ಮಾರ್ಕನು 5 : 1 (ERVKN)
{ದೆವ್ವದಿಂದ ಪೀಡಿತನಾಗಿದ್ದವನಿಗೆ ಬಿಡುಗಡೆ} (ಮತ್ತಾಯ 8:28-34; ಲೂಕ 8:26-39) [PS] ಯೇಸು ಮತ್ತು ಆತನ ಶಿಷ್ಯರು ಸರೋವರವನ್ನು ದಾಟಿ ಗೆರಸೇನರ ಪ್ರಾಂತ್ಯಕ್ಕೆ ಹೋದರು.
ಮಾರ್ಕನು 5 : 2 (ERVKN)
ಯೇಸು ದೋಣಿಯಿಂದ ಹೊರಕ್ಕೆ ಬಂದಾಗ, ಒಬ್ಬ ಮನುಷ್ಯನು ಸಮಾಧಿಯ ಗವಿಗಳಿಂದ ಆತನ ಬಳಿಗೆ ಬಂದನು. ಅವನಿಗೆ ದೆವ್ವಹಿಡಿದಿತ್ತು.
ಮಾರ್ಕನು 5 : 3 (ERVKN)
ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು. ಅವನನ್ನು ಕಟ್ಟಿಹಾಕಲು ಯಾರಿಗೂ ಸಾಧ್ಯವಿರಲಿಲ್ಲ. ಅವನನ್ನು ಸರಪಣಿಗಳಿಂದ ಕಟ್ಟಿದರೂ ಪ್ರಯೋಜನವಾಗುತ್ತಿರಲಿಲ್ಲ.
ಮಾರ್ಕನು 5 : 4 (ERVKN)
ಜನರು ಅನೇಕ ಸಾರಿ ಅವನ ಕೈ ಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದರು. ಆದರೆ ಅವನು ಅವುಗಳನ್ನೆಲ್ಲ ಕಿತ್ತೊಗೆದುಬಿಟ್ಟನು. ಅವನನ್ನು ಹತೋಟಿಗೆ ತರುವ ಬಲಿಷ್ಠನು ಅಲ್ಲಿ ಯಾರೂ ಇರಲಿಲ್ಲ.
ಮಾರ್ಕನು 5 : 5 (ERVKN)
ಅವನು ಹಗಲಿರುಳು ಸಮಾಧಿಯ ಗವಿಗಳ ಸುತ್ತಲು ಮತ್ತು ಬೆಟ್ಟಗಳ ಮೇಲೆ ನಡೆದಾಡುತ್ತಿದ್ದನು. ಅವನು ಕಿರುಚುತ್ತಾ ತನ್ನನ್ನು ಕಲ್ಲುಗಳಿಂದ ಜಜ್ಜಿಕೊಳ್ಳುತ್ತಿದ್ದನು. [PE][PS]
ಮಾರ್ಕನು 5 : 6 (ERVKN)
ಯೇಸು ಬಹಳ ದೂರದಲ್ಲಿದ್ದಾಗಲೇ, ಅವನು ಆತನನ್ನು ಕಂಡು, ಆತನ ಬಳಿಗೆ ಓಡಿಹೋಗಿ ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿದನು.
ಮಾರ್ಕನು 5 : 7 (ERVKN)
(7-8) ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು. [PE][PS]
ಮಾರ್ಕನು 5 : 8 (ERVKN)
ಮಾರ್ಕನು 5 : 9 (ERVKN)
ಆಗ ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದನು. [PE][PS] ಅವನು “ನನ್ನ ಹೆಸರು ದಂಡು, [*ದಂಡು ಅಂದರೆ 6,000 ಸೈನಿಕರುಳ್ಳ ಸೈನ್ಯದಳ.] ಏಕೆಂದರೆ ನನ್ನಲ್ಲಿ ಅನೇಕ ದೆವ್ವಗಳಿವೆ” ಎಂದು ಉತ್ತರಕೊಟ್ಟನು.
ಮಾರ್ಕನು 5 : 10 (ERVKN)
ಆ ಮನುಷ್ಯನ ಒಳಗಿದ್ದ ದೆವ್ವಗಳು ಆ ಪ್ರದೇಶದಿಂದ ತಮ್ಮನ್ನು ಹೊರಕ್ಕೆ ಕಳುಹಿಸದಂತೆ ಯೇಸುವಿನಲ್ಲಿ ಮತ್ತೆ ಮತ್ತೆ ಬೇಡಿಕೊಂಡವು. [PE][PS]
ಮಾರ್ಕನು 5 : 11 (ERVKN)
ಅಲ್ಲಿಗೆ ಹತ್ತಿರವಿದ್ದ ಬೆಟ್ಟದ ಮೇಲೆ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು.
ಮಾರ್ಕನು 5 : 12 (ERVKN)
ದೆವ್ವಗಳು ಯೇಸುವಿಗೆ, “ನಮ್ಮನ್ನು ಹಂದಿಗಳೊಳಗೆ ಕಳುಹಿಸಿಕೊಡು” ಎಂದು ಬೇಡಿಕೊಂಡವು.
ಮಾರ್ಕನು 5 : 13 (ERVKN)
ಯೇಸು ಅವುಗಳಿಗೆ ಅಪ್ಪಣೆ ಕೊಡಲು ಅವು ಅವನನ್ನು ಬಿಟ್ಟು, ಹಂದಿಗಳೊಳಗೆ ಹೊಕ್ಕವು. ಆಗ ಹಂದಿಗಳೆಲ್ಲಾ ಬೆಟ್ಟದಿಂದ ಇಳಿದು, ಸರೋವರದೊಳಕ್ಕೆ ಬಿದ್ದು ಮುಳುಗಿಹೋದವು. ಆ ಹಿಂಡಿನಲ್ಲಿ ಸುಮಾರು ಎರಡು ಸಾವಿರ ಹಂದಿಗಳಿದ್ದವು. [PE][PS]
ಮಾರ್ಕನು 5 : 14 (ERVKN)
ಹಂದಿಗಳನ್ನು ಕಾಯುತ್ತಿದ್ದ ಜನರು ಪಟ್ಟಣದೊಳಕ್ಕೆ ಮತ್ತು ತೋಟಗಳಿಗೆ ಓಡಿಹೋಗಿ ಜನರಿಗೆಲ್ಲ ತಿಳಿಸಿದರು.
ಮಾರ್ಕನು 5 : 15 (ERVKN)
ಆಗ ಜನರು ನಡೆದ ಸಂಗತಿಯನ್ನು ನೋಡಲು ಯೇಸುವಿನ ಬಳಿಗೆ ಬಂದರು. ಅನೇಕ ದೆವ್ವಗಳಿಂದ ಪೀಡಿತನಾಗಿದ್ದ ಮನುಷ್ಯನು ಬಟ್ಟೆ ಹಾಕಿಕೊಂಡು ಅಲ್ಲಿ ಕುಳಿತಿರುವುದನ್ನು ಅವರು ಕಂಡರು. ಅವನು ಮತ್ತೆ ಸ್ವಸ್ಥ ಬುದ್ಧಿಯುಳ್ಳವನಾಗಿದ್ದನು. ಆ ಜನರು ಅವನನ್ನು ನೋಡಿ ಹೆದರಿದರು.
ಮಾರ್ಕನು 5 : 16 (ERVKN)
ಅಲ್ಲಿದ್ದ ಕೆಲವು ಜನರು, ಯೇಸು ಮಾಡಿದ ಈ ಕಾರ್ಯವನ್ನು ನೋಡಿದ್ದರು. ಈ ಜನರೇ ಉಳಿದ ಜನರಿಗೆಲ್ಲರಿಗೂ ನಡೆದ ಸಂಗತಿಯನ್ನು ಅಂದರೆ ದೆವ್ವದಿಂದ ಪೀಡಿತನಾಗಿದ್ದವನಿಗೂ ದೆವ್ವಗಳಿಗೂ ಮತ್ತು ಹಂದಿಗಳಿಗೂ ಸಂಭವಿಸಿದ್ದನ್ನು ತಿಳಿಸಿದರು.
ಮಾರ್ಕನು 5 : 17 (ERVKN)
ಆಗ ಜನರು ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು. [PE][PS]
ಮಾರ್ಕನು 5 : 18 (ERVKN)
ಯೇಸು ಅಲ್ಲಿಂದ ಹೋಗಲು ದೋಣಿ ಹತ್ತುವುದಕ್ಕೆ ಸಿದ್ಧನಾದಾಗ ದೆವ್ವಗಳಿಂದ ಬಿಡುಗಡೆ ಹೊಂದಿದ್ದ ಮನುಷ್ಯನು, “ನಾನೂ ನಿನ್ನ ಜೊತೆಯಲ್ಲಿ ಬರುತ್ತೇನೆ” ಎಂದು ಬೇಡಿಕೊಂಡನು.
ಮಾರ್ಕನು 5 : 19 (ERVKN)
ಆದರೆ ಯೇಸು ಅವನನ್ನು ಕರೆದುಕೊಂಡು ಹೋಗಲು ಒಪ್ಪದೆ, “ನಿನ್ನ ಮನೆಗೂ ನಿನ್ನ ಸ್ನೇಹಿತರ ಬಳಿಗೂ ಹೋಗು. ಪ್ರಭುವು ನಿನಗೆ ಮಾಡಿದ ಒಳ್ಳೆಯದನ್ನೂ ಆತನು ನಿನಗೆ ತೋರಿದ ಕರುಣೆಯನ್ನೂ ಅವರಿಗೆ ತಿಳಿಸು” ಎಂದು ಹೇಳಿದನು. [PE][PS]
ಮಾರ್ಕನು 5 : 20 (ERVKN)
ಆಗ ಅವನು ಅಲ್ಲಿಂದ ಹೊರಟುಹೋದನು ಮತ್ತು ಯೇಸು ತನಗೆ ಮಾಡಿದ ಉಪಕಾರವನ್ನು ಹತ್ತು ಪಟ್ಟಣಗಳ ಪ್ರದೇಶದ ಜನರಿಗೆ ತಿಳಿಸಿದನು. ಆ ಜನರೆಲ್ಲರೂ ಅತ್ಯಾಶ್ಚರ್ಯಪಟ್ಟರು. [PE][PS]
ಮಾರ್ಕನು 5 : 21 (ERVKN)
{ಸತ್ತು ಹೋಗಿದ್ದ ಹುಡುಗಿಯೊಬ್ಬಳಿಗೆ ಜೀವದಾನ ಕಾಯಿಲೆಯ ಸ್ತ್ರೀಗೆ ಆರೋಗ್ಯದಾನ} (ಮತ್ತಾಯ 9:18-26; ಲೂಕ 8:40-56) [PS] ಯೇಸು ದೋಣಿಯಲ್ಲಿ ಸರೋವರದ ಆಚೆ ದಡಕ್ಕೆ ಹೋದನು. ಸರೋವರದ ತೀರದಲ್ಲಿ ಅನೇಕ ಜನರು ಆತನ ಸುತ್ತಲೂ ಸೇರಿದರು.
ಮಾರ್ಕನು 5 : 22 (ERVKN)
ಸಭಾಮಂದಿರದ ಅಧಿಕಾರಿಯೊಬ್ಬನು ಆ ಸ್ಥಳಕ್ಕೆ ಬಂದನು. ಅವನ ಹೆಸರು ಯಾಯಿರ. ಅವನು ಯೇಸುವನ್ನು ಕಂಡು, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ,
ಮಾರ್ಕನು 5 : 23 (ERVKN)
“ನನ್ನ ಚಿಕ್ಕಮಗಳು ಸಾಯುತ್ತಿದ್ದಾಳೆ. ದಯವಿಟ್ಟು ನೀನು ಬಂದು, ನಿನ್ನ ಕೈಗಳಿಂದ ಅವಳನ್ನು ಸ್ಪರ್ಶಿಸು. ಆಗ ಅವಳು ಗುಣವಾಗಿ ಬದುಕಿಕೊಳ್ಳುತ್ತಾಳೆ” ಎಂದು ಬಹಳವಾಗಿ ಬೇಡಿಕೊಂಡನು. [PE][PS]
ಮಾರ್ಕನು 5 : 24 (ERVKN)
ಯೇಸು ಅಧಿಕಾರಿಯೊಂದಿಗೆ ಹೋದನು. ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಅವರು ಆತನ ಸುತ್ತಲೂ ನೂಕುತ್ತಾ ಹೋದರು. [PE][PS]
ಮಾರ್ಕನು 5 : 25 (ERVKN)
ಆ ಜನರ ನಡುವೆ ಒಬ್ಬ ಸ್ತ್ರೀ ಇದ್ದಳು. ಆಕೆಗೆ ಹನ್ನೆರಡು ವರ್ಷಗಳಿಂದ ರಕ್ತಸ್ರಾವವಾಗುತ್ತಿತ್ತು.
ಮಾರ್ಕನು 5 : 26 (ERVKN)
ಆಕೆಯು ಬಹಳ ಸಂಕಟಪಟ್ಟಿದ್ದಳು. ಅವಳಿಗೆ ಸಹಾಯ ಮಾಡಲು ಅನೇಕ ವೈದ್ಯರು ಪ್ರಯತ್ನಿಸಿದ್ದರು. ಆಕೆಯಲ್ಲಿದ್ದ ಹಣವೆಲ್ಲವೂ ವೆಚ್ಚವಾಯಿತು. ಆದರೆ ಆಕೆಗೆ ವಾಸಿಯಾಗಲಿಲ್ಲ. ಅವಳ ಕಾಯಿಲೆಯು ಇನ್ನೂ ಹೆಚ್ಚಾಗುತ್ತಿತ್ತು. [PE][PS]
ಮಾರ್ಕನು 5 : 27 (ERVKN)
ಆಕೆಗೆ ಯೇಸುವನ್ನು ಕುರಿತು ತಿಳಿದುಬಂತು. ಆದ್ದರಿಂದ ಆಕೆಯು ಜನರ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಮೇಲಂಗಿಯನ್ನು ಮುಟ್ಟಿದಳು.
ಮಾರ್ಕನು 5 : 28 (ERVKN)
ಆ ಸ್ತ್ರೀಯು, “ಆತನ ಉಡುಪನ್ನು ಮುಟ್ಟಿದರೆ ಸಾಕು ನಾನು ಗುಣಮುಖಳಾಗುತ್ತೇನೆ” ಎಂದುಕೊಂಡದ್ದರಿಂದ
ಮಾರ್ಕನು 5 : 29 (ERVKN)
ಮುಟ್ಟಿದ ಕೂಡಲೆ, ಆಕೆಯ ರಕ್ತಸ್ರಾವ ನಿಂತುಹೋಯಿತು. ತನಗೆ ಗುಣವಾಯಿತೆಂಬುದು ಆಕೆಗೆ ಅರಿವಾಯಿತು.
ಮಾರ್ಕನು 5 : 30 (ERVKN)
ತನ್ನಿಂದ ಶಕ್ತಿಯು ಹೊರಟದ್ದು ಸಹ ಯೇಸುವಿಗೆ ತಿಳಿಯಿತು. ಆತನು ಅಲ್ಲೇ ನಿಂತು ಹಿಂತಿರುಗಿ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದನು. [PE][PS]
ಮಾರ್ಕನು 5 : 31 (ERVKN)
ಶಿಷ್ಯರು ಯೇಸುವಿಗೆ, “ಅನೇಕ ಜನರು ನಿನ್ನ ಮೇಲೆ ಬೀಳುತ್ತಿದ್ದಾರೆ. ಹೀಗಿರಲು ‘ನನ್ನನ್ನು ಸ್ಪರ್ಶಿಸಿದವರು ಯಾರು?’ ಎಂದು ಕೇಳುತ್ತಿರುವೆಯಲ್ಲಾ” ಎಂದರು. [PE][PS]
ಮಾರ್ಕನು 5 : 32 (ERVKN)
ಆದರೆ ಯೇಸು ತನ್ನನ್ನು ಸ್ಪರ್ಶಿಸಿದವರು ಯಾರೆಂದು ಇನ್ನೂ ನೋಡುತ್ತಲೇ ಇದ್ದನು.
ಮಾರ್ಕನು 5 : 33 (ERVKN)
ತನಗೆ ಗುಣವಾಯಿತೆಂಬುದು ಆ ಸ್ತ್ರೀಗೆ ತಿಳಿದಿತ್ತು. ಆದ್ದರಿಂದ ಆಕೆ ಬಂದು, ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ಹೇಳಿದಳು.
ಮಾರ್ಕನು 5 : 34 (ERVKN)
ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯಿಂದಲೇ ನಿನಗೆ ವಾಸಿಯಾಯಿತು. ಸಮಾಧಾನದಿಂದ ಹೋಗು. ನಿನಗೆ ಇನ್ನು ಮೇಲೆ ಆ ಕಾಯಿಲೆಯ ಬಾಧೆ ಇರುವುದಿಲ್ಲ” ಎಂದು ಹೇಳಿದನು. [PE][PS]
ಮಾರ್ಕನು 5 : 35 (ERVKN)
ಯೇಸು ಅಲ್ಲಿ ಇನ್ನೂ ಮಾತನಾಡುತ್ತಿದ್ದನು. ಅಷ್ಟರಲ್ಲಿ ಕೆಲವು ಜನರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಯಿಂದ ಬಂದು ಯಾಯಿರನಿಗೆ, “ನಿನ್ನ ಮಗಳು ಸತ್ತುಹೋದಳು. ಈಗ ಬೋಧಕನಿಗೆ ತೊಂದರೆ ಕೊಡುವ ಅಗತ್ಯವಿಲ್ಲ” ಎಂದು ಹೇಳಿದರು. [PE][PS]
ಮಾರ್ಕನು 5 : 36 (ERVKN)
ಆದರೆ ಯೇಸು ಅವರ ಮಾತನ್ನು ಗಣನೆಗೆ ತಂದುಕೊಳ್ಳದೆ, ಸಭಾಮಂದಿರದ ಅಧಿಕಾರಿಗೆ, “ಹೆದರಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು. [PE][PS]
ಮಾರ್ಕನು 5 : 37 (ERVKN)
ಯೇಸು ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ತಮ್ಮನಾದ ಯೋಹಾನನನ್ನು ಮಾತ್ರ ತನ್ನ ಜೊತೆಯಲ್ಲಿ ಕರೆದೊಯ್ದನು.
ಮಾರ್ಕನು 5 : 38 (ERVKN)
ಯೇಸು ಮತ್ತು ಈ ಶಿಷ್ಯರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಗೆ ಹೋದರು. ಅಲ್ಲಿ ಅನೇಕ ಜನರು ಜೋರಾಗಿ ಅಳುತ್ತಿರುವುದನ್ನು ಯೇಸು ನೋಡಿದನು. ಅಲ್ಲಿ ಬಹಳ ಗದ್ದಲವಿತ್ತು.
ಮಾರ್ಕನು 5 : 39 (ERVKN)
ಯೇಸು ಮನೆಯನ್ನು ಪ್ರವೇಶಿಸಿ, ಆ ಜನರಿಗೆ, “ನೀವು ಅಳುತ್ತಿರುವುದೇಕೆ? ಇಷ್ಟೊಂದು ಗದ್ದಲ ಮಾಡುತ್ತಿರುವುದೇಕೆ? ಈ ಹುಡುಗಿ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಎಂದು ಹೇಳಿದನು.
ಮಾರ್ಕನು 5 : 40 (ERVKN)
ಆದರೆ ಆ ಜನರೆಲ್ಲರೂ ಯೇಸುವನ್ನು ಗೇಲಿ ಮಾಡಿದರು. [PE][PS] ಯೇಸು ಆ ಜನರೆಲ್ಲರನ್ನು ಹೊರಗೆ ಕಳುಹಿಸಿ, ಆ ಬಾಲಕಿಯ ತಂದೆತಾಯಿಗಳನ್ನು ಮತ್ತು ತನ್ನ ಮೂವರು ಶಿಷ್ಯರನ್ನು ಮಾತ್ರ ತನ್ನೊಂದಿಗೆ ಕರೆದುಕೊಂಡು ಆ ಬಾಲಕಿಯ ಕೊಠಡಿಯೊಳಕ್ಕೆ ಹೋದನು.
ಮಾರ್ಕನು 5 : 41 (ERVKN)
ಯೇಸು ಆ ಬಾಲಕಿಯ ಕೈ ಹಿಡಿದು, ಅವಳಿಗೆ, “ತಲಿಥಾ ಕೂಮ್!” ಎಂದು ಹೇಳಿದನು. (ಅಂದರೆ “ಚಿಕ್ಕ ಹುಡುಗಿಯೇ, ಎದ್ದೇಳು ಎಂದು ನಾನು ಹೇಳುತ್ತಿದ್ದೇನೆ” ಎಂದರ್ಥ.)
ಮಾರ್ಕನು 5 : 42 (ERVKN)
ಕೂಡಲೇ ಆ ಬಾಲಕಿ ಎದ್ದುನಿಂತು ನಡೆಯಲಾರಂಭಿಸಿದಳು. ಆ ಬಾಲಕಿಗೆ ಹನ್ನೆರಡು ವರ್ಷ ವಯಸ್ಸಾಗಿತ್ತು. ಅವಳ ತಂದೆತಾಯಿಗಳು ಮತ್ತು ಶಿಷ್ಯರು ಅತ್ಯಾಶ್ಚರ್ಯಗೊಂಡರು.
ಮಾರ್ಕನು 5 : 43 (ERVKN)
ಈ ವಿಷಯವನ್ನು ಯಾರಿಗೂ ಹೇಳಕೂಡದೆಂದು ಯೇಸು ಆಕೆಯ ತಂದೆತಾಯಿಗಳಿಗೆ ಖಂಡಿತವಾಗಿ ಹೇಳಿ, “ಆ ಬಾಲಕಿಗೆ ಊಟ ಮಾಡಿಸಿರಿ” ಎಂದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43

BG:

Opacity:

Color:


Size:


Font: