಬರುವನು ಎಂದು ಬರೆಯಲ್ಪಟ್ಟಿದೆ.
ಲೂಕನು 24 : 47 (ERVKN)
(47-48) ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.
ಲೂಕನು 24 : 48 (ERVKN)
ಲೂಕನು 24 : 49 (ERVKN)
ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಆ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ” ಅಂದನು. (ಮಾರ್ಕ 16:19-20; ಅಪೊ. ಕಾರ್ಯ. 1:9-11)
ಲೂಕನು 24 : 50 (ERVKN)
ಯೇಸುವಿನ ಪರಲೋಕಾರೋಹಣ ಯೇಸು ತನ್ನ ಶಿಷ್ಯರನ್ನು ಜೆರುಸಲೇಮಿನ ಹೊರಗೆ ಬೆಥಾನಿಯದ ಸಮೀಪಕ್ಕೆ ಕರೆದುಕೊಂಡು ಹೋದನು. ಯೇಸು ತನ್ನ ಕೈಗಳನ್ನು ಎತ್ತಿ ಶಿಷ್ಯರನ್ನು ಆಶೀರ್ವದಿಸಿದನು.
ಲೂಕನು 24 : 51 (ERVKN)
ಯೇಸು ಅವರನ್ನು ಆಶೀರ್ವದಿಸುತ್ತಿದ್ದಾಗ ಅವರಿಂದ ಬೇರ್ಪಟ್ಟು ಪರಲೋಕಕ್ಕೆ ಎತ್ತಲ್ಪಟ್ಟನು.
ಲೂಕನು 24 : 52 (ERVKN)
ಶಿಷ್ಯರು ಅಲ್ಲಿ ಆತನನ್ನು ಆರಾಧಿಸಿದರು. ಬಳಿಕ ಅವರು ಪಟ್ಟಣಕ್ಕೆ ಹಿಂತಿರುಗಿ ಹೋದರು. ಅವರು ಬಹಳ ಸಂತೋಷಗೊಂಡಿದ್ದರು.
ಲೂಕನು 24 : 53 (ERVKN)
ಅವರು ಯಾವಾಗಲೂ ದೇವಾಲಯದಲ್ಲಿ ದೇವರನ್ನು ಸ್ತುತಿಸುತ್ತಿದ್ದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53