ಲೂಕನು 8 : 1 (ERVKN)
ಮರುದಿನ, ಯೇಸು ಕೆಲವು ನಗರಗಳ ಮತ್ತು ಊರುಗಳ ಮೂಲಕ ಪ್ರಯಾಣ ಮಾಡಿ ಜನರಿಗೆ ಬೋಧಿಸಿದನು ಮತ್ತು ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಿದನು. ಹನ್ನೆರಡು ಮಂದಿ ಅಪೊಸ್ತಲರು ಆತನೊಡನೆ ಇದ್ದರು.
ಲೂಕನು 8 : 2 (ERVKN)
ಕೆಲವು ಸ್ತ್ರೀಯರೂ ಆತನೊಡನೆ ಇದ್ದರು. ಈ ಸ್ತ್ರೀಯರು ಆತನಿಂದ ತಮ್ಮ ಕಾಯಿಲೆಗಳಿಂದ ಗುಣಹೊಂದಿದವರೂ ದೆವ್ವಗಳ ಕಾಟದಿಂದ ಬಿಡುಗಡೆ ಹೊಂದಿದವರೂ ಆಗಿದ್ದರು. ಈ ಸ್ತ್ರೀಯರಲ್ಲಿ ಒಬ್ಬಳ ಹೆಸರು ಮರಿಯಳು. ಆಕೆ ಮಗ್ದಲ ಎಂಬ ಊರಿನವಳು. ಯೇಸು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದನು.
ಲೂಕನು 8 : 3 (ERVKN)
ಇದಲ್ಲದೆ ಕೂಜನ (ಹೆರೋದನ ಸಹಾಯಕ) ಹೆಂಡತಿಯಾದ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕ ಸ್ತ್ರೀಯರು ಇದ್ದರು. ಈ ಸ್ತ್ರೀಯರು ಯೇಸುವಿಗೂ ಆತನ ಅಪೊಸ್ತಲರಿಗೂ ತಮ್ಮ ಸ್ವಂತ ಹಣದಿಂದ ಸಹಾಯ ಮಾಡುತ್ತಿದ್ದರು.
ಲೂಕನು 8 : 4 (ERVKN)
ಅನೇಕ ಜನರು ಊರೂರುಗಳಿಂದ ಯೇಸುವಿನ ಬಳಿಗೆ ಸೇರಿಬಂದರು. ಆಗ ಯೇಸು ಅವರಿಗೆ ಈ ಸಾಮ್ಯ ಹೇಳಿದನು:
ಲೂಕನು 8 : 5 (ERVKN)
”ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೊಲಕ್ಕೆ ಹೋದನು. ಬೀಜ ಬಿತ್ತುವಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದು ಜನರ ತುಳಿತಕ್ಕೆ ಸಿಕ್ಕಿಕೊಂಡವು. ಹಕ್ಕಿಗಳು ಬಂದು ಅವುಗಳನ್ನೆಲ್ಲ ತಿಂದುಬಿಟ್ಟವು.
ಲೂಕನು 8 : 6 (ERVKN)
ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವುಗಳು ಮೊಳೆಯತೊಡಗಿದರೂ ನೀರಿಲ್ಲದೆ ಒಣಗಿಹೋದವು.
ಲೂಕನು 8 : 7 (ERVKN)
ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯೆ ಬಿದ್ದವು. ಅವುಗಳು ಮೊಳೆತರೂ ಮುಳ್ಳುಗಿಡಗಳಿಂದ ಬೆಳೆಯಲಾಗಲಿಲ್ಲ.
ಲೂಕನು 8 : 8 (ERVKN)
ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಈ ಬೀಜಗಳು ಮೊಳೆತು ಬೆಳೆದು ನೂರರಷ್ಟು ಹೆಚ್ಚು ಫಲವನ್ನು ಕೊಟ್ಟವು.” ಯೇಸು ಈ ಸಾಮ್ಯವನ್ನು ಹೇಳಿ ಮುಗಿಸಿದ ಮೇಲೆ, “ನನ್ನ ಮಾತನ್ನು ಆಲಿಸುತ್ತಿರುವ ಜನರೇ, ಕೇಳಿರಿ” ಎಂದು ಹೇಳಿದನು.
ಲೂಕನು 8 : 9 (ERVKN)
ಶಿಷ್ಯರು ಆತನಿಗೆ, “ಈ ಸಾಮ್ಯದ ಅರ್ಥವೇನು?” ಎಂದು ಕೇಳಿದರು.
ಲೂಕನು 8 : 10 (ERVKN)
ಯೇಸು, “ನೀವು ದೇವರ ರಾಜ್ಯದ ಗುಟ್ಟುಗಳನ್ನು ತಿಳಿದುಕೊಳ್ಳಬೇಕೆಂದು ನಿಮ್ಮನ್ನು ಆರಿಸಿಕೊಳ್ಳಲಾಗಿದೆ. ಆದರೆ ಬೇರೆ ಜನರೊಂದಿಗೆ ನಾನು ಸಾಮ್ಯಗಳ ಮೂಲಕ ಮಾತಾಡುತ್ತೇನೆ, ಏಕೆಂದರೆ, ؅ಅವರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸಿಕೊಳ್ಳುವುದಿಲ್ಲ.؆ಯೆಶಾಯ 6:9
ಲೂಕನು 8 : 11 (ERVKN)
”ಈ ಸಾಮ್ಯದ ಅರ್ಥ ಹೀಗಿದೆ: ಬೀಜವು ದೇವರ ವಾಕ್ಯ.
ಲೂಕನು 8 : 12 (ERVKN)
ಕಾಲ್ದಾರಿಯಲ್ಲಿ ಬಿದ್ದ ಬೀಜವೆಂದರೇನು? ದೇವರ ವಾಕ್ಯವನ್ನು ಕೆಲವರು ಕೇಳುತ್ತಾರೆ. ಆದರೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದುಬಿಡುತ್ತಾನೆ. ಅವರು ಆ ವಾಕ್ಯವನ್ನು ನಂಬದಿರುವುದರಿಂದ ರಕ್ಷಣೆಯನ್ನು ಹೊಂದಲಾರರು.
ಲೂಕನು 8 : 13 (ERVKN)
ಬಂಡೆಯ ಮೇಲೆ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯ ಕೇಳಿ ಸಂತೋಷದಿಂದ ಸ್ವೀಕರಿಸಿಕೊಳ್ಳುತ್ತಾರೆ. ಆದರೆ ಅವರಿಗೆ ಆಳವಾದ ಬೇರುಗಳಿರುವುದಿಲ್ಲ. ಅವರು ಸ್ವಲ್ಪಕಾಲ ಮಾತ್ರವೇ ನಂಬುತ್ತಾರೆ. ಬಳಿಕ ತೊಂದರೆಯೇನಾದರೂ ಬಂದರೆ ತಮ್ಮ ನಂಬಿಕೆಯನ್ನು ಕಳೆದುಕೊಂಡು ದೇವರಿಂದ ದೂರ ಸರಿಯುತ್ತಾರೆ.
ಲೂಕನು 8 : 14 (ERVKN)
ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಲೋಕದ ಚಿಂತೆಗಳಿಗೂ ಐಶ್ವರ್ಯಗಳಿಗೂ ಭೋಗಗಳಿಗೂ ಅವರು ಅವಕಾಶಕೊಡುವುದರಿಂದ ಅವರು ಬೆಳೆಯರಾರರು; ಎಂದಿಗೂ ಒಳ್ಳೆಯ ಫಲವನ್ನು ಕೊಡಲಾರರು.
ಲೂಕನು 8 : 15 (ERVKN)
ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.
ಲೂಕನು 8 : 16 (ERVKN)
”ಯಾವ ವ್ಯಕ್ತಿಯೂ ದೀಪವನ್ನು ಹಚ್ಚಿ ಅದನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಬಚ್ಚಿಡುವುದಿಲ್ಲ. ಮನೆಯೊಳಗೆ ಬರುವವರಿಗೆ ಸಾಕಷ್ಟು ಬೆಳಕು ದೊರೆಯಲಿ ಎಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾನೆ.
ಲೂಕನು 8 : 17 (ERVKN)
ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ; ಬಯಲಿಗೆ ಬಾರದ ಯಾವ ಗುಟ್ಟೂ ಇಲ್ಲ.
ಲೂಕನು 8 : 18 (ERVKN)
ಆದುದರಿಂದ ನೀವು ಕಿವಿಗೊಡುವಾಗ ಜಾಗರೂಕರಾಗಿರಿ; ಸ್ವಲ್ಪ ತಿಳುವಳಿಕೆ ಇರುವ ವ್ಯಕ್ತಿಯು ಹೆಚ್ಚು ತಿಳುವಳಿಕೆಯನ್ನು ಹೊಂದುವನು. ಆದರೆ ತಿಳುವಳಿಕೆ ಇಲ್ಲದ ವ್ಯಕ್ತಿಯು ತನಗಿದೆ ಎಂದುಕೊಂಡಿದ್ದ ತಿಳುವಳಿಕೆಯನ್ನೂ ಕಳೆದುಕೊಳ್ಳುವನು.”
ಲೂಕನು 8 : 19 (ERVKN)
ಯೇಸುವಿನ ತಾಯಿ ಮತ್ತು ತಮ್ಮಂದಿರು ಆತನನ್ನು ಭೇಟಿಯಾಗಲು ಬಂದರು. ಅಲ್ಲಿ ಬಹಳ ಜನರು ಇದ್ದುದರಿಂದ ಯೇಸುವಿನ ತಾಯಿಯಾಗಲಿ ಆತನ ತಮ್ಮಂದಿರಾಗಲಿ ಆತನ ಬಳಿಗೆ ಹೋಗಲು ಸಾಧ್ಯವಾಗಲಿಲ್ಲ. ಅಲ್ಲಿದ್ದ ಒಬ್ಬನು,
ಲೂಕನು 8 : 20 (ERVKN)
”ನಿನ್ನ ತಾಯಿ ಮತ್ತು ತಮ್ಮಂದಿರು ಹೊರಗೆ ನಿಂತಿದ್ದಾರೆ. ಅವರು ನಿನ್ನನ್ನು ನೋಡಬೇಕೆಂದಿದ್ದಾರೆ” ಎಂದು ಯೇಸುವಿಗೆ ತಿಳಿಸಿದನು.
ಲೂಕನು 8 : 21 (ERVKN)
ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ನನ್ನ ತಾಯಿ ಮತ್ತು ನನ್ನ ತಮ್ಮಂದಿರು!” ಎಂದು ಉತ್ತರಕೊಟ್ಟನು.
ಲೂಕನು 8 : 22 (ERVKN)
ಒಂದು ದಿನ ಯೇಸು ಮತ್ತು ಆತನ ಶಿಷ್ಯರು ದೋಣಿಯಲ್ಲಿ ಹತ್ತಿ ಕುಳಿತುಕೊಂಡರು. ಯೇಸು ಅವರಿಗೆ, “ನಾವು ಸರೋವರದ ಆಚೆದಡಕ್ಕೆ ಹೋಗೋಣ” ಎಂದು ಹೇಳಿದನು. ಅಂತೆಯೇ ಅವರು ಆಚೆದಡಕ್ಕೆ ಹೊರಟರು.
ಲೂಕನು 8 : 23 (ERVKN)
ಅವರು ಸರೋವರದ ಮೇಲೆ ದೋಣಿಯಲ್ಲಿ ಹೋಗುತ್ತಿರುವಾಗ ಯೇಸುವಿಗೆ ನಿದ್ದೆ ಹತ್ತಿತು. ಇತ್ತ ಸರೋವರದ ಮೇಲೆ ಬಿರುಗಾಳಿ ಬೀಸತೊಡಗಿತು. ದೋಣಿಯೊಳಗೆ ನೀರು ತುಂಬತೊಡಗಿತು. ದೋಣಿಯಲ್ಲಿದ್ದವರೆಲ್ಲರೂ ಅಪಾಯಕ್ಕೀಡಾದರು.
ಲೂಕನು 8 : 24 (ERVKN)
ಆಗ ಶಿಷ್ಯರು ಯೇಸುವಿನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಗುರುವೇ! ಗುರುವೇ! ನಾವು ಮುಳುಗಿಹೋಗುತ್ತಿದ್ದೇವೆ!” ಎಂದು ಹೇಳಿದರು. ಕೂಡಲೇ ಯೇಸು ಎದ್ದು, ಆ ಗಾಳಿಗೂ ತೆರೆಗಳಿಗೂ ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತಿತು ಮತ್ತು ಸರೋವರ ಶಾಂತವಾಯಿತು.
ಲೂಕನು 8 : 25 (ERVKN)
ಯೇಸು ತನ್ನ ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ನಂಬಿಕೆ?” ಎಂದು ಕೇಳಿದನು. ಶಿಷ್ಯರು ಭಯಪಟ್ಟರು ಮತ್ತು ವಿಸ್ಮಯಗೊಂಡರು. “ಈತನು ಯಾರಿರಬಹುದು? ಈತನು ಗಾಳಿಗೂ ನೀರಿಗೂ ಆಜ್ಞಾಪಿಸುತ್ತಾನೆ. ಅವು ವಿಧೇಯವಾಗುತ್ತವೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
ಲೂಕನು 8 : 26 (ERVKN)
ಯೇಸು ಮತ್ತು ಆತನ ಶಿಷ್ಯರು ಗಲಿಲಾಯದಿಂದ ಸರೋವರವನ್ನು ದಾಟಿ, ಗೆರೆಸೇನರ ನಾಡಿಗೆ ಪ್ರಯಾಣ ಮಾಡಿದರು.
ಲೂಕನು 8 : 27 (ERVKN)
ಯೇಸು ದೋಣಿಯಿಂದ ಇಳಿದಾಗ, ಆ ಪಟ್ಟಣದ ಮನುಷ್ಯನೊಬ್ಬನು ಯೇಸುವಿನ ಬಳಿಗೆ ಬಂದನು. ಈ ಮನುಷ್ಯನಿಗೆ ದೆವ್ವ ಹಿಡಿದಿತ್ತು. ಬಹಳ ಕಾಲದಿಂದ ಅವನು ಬಟ್ಟೆಯನ್ನೇ ಹಾಕಿಕೊಂಡಿರಲಿಲ್ಲ. ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು.
ಲೂಕನು 8 : 28 (ERVKN)
[This verse may not be a part of this translation]
ಲೂಕನು 8 : 29 (ERVKN)
[This verse may not be a part of this translation]
ಲೂಕನು 8 : 30 (ERVKN)
”ನಿನ್ನ ಹೆಸರೇನು?” ಎಂದು ಯೇಸು ಕೇಳಿದನು. “ದಂಡು” ಎಂದು ಅವನು ಉತ್ತರಿಸಿದನು. (ಏಕೆಂದರೆ ಅವನೊಳಗೆ ಅನೇಕ ದೆವ್ವಗಳು ಸೇರಿಕೊಂಡಿದ್ದವು.)
ಲೂಕನು 8 : 31 (ERVKN)
ತಮ್ಮನ್ನು ಪಾತಾಳಕ್ಕೆ ಕಳುಹಿಸಕೂಡದೆಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು.
ಲೂಕನು 8 : 32 (ERVKN)
ಅಲ್ಲಿದ್ದ ಒಂದು ಗುಡ್ಡದ ಮೇಲೆ ಹಂದಿಗಳ ಒಂದು ದೊಡ್ಡ ಗುಂಪು ಮೇಯುತ್ತಿತ್ತು. ಹಂದಿಗಳೊಳಗೆ ಹೋಗಲು ತಮಗೆ ಅನುಮತಿ ಕೊಡಬೇಕೆಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು. ಯೇಸು ಅವುಗಳಿಗೆ ಅನುಮತಿಕೊಟ್ಟನು.
ಲೂಕನು 8 : 33 (ERVKN)
ಆಗ ದೆವ್ವಗಳು ಆ ಮನುಷ್ಯನಿಂದ ಹೊರಬಂದು ಹಂದಿಗಳೊಳಗೆ ಸೇರಿಕೊಂಡವು. ಆ ಕೂಡಲೇ ಹಂದಿಗಳ ಗುಂಪು ಗುಡ್ಡದ ಕೆಳಗೆ ಓಡಿಹೋಗಿ ಸರೋವರದಲ್ಲಿ ಬಿದ್ದು ಮುಳುಗಿ ಹೋದವು.
ಲೂಕನು 8 : 34 (ERVKN)
ಹಂದಿಗಳನ್ನು ಕಾಯುತ್ತಿದ್ದವರು ಓಡಿಹೋಗಿ, ನಡೆದ ಈ ಸಂಗತಿಯನ್ನು ಹೊಲಗಳಲ್ಲಿಯೂ ಊರುಗಳಲ್ಲಿಯೂ ಇದ್ದ ಜನರಿಗೆ ತಿಳಿಸಿದರು.
ಲೂಕನು 8 : 35 (ERVKN)
ಅದನ್ನು ನೋಡಲು ಜನರೆಲ್ಲರೂ ಯೇಸುವಿದ್ದಲ್ಲಿಗೆ ಬಂದರು. ಆ ಮನುಷ್ಯನು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿದ್ದುದನ್ನು ಅವರು ನೋಡಿದರು. ಅವನು ಬಟ್ಟೆಗಳನ್ನು ಹಾಕಿಕೊಂಡಿದ್ದನು; ಸ್ವಸ್ಥಬುದ್ಧಿಯುಳ್ಳವನಾಗಿದ್ದನು. ದೆವ್ವಗಳು ಅವನನ್ನು ಬಿಟ್ಟುಹೋಗಿದ್ದವು. ಜನರಿಗೆ ಭಯವಾಯಿತು.
ಲೂಕನು 8 : 36 (ERVKN)
ಯೇಸು ಆ ಮನುಷ್ಯನನ್ನು ಗುಣಪಡಿಸಿದ ರೀತಿಯನ್ನು ನೋಡಿದ್ದವರು ಆತನನ್ನು ನೋಡಲು ಬಂದ ಜನರೆಲ್ಲರಿಗೂ ಆ ಘಟನೆಯನ್ನು ವಿವರಿಸಿ ಹೇಳಿದರು.
ಲೂಕನು 8 : 37 (ERVKN)
ಜನರು ಯೇಸುವಿಗೆ, “ನೀನು ಇಲ್ಲಿಂದ ಹೊರಟುಹೋಗು” ಎಂದು ಕೇಳಿಕೊಂಡರು. ಏಕೆಂದರೆ ಅವರು ಬಹಳ ಭಯಗೊಂಡಿದ್ದರು. ಆದ್ದರಿಂದ ಯೇಸು ದೋಣಿಯನ್ನು ಹತ್ತಿ ಮತ್ತೆ ಗಲಿಲಾಯಕ್ಕೆ ಹಿಂತಿರುಗಿದನು.
ಲೂಕನು 8 : 38 (ERVKN)
ದೆವ್ವಗಳಿಂದ ಬಿಡುಗಡೆಯಾಗಿದ್ದವನು, “ನನ್ನನ್ನು ನಿನ್ನ ಜೊತೆಯಲ್ಲೇ ಕರೆದುಕೊಂಡು ಹೋಗು,” ಎಂದು ಕೇಳಿಕೊಂಡನು.
ಲೂಕನು 8 : 39 (ERVKN)
ಅದಕ್ಕೆ ಯೇಸು, “ನಿನ್ನ ಮನೆಗೆ ಹಿಂತಿರುಗಿ ಹೋಗು. ದೇವರು ನಿನಗೆ ಮಾಡಿದ ಉಪಕಾರವನ್ನು ಜನರಿಗೆ ತಿಳಿಸು” ಎಂದು ಹೇಳಿ ಅವನನ್ನು ಕಳುಹಿಸಿದನು. ಆದ್ದರಿಂದ ಆ ಮನುಷ್ಯನು ಅಲ್ಲಿಂದ ಹೊರಟು ಹೋಗಿ ಯೇಸು ತನಗೆ ಮಾಡಿದ ಉಪಕಾರವನ್ನು ಊರಲ್ಲೆಲ್ಲಾ ತಿಳಿಸಿದನು.
ಲೂಕನು 8 : 40 (ERVKN)
ಯೇಸು ಗಲಿಲಾಯಕ್ಕೆ ಹಿಂತಿರುಗಿದಾಗ ಜನರು ಆತನನ್ನು ಸ್ವಾಗತಿಸಿದರು. ಪ್ರತಿಯೊಬ್ಬರೂ ಆತನಿಗಾಗಿ ಕಾಯುತ್ತಿದ್ದರು.
ಲೂಕನು 8 : 41 (ERVKN)
ಯಾಯಿರನೆಂಬ ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದನು. ಅವನು ಸಭಾಮಂದಿರದ ಅಧಿಕಾರಿಯಾಗಿದ್ದನು. ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
ಲೂಕನು 8 : 42 (ERVKN)
ಅವನಿಗೆ ಒಬ್ಬಳೇ ಮಗಳಿದ್ದಳು. ಆಕೆಗೆ ಹನೆರಡು ವರ್ಷ ವಯಸ್ಸಾಗಿತ್ತು. ಆಕೆಯು ಸಾಯುವ ಸ್ಥಿತಿಯಲ್ಲಿದ್ದಳು. ಯೇಸುವು ಯಾಯಿರನ ಮನೆಗೆ ಹೋಗುತ್ತಿದ್ದಾಗ ಜನರು ಆತನ ಸುತ್ತಲೂ ಸೇರಿಬಂದರು.
ಲೂಕನು 8 : 43 (ERVKN)
ಹನ್ನೆರಡು ವರ್ಷಗಳಿಂದ ರಕ್ತಸ್ರಾವವಾಗುತ್ತಿದ್ದ ಸ್ತ್ರೀಯೊಬ್ಬಳು ಅಲ್ಲಿದ್ದಳು. ಆಕೆ ತನ್ನಲ್ಲಿದ್ದ ಹಣವನ್ನೆಲ್ಲಾ ವೈದ್ಯರಿಗೆ ಖರ್ಚು ಮಾಡಿದ್ದಳು. ಆದರೆ ಯಾವ ವೈದ್ಯನಿಗೂ ಆಕೆಯನ್ನು ವಾಸಿಮಾಡಲು ಸಾಧ್ಯವಾಗಿರಲಿಲ್ಲ.
ಲೂಕನು 8 : 44 (ERVKN)
ಆ ಸ್ತ್ರೀಯು ಯೇಸುವಿನ ಹಿಂದೆ ಬಂದು ಆತನ ನಿಲುವಂಗಿಯ ಕೆಳಭಾಗವನ್ನು ಮುಟ್ಟಿದಳು. ಆ ಕ್ಷಣವೇ ಆಕೆಯ ರಕ್ತಸ್ರಾವ ನಿಂತುಹೋಯಿತು.
ಲೂಕನು 8 : 45 (ERVKN)
ಆಗ ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದು ಕೇಳಿದನು. ಜನರೆಲ್ಲರೂ ತಾವು ಮುಟ್ಟಲಿಲ್ಲವೆಂದು ಹೇಳುತ್ತಿರಲು ಪೇತ್ರನು, “ಗುರುವೇ, ಇಷ್ಟೊಂದು ಜನರು ಮೇಲೆ ಬೀಳುತ್ತಾ ನಿನ್ನನ್ನು ನೂಕುತ್ತಿದ್ದಾರಲ್ಲಾ” ಎಂದನು.
ಲೂಕನು 8 : 46 (ERVKN)
ಅದಕ್ಕೆ ಯೇಸು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು! ನನ್ನಿಂದ ಶಕ್ತಿ ಹೊರಟದ್ದು ನನಗೆ ತಿಳಿಯಿತು” ಎಂದು ಹೇಳಿದನು.
ಲೂಕನು 8 : 47 (ERVKN)
ಇನ್ನು ತಾನು ಅಡಗಿಕೊಂಡಿರಲು ಸಾಧ್ಯವಿಲ್ಲವೆಂದು ತಿಳಿದುಕೊಂಡ ಆ ಸ್ತ್ರೀಯು ನಡುಗುತ್ತಾ ಆತನ ಮುಂದೆ ಬಂದು ಅಡ್ಡಬಿದ್ದು ತಾನು ಮುಟ್ಟಿದ್ದಕ್ಕೆ ಕಾರಣವನ್ನು ಎಲ್ಲರ ಎದುರಿನಲ್ಲಿ ತಿಳಿಸಿದಳು. ಅಲ್ಲದೆ ಆತನನ್ನು ಮುಟ್ಟಿದಾಕ್ಷಣವೇ ತನಗೆ ವಾಸಿಯಾಯಿತೆಂದು ಹೇಳಿದಳು.
ಲೂಕನು 8 : 48 (ERVKN)
ಯೇಸು ಆಕೆಗೆ, “ಮಗಳೇ, ನೀನು ನಂಬಿದ್ದರಿಂದ ನಿನಗೆ ಸ್ವಸ್ಥವಾಯಿತು. ಸಮಾಧಾನದಿಂದ ಹೋಗು” ಎಂದು ಹೇಳಿದನು.
ಲೂಕನು 8 : 49 (ERVKN)
ಯೇಸು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿರದ ಅಧಿಕಾರಿಯ (ಯಾಯಿರನ) ಮನೆಯಿಂದ ಒಬ್ಬ ವ್ಯಕ್ತಿ ಬಂದು, “ನಿನ್ನ ಮಗಳು ಸತ್ತುಹೋದಳು! ಈಗ ಬೋಧಕನಿಗೆ (ಯೇಸುವಿಗೆ) ತೊಂದರೆ ಕೊಡಬೇಡ” ಎಂದು ಹೇಳಿದನು.
ಲೂಕನು 8 : 50 (ERVKN)
ಯೇಸು ಇದನ್ನು ಕೇಳಿ ಯಾಯಿರನಿಗೆ, “ಭಯಪಡಬೇಡ. ನಂಬಿಕೆಯೊಂದಿರಲಿ. ನಿನ್ನ ಮಗಳಿಗೆ ಗುಣವಾಗುವುದು” ಎಂದು ಹೇಳಿದನು.
ಲೂಕನು 8 : 51 (ERVKN)
ಯೇಸು ಯಾಯಿರನ ಮನೆಗೆ ಹೋದನು. ಪೇತ್ರ, ಯೋಹಾನ, ಯಾಕೋಬ ಮತ್ತು ಹುಡುಗಿಯ ತಂದೆತಾಯಿಗಳಿಗೆ ಮಾತ್ರ ತನ್ನೊಂದಿಗೆ ಬರಲು ಅನುಮತಿಕೊಟ್ಟನು. ಬೇರೆ ಯಾರೂ ಒಳಗೆ ಬರಕೂಡದೆಂದು ಯೇಸು ತಿಳಿಸಿದನು.
ಲೂಕನು 8 : 52 (ERVKN)
ಸತ್ತುಹೋದ ಆ ಬಾಲಕಿಗಾಗಿ ಜನರೆಲ್ಲರೂ ದುಃಖದಿಂದ ಗೋಳಾಡುತ್ತಿದ್ದರು. ಆದರೆ ಯೇಸು ಅವರಿಗೆ, “ಅಳಬೇಡಿ, ಆಕೆ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ” ಎಂದನು.
ಲೂಕನು 8 : 53 (ERVKN)
ಆಗ ಜನರು ಯೇಸುವನ್ನು ಗೇಲಿಮಾಡಿದರು. ಏಕೆಂದರೆ ಆ ಹುಡುಗಿ ಸತ್ತುಹೋದಳೆಂದು ಅವರಿಗೆ ಖಂಡಿತವಾಗಿ ತಿಳಿದಿತ್ತು.
ಲೂಕನು 8 : 54 (ERVKN)
ಆದರೆ ಯೇಸು ಆಕೆಯ ಕೈಯನ್ನು ಹಿಡಿದು, “ಮಗು, ಎದ್ದೇಳು!” ಎಂದನು.
ಲೂಕನು 8 : 55 (ERVKN)
ಆ ಕೂಡಲೇ ಆಕೆಗೆ ಜೀವ ಬಂದಿತು. ಆಕೆ ಎದ್ದುನಿಂತುಕೊಂಡಳು. ಯೇಸು ಅವರಿಗೆ, “ಆಕೆಗೆ ತಿನ್ನಲು ಏನಾದರೂ ಕೊಡಿರಿ” ಎಂದು ಹೇಳಿದನು.
ಲೂಕನು 8 : 56 (ERVKN)
ಬಾಲಕಿಯ ತಂದೆತಾಯಿಗಳು ಬೆರಗಾದರು. ಈ ಘಟನೆಯ ಬಗ್ಗೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಆಜ್ಞಾಪಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56

BG:

Opacity:

Color:


Size:


Font: