ಲೂಕನು 5 : 1 (ERVKN)
ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.
ಲೂಕನು 5 : 2 (ERVKN)
ಸರೋವರದ ದಡದಲ್ಲಿ ನಿಂತಿದ್ದ ಎರಡು ದೋಣಿಗಳನ್ನು ಯೇಸು ನೋಡಿದನು. ಬೆಸ್ತರು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
ಲೂಕನು 5 : 3 (ERVKN)
ಯೇಸು ಸೀಮೋನನ ದೋಣಿಯಲ್ಲಿ ಹತ್ತಿ ಕುಳಿತುಕೊಂಡು ದೋಣಿಯನ್ನು ದಡದಿಂದ ಸ್ವಲ್ಪದೂರಕ್ಕೆ ನೂಕಬೇಕೆಂದು ಸೀಮೋನನಿಗೆ ಹೇಳಿದನು. [PE][PS]
ಲೂಕನು 5 : 4 (ERVKN)
ಉಪದೇಶ ಮಾಡಿದಮೇಲೆ ಯೇಸು ಸೀಮೋನನಿಗೆ, “ದೋಣಿಯನ್ನು ಆಳವಾದ ನೀರಿನ ಸ್ಥಳಕ್ಕೆ ನಡೆಸಿ, ಮೀನುಹಿಡಿಯಲು ನಿಮ್ಮ ಬಲೆಗಳನ್ನು ನೀರಿನಲ್ಲಿ ಹಾಕಿರಿ” ಎಂದು ಹೇಳಿದನು. [PE][PS]
ಲೂಕನು 5 : 5 (ERVKN)
ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಒಂದು ಮೀನೂ ಸಿಕ್ಕಲಿಲ್ಲ. ಆದರೆ, ನೀನು ಹೇಳಿದ್ದರಿಂದ ಬೀಸುತ್ತೇವೆ” ಎಂದನು.
ಲೂಕನು 5 : 6 (ERVKN)
ಬೆಸ್ತರು ತಮ್ಮ ಬಲೆಗಳನ್ನು ನೀರಿನೊಳಗೆ ಬೀಸಿದಾಗ, ಅವರ ಬಲೆಗಳು ಹರಿದುಹೋಗುವಷ್ಟು ಮೀನುಗಳು ರಾಶಿರಾಶಿಯಾಗಿ ಬಲೆಗಳಲ್ಲಿ ತುಂಬಿಕೊಂಡವು.
ಲೂಕನು 5 : 7 (ERVKN)
ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸ್ನೇಹಿತರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಮೀನುಗಳನ್ನು ತುಂಬಿಸಲು ದೋಣಿಗಳೆರಡೂ ಮುಳುಗುವಂತಾದವು. [PE][PS]
ಲೂಕನು 5 : 8 (ERVKN)
(8-9) ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.
ಲೂಕನು 5 : 9 (ERVKN)
ಲೂಕನು 5 : 10 (ERVKN)
ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಆಶ್ಚರ್ಯಪಟ್ಟರು. (ಇವರಿಬ್ಬರೂ ಸೀಮೋನನ ಪಾಲುಗಾರರಾಗಿದ್ದರು.) [PE][PS] ಯೇಸು ಸೀಮೋನನಿಗೆ, “ಭಯಪಡಬೇಡ. ಇಂದಿನಿಂದ ನೀನು ಮೀನನ್ನು ಹಿಡಿಯದೆ, ಮನುಷ್ಯರನ್ನು ಒಟ್ಟುಗೂಡಿಸಲು ದುಡಿಯುವೆ!” ಎಂದು ಹೇಳಿದನು. [PE][PS]
ಲೂಕನು 5 : 11 (ERVKN)
ಅವರು ತಮ್ಮ ದೋಣಿಗಳನ್ನು ದಡಕ್ಕೆ ಸಾಗಿಸಿದ ಮೇಲೆ ಎಲ್ಲವನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು. [PE][PS]
ಲೂಕನು 5 : 12 (ERVKN)
{ಯೇಸುವಿನಿಂದ ಗುಣಹೊಂದಿದ ಕುಷ್ಠರೋಗಿ} (ಮತ್ತಾಯ 8:1-4; ಮಾರ್ಕ 1:40-45) [PS] ಒಮ್ಮೆ ಯೇಸು ಒಂದು ಊರಿನಲ್ಲಿದ್ದಾಗ ಕುಷ್ಠರೋಗಿಯೊಬ್ಬನು ಆತನನ್ನು ಕಂಡು, ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಮನಸ್ಸು ಮಾಡಿದರೆ ನನ್ನನ್ನು ಗುಣಪಡಿಸಬಲ್ಲೆ ಎಂದು ನನಗೆ ಗೊತ್ತಿದೆ” ಎಂದು ಬೇಡಿಕೊಂಡನು. [PE][PS]
ಲೂಕನು 5 : 13 (ERVKN)
ಯೇಸು, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸುಂಟು. ನಿನಗೆ ಗುಣವಾಗಲಿ!” ಎಂದು ಹೇಳಿ ಅವನನ್ನು ಮುಟ್ಟಿದನು. ಕೂಡಲೆ ಅವನಿಗೆ ಗುಣವಾಯಿತು.
ಲೂಕನು 5 : 14 (ERVKN)
ಯೇಸು ಅವನಿಗೆ, “ನಿನಗೆ ಹೇಗೆ ಗುಣವಾಯಿತು ಎಂಬುದರ ಬಗ್ಗೆ ಯಾರಿಗೂ ಹೇಳದೆ ಯಾಜಕನ ಬಳಿಗೆ ಹೋಗಿ ನಿನ್ನ ಮೈಯನ್ನು ತೋರಿಸಿ ಮೋಶೆಯ ನಿಯಮಗಳಿಗನುಸಾರವಾಗಿ ಕಾಣಿಕೆಯನ್ನು ದೇವರಿಗೆ ಸಮರ್ಪಿಸು. ನಿನಗೆ ವಾಸಿಯಾಯಿತೆಂಬುದಕ್ಕೆ ಇದೇ ಜನರಿಗೆಲ್ಲಾ ಸಾಕ್ಷಿಯಾಗಿರುವುದು” ಎಂದು ಹೇಳಿದನು. ಆದರೆ ಯೇಸುವಿನ ಸುದ್ದಿಯು ಹೆಚ್ಚೆಚ್ಚಾಗಿ ಹಬ್ಬಿತು. [PE][PS]
ಲೂಕನು 5 : 15 (ERVKN)
ಅನೇಕ ಜನರು ಆತನ ಬೋಧನೆಗಳನ್ನು ಕೇಳುವುದಕ್ಕೂ ತಮ್ಮ ಕಾಯಿಲೆಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ ಬಂದರು.
ಲೂಕನು 5 : 16 (ERVKN)
ಯೇಸು ಆಗಾಗ್ಗೆ ನಿರ್ಜನ ಸ್ಥಳಗಳಿಗೆ ಹೋಗಿ ಪ್ರಾರ್ಥನೆ ಮಾಡುತ್ತಿದ್ದನು. [PE][PS]
ಲೂಕನು 5 : 17 (ERVKN)
{ಯೇಸುವಿನಿಂದ ಗುಣಹೊಂದಿದ ಪಾರ್ಶ್ವವಾಯು ರೋಗಿ} (ಮತ್ತಾಯ 9:1-8; ಮಾರ್ಕ 2:1-12) [PS] ಒಂದು ದಿನ ಯೇಸು ಜನರಿಗೆ ಬೋಧಿಸುತ್ತಿದ್ದನು. ಫರಿಸಾಯರು ಮತ್ತು ಧರ್ಮೋಪದೇಶಕರು ಸಹ ಅಲ್ಲಿ ಕುಳಿತುಕೊಂಡಿದ್ದರು. ಅವರು, ಗಲಿಲಾಯದಿಂದಲೂ ಜುದೇಯ ಪ್ರಾಂತ್ಯದ ಊರುಗಳಿಂದಲೂ ಜೆರುಸಲೇಮಿನಿಂದಲೂ ಬಂದಿದ್ದರು. ರೋಗಿಗಳನ್ನು ಗುಣಪಡಿಸಲು ಪ್ರಭುವಿನ ಶಕ್ತಿಯು ಆತನಲ್ಲಿತ್ತು.
ಲೂಕನು 5 : 18 (ERVKN)
ಒಬ್ಬ ಪಾರ್ಶ್ವವಾಯು ರೋಗಿ ಅಲ್ಲಿದ್ದನು. ಒಂದು ಚಿಕ್ಕ ಹಾಸಿಗೆಯಲ್ಲಿ ಅವನನ್ನು ಕೆಲವು ಮಂದಿ ಗಂಡಸರು ಹೊತ್ತುಕೊಂಡು ಬಂದು ಯೇಸುವಿನ ಮುಂದೆ ಇಡಲು ಪ್ರಯತ್ನಿಸಿದರು.
ಲೂಕನು 5 : 19 (ERVKN)
ಆದರೆ ಅಲ್ಲಿ ಬಹಳ ಜನ ಇದ್ದುದರಿಂದ ಯೇಸುವಿನ ಬಳಿಗೆ ಹೋಗಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಅವರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ತೆಗೆದು ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.
ಲೂಕನು 5 : 20 (ERVKN)
ಈ ಜನರ ನಂಬಿಕೆಯನ್ನು ನೋಡಿ ಯೇಸು ಆ ರೋಗಿಗೆ, “ಸ್ನೇಹಿತನೇ ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. [PE][PS]
ಲೂಕನು 5 : 21 (ERVKN)
ಯೆಹೂದ್ಯ ಧರ್ಮೋಪದೇಶಕರು ಮತ್ತು ಫರಿಸಾಯರು, “ಈ ಮನುಷ್ಯನು (ಯೇಸು) ಯಾರು? ಈತನು ದೇವರಿಗೆ ವಿರುದ್ಧವಾದ ಸಂಗತಿಗಳನ್ನು ಹೇಳುತ್ತಾನಲ್ಲಾ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಬಲ್ಲನು” ಎಂದು ತಮ್ಮತಮ್ಮೊಳಗೆ ಯೋಚಿಸಿದರು. [PE][PS]
ಲೂಕನು 5 : 22 (ERVKN)
ಆದರೆ ಅವರ ಆಲೋಚನೆಯನ್ನು ತಿಳಿದಿದ್ದ ಯೇಸು ಅವರಿಗೆ, “ನೀವು ಆ ರೀತಿ ಯೋಚಿಸುವುದೇಕೆ?
ಲೂಕನು 5 : 23 (ERVKN)
ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಪಾರ್ಶ್ವವಾಯು ರೋಗಿಗೆ ಹೇಳುವುದೋ? ಅಥವಾ ‘ಎದ್ದುನಿಂತು ನಡೆ’ ಎನ್ನುವುದೋ?
ಲೂಕನು 5 : 24 (ERVKN)
ಆದರೆ ಮನುಷ್ಯಕುಮಾರನಿಗೆ [*ಮನುಷ್ಯಕುಮಾರನು ಯೇಸು. ದಾನಿಯೇಲ 7:13-14ರಲ್ಲಿ ದೇವರು ತನ್ನ ಜನರನ್ನು ರಕ್ಷಿಸಲು ಆರಿಸಿಕೊಂಡ ಮೆಸ್ಸೀಯನಿಗೆ ಈ ಹೆಸರು ಕೊಡಲಾಗಿದೆ.] ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವ ಅಧಿಕಾರ ಉಂಟೆಂಬುದು ನಿಮಗೆ ಖಚಿತವಾಗಬೇಕು” ಎಂದು ಹೇಳಿ, ಪಾರ್ಶ್ವವಾಯು ರೋಗಿಗೆ, “ಏಳು! ನಿನ್ನ ಹಾಸಿಗೆಯನ್ನು ಹೊತ್ತುಕೊಂಡು ಮನೆಗೆ ಹೋಗು!” ಎಂದು ಹೇಳಿದನು. [PE][PS]
ಲೂಕನು 5 : 25 (ERVKN)
ಆ ಕೂಡಲೇ ಅವನು ಜನರು ಮುಂದೆ ಎದ್ದುನಿಂತು, ತನ್ನ ಹಾಸಿಗೆಯನ್ನು ಹೊತ್ತುಕೊಂಡು ದೇವರನ್ನು ಸ್ತುತಿಸುತ್ತಾ ಮನೆಗೆ ಹೋದನು.
ಲೂಕನು 5 : 26 (ERVKN)
ಜನರೆಲ್ಲರೂ ಬಹಳ ಆಶ್ಚರ್ಯಪಟ್ಟು ದೇವರನ್ನು ಸ್ತುತಿಸತೊಡಗಿದರು ಮತ್ತು ದೇವರಲ್ಲಿ ಭಯಭಕ್ತಿಯುಳ್ಳವರಾಗಿ, “ಈ ದಿನ ನಾವು ಆಶ್ಚರ್ಯಕರವಾದ ಸಂಗತಿಯನ್ನು ಕಂಡೆವು!” ಎಂದರು. [PE][PS]
ಲೂಕನು 5 : 27 (ERVKN)
{ಯೇಸುವನ್ನು ಹಿಂಬಾಲಿಸಿದ ಲೇವಿ} (ಮತ್ತಾಯ 9:9-13; ಮಾರ್ಕ 2:13-17) [PS] ಬಳಿಕ, ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದಕಟ್ಟೆಯಲ್ಲಿ ಕುಳಿತುಕೊಂಡಿದ್ದ ಒಬ್ಬನನ್ನು ಕಂಡನು. ಅವನ ಹೆಸರು ಲೇವಿ. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು!” ಎಂದು ಹೇಳಿದನು.
ಲೂಕನು 5 : 28 (ERVKN)
ಲೇವಿಯು ಎದ್ದು, ಎಲ್ಲವನ್ನೂ ಅಲ್ಲಿಯೇ ಬಿಟ್ಟು ಯೇಸುವನ್ನು ಹಿಂಬಾಲಿಸಿದನು. [PE][PS]
ಲೂಕನು 5 : 29 (ERVKN)
ಬಳಿಕ ಲೇವಿಯು ಯೇಸುವಿಗೆ ತನ್ನ ಮನೆಯಲ್ಲಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಅನೇಕ ಸುಂಕವಸೂಲಿಗಾರರು ಮತ್ತು ಇನ್ನಿತರ ಜನರು ಸಹ ಊಟಕ್ಕೆ ಕುಳಿತಿದ್ದರು.
ಲೂಕನು 5 : 30 (ERVKN)
ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿನ ಶಿಷ್ಯರಿಗೆ, “ನೀವು ಸುಂಕದವರೊಡನೆ ಮತ್ತು ಇತರ ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತೀರಿ ಮತ್ತು ಕುಡಿಯುತ್ತೀರಿ?” ಎಂದು ಆಕ್ಷೇಪಿಸಿದರು. [PE][PS]
ಲೂಕನು 5 : 31 (ERVKN)
ಯೇಸು ಅವರಿಗೆ, “ವೈದ್ಯನ ಅಗತ್ಯವಿರುವುದು ಆರೋಗ್ಯವಂತರಿಗಲ್ಲ, ಕಾಯಿಲೆಯವರಿಗಷ್ಟೆ.
ಲೂಕನು 5 : 32 (ERVKN)
ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರಿಗಿಕೊಳ್ಳಿರಿ ಎಂದು ನೀತಿವಂತರನ್ನು ಕರೆಯಲು ನಾನು ಬಂದವನಲ್ಲ, ಪಾಪಿಗಳನ್ನು ಕರೆಯಲು ಬಂದವನು!” ಎಂದು ಉತ್ತರಿಸಿದನು. [PE][PS]
ಲೂಕನು 5 : 33 (ERVKN)
{ಉಪವಾಸದ ಕುರಿತು ಯೇಸುವಿನ ಉತ್ತರ} (ಮತ್ತಾಯ 9:14-17; ಮಾರ್ಕ 2:18-22) [PS] ಅವರು ಯೇಸುವಿಗೆ, “ಫರಿಸಾಯರ ಹಿಂಬಾಲಕರು ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ಯೋಹಾನನ ಶಿಷ್ಯರು ಆಗಾಗ್ಗೆ ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ನಿನ್ನ ಶಿಷ್ಯರಾದರೋ ಯಾವಾಗಲೂ ತಿಂದುಕುಡಿಯುವುದರಲ್ಲೇ ಇದ್ದಾರೆ” ಎಂದು ಟೀಕಿಸಿದರು. [PE][PS]
ಲೂಕನು 5 : 34 (ERVKN)
ಯೇಸು ಅವರಿಗೆ, “ಮದುವೆಯಲ್ಲಿ ಮದುಮಗನ ಸಂಗಡ ಇರುವ ಅವನ ಸ್ನೇಹಿತರಿಗೆ ನೀವು ಉಪವಾಸಮಾಡಿ ಎಂದು ಹೇಳಲು ಸಾಧ್ಯವಿಲ್ಲ.
ಲೂಕನು 5 : 35 (ERVKN)
ಆದರೆ ಮದುಮಗನು ಅವರ ಬಳಿಯಿಂದ ಹೊರಟುಹೋಗುವ ಕಾಲ ಬರುತ್ತದೆ. ಆಗ ಅವನ ಸ್ನೇಹಿತರು ಉಪವಾಸ ಮಾಡುವರು” ಎಂದು ಉತ್ತರಕೊಟ್ಟನು. [PE][PS]
ಲೂಕನು 5 : 36 (ERVKN)
ಬಳಿಕ ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಹಳೆ ಅಂಗಿಗೆ ತೇಪೆ ಹಚ್ಚುವುದಕ್ಕಾಗಿ ಹೊಸ ಅಂಗಿಯಿಂದ ಬಟ್ಟೆಯನ್ನು ಯಾರೂ ಹರಿದುಕೊಳ್ಳುವುದಿಲ್ಲ. ಹಾಗೆ ಮಾಡಿದ್ದೇಯಾದರೆ, ಹೊಸ ಅಂಗಿಯನ್ನು ಕೆಡಿಸಿಕೊಂಡಂತಾಗುತ್ತದೆ. ಅಲ್ಲದೆ ಹೊಸ ಅಂಗಿಯ ಬಟ್ಟೆಯು ಹಳೆ ಅಂಗಿಗೆ ಹೋಲುವುದೂ ಇಲ್ಲ.
ಲೂಕನು 5 : 37 (ERVKN)
ಅಂತೆಯೇ ಹೊಸ ದ್ರಾಕ್ಷಾರಸವನ್ನು ಹಳೆಯ ದ್ರಾಕ್ಷಾರಸದ ಚೀಲಗಳಲ್ಲಿ ಯಾರೂ ತುಂಬಿಡುವುದಿಲ್ಲ. ಒಂದುವೇಳೆ ತುಂಬಿದರೆ, ಹೊಸ ದ್ರಾಕ್ಷಾರಸವು ಚೀಲಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಚೆಲ್ಲಿಹೋಗುತ್ತದೆ, ಚೀಲಗಳೂ ಹಾಳಾಗುತ್ತವೆ.
ಲೂಕನು 5 : 38 (ERVKN)
ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ದ್ರಾಕ್ಷಾರಸದ ಚೀಲಗಳಲ್ಲಿ ತುಂಬಿಡುತ್ತಾರೆ.
ಲೂಕನು 5 : 39 (ERVKN)
ಹಳೆಯ ದ್ರಾಕ್ಷಾರಸವನ್ನು ಕುಡಿದವನಿಗೆ ಹೊಸ ದ್ರಾಕ್ಷಾರಸವು ರುಚಿಸುವುದಿಲ್ಲ. ಅವನು ಹಳೆಯ ದ್ರಾಕ್ಷಾರಸವನ್ನೇ ಇಷ್ಟಪಡುತ್ತಾನೆ.” [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39

BG:

Opacity:

Color:


Size:


Font: