ಮಾರ್ಕನು 3 : 1 (ERVKN)
{ಕೈಬತ್ತಿದವನಿಗೆ ಸ್ವಸ್ಥತೆ} (ಮತ್ತಾಯ 12:9-14; ಲೂಕ 6:6-11) [PS] ಮತ್ತೊಂದು ದಿನದಲ್ಲಿ, ಯೇಸು ಸಭಾಮಂದಿರದೊಳಕ್ಕೆ ಹೋದನು. ಅಲ್ಲಿ ಕೈಬತ್ತಿದ್ದ ಒಬ್ಬ ಮನುಷ್ಯನಿದ್ದನು.
ಮಾರ್ಕನು 3 : 2 (ERVKN)
ಅಲ್ಲಿದ್ದ ಕೆಲವು ಯೆಹೂದ್ಯರು, ಯೇಸುವನ್ನು ದೂಷಿಸುವುದಕ್ಕಾಗಿ ಆತನಲ್ಲಿ ಏನಾದರೂ ತಪ್ಪನ್ನು ಕಂಡುಹಿಡಿಯಲು ಎದುರು ನೋಡುತ್ತಿದ್ದರು. ಸಬ್ಬತ್‌ದಿನದಂದು ಆ ಮನುಷ್ಯನನ್ನು ಯೇಸು ಗುಣಪಡಿಸಬಹುದೆಂದು ಅವರು ಆತನ ಸಮೀಪದಲ್ಲಿಯೇ ಇದ್ದರು.
ಮಾರ್ಕನು 3 : 3 (ERVKN)
ಯೇಸು ಕೈಬತ್ತಿದ್ದ ಆ ಮನುಷ್ಯನಿಗೆ, “ಎದ್ದುನಿಲ್ಲು, ಜನರೆಲ್ಲರೂ ನಿನ್ನನ್ನು ನೋಡಲಿ” ಎಂದು ಹೇಳಿದನು. [PE][PS]
ಮಾರ್ಕನು 3 : 4 (ERVKN)
ನಂತರ ಯೇಸು ಜನರಿಗೆ, “ಸಬ್ಬತ್‌ದಿನದಂದು ಯಾವ ಕಾರ್ಯಗಳನ್ನು ಮಾಡಬೇಕು? ಒಳ್ಳೆಯ ಕಾರ್ಯವನ್ನೇ? ಕೆಟ್ಟಕಾರ್ಯವನ್ನೇ? ಒಂದು ಜೀವವನ್ನು ರಕ್ಷಿಸಬೇಕೇ? ಅಥವಾ ನಾಶಪಡಿಸಬೇಕೇ?” ಎಂದು ಕೇಳಿದನು. ಆಗ ಅವರು ಏನೂ ಉತ್ತರ ಕೊಡಲಾರದೆ ಮೌನವಾಗಿದ್ದರು. [PE][PS]
ಮಾರ್ಕನು 3 : 5 (ERVKN)
ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು.
ಮಾರ್ಕನು 3 : 6 (ERVKN)
ಆಗ ಫರಿಸಾಯರು ಹೊರಗೆ ಹೋಗಿ, ಹೆರೋದ್ಯರನ್ನು ಕೂಡಿಕೊಂಡು ಯೇಸುವನ್ನು ಯಾವ ರೀತಿ ಕೊಲ್ಲಬೇಕೆಂದು ಆಲೋಚಿಸಿದರು. [PS]
ಮಾರ್ಕನು 3 : 7 (ERVKN)
{ಯೇಸುವನ್ನು ಹಿಂಬಾಲಿಸಿದ ಜನಸಮೂಹ} [PS] ಯೇಸು ತನ್ನ ಶಿಷ್ಯರೊಂದಿಗೆ ಸರೋವರಕ್ಕೆ ಹೊರಟುಹೋದನು. ಗಲಿಲಾಯದ ಅನೇಕ ಜನರು ಆತನನ್ನು ಹಿಂಬಾಲಿಸಿದರು.
ಮಾರ್ಕನು 3 : 8 (ERVKN)
ಅನೇಕಾನೇಕ ಜನರು ಜುದೇಯದಿಂದ, ಜೆರುಸಲೇಮಿನಿಂದ, ಇದೂಮಾಯದಿಂದ, ಜೋರ್ಡನ್ ನದಿಯ ಆಚೆಗಿರುವ ಪ್ರದೇಶದಿಂದ ಮತ್ತು ಟೈರ್, ಸೀದೋನ್‌ಗಳ ಸುತ್ತಲಿನ ಪ್ರದೇಶಗಳಿಂದ ಬಂದರು. ಯೇಸುವು ಮಾಡುತ್ತಿದ್ದ ಕಾರ್ಯಗಳ ಬಗ್ಗೆ ಅವರು ಕೇಳಿ ಬಂದಿದ್ದರು. [PE][PS]
ಮಾರ್ಕನು 3 : 9 (ERVKN)
ಯೇಸು ಈ ಜನಸಮೂಹವನ್ನು ನೋಡಿ ಅವರು ತನ್ನ ಮೈಮೇಲೆ ಬಿದ್ದು ನೂಕಬಹುದೆಂದು ತನಗಾಗಿ ಒಂದು ಚಿಕ್ಕ ದೋಣಿಯನ್ನು ತಂದು ಅದನ್ನು ಸಿದ್ದಪಡಿಸುವಂತೆ ತನ್ನ ಶಿಷ್ಯರಿಗೆ ಹೇಳಿದನು.
ಮಾರ್ಕನು 3 : 10 (ERVKN)
ಯೇಸು ಅನೇಕ ಜನರನ್ನು ಗುಣಪಡಿಸಿದನು. ಆದ್ದರಿಂದ ಕಾಯಿಲೆಯಾಗಿದ್ದ ಜನರೆಲ್ಲರೂ ಆತನನ್ನು ಮುಟ್ಟುವುದಕ್ಕಾಗಿ ಆತನ ಮೇಲೆ ಬೀಳುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಕೆಲವು ಜನರು ಅಲ್ಲಿದ್ದರು.
ಮಾರ್ಕನು 3 : 11 (ERVKN)
ದೆವ್ವಗಳು ಯೇಸುವನ್ನು ನೋಡಿ, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ, “ನೀನು ದೇವಕುಮಾರ” ಎಂದು ಜೋರಾಗಿ ಕೂಗುತ್ತಿದ್ದವು.
ಮಾರ್ಕನು 3 : 12 (ERVKN)
ಆದರೆ ಯೇಸು ತಾನು ಯಾರೆಂಬುದನ್ನು ಜನರಿಗೆ ತಿಳಿಸಬಾರದೆಂದು ಅವುಗಳಿಗೆ ಖಂಡಿತವಾಗಿ ಆಜ್ಞಾಪಿಸಿದನು. [PE][PS]
ಮಾರ್ಕನು 3 : 13 (ERVKN)
{ಹನ್ನೆರಡು ಮಂದಿ ಅಪೊಸ್ತಲರ ಆಯ್ಕೆ} (ಮತ್ತಾಯ 10:1-4; ಲೂಕ 6:12-16) [PS] ನಂತರ ಯೇಸು ಒಂದು ಬೆಟ್ಟದ ಮೇಲಕ್ಕೆ ಹೋದನು. ಯೇಸು ಕೆಲವು ಜನರಿಗೆ ತನ್ನೊಂದಿಗೆ ಬರಲು ಹೇಳಿದನು. ಯೇಸು ಅಪೇಕ್ಷಿಸಿದ ಜನರು ಇವರೇ. ಈ ಜನರು ಯೇಸುವಿನೊಂದಿಗೆ ಮೇಲಕ್ಕೆ ಹೋದರು.
ಮಾರ್ಕನು 3 : 14 (ERVKN)
ಆತನು ಅವರಲ್ಲಿ ಹನ್ನೆರಡು ಮಂದಿಯನ್ನು ತನ್ನ ಅಪೊಸ್ತಲರನ್ನಾಗಿ ಆರಿಸಿಕೊಂಡನು. ಈ ಹನ್ನೆರಡು ಮಂದಿ ತನ್ನೊಂದಿಗಿರಬೇಕೆಂಬುದು ಮತ್ತು ಉಪದೇಶ ಮಾಡುವುದಕ್ಕಾಗಿ ಅವರನ್ನು ಬೇರೆ ಸ್ಥಳಗಳಿಗೆ ಕಳುಹಿಸಬೇಕೆಂಬುದು
ಮಾರ್ಕನು 3 : 15 (ERVKN)
ಅಲ್ಲದೆ ದೆವ್ವಗಳಿಂದ ಪೀಡಿತರಾಗಿರುವ ಜನರನ್ನು ಅವುಗಳಿಂದ ಬಿಡಿಸುವುದಕ್ಕೆ ಅವರಿಗೆ ಅಧಿಕಾರ ಕೊಡಬೇಕೆಂಬುದು ಆತನ ಅಪೇಕ್ಷೆಯಾಗಿತ್ತು.
ಮಾರ್ಕನು 3 : 16 (ERVKN)
ಯೇಸುವು ಈ ಹನ್ನೆರಡು ಮಂದಿಯನ್ನು ಆರಿಸಿಕೊಂಡನು: ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರನ್ನಿತ್ತನು),
ಮಾರ್ಕನು 3 : 17 (ERVKN)
ಜಿಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನ (ಯೇಸು ಅವರಿಗೆ ಬೊವನೆರ್ಗೆಸ್ ಎಂಬ ಹೆಸರನ್ನಿತ್ತನು. ಈ ಹೆಸರಿಗೆ “ಸಿಡಿಲಿನ ಜನರು” ಎಂದರ್ಥ.)
ಮಾರ್ಕನು 3 : 18 (ERVKN)
ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ದೇಶಾಭಿಮಾನಿಯಾದ ಸೀಮೋನ
ಮಾರ್ಕನು 3 : 19 (ERVKN)
ಮತ್ತು ಇಸ್ಕರಿಯೋತ ಯೂದ. ಯೇಸುವನ್ನು ಆತನ ವೈರಿಗಳಿಗೆ ಒಪ್ಪಿಸಿದವನೇ ಯೂದ. [PE][PS]
ಮಾರ್ಕನು 3 : 20 (ERVKN)
{ಯೇಸುವಿಗೆ ದೆವ್ವಹಿಡಿದಿದೆ ಎಂಬ ಆರೋಪ} (ಮತ್ತಾಯ 12:22-32; ಲೂಕ 11:14-23; 12:10) [PS] ನಂತರ ಯೇಸು ಮನೆಗೆ ಹೋದನು. ಮತ್ತೆ ಅನೇಕ ಜನರು ಅಲ್ಲಿಗೆ ಸೇರಿಬಂದರು. ಆದ್ದರಿಂದ ಯೇಸು ಮತ್ತು ಅವನ ಶಿಷ್ಯರಿಗೆ ಊಟಮಾಡಲೂ ಸಾಧ್ಯವಾಗಲಿಲ್ಲ.
ಮಾರ್ಕನು 3 : 21 (ERVKN)
ಯೇಸುವಿನ ಕುಟುಂಬದವರಿಗೆ ಈ ವಿಷಯಗಳೆಲ್ಲ ತಿಳಿದವು. ಯೇಸುವಿಗೆ ಹುಚ್ಚು ಹಿಡಿದಿದೆಯೆಂದು ಕೆಲವರು ಹೇಳಿದ್ದರಿಂದ ಆತನ ಕುಟುಂಬದವರು ಆತನನ್ನು ಕರೆದೊಯ್ಯಲು ಅಲ್ಲಿಗೆ ಬಂದರು. [PE][PS]
ಮಾರ್ಕನು 3 : 22 (ERVKN)
ಜೆರುಸಲೇಮಿನ ಧರ್ಮೋಪದೇಶಕರು, “ಇವನೊಳಗೆ ದೆವ್ವಗಳ ಒಡೆಯನಾದ ಬೆಲ್ಜೆಬೂಲನು ವಾಸಿಸುತ್ತಿದ್ದಾನೆ. ದೆವ್ವಗಳಿಂದ ಪೀಡಿತರಾಗಿರುವವರನ್ನು ಇವನು ಬಿಡಿಸುವುದು ದೆವ್ವಗಳ ಒಡೆಯನ ಸಹಾಯದಿಂದಲೇ” ಎಂದು ಹೇಳಿದರು. [PE][PS]
ಮಾರ್ಕನು 3 : 23 (ERVKN)
ಆದ್ದರಿಂದ ಯೇಸು ಜನರನ್ನು ಒಟ್ಟಿಗೆ ಕರೆದು, ಅವರಿಗೆ ಸಾಮ್ಯಗಳ ಮೂಲಕ ಬೋಧಿಸಿ, “ಸೈತಾನನು ತನ್ನ ದೆವ್ವಗಳನ್ನು ಜನರಿಂದ ಬಲವಂತವಾಗಿ ಹೊರಡಿಸುವುದಿಲ್ಲ.
ಮಾರ್ಕನು 3 : 24 (ERVKN)
ತನ್ನ ವಿರುದ್ಧವಾಗಿ ತಾನೇ ಹೋರಾಡುವ ರಾಜ್ಯ ಉಳಿಯುವುದಿಲ್ಲ.
ಮಾರ್ಕನು 3 : 25 (ERVKN)
ಭೇದ ಹುಟ್ಟಿದ ಕುಟುಂಬ ಏಳಿಗೆ ಹೊಂದುವುದಿಲ್ಲ.
ಮಾರ್ಕನು 3 : 26 (ERVKN)
ಸೈತಾನನು ತನ್ನ ವಿರುದ್ಧವಾಗಿಯೂ ತನ್ನ ಜನರ ವಿರುದ್ಧವಾಗಿಯೂ ತಾನೇ ಹೋರಾಟ ಮಾಡಿದರೆ ಅವನು ಅಂತ್ಯಗೊಳ್ಳುತ್ತಾನೆ. [PE][PS]
ಮಾರ್ಕನು 3 : 27 (ERVKN)
“ಒಬ್ಬ ವ್ಯಕ್ತಿಯು ಬಲಾಢ್ಯನ ಮನೆಗೆ ಪ್ರವೇಶಿಸಿ ಅವನ ವಸ್ತುಗಳನ್ನು ಕದಿಯಲು ಇಚ್ಛಿಸಿದರೆ, ಮೊದಲು ಅವನು ಬಲಾಢ್ಯನನ್ನು ಕಟ್ಟಿಹಾಕಬೇಕು. ಆಗ ಅವನು ಬಲಾಢ್ಯನ ಮನೆಯಿಂದ ವಸ್ತುಗಳನ್ನು ಕದಿಯಲು ಸಾಧ್ಯವಾಗುವುದು. [PE][PS]
ಮಾರ್ಕನು 3 : 28 (ERVKN)
“ನಾನು ನಿಮಗೆ ಸತ್ಯವನ್ನು ಹೇಳುತ್ತಿದ್ದೇನೆ, ಜನರು ಮಾಡುವ ಎಲ್ಲಾ ಪಾಪಗಳಿಗೂ ದೇವದೂಷಣೆಗಳಿಗೂ ಕ್ಷಮೆ ದೊರೆಯಲು ಸಾಧ್ಯ.
ಮಾರ್ಕನು 3 : 29 (ERVKN)
ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆ ಇಲ್ಲವೇ ಇಲ್ಲ. ಅವರ ಪಾಪ ಶಾಶ್ವತವಾದದ್ದು” ಎಂದು ಹೇಳಿದನು. [PE][PS]
ಮಾರ್ಕನು 3 : 30 (ERVKN)
“ಇವನಿಗೆ ದೆವ್ವಹಿಡಿದಿದೆ” ಎಂದು ಧರ್ಮೋಪದೇಶಕರು ಆರೋಪಿಸಿದ್ದರಿಂದ ಯೇಸು ಹೀಗೆ ಹೇಳಬೇಕಾಯಿತು. [PE][PS]
ಮಾರ್ಕನು 3 : 31 (ERVKN)
{ಯೇಸುವಿನ ಶಿಷ್ಯರೇ ಆತನ ನಿಜ ಕುಟುಂಬದವರು} (ಮತ್ತಾಯ 12:46-50; ಲೂಕ 8:19-21) [PS] ನಂತರ ಯೇಸುವಿನ ತಾಯಿ ಮತ್ತು ಆತನ ಸಹೋದರರು ಅಲ್ಲಿಗೆ ಬಂದರು. ಅವರು ಹೊರಗೆ ನಿಂತುಕೊಂಡು ಯೇಸುವಿಗೆ ಬರಬೇಕೆಂದು ಒಬ್ಬನ ಮೂಲಕ ಹೇಳಿ ಕಳುಹಿಸಿದರು.
ಮಾರ್ಕನು 3 : 32 (ERVKN)
ಅನೇಕ ಜನರು ಯೇಸುವಿನ ಸುತ್ತಲೂ ಕುಳಿತಿದ್ದರು. ಅವನು ಯೇಸುವಿಗೆ, “ನಿನ್ನ ತಾಯಿ ಮತ್ತು ಸಹೋದರರು ನಿನಗಾಗಿ ಹೊರಗಡೆ ಕಾಯುತ್ತಿದ್ದಾರೆ” ಎಂದು ಹೇಳಿದನು. [PE][PS]
ಮಾರ್ಕನು 3 : 33 (ERVKN)
ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಕೇಳಿ
ಮಾರ್ಕನು 3 : 34 (ERVKN)
ತನ್ನ ಸುತ್ತಲೂ ಕುಳಿತಿದ್ದ ಜನರ ಕಡೆಗೆ ನೋಡಿ, “ಈ ಜನರೇ ನನ್ನ ತಾಯಿ ಮತ್ತು ನನ್ನ ಸಹೋದರರು!
ಮಾರ್ಕನು 3 : 35 (ERVKN)
ದೇವರ ಚಿತ್ತಕ್ಕನುಸಾರವಾಗಿ ನಡೆಯುವ ಜನರೇ ನನ್ನ ಸಹೋದರರು, ಸಹೋದರಿಯರು ಮತ್ತು ತಾಯಿ” ಎಂದು ಹೇಳಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35

BG:

Opacity:

Color:


Size:


Font: