ಮಾರ್ಕನು 16 : 1 (ERVKN)
{ಯೇಸುವಿನ ಪುನರುತ್ಥಾನ} (ಮತ್ತಾಯ 28:1-8; ಲೂಕ 24:1-12; ಯೋಹಾನ 20:1-10) [PS] ಸಬ್ಬತ್ ದಿನದ ಮರುದಿನ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬನ ತಾಯಿಯಾದ ಮರಿಯಳು ಕೆಲವು ಸುಗಂಧದ್ರವ್ಯಗಳನ್ನು ಯೇಸುವಿನ ದೇಹಕ್ಕೆ ಹಚ್ಚಬೇಕೆಂದಿದ್ದರು.
ಮಾರ್ಕನು 16 : 2 (ERVKN)
ವಾರದ ಮೊದಲನೆಯ ದಿನ, ಮುಂಜಾನೆಯಲ್ಲಿಯೇ, ಅವರು ಸಮಾಧಿಗೆ ಹೊರಟರು. ಆಗ ಸೂರ್ಯೋದಯವಾಗಿದ್ದರೂ ಇನ್ನೂ ನಸುಕಾಗಿತ್ತು.
ಮಾರ್ಕನು 16 : 3 (ERVKN)
ಆ ಸ್ತ್ರೀಯರು ಒಬ್ಬರಿಗೊಬ್ಬರು, “ದೊಡ್ಡ ಬಂಡೆಯಿಂದ ಸಮಾಧಿಯ ಬಾಗಿಲನ್ನು ಮುಚ್ಚಲಾಗಿದೆ. ಈ ಬಂಡೆಯನ್ನು ನಮಗಾಗಿ ಯಾರು ಉರುಳಿಸುತ್ತಾರೆ?” ಎಂದುಕೊಂಡರು. [PE][PS]
ಮಾರ್ಕನು 16 : 4 (ERVKN)
ಆ ಸ್ತ್ರೀಯರು ಸಮಾಧಿಯನ್ನು ತಲುಪಿದಾಗ ಆ ಬಂಡೆ ಉರುಳಿರುವುದನ್ನು ಕಂಡರು. ಆ ಬಂಡೆಯು ಬಹಳ ದೊಡ್ಡದಾಗಿತ್ತು ಆದರೆ ಅದನ್ನು ಬಾಗಿಲಿನಿಂದ ದೂರಕ್ಕೆ ಉರುಳಿಸಲಾಗಿತ್ತು.
ಮಾರ್ಕನು 16 : 5 (ERVKN)
ಆ ಸ್ತ್ರೀಯರು ಸಮಾಧಿಯೊಳಗೆ ಹೋದಾಗ ಬಿಳುಪಾದ ನಿಲುವಂಗಿ ಧರಿಸಿದ್ದ ಒಬ್ಬ ಯುವಕನು ಸಮಾಧಿಯ ಬಲಗಡೆ ಕುಳಿತಿರುವುದನ್ನು ಕಂಡು ಭಯಗೊಂಡರು. [PE][PS]
ಮಾರ್ಕನು 16 : 6 (ERVKN)
ಆದರೆ ಅವನು, “ಭಯಪಡಬೇಡಿ! ಶಿಲುಬೆಗೇರಿಸಲ್ಪಟ್ಟ ನಜರೇತಿನ ಯೇಸುವನ್ನು ನೀವು ಹುಡುಕುತ್ತಿದ್ದೀರಲ್ಲವೇ? ಆತನು ಜೀವಂತನಾಗಿ ಎದ್ದಿದ್ದಾನೆ. ಆತನು ಇಲ್ಲಿಲ್ಲ. ನೋಡಿರಿ, ಆತನ ದೇಹವನ್ನು ಇಟ್ಟಿದ್ದ ಸ್ಥಳ ಇದೇ.
ಮಾರ್ಕನು 16 : 7 (ERVKN)
ಈಗ ಹೋಗಿ ಆತನ ಶಿಷ್ಯರಿಗೆ ತಿಳಿಸಿರಿ. ಪೇತ್ರನಿಗಂತೂ ಖಂಡಿತವಾಗಿ ತಿಳಿಸಿರಿ. ನೀವು ಅವರಿಗೆ, ‘ಯೇಸು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ಆತನು ನಿಮಗಿಂತ ಮುಂಚೆ ಅಲ್ಲಿರುತ್ತಾನೆ. ಆತನು ನಿಮಗೆ ಮೊದಲೇ ಹೇಳಿದಂತೆ ನೀವು ಆತನನ್ನು ಅಲ್ಲಿ ನೋಡುವಿರಿ’ ಎಂದು ಹೇಳಿರಿ” ಎಂದನು. [PE][PS]
ಮಾರ್ಕನು 16 : 8 (ERVKN)
ಆ ಸ್ತ್ರೀಯರು ಬಹಳ ಭಯದಿಂದ ಗಲಿಬಿಲಿಗೊಂಡು, ಸಮಾಧಿಯನ್ನು ಬಿಟ್ಟು ಓಡಿಹೋದರು. ಅವರು ಬಹಳ ಭಯಗೊಂಡಿದ್ದರಿಂದ ಈ ವಿಷಯವನ್ನು ಯಾರಿಗೂ ಹೇಳಲಿಲ್ಲ. (ಕೆಲವು ಗ್ರೀಕ್ ಪತ್ರಿಕೆಗಳಲ್ಲಿ ಈ ಸುವಾರ್ತೆಯು ಇಲ್ಲಿಗೇ ಮುಕ್ತಾಯವಾಗುತ್ತದೆ.) [PE][PS]
ಮಾರ್ಕನು 16 : 9 (ERVKN)
{ಶಿಷ್ಯರಿಗೆ ಯೇಸುವಿನ ದರ್ಶನ} (ಮತ್ತಾಯ 28:9-10; ಯೋಹಾನ 20:11-18; ಲೂಕ 24:13-35) [PS] ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಜೀವಂತನಾಗಿ ಎದ್ದನು. ಯೇಸು ಮೊಟ್ಟಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು. ಹಿಂದೊಮ್ಮೆ ಯೇಸು ಮರಿಯಳಿಂದ ಏಳು ದೆವ್ವಗಳನ್ನು ಬಿಡಿಸಿದ್ದನು.
ಮಾರ್ಕನು 16 : 10 (ERVKN)
ಮರಿಯಳು ಹೋಗಿ ಆತನ ಶಿಷ್ಯರಿಗೆ ತಿಳಿಸಿದಳು. ಅವರಾದರೋ ಇನ್ನೂ ಶೋಕಭರಿತರಾಗಿ ಅಳುತ್ತಿದ್ದರು.
ಮಾರ್ಕನು 16 : 11 (ERVKN)
ಯೇಸು ಬದುಕಿರುವುದಾಗಿಯೂ ತಾನು ಆತನನ್ನು ನೋಡಿದ್ದಾಗಿಯೂ ಮರಿಯಳು ತಿಳಿಸಿದಾಗ ಶಿಷ್ಯರು ಅವಳನ್ನು ನಂಬಲಿಲ್ಲ. [PE][PS]
ಮಾರ್ಕನು 16 : 12 (ERVKN)
ನಂತರ, ಇಬ್ಬರು ಶಿಷ್ಯರು ಹಳ್ಳಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ, ಯೇಸು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.
ಮಾರ್ಕನು 16 : 13 (ERVKN)
ಈ ಶಿಷ್ಯರು ಇತರ ಶಿಷ್ಯರ ಬಳಿಗೆ ಹಿಂತಿರುಗಿ, ಈ ವಿಷಯವನ್ನು ತಿಳಿಸಿದರು. ಆದರೆ ಆ ಶಿಷ್ಯರು ಅವರನ್ನು ನಂಬಲಿಲ್ಲ. (ಮತ್ತಾಯ 28:16-20; ಲೂಕ 24:36-49; ಯೋಹಾನ 20:19-23; ಅಪೊ. ಕಾರ್ಯ. 1:6-8) [PE][PS]
ಮಾರ್ಕನು 16 : 14 (ERVKN)
{ಯೇಸು ಮತ್ತು ಅಪೊಸ್ತಲರ ಸಂಭಾಷಣೆ} [PS] ನಂತರ ಹನ್ನೊಂದು ಜನ ಶಿಷ್ಯರು ಊಟ ಮಾಡುತ್ತಿರುವಾಗ, ಯೇಸು ಅವರಿಗೆ ಕಾಣಿಸಿಕೊಂಡನು. ಶಿಷ್ಯರಲ್ಲಿ ಕೊಂಚ ನಂಬಿಕೆ ಇದ್ದುದರಿಂದ ಯೇಸು ಅವರನ್ನು ಖಂಡಿಸಿದನು. ಏಕೆಂದರೆ, ಯೇಸು ಸಾವಿನಿಂದ ಎದ್ದುಬಂದಿದ್ದಾನೆಂದು ದೃಢವಾಗಿ ಹೇಳಿದ ಮಾತನ್ನು ಅವರು ನಂಬಲಿಲ್ಲ. [PE][PS]
ಮಾರ್ಕನು 16 : 15 (ERVKN)
ಯೇಸು ಶಿಷ್ಯರಿಗೆ, “ಪ್ರಪಂಚದ ಎಲ್ಲಾ ಕಡೆಗೆ ಹೋಗಿರಿ. ಪ್ರತಿಯೊಬ್ಬನಿಗೂ ಸುವಾರ್ತೆಯನ್ನು ಹೇಳಿರಿ.
ಮಾರ್ಕನು 16 : 16 (ERVKN)
ನಂಬಿಕೆಯಿಟ್ಟು, ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದವನು ಅಪರಾಧಿ ಎಂಬ ನಿರ್ಣಯ ಹೊಂದುವನು.
ಮಾರ್ಕನು 16 : 17 (ERVKN)
ನಂಬುವವರಾದರೋ ಅದ್ಭುತಕಾರ್ಯಗಳನ್ನು ಮಾಡುವರು. ಅವರು ನನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುವರು. ತಾವೆಂದೂ ಕಲಿತಿಲ್ಲದ ಭಾಷೆಗಳಲ್ಲಿ ಮಾತನಾಡುವರು.
ಮಾರ್ಕನು 16 : 18 (ERVKN)
ಅವರು ಹಾವುಗಳನ್ನು ಹಿಡಿದುಕೊಂಡರೂ ಅವು ಅವರನ್ನು ಕಚ್ಚುವುದಿಲ್ಲ. ವಿಷಕುಡಿದರೂ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ. ಅವರು ಮುಟ್ಟಿದರೆ ರೋಗಿಗಳು ಗುಣಹೊಂದುವರು” ಎಂದು ಹೇಳಿದನು. (ಲೂಕ 24:50-53; ಅಪೊ. ಕಾರ್ಯ. 1:9-11) [PE][PS]
ಮಾರ್ಕನು 16 : 19 (ERVKN)
{ಯೇಸುವಿನ ಪರಲೋಕಾರೋಹಣ} [PS] ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
ಮಾರ್ಕನು 16 : 20 (ERVKN)
ಶಿಷ್ಯರು ಪ್ರಪಂಚದ ಎಲ್ಲಾ ಕಡೆಗೆ ಹೋಗಿ, ಜನರಿಗೆ ಸುವಾರ್ತೆಯನ್ನು ಸಾರಿದರು. ಪ್ರಭುವು ಅವರೊಂದಿಗೆ ಕಾರ್ಯಸಾಧಿಸುತ್ತಾ, ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸಿದನು. [PE]

1 2 3 4 5 6 7 8 9 10 11 12 13 14 15 16 17 18 19 20

BG:

Opacity:

Color:


Size:


Font: