ಮಾರ್ಕನು 7 : 1 (ERVKN)
{ದೇವರ ಧರ್ಮಶಾಸ್ತ್ರ ಮತ್ತು ಜನರ ಸ್ವನಿಯಮ} (ಮತ್ತಾಯ 15:1-20) [PS] ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಿಂದ ಬಂದರು. ಅವರು ಯೇಸುವಿನ ಸುತ್ತಲೂ ಒಟ್ಟಿಗೆ ಸೇರಿದರು.
ಮಾರ್ಕನು 7 : 2 (ERVKN)
ಯೇಸುವಿನ ಶಿಷ್ಯರಲ್ಲಿ ಕೆಲವರು ಕೈಗಳನ್ನು ತೊಳೆಯದೆ [*ಕೈಗಳನ್ನು ತೊಳೆಯದೆ ಅಂದರೆ ಫರಿಸಾಯರು ಜನರಿಗೆ ತಿಳಿಸಿದ ರೀತಿಯಲ್ಲಿ ಅವರು ತೊಳೆಯಲಿಲ್ಲ ಎಂದರ್ಥ.] ಅಶುದ್ಧವಾದ ಕೈಗಳಿಂದ ಊಟ ಮಾಡುತ್ತಿರುವುದನ್ನು ಫರಿಸಾಯರು ಮತ್ತು ಧರ್ಮೋಪದೇಶಕರು ನೋಡಿದರು.
ಮಾರ್ಕನು 7 : 3 (ERVKN)
ಫರಿಸಾಯರು ಮತ್ತು ಇತರ ಯೆಹೂದ್ಯರೆಲ್ಲರೂ ಸಂಪ್ರದಾಯದಂತೆ ಕೈಗಳನ್ನು ತೊಳೆಯದೆ ಊಟಮಾಡುತ್ತಿರಲಿಲ್ಲ. ತಮ್ಮ ಪಿತೃಗಳಿಂದ ಬಂದ ಆಚಾರಗಳನ್ನು ಅನುಸರಿಸುವುದಕ್ಕಾಗಿ ಅವರು ಹೀಗೆ ಮಾಡುತ್ತಿದ್ದರು.
ಮಾರ್ಕನು 7 : 4 (ERVKN)
ಅವರು ಏನನ್ನಾದರೂ ಮಾರುಕಟ್ಟೆಯಲ್ಲಿ ಕೊಂಡುಕೊಂಡರೆ, ವಿಶೇಷವಾದ ರೀತಿಯಲ್ಲಿ ಅದನ್ನು ತೊಳೆಯದೆ ತಿನ್ನುತ್ತಿರಲಿಲ್ಲ. ತಮ್ಮ ಪಿತೃಗಳಿಂದ ಬಂದ ಇತರ ಆಚಾರಗಳನ್ನು ಅಂದರೆ ಲೋಟ, ಬಟ್ಟಲು, ತಪ್ಪಲೆ ಮತ್ತು ದೋಲಿಗಳನ್ನು ತೊಳೆಯುವಾಗಲೂ ಈ ನಿಯಮಗಳನ್ನು ಅನುಸರಿಸುತ್ತಿದ್ದರು. [PE][PS]
ಮಾರ್ಕನು 7 : 5 (ERVKN)
ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ನಮ್ಮ ಪಿತೃಗಳ ಸಂಪ್ರದಾಯವನ್ನು ನಿನ್ನ ಶಿಷ್ಯರು ಅನುಸರಿಸದೆ ಅಶುದ್ಧವಾದ ಕೈಗಳಿಂದ ಆಹಾರವನ್ನು ತಿನ್ನುವುದೇಕೆ?” ಎಂದು ಕೇಳಿದರು. [PE][PS]
ಮಾರ್ಕನು 7 : 6 (ERVKN)
ಯೇಸು, “ನೀವೆಲ್ಲ ಕಪಟಿಗಳು. ನಿಮ್ಮ ಬಗ್ಗೆ ಯೆಶಾಯನು ಸರಿಯಾಗಿ ಹೇಳಿದ್ದಾನೆ: ‘ನನ್ನನ್ನು ಗೌರವಿಸುವುದಾಗಿ ಈ ಜನರು ಹೇಳುತ್ತಾರೆ, [QBR2] ಆದರೆ ಇವರ ಹೃದಯಗಳು ನನ್ನಿಂದ ಬಹುದೂರವಾಗಿವೆ. [QBR]
ಮಾರ್ಕನು 7 : 7 (ERVKN)
ಇವರು ನನ್ನನ್ನು ಆರಾಧಿಸುವುದು ಕೇವಲ ವ್ಯರ್ಥ. [QBR2] ಏಕೆಂದರೆ ಮಾನವ ನಿಯಮಗಳನ್ನೇ ಇವರು ಬೋಧಿಸುತ್ತಾರೆ.’ ಯೆಶಾಯ 29:13]
ಮಾರ್ಕನು 7 : 8 (ERVKN)
ನೀವು ದೇವರ ಆಜ್ಞೆಗಳಿಗೆ ವಿಧೇಯರಾಗದೆ ಜನರ ಸಂಪ್ರದಾಯಗಳನ್ನು ಅನುಸರಿಸುತ್ತಿರುವಿರಿ” ಎಂದು ಹೇಳಿದನು. [PE][PS]
ಮಾರ್ಕನು 7 : 9 (ERVKN)
ನಂತರ ಯೇಸು ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಅನುಸರಿಸುವುದಕ್ಕಾಗಿ ದೇವರ ಆಜ್ಞೆಗಳನ್ನು ತಿರಸ್ಕರಿಸುವುದರಲ್ಲಿ ನಿಪುಣರಾಗಿದ್ದೀರಿ!
ಮಾರ್ಕನು 7 : 10 (ERVKN)
‘ನಿಮ್ಮ ತಂದೆತಾಯಿಗಳನ್ನು ಗೌರವಿಸಿರಿ’ [✡ಉಲ್ಲೇಖನ: ವಿಮೋಚನ. 20:12; ಧರ್ಮೋಪದೇಶ. 5:16.] ಎಂತಲೂ ‘ಯಾವ ವ್ಯಕ್ತಿಯಾದರೂ ತನ್ನ ತಂದೆತಾಯಿಗಳಿಗೆ ಕೆಟ್ಟದ್ದನ್ನು ನುಡಿದರೆ ಅವನಿಗೆ ಮರಣದಂಡನೆ ಆಗಬೇಕು’ [✡ಉಲ್ಲೇಖನ: ವಿಮೋಚನ. 21:17.] ಎಂತಲೂ ಮೋಶೆಯು ಹೇಳಿದ್ದಾನೆ.
ಮಾರ್ಕನು 7 : 11 (ERVKN)
ಆದರೆ ನೀವು ಹೇಳುವುದೇನೆಂದರೆ, ಒಬ್ಬನು ತನ್ನ ತಂದೆತಾಯಿಗಳಿಗೆ, ‘ನಿಮ್ಮ ಸಹಾಯಕ್ಕಾಗಿ ನಾನು ಕೊಡತಕ್ಕದ್ದನ್ನೆಲ್ಲ ದೇವರಿಗೆ ಅರ್ಪಿಸಿದ್ದೇನೆ ಎಂದು ಹೇಳಬಹುದು’ ಎಂದು ಬೋಧಿಸಿ,
ಮಾರ್ಕನು 7 : 12 (ERVKN)
ತನ್ನ ತಂದೆತಾಯಿಗಳಿಗೆ ಸಹಾಯಮಾಡದಂತೆ ಅವನನ್ನು ತಡೆಗಟ್ಟುತ್ತೀರಿ.
ಮಾರ್ಕನು 7 : 13 (ERVKN)
ಹೀಗಿರಲು ದೇವರ ಆಜ್ಞೆಯನ್ನು ಅನುಸರಿಸುವುದಕ್ಕಿಂತಲೂ ನಿಮ್ಮ ಸಂಪ್ರದಾಯಗಳನ್ನು ಅನುಸರಿಸುವುದೇ ಬಹಳ ಮುಖ್ಯವೆಂದು ನೀವು ಬೋಧಿಸಿದಂತಾಯಿತು. ಇಂಥ ಅನೇಕ ಕಾರ್ಯಗಳನ್ನು ನೀವು ಮಾಡುತ್ತೀರಿ” ಎಂದು ಹೇಳಿದನು. [PE][PS]
ಮಾರ್ಕನು 7 : 14 (ERVKN)
ಯೇಸು ಜನರನ್ನು ಮತ್ತೆ ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಪ್ರತಿಯೊಬ್ಬರು ಕೇಳಿರಿ ಮತ್ತು ಅರ್ಥಮಾಡಿಕೊಳ್ಳಿರಿ.
ಮಾರ್ಕನು 7 : 15 (ERVKN)
ಒಬ್ಬ ವ್ಯಕ್ತಿಯ ಅಂತರಂಗದೊಳಕ್ಕೆ ಹೋಗಿ ಅವನನ್ನು ಅಶುದ್ಧನನ್ನಾಗಿ ಮಾಡುವಂಥದ್ದು ಯಾವುದೂ ಇಲ್ಲ. ಒಬ್ಬ ವ್ಯಕ್ತಿಯ ಒಳಗಿಂದ ಬಂದ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ” ಎಂದು ಹೇಳಿದನು.
ಮಾರ್ಕನು 7 : 16 (ERVKN)
[†ಕೆಲವು ಗ್ರೀಕ್ ಪ್ರತಿಗಳಲ್ಲಿ 16ನೇ ವಚನ ಸೇರಿಸಲಾಗಿದೆ: “ಯಾವನಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ.”] [PE][PS]
ಮಾರ್ಕನು 7 : 17 (ERVKN)
ನಂತರ ಯೇಸು ಜನರನ್ನು ಅಲ್ಲೇ ಬಿಟ್ಟು ಮನೆಯೊಳಕ್ಕೆ ಹೋದನು. ಶಿಷ್ಯರು ಈ ಕಥೆಯ ಬಗ್ಗೆ ಯೇಸುವನ್ನು ಕೇಳಿದರು.
ಮಾರ್ಕನು 7 : 18 (ERVKN)
ಯೇಸು, “ನಿಮಗೂ ಅರ್ಥವಾಗುವುದಿಲ್ಲವೇ? ಒಬ್ಬ ವ್ಯಕ್ತಿಯ ಒಳಗೆ ಹೋಗುವ ಯಾವ ಪದಾರ್ಥವೂ ಅವನನ್ನು ಅಶುದ್ಧನನ್ನಾಗಿ ಮಾಡುವುದಿಲ್ಲ ಎಂಬುದು ನಿಮಗೆ ತಿಳಿದೇ ಇದೆ.
ಮಾರ್ಕನು 7 : 19 (ERVKN)
ಆಹಾರವು ಒಬ್ಬ ಮನುಷ್ಯನ ಹೃದಯದೊಳಕ್ಕೆ ಹೋಗದೆ ಹೊಟ್ಟೆಯೊಳಕ್ಕೆ ಹೋಗುತ್ತದೆ. ಅನಂತರ ಅದು ಅಲ್ಲಿಂದ ಹೊರಬರುತ್ತದೆ” ಎಂದು ಹೇಳಿದನು. (ಹೀಗೆ ತಿನ್ನತಕ್ಕ ಯಾವ ಆಹಾರವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದನು.) [PE][PS]
ಮಾರ್ಕನು 7 : 20 (ERVKN)
ಇದಲ್ಲದೆ ಯೇಸು ಅವರಿಗೆ, “ಒಬ್ಬ ಮನುಷ್ಯನಿಂದ ಹೊರಬರುವ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ.
ಮಾರ್ಕನು 7 : 21 (ERVKN)
ಒಬ್ಬ ವ್ಯಕ್ತಿಯ ಅಂತರಂಗದಲ್ಲಿ ಈ ಕೆಟ್ಟ ಆಲೋಚನೆಗಳೆಲ್ಲವೂ ಆರಂಭವಾಗುತ್ತವೆ: ದುರಾಲೋಚನೆ, ಲೈಂಗಿಕಪಾಪ, ಕಳ್ಳತನ, ಕೊಲೆ,
ಮಾರ್ಕನು 7 : 22 (ERVKN)
ವ್ಯಭಿಚಾರ, ಹಣದಾಶೆ, ಕೆಡುಕುತನ, ಭಂಡತನ, ಅಸೂಯೆ, ಚಾಡಿಕೋರತನ, ಅಹಂಕಾರ ಮತ್ತು ಬುದ್ಧಿಗೇಡಿತನ.
ಮಾರ್ಕನು 7 : 23 (ERVKN)
ಈ ಕೆಟ್ಟ ವಿಷಯಗಳೆಲ್ಲಾ ಮನುಷ್ಯನ ಅಂತರಂಗದಿಂದ ಬಂದು ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ” ಎಂದು ಹೇಳಿದನು. [PE][PS]
ಮಾರ್ಕನು 7 : 24 (ERVKN)
{ಯೆಹೂದ್ಯಳಲ್ಲದ ಸ್ತ್ರೀಗೆ ಯೇಸುವಿನ ಸಹಾಯ} (ಮತ್ತಾಯ 15:21-28) [PS] ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. ಯೇಸು ಅಲ್ಲಿ ಒಂದು ಮನೆಯೊಳಕ್ಕೆ ಹೋದನು. ತಾನು ಅಲ್ಲಿರುವುದು ಅಲ್ಲಿಯ ಜನರಿಗೆ ತಿಳಿಯಬಾರದೆಂಬುದು ಆತನ ಅಪೇಕ್ಷೆಯಾಗಿತ್ತು. ಆದರೆ ಯೇಸುವಿಗೆ ಅಡಗಿಕೊಳ್ಳಲಿಕ್ಕಾಗಲಿಲ್ಲ.
ಮಾರ್ಕನು 7 : 25 (ERVKN)
ಯೇಸು ಅಲ್ಲಿರುವನೆಂಬುದು ಒಬ್ಬ ಸ್ತ್ರೀಗೆ ತಿಳಿಯಿತು. ಅವಳ ಕಿರಿಯ ಮಗಳಿಗೆ ದೆವ್ವ ಹಿಡಿದಿತ್ತು. ಆದ್ದರಿಂದ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು, ಆತನ ಪಾದಗಳ ಮುಂದೆ ಅಡ್ಡಬಿದ್ದು ನಮಸ್ಕರಿಸಿದಳು.
ಮಾರ್ಕನು 7 : 26 (ERVKN)
ಅವಳು ಸಿರಿಯ ಪ್ರದೇಶದ ಪೊಯಿನಿಕ್ಯದಲ್ಲಿ ಹುಟ್ಟಿದ್ದಳು ಮತ್ತು ಗ್ರೀಕಳಾಗಿದ್ದಳು. ಆ ಸ್ತ್ರೀಯು ತನ್ನ ಮಗಳಲ್ಲಿರುವ ದೆವ್ವವನ್ನು ಹೊರಗಟ್ಟಬೇಕೆಂದು ಯೇಸುವಿನಲ್ಲಿ ಬೇಡಿಕೊಂಡಳು. [PE][PS]
ಮಾರ್ಕನು 7 : 27 (ERVKN)
ಯೇಸು ಆ ಸ್ತ್ರೀಗೆ, “ಮಕ್ಕಳಿಗೆ ಕೊಡುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ. ತಮಗೆ ಬೇಕಾದುದನ್ನು ಮಕ್ಕಳು ಮೊದಲು ತಿನ್ನಲಿ” ಎಂದು ಹೇಳಿದನು. [PE][PS]
ಮಾರ್ಕನು 7 : 28 (ERVKN)
ಆ ಸ್ತ್ರೀಯು, “ಅದು ನಿಜ ಪ್ರಭು. ಆದರೆ ಮಕ್ಕಳು ತಿನ್ನದೆ ಬಿಟ್ಟ ಆಹಾರದ ಚೂರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನಬಹುದಲ್ಲವೇ?” ಎಂದು ಉತ್ತರಕೊಟ್ಟಳು. [PE][PS]
ಮಾರ್ಕನು 7 : 29 (ERVKN)
ಆಗ ಯೇಸು ಆ ಸ್ತ್ರೀಗೆ, “ನೀನು ಒಳ್ಳೆಯ ಉತ್ತರ ಕೊಟ್ಟೆ. ಹೋಗು, ನಿನ್ನ ಮಗಳನ್ನು ದೆವ್ವವು ಬಿಟ್ಟುಹೋಗಿದೆ” ಎಂದು ಹೇಳಿದನು. [PE][PS]
ಮಾರ್ಕನು 7 : 30 (ERVKN)
ಆ ಸ್ತ್ರೀಯು ಮನೆಗೆ ಹೋದಾಗ ತನ್ನ ಮಗಳು ಹಾಸಿಗೆಯಲ್ಲಿ ಮಲಗಿರುವುದನ್ನು ಕಂಡಳು. ದೆವ್ವವು ಅವಳನ್ನು ಬಿಟ್ಟುಹೋಗಿತ್ತು. [PS]
ಮಾರ್ಕನು 7 : 31 (ERVKN)
{ಕಿವುಡನಿಗೆ ಸ್ವಸ್ಥತೆ} [PS] ನಂತರ ಯೇಸು ಟೈರ್ ಪಟ್ಟಣದ ಆ ಪ್ರದೇಶವನ್ನು ಬಿಟ್ಟು ಸಿದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿ [‡ದೆಕಪೊಲಿ ಅಂದರೆ ಹತ್ತು ಊರುಗಳು.] ಪ್ರದೇಶವನ್ನು ಹಾದು ಗಲಿಲಾಯ ಸರೋವರಕ್ಕೆ ಹೋದನು.
ಮಾರ್ಕನು 7 : 32 (ERVKN)
ಆತನು ಅಲ್ಲಿದ್ದಾಗ, ಕೆಲವರು ಕಿವುಡನೂ ತೊದಲನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ಕರೆದುತಂದು ಅವನ ಮೇಲೆ ಕೈಯಿಟ್ಟು ಗುಣಪಡಿಸಬೇಕೆಂದು ಬೇಡಿಕೊಂಡರು. [PE][PS]
ಮಾರ್ಕನು 7 : 33 (ERVKN)
ಯೇಸು ಅವನನ್ನು ಜನರಿಂದ ಸ್ವಲ್ಪ ದೂರ ತನ್ನೊಂದಿಗೆ ಕರೆದೊಯ್ದು ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ, ಅವನ ನಾಲಿಗೆಯನ್ನು ಮುಟ್ಟಿದನು.
ಮಾರ್ಕನು 7 : 34 (ERVKN)
ಬಳಿಕ ಆಕಾಶದ ಕಡೆಗೆ ನೋಡಿ, ನಿಟ್ಟುಸಿರು ಬಿಟ್ಟು, “ಎಪ್ಫಥಾ” ಎಂದು ಹೇಳಿದನು. (ಎಪ್ಫಥಾ ಎಂದರೆ “ತೆರೆಯಲಿ”)
ಮಾರ್ಕನು 7 : 35 (ERVKN)
ಆಗ ಅವನ ಕಿವಿಗಳು ತೆರೆದವು. ನಾಲಿಗೆ ಸಡಿಲಗೊಂಡಿತು. ಅವನು ಸ್ಪಷ್ಟವಾಗಿ ಮಾತಾಡಿದನು. [PE][PS]
ಮಾರ್ಕನು 7 : 36 (ERVKN)
ಈ ಸಂಗತಿಯನ್ನು ತಿಳಿಸಕೂಡದೆಂದು ಯೇಸು ಜನರಿಗೆ ಆಜ್ಞಾಪಿಸಿದನು. ತನ್ನ ಬಗ್ಗೆ ಇತರ ಜನರಿಗೆ ತಿಳಿಸಕೂಡದಂತೆ ಯೇಸು ಯಾವಾಗಲೂ ಆಜ್ಞಾಪಿಸುತ್ತಿದ್ದನು. ಆದರೂ ಜನರು ಆತನ ಬಗ್ಗೆ ಇನ್ನೂ ಹೆಚ್ಚಾಗಿ ಹಬ್ಬಿಸಿದರು.
ಮಾರ್ಕನು 7 : 37 (ERVKN)
ಜನರು ನಿಜವಾಗಿಯೂ ಅತ್ಯಾಶ್ಚರ್ಯಗೊಂಡು, “ಯೇಸು ಎಲ್ಲವನ್ನೂ ಒಳ್ಳೆಯ ರೀತಿಯಲ್ಲಿ ಮಾಡುತ್ತಾನೆ. ಆತನು ಕಿವುಡರಿಗೆ ಕಿವಿ ಕೇಳಿಸುವಂತೆ ಮಾಡುತ್ತಾನೆ. ಮೂಕರು ಮಾತಾಡುವಂತೆ ಮಾಡುತ್ತಾನೆ” ಎಂದು ಹೇಳಿದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37

BG:

Opacity:

Color:


Size:


Font: