ಮಾರ್ಕನು 8 : 1 (ERVKN)
{ನಾಲ್ಕು ಸಾವಿರಕ್ಕಿಂತ ಹೆಚ್ಚು ಜನರಿಗೆ ಆಹಾರದಾನ} (ಮತ್ತಾಯ 15:32-39) [PS] ಇನ್ನೊಂದು ಸಮಯದಲ್ಲಿ ಯೇಸುವಿನ ಜೊತೆಯಲ್ಲಿ ಅನೇಕ ಜನರಿದ್ದರು. ಆ ಜನರ ಬಳಿ ಊಟಕ್ಕೆ ಏನೂ ಇರಲಿಲ್ಲ. ಆದ್ದರಿಂದ ಯೇಸು ತನ್ನ ಶಿಷ್ಯರನ್ನು ಕರೆದು,
ಮಾರ್ಕನು 8 : 2 (ERVKN)
“ನಾನು ಈ ಜನರಿಗಾಗಿ ಕನಿಕರಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಇವರ ಬಳಿ ಊಟಕ್ಕೆ ಏನೂ ಇಲ್ಲ.
ಮಾರ್ಕನು 8 : 3 (ERVKN)
ಇವರು ಏನನ್ನೂ ತಿನ್ನದೆ ಹಸಿವೆಯಲ್ಲಿಯೇ ಹೊರಟರೆ ದಾರಿಯಲ್ಲಿ ಬಳಲಿ ಹೋಗುವರು. ಈ ಜನರಲ್ಲಿ ಕೆಲವರು ಬಹಳ ದೂರದಿಂದ ಬಂದಿದ್ದಾರೆ” ಎಂದು ಹೇಳಿದನು. [PE][PS]
ಮಾರ್ಕನು 8 : 4 (ERVKN)
ಅದಕ್ಕೆ ಶಿಷ್ಯರು, “ಇಲ್ಲಿಗೆ ಯಾವ ಊರೂ ಸಮೀಪದಲ್ಲಿಲ್ಲ. ಈ ಜನರಿಗೆಲ್ಲಾ ಸಾಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿಂದ ತರಲು ಸಾದ್ಯ?” ಎಂದು ಉತ್ತರಿಸಿದರು. [PE][PS]
ಮಾರ್ಕನು 8 : 5 (ERVKN)
ಯೇಸು, “ನಿಮ್ಮ ಬಳಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದನು. [PE][PS] ಅದಕ್ಕೆ ಶಿಷ್ಯರು, “ನಮ್ಮ ಬಳಿ ಏಳು ರೊಟ್ಟಿಗಳಿವೆ” ಎಂದು ಉತ್ತರಿಸಿದರು. [PE][PS]
ಮಾರ್ಕನು 8 : 6 (ERVKN)
ಯೇಸು ಆ ಜನರಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಹೇಳಿದನು. ನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು, ದೇವರಿಗೆ ಸ್ತೋತ್ರಸಲ್ಲಿಸಿ ಅವುಗಳನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟು, ಅವುಗಳನ್ನು ಜನರಿಗೆ ಹಂಚಬೇಕೆಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು.
ಮಾರ್ಕನು 8 : 7 (ERVKN)
ಶಿಷ್ಯರ ಬಳಿ ಕೆಲವು ಸಣ್ಣ ಮೀನುಗಳೂ ಇದ್ದವು. ಯೇಸು ಆ ಮೀನುಗಳಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿ ಅವುಗಳನ್ನೂ ಜನರಿಗೆ ಕೊಡಬೇಕೆಂದು ಶಿಷ್ಯರಿಗೆ ಹೇಳಿದನು. [PE][PS]
ಮಾರ್ಕನು 8 : 8 (ERVKN)
ಜನರೆಲ್ಲರೂ ಊಟಮಾಡಿ ತೃಪ್ತರಾದರು. ನಂತರ ತಿನ್ನದೆ ಉಳಿದಿದ್ದ ಆಹಾರದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಏಳು ಬುಟ್ಟಿಗಳು ತುಂಬಿಹೋದವು.
ಮಾರ್ಕನು 8 : 9 (ERVKN)
ಅಲ್ಲಿ ಊಟ ಮಾಡಿದವರಲ್ಲಿ ಸುಮಾರು ನಾಲ್ಕು ಸಾವಿರ ಗಂಡಸರಿದ್ದರು. ಅವರು ಊಟಮಾಡಿದ ಮೇಲೆ, ಯೇಸು ಅವರನ್ನು ಕಳುಹಿಸಿಕೊಟ್ಟನು.
ಮಾರ್ಕನು 8 : 10 (ERVKN)
ಬಳಿಕ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ದಲ್ಮನೂಥ ಪ್ರದೇಶಕ್ಕೆ ಹೋದನು. (ಮತ್ತಾಯ 16:1-4; ಲೂಕ 11:16,29) [PE][PS]
ಮಾರ್ಕನು 8 : 11 (ERVKN)
{ಯೇಸುವನ್ನು ಪರೀಕ್ಷಿಸಲು ಫರಿಸಾಯರ ಪ್ರಯತ್ನ} [PS] ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನನ್ನು ಪರೀಕ್ಷಿಸಲು ಪ್ರಶ್ನೆಗಳನ್ನು ಕೇಳಿದರು. ಅವರು ಯೇಸುವಿಗೆ, “ನೀನು ದೇವರಿಂದ ಬಂದವನೆಂದು ತೋರಿಸಲು ಒಂದು ಸೂಚಕಕಾರ್ಯವನ್ನು ಮಾಡು” ಎಂದರು.
ಮಾರ್ಕನು 8 : 12 (ERVKN)
ಆಗ ಯೇಸು ನಿಟ್ಟುಸಿರುಬಿಟ್ಟು ಅವರಿಗೆ, “ನೀವು ಸೂಚಕಕಾರ್ಯವನ್ನು ನೋಡಬಯಸುವುದೇಕೆ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮಗೆ ಯಾವ ಸೂಚಕಕಾರ್ಯವನ್ನೂ ತೋರಿಸಲಾಗುವುದಿಲ್ಲ” ಎಂದು ಹೇಳಿದನು.
ಮಾರ್ಕನು 8 : 13 (ERVKN)
ನಂತರ ಯೇಸು ಫರಿಸಾಯರ ಬಳಿಯಿಂದ ಹೊರಟು ದೋಣಿಯಲ್ಲಿ ಸರೋವರದ ಆಚೆಯ ದಡಕ್ಕೆ ಹೋದನು. [PE][PS]
ಮಾರ್ಕನು 8 : 14 (ERVKN)
{ಯೆಹೂದ್ಯ ನಾಯಕರ ಬಗ್ಗೆ ಯೇಸು ನೀಡಿದ ಎಚ್ಚರಿಕೆ} (ಮತ್ತಾಯ 16:5-12) [PS] ಶಿಷ್ಯರು ದೋಣಿಯಲ್ಲಿ ಹೋಗುತ್ತಿದ್ದಾಗ ಅವರ ಬಳಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು. ಅವರು ಮರೆತು ಹೆಚ್ಚು ರೊಟ್ಟಿಗಳನ್ನು ತಂದಿರಲಿಲ್ಲ.
ಮಾರ್ಕನು 8 : 15 (ERVKN)
ಯೇಸು ಅವರಿಗೆ, “ಜಾಗರೂಕರಾಗಿರಿ! ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ಬಗ್ಗೆ ಎಚ್ಚರವಹಿಸಿರಿ” ಎಂದು ಎಚ್ಚರಿಸಿದನು. [PE][PS]
ಮಾರ್ಕನು 8 : 16 (ERVKN)
ಶಿಷ್ಯರು ಇದರ ಅರ್ಥವನ್ನು ಚರ್ಚಿಸಿ, “ನಮ್ಮ ಬಳಿ ರೊಟ್ಟಿ ಇಲ್ಲದೆ ಇರುವುದರಿಂದ ಆತನು ಹೀಗೆ ಹೇಳಿದನು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು. [PE][PS]
ಮಾರ್ಕನು 8 : 17 (ERVKN)
ಶಿಷ್ಯರು ಇದರ ಬಗ್ಗೆ ಮಾತಾಡುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ರೊಟ್ಟಿ ಇಲ್ಲವೆಂದು ನೀವು ಚರ್ಚಿಸುವುದೇಕೆ? ನಿಮಗಿನ್ನೂ ಕಾಣುವುದಿಲ್ಲವೇ? ನಿಮಗಿನ್ನೂ ಅರ್ಥವಾಗುವುದಿಲ್ಲವೇ? ನಿಮ್ಮ ಹೃದಯಗಳು ಇನ್ನೂ ಕಠಿಣವಾಗಿವೆಯೋ?
ಮಾರ್ಕನು 8 : 18 (ERVKN)
ನಿಮ್ಮ ಕಣ್ಣುಗಳು ಕುರುಡಾಗಿವೆಯೋ? ನಿಮ್ಮ ಕಿವಿಗಳು ಕಿವುಡಾಗಿವೆಯೋ? ಮೊದಲೊಮ್ಮೆ, ನಮ್ಮ ಬಳಿ ಸಾಕಷ್ಟು ರೊಟ್ಟಿಗಳಿಲ್ಲದಿದ್ದಾಗ, ನಾನು ಏನು ಮಾಡಿದೆನೆಂಬುದನ್ನು ಜ್ಞಾಪಿಸಿಕೊಳ್ಳಿ.
ಮಾರ್ಕನು 8 : 19 (ERVKN)
ನಾನು ಐದು ಸಾವಿರ ಜನರಿಗಾಗಿ ಐದು ರೊಟ್ಟಿಗಳನ್ನು ಮುರಿದು ನಿಮಗೆ ಕೊಟ್ಟೆ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಹೇಳಿದನು. [PE][PS] ಆ ಶಿಷ್ಯರು, “ನಾವು ಹನ್ನೆರಡು ಬುಟ್ಟಿಗಳಲ್ಲಿ ತುಂಬಿದೆವು” ಎಂದು ಉತ್ತರಿಸಿದರು. [PE][PS]
ಮಾರ್ಕನು 8 : 20 (ERVKN)
“ನಾನು ನಾಲ್ಕು ಸಾವಿರ ಜನರಿಗಾಗಿ ಏಳು ರೊಟ್ಟಿಗಳನ್ನು ಮುರಿದು ಕೊಟ್ಟದ್ದನ್ನು ಜ್ಞಾಪಿಸಿಕೊಳ್ಳಿ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಕೇಳಿದನು. [PE][PS] ಅದಕ್ಕೆ ಶಿಷ್ಯರು, “ನಾವು ಏಳು ಬುಟ್ಟಿಗಳಲ್ಲಿ ತುಂಬಿದೆವು” ಎಂದು ಉತ್ತರಿಸಿದರು. [PE][PS]
ಮಾರ್ಕನು 8 : 21 (ERVKN)
ಆಗ ಯೇಸು ಅವರಿಗೆ, “ನಾನು ಮಾಡಿದ ಈ ಕಾರ್ಯಗಳನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡಿದ್ದೀರಿ, ಆದರೆ ನೀವಿನ್ನೂ ಅರ್ಥಮಾಡಿಕೊಳ್ಳುವುದಿಲ್ಲವೇ?” ಎಂದು ಕೇಳಿದನು. [PS]
ಮಾರ್ಕನು 8 : 22 (ERVKN)
{ಬೆತ್ಸಾಯಿದದಲ್ಲಿ ಕುರುಡನಿಗೆ ದೃಷ್ಟಿದಾನ} [PS] ಯೇಸು ಮತ್ತು ಆತನ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವು ಜನರು ಯೇಸುವಿನ ಬಳಿಗೆ ಒಬ್ಬ ಕುರುಡನನ್ನು ತಂದು ಅವನನ್ನು ಮುಟ್ಟಬೇಕೆಂದು ಯೇಸುವನ್ನು ಬೇಡಿಕೊಂಡರು.
ಮಾರ್ಕನು 8 : 23 (ERVKN)
ಆಗ ಯೇಸು ಆ ಕುರುಡನ ಕೈ ಹಿಡಿದುಕೊಂಡು, ಅವನನ್ನು ಊರಿನಿಂದ ಹೊರಕ್ಕೆ ಕರೆದುಕೊಂಡು ಹೋದನು. ನಂತರ ಯೇಸು ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಈಗ ನಿನಗೆ ಕಾಣುತ್ತದೆಯೋ?” ಎಂದು ಕೇಳಿದನು. [PE][PS]
ಮಾರ್ಕನು 8 : 24 (ERVKN)
ಆ ಕುರುಡನು ತಲೆಯೆತ್ತಿ ನೋಡಿ, “ಹೌದು, ನನಗೆ ಜನರು ಕಾಣುತ್ತಾರೆ. ಅವರು ಮರಗಳಂತೆ ಕಂಡರೂ ನಡೆದಾಡುತ್ತಿದ್ದಾರೆ” ಎಂದು ಹೇಳಿದನು. [PE][PS]
ಮಾರ್ಕನು 8 : 25 (ERVKN)
ಯೇಸು ತನ್ನ ಕೈಗಳನ್ನು ಮತ್ತೆ ಕುರುಡನ ಕಣ್ಣುಗಳ ಮೇಲೆ ಇಟ್ಟನು. ಆಗ ಅವನು ತನ್ನ ಕಣ್ಣುಗಳನ್ನು ಅಗಲವಾಗಿ ತೆರೆದನು. ಅವನ ಕಣ್ಣುಗಳು ಗುಣಹೊಂದಿದ್ದವು. ಅವನಿಗೆ ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
ಮಾರ್ಕನು 8 : 26 (ERVKN)
ಯೇಸು ಅವನಿಗೆ, “ನೀನು ನೇರವಾಗಿ ಮನೆಗೆ ಹೋಗು, ಊರೊಳಗೆ ಹೋಗಬೇಡ” ಎಂದು ಹೇಳಿ ಕಳುಹಿಸಿದನು. [PE][PS]
ಮಾರ್ಕನು 8 : 27 (ERVKN)
{ಯೇಸುವೇ ಕ್ರಿಸ್ತನೆಂದು ಪೇತ್ರನ ಪ್ರಕಟನೆ} (ಮತ್ತಾಯ 16:13-20; ಲೂಕ 9:18-21) [PS] ಯೇಸು ಮತ್ತು ಆತನ ಶಿಷ್ಯರು ಫಿಲಿಪ್ಪನ ಸೆಜರೇಯ ಎಂಬ ಪಟ್ಟಣದ ಸಮೀಪದಲ್ಲಿರುವ ಊರುಗಳಿಗೆ ಹೋದರು. ಅವರು ಪ್ರಯಾಣ ಮಾಡುತ್ತಿರುವಾಗ, ಯೇಸು ತನ್ನ ಶಿಷ್ಯರನ್ನು, “ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು. [PE][PS]
ಮಾರ್ಕನು 8 : 28 (ERVKN)
ಅದಕ್ಕೆ ಶಿಷ್ಯರು, “ಕೆಲವರು ನಿನ್ನನ್ನು, ‘ಸ್ನಾನಿಕ ಯೋಹಾನ’ ಎಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ ಎಂದು ಹೇಳುತ್ತಾರೆ. ಇನ್ನು ಕೆಲವು ಜನರು ನಿನ್ನನ್ನು, ‘ಪ್ರವಾದಿಗಳಲ್ಲಿ ಒಬ್ಬನು’ ಎನ್ನುತ್ತಾರೆ” ಎಂದು ಉತ್ತರಿಸಿದರು. [PE][PS]
ಮಾರ್ಕನು 8 : 29 (ERVKN)
ಆಗ ಯೇಸು ಅವರಿಗೆ, “ನೀವು ನನ್ನನ್ನು ಯಾರೆಂದು ಹೇಳುತ್ತೀರಿ?” ಎಂದು ಕೇಳಿದನು. [PE][PS] ಕೂಡಲೇ ಪೇತ್ರನು, “ನೀನು ಬರಬೇಕಾದ ಕ್ರಿಸ್ತನು” ಎಂದು ಉತ್ತರಿಸಿದನು. [PE][PS]
ಮಾರ್ಕನು 8 : 30 (ERVKN)
ಯೇಸು ತನ್ನ ಶಿಷ್ಯರಿಗೆ, “ನಾನು ಯಾರೆಂಬುದನ್ನು ಯಾರಿಗೂ ಹೇಳಬೇಡಿ” ಎಂದು ಹೇಳಿದನು. [PE][PS]
ಮಾರ್ಕನು 8 : 31 (ERVKN)
{ಯೇಸು ತನ್ನ ಮರಣದ ಕುರಿತು ಮುಂತಿಳಿಸಿದ್ದು} (ಮತ್ತಾಯ 16:21-28; ಲೂಕ 9:22-27) [PS] ನಂತರ ಯೇಸು ತನ್ನ ಶಿಷ್ಯರಿಗೆ ಉಪದೇಶಿಸುತ್ತಾ “ಮನುಷ್ಯಕುಮಾರನು ಅನೇಕ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಿರಿಯ ಯೆಹೂದ್ಯನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಆತನನ್ನು ತಿರಸ್ಕರಿಸಿ ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬರುತ್ತಾನೆ” ಎಂದು ಹೇಳಿದನು.
ಮಾರ್ಕನು 8 : 32 (ERVKN)
ಮುಂದೆ ಸಂಭವಿಸುವದೆಲ್ಲವನ್ನು ಯೇಸು ಅವರಿಗೆ ಹೇಳಿದನು. ಆತನು ಯಾವುದನ್ನೂ ರಹಸ್ಯವಾಗಿ ಇಡಲಿಲ್ಲ. [PE][PS] ಪೇತ್ರನು ಯೇಸುವನ್ನು ಸ್ವಲ್ಪದೂರ ಕರೆದೊಯ್ದು, “ನೀನು ಹಾಗೆಲ್ಲಾ ಹೇಳಕೂಡದು” ಎಂದು ಪ್ರತಿಭಟಿಸಿದನು.
ಮಾರ್ಕನು 8 : 33 (ERVKN)
ಆದರೆ ಯೇಸು ತನ್ನ ಶಿಷ್ಯರ ಕಡೆಗೆ ನೋಡಿ, ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ” ಎಂದು ಗದರಿಸಿದನು. [PE][PS]
ಮಾರ್ಕನು 8 : 34 (ERVKN)
ನಂತರ ಯೇಸು ಜನರನ್ನು ತನ್ನ ಬಳಿಗೆ ಕರೆದನು. ಆತನ ಶಿಷ್ಯರೂ ಅಲ್ಲಿದ್ದರು. ಯೇಸು ಅವರಿಗೆ, “ಯಾವನಿಗಾದರೂ ನನ್ನನ್ನು ಅನುಸರಿಸಲು ಮನಸ್ಸಿದ್ದರೆ, ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಬೇಕು.
ಮಾರ್ಕನು 8 : 35 (ERVKN)
ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲು ಇಚ್ಛಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ಹಾಗೂ ಸುವಾರ್ತೆಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ತನ್ನ ಪ್ರಾಣವನ್ನು ನಿರಂತರವಾಗಿ ಕಾಪಾಡಿಕೊಳ್ಳುತ್ತಾನೆ.
ಮಾರ್ಕನು 8 : 36 (ERVKN)
ಒಬ್ಬನು ಪ್ರಪಂಚವನ್ನೆಲ್ಲಾ ಸಂಪಾದಿಸಿಕೊಂಡು ತನ್ನ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅದರಿಂದ ಅವನಿಗೆ ಪ್ರಯೋಜನವೇನು?
ಮಾರ್ಕನು 8 : 37 (ERVKN)
ಒಬ್ಬನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಸಾಧ್ಯವೇ?
ಮಾರ್ಕನು 8 : 38 (ERVKN)
ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯವರಲ್ಲಿ ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಂಡರೆ, ಮನುಷ್ಯಕುಮಾರನಾದ ನಾನು ನನ್ನ ತಂದೆಯ ಮಹಿಮೆಯೊಂದಿಗೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವ ಸಮಯದಲ್ಲಿ ಅವನ ಬಗ್ಗೆ ನಾಚಿಕೆಪಡುವೆನು” ಎಂದು ಹೇಳಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38

BG:

Opacity:

Color:


Size:


Font: