ಮತ್ತಾಯನು 14 : 1 (ERVKN)
ಯೇಸುವಿನ ಕುರಿತು ಹೆರೋದನ ಅಭಿಪ್ರಾಯ (ಮಾರ್ಕ 6:14-29; ಲೂಕ 9:7-9) ಆ ಕಾಲದಲ್ಲಿ ಹೆರೋದನು ಗಲಿಲಾಯದಲ್ಲಿ ಆಳುತ್ತಿದ್ದನು. ಜನರು ಯೇಸುವಿನ ಕುರಿತು ಹೇಳುತ್ತಿದ್ದ ಸಂಗತಿಗಳೆಲ್ಲ ಅವನಿಗೆ ತಿಳಿಯಿತು.
ಮತ್ತಾಯನು 14 : 2 (ERVKN)
ಆದ್ದರಿಂದ ಹೆರೋದನು ತನ್ನ ಸೇವಕರಿಗೆ, “ನಿಜವಾಗಿಯೂ ಯೇಸುವೇ ಸ್ನಾನಿಕ ಯೋಹಾನನು. ಅವನು ಮತ್ತೆ ಜೀವಂತವಾಗಿ ಬಂದಿದ್ದಾನೆ. ಆದಕಾರಣವೇ ಅವನು ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದನು.
ಮತ್ತಾಯನು 14 : 3 (ERVKN)
ಸ್ನಾನಿಕ ಯೋಹಾನನು ಕೊಲ್ಲಲ್ಪಟ್ಟ ರೀತಿ ಈ ಸಮಯಕ್ಕೆ ಮೊದಲೇ ಹೆರೋದ್ಯಳ ನಿಮಿತ್ತವಾಗಿ ಹೆರೋದನು ಯೋಹಾನನನ್ನು ಸರಪಣಿಗಳಿಂದ ಬಂಧಿಸಿ, ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಹೆಂಡತಿ.
ಮತ್ತಾಯನು 14 : 4 (ERVKN)
ಯೋಹಾನನು ಹೆರೋದನಿಗೆ, “ಹೆರೋದ್ಯಳನ್ನು ನೀನು ಇಟ್ಟುಕೊಂಡಿರುವುದು ಸರಿಯಲ್ಲ” ಎಂದು ಹೇಳುತ್ತಿದ್ದುದೇ ಈ ಸೆರೆವಾಸಕ್ಕೆ ಕಾರಣ.
ಮತ್ತಾಯನು 14 : 5 (ERVKN)
ಹೆರೋದನು ಯೋಹಾನನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟು ಕೊಲ್ಲಿಸಿರಲಿಲ್ಲ. ಜನರು ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರು.
ಮತ್ತಾಯನು 14 : 6 (ERVKN)
ಹೆರೋದನ ಹುಟ್ಟುಹಬ್ಬದ ದಿನದಂದು ಹೆರೋದ್ಯಳ ಮಗಳು ಹೆರೋದನ ಮತ್ತು ಅವನ ಅತಿಥಿಗಳ ಮುಂದೆ ನರ್ತಿಸಿದಳು. ಹೆರೋದನು ಅವಳನ್ನು ಬಹಳ ಮೆಚ್ಚಿಕೊಂಡನು.
ಮತ್ತಾಯನು 14 : 7 (ERVKN)
ಆದ್ದರಿಂದ ಅವನು, “ನಿನಗೆ ಏನು ಬೇಕಾದರೂ ನಾನು ಕೊಡುತ್ತೇನೆ” ಎಂದು ಅವಳಿಗೆ ವಾಗ್ದಾನ ಮಾಡಿದನು.
ಮತ್ತಾಯನು 14 : 8 (ERVKN)
ಏನು ಕೇಳಿಕೊಳ್ಳಬೇಕೆಂದು ಹೆರೋದ್ಯಳು ತನ್ನ ಮಗಳಿಗೆ ಹೇಳಿಕೊಟ್ಟಳು. ಆದ್ದರಿಂದ ಅವಳು ಹೆರೋದನಿಗೆ, “ಸ್ನಾನಿಕ ಯೋಹಾನನ ತಲೆಯನ್ನು ಇಲ್ಲಿಯೇ ಈ ತಟ್ಟೆಯ ಮೇಲೆಯೇ ನನಗೆ ಕೊಡು” ಎಂದು ಹೇಳಿದಳು.
ಮತ್ತಾಯನು 14 : 9 (ERVKN)
ರಾಜ ಹೆರೋದನು ಬಹಳವಾಗಿ ದುಃಖಪಟ್ಟನು. ಆದರೆ ಏನು ಕೇಳಿದರೂ ಕೊಡುತ್ತೇನೆಂದು ಅವನು ಅವಳಿಗೆ ವಾಗ್ದಾನ ಮಾಡಿದ್ದನು. ಹೆರೋದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದವರು ಸಹ ಆ ವಾಗ್ದಾನವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ಕೊಡುವುದಕ್ಕೆ ಹೆರೋದನು ಅಪ್ಪಣೆಕೊಟ್ಟನು.
ಮತ್ತಾಯನು 14 : 10 (ERVKN)
ಸೆರೆಮನೆಗೆ ಹೋಗಿ ಯೋಹಾನನ ತಲೆಯನ್ನು ಕತ್ತರಿಸಿಕೊಂಡು ಬರಲು ಅವನು ಸೈನಿಕರನ್ನು ಕಳುಹಿಸಿಕೊಟ್ಟನು.
ಮತ್ತಾಯನು 14 : 11 (ERVKN)
ಅವರು ಯೋಹಾನನ ತಲೆಯನ್ನು ತಟ್ಟೆಯ ಮೇಲೆ ತಂದು ಅವಳಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯಾದ ಹೆರೋದ್ಯಳ ಬಳಿಗೆ ತೆಗೆದುಕೊಂಡು ಹೋದಳು.
ಮತ್ತಾಯನು 14 : 12 (ERVKN)
ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ತೆಗೆದುಕೊಂಡು ಹೋಗಿ ಸಮಾಧಿ ಮಾಡಿದರು. ಬಳಿಕ ಅವರು ಯೇಸುವಿನ ಬಳಿಗೆ ಹೋಗಿ ಸಂಭವಿಸಿದ್ದನ್ನೆಲ್ಲ ತಿಳಿಸಿದರು.
ಮತ್ತಾಯನು 14 : 13 (ERVKN)
ಐದು ಸಾವಿರಕ್ಕಿಂತ ಹೆಚ್ಚು ಜನರಿಗೆ ಆಹಾರದಾನ (ಮಾರ್ಕ 6:30-44; ಲೂಕ 9:10-17; ಯೋಹಾನ 6:1-14) ಯೋಹಾನನಿಗೆ ಸಂಭವಿಸಿದ್ದನ್ನು ಕೇಳಿದಾಗ ಯೇಸು ದೋಣಿಹತ್ತಿ ನಿರ್ಜನವಾದ ಸ್ಥಳಕ್ಕೆ ಒಬ್ಬನೇ ಹೋದನು. ಆದರೆ ಈ ಸುದ್ದಿ ಜನರಿಗೆ ತಿಳಿಯಿತು. ಆದ್ದರಿಂದ ಅವರು ತಮ್ಮ ಊರುಗಳನ್ನು ಬಿಟ್ಟು ಕಾಲುನಡಿಗೆಯಲ್ಲೇ ಆತನಿದ್ದ ಸ್ಥಳಕ್ಕೆ ಹೋದರು.
ಮತ್ತಾಯನು 14 : 14 (ERVKN)
ಯೇಸು ಅಲ್ಲಿಗೆ ಬಂದಾಗ, ಜನರು ಗುಂಪುಗುಂಪಾಗಿ ನೆರೆದಿರುವುದನ್ನು ಕಂಡು ಅವರಿಗಾಗಿ ದುಃಖಪಟ್ಟು ಕಾಯಿಲೆಯವರನ್ನು ಗುಣಪಡಿಸಿದನು.
ಮತ್ತಾಯನು 14 : 15 (ERVKN)
ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಜನರು ವಾಸಿಸುವುದಿಲ್ಲ. ಈಗಾಗಲೇ ಸಮಯವಾಗಿದೆ. ಜನರು ತಮಗಾಗಿ ಆಹಾರವನ್ನು ಕೊಂಡುಕೊಳ್ಳಲು ಅವರನ್ನು ಊರುಗಳಿಗೆ ಕಳುಹಿಸಿಬಿಡು” ಎಂದು ಹೇಳಿದರು.
ಮತ್ತಾಯನು 14 : 16 (ERVKN)
ಯೇಸು, “ಜನರು ಹೋಗುವುದು ಬೇಡ. ನೀವೇ ಅವರಿಗೆ ಸ್ವಲ್ಪ ಊಟವನ್ನು ಕೊಡಿ” ಎಂದು ಹೇಳಿದನು.
ಮತ್ತಾಯನು 14 : 17 (ERVKN)
ಆಗ ಶಿಷ್ಯರು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳು ಮಾತ್ರ ಇವೆ” ಎಂದು ಉತ್ತರಕೊಟ್ಟರು.
ಮತ್ತಾಯನು 14 : 18 (ERVKN)
ಯೇಸು, “ಆ ರೊಟ್ಟಿ ಮತ್ತು ಮೀನುಗಳನ್ನು ನನ್ನ ಬಳಿಗೆ ತನ್ನಿರಿ” ಅಂದನು.
ಮತ್ತಾಯನು 14 : 19 (ERVKN)
ಬಳಿಕ ಆತನು ಜನರಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ರೊಟ್ಟಿಯನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರು ರೊಟ್ಟಿಯನ್ನು ಜನರಿಗೆ ಹಂಚಿದರು.
ಮತ್ತಾಯನು 14 : 20 (ERVKN)
ಜನರೆಲ್ಲರೂ ತಿಂದು ತೃಪ್ತರಾದರು. ಜನರು ತಿಂದು ಮುಗಿಸಿದ ನಂತರ, ತಿನ್ನಲಾರದೆ ಉಳಿಸಿದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.
ಮತ್ತಾಯನು 14 : 21 (ERVKN)
ಊಟ ಮಾಡಿದವರಲ್ಲಿ ಹೆಂಗಸರು ಮತ್ತು ಮಕ್ಕಳನ್ನು ಬಿಟ್ಟರೆ, ಗಂಡಸರೇ ಸುಮಾರು ಐದುಸಾವಿರ ಇದ್ದರು.
ಮತ್ತಾಯನು 14 : 22 (ERVKN)
ಸರೋವರದ ಮೇಲೆ ಯೇಸುವಿನ ಕಾಲುನಡಿಗೆ (ಮಾರ್ಕ 6:45-52; ಯೋಹಾನ 6:15-21) ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು.
ಮತ್ತಾಯನು 14 : 23 (ERVKN)
ಆತನು ಜನರಿಗೆ ಶುಭವನ್ನು ಕೋರಿ ಕಳುಹಿಸಿದ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ತಾನೊಬ್ಬನೇ ಬೆಟ್ಟದ ಮೇಲಕ್ಕೆ ಹೋದನು. ಆಗಲೇ ರಾತ್ರಿಯಾಗಿತ್ತು. ಅಲ್ಲಿ ಆತನೊಬ್ಬನೇ ಇದ್ದನು.
ಮತ್ತಾಯನು 14 : 24 (ERVKN)
ಅಷ್ಟರಲ್ಲಿ ದೋಣಿಯು ಸರೋವರದ ಮೇಲೆ ಬಹಳ ದೂರ ಹೋಗಿತ್ತು. ಎದುರುಗಾಳಿಯಿಂದ ಅಲೆಗಳ ಬಡಿತಕ್ಕೆ ಸಿಕ್ಕಿಹಾಕಿಕೊಂಡಿತ್ತು.
ಮತ್ತಾಯನು 14 : 25 (ERVKN)
ಆ ರಾತ್ರಿಯ ಕಡೇ ಜಾವದ ಸಮಯದಲ್ಲಿ ಆತನ ಶಿಷ್ಯರು ದೋಣಿಯಲ್ಲೇ ಇದ್ದರು. ಆತನು ಸರೋವರದ ನೀರಿನ ಮೇಲೆ ನಡೆಯುತ್ತಾ ಅವರ ಬಳಿಗೆ ಬರತೊಡಗಿದನು.
ಮತ್ತಾಯನು 14 : 26 (ERVKN)
ನೀರಿನ ಮೇಲೆ ನಡೆದುಕೊಂಡು ಬರುತ್ತಿದ್ದ ಆತನನ್ನು ಕಂಡ ಶಿಷ್ಯರು ಭೂತವೆಂದು ಭಾವಿಸಿ ಭಯದಿಂದ ಕೂಗಿಕೊಂಡರು.
ಮತ್ತಾಯನು 14 : 27 (ERVKN)
ಕೂಡಲೇ ಯೇಸು, “ಚಿಂತಿಸಬೇಡಿ! ನಾನೇ! ಭಯಪಡಬೇಡಿ” ಎಂದು ಅವರೊಂದಿಗೆ ಮಾತಾಡಿದನು.
ಮತ್ತಾಯನು 14 : 28 (ERVKN)
ಪೇತ್ರನು, “ಪ್ರಭುವೇ, ನಿಜವಾಗಿಯೂ ನೀನೇ ಆಗಿದ್ದರೆ, ನೀರಿನ ಮೇಲೆ ನಡೆದುಕೊಂಡು ನಿನ್ನ ಬಳಿಗೆ ಬರಲು ನನಗೆ ಆಜ್ಞಾಪಿಸು” ಎಂದನು.
ಮತ್ತಾಯನು 14 : 29 (ERVKN)
ಯೇಸು, “ಪೇತ್ರನೇ, ಬಾ” ಅಂದನು. ಕೂಡಲೆ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ನೀರಿನ ಮೇಲೆ ನಡೆದನು.
ಮತ್ತಾಯನು 14 : 30 (ERVKN)
ಆದರೆ ಅವನು ಗಾಳಿಯನ್ನು ಮತ್ತು ಅಲೆಗಳನ್ನು ನೋಡಿ ಭಯಪಟ್ಟದ್ದರಿಂದ ನೀರಿನಲ್ಲಿ ಮುಳುಗತೊಡಗಿ, “ಪ್ರಭುವೇ, ನನ್ನನ್ನು ರಕ್ಷಿಸು” ಎಂದು ಕೂಗಿಕೊಂಡನು.
ಮತ್ತಾಯನು 14 : 31 (ERVKN)
ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.
ಮತ್ತಾಯನು 14 : 32 (ERVKN)
ಪೇತ್ರನು ಮತ್ತು ಯೇಸು ದೋಣಿ ಹತ್ತಿದ ಮೇಲೆ ಗಾಳಿ ಶಾಂತವಾಯಿತು.
ಮತ್ತಾಯನು 14 : 33 (ERVKN)
ದೋಣಿಯಲ್ಲಿದ್ದ ಶಿಷ್ಯರು ಯೇಸುವನ್ನು ಆರಾಧಿಸಿ, “ನೀನು ನಿಜವಾಗಿಯೂ ದೇವರ ಮಗನು” ಎಂದು ಹೇಳಿದರು.
ಮತ್ತಾಯನು 14 : 34 (ERVKN)
ಅನೇಕ ರೋಗಿಗಳಿಗೆ ಯೇಸುವಿನಿಂದ ಸ್ವಸ್ಥತೆ (ಮಾರ್ಕ 6:53-56) ಅವರು ಸರೋವರವನ್ನು ದಾಟಿ ಗೆನೆಸರೇತ್ ದಡಕ್ಕೆ ಬಂದರು.
ಮತ್ತಾಯನು 14 : 35 (ERVKN)
ಅಲ್ಲಿದ್ದ ಜನರು ಯೇಸುವನ್ನು ನೋಡಿದರು. ಆತನು ಯಾರೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಅವರು ಸುತ್ತಮುತ್ತಲಿನ ಪ್ರದೇಶದ ಜನರಿಗೆ ಯೇಸು ಬಂದಿದ್ದಾನೆ ಎಂದು ತಿಳಿಸಿದರು. ಜನರು ರೋಗಗಳಿಂದ ಬೇನೆಗಳಿಂದ ನರಳುತ್ತಿದ್ದವರನ್ನೆಲ್ಲ ಆತನ ಬಳಿಗೆ ತಂದರು.
ಮತ್ತಾಯನು 14 : 36 (ERVKN)
ಆತನ ಮೇಲಂಗಿಯನ್ನಾದರೂ ಮುಟ್ಟಿ ಗುಣಹೊಂದಲು ಅವಕಾಶಕೊಡಬೇಕೆಂದು ಅವರು ಬೇಡಿಕೊಂಡರು. ಆತನ ಮೇಲಂಗಿಯನ್ನು ಮುಟ್ಟಿದ ಜನರೆಲ್ಲರೂ ಗುಣಹೊಂದಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36