ಮತ್ತಾಯನು 15 : 1 (ERVKN)
ದೇವರ ಆಜ್ಞೆ ಮತ್ತು ಮನುಷ್ಯರ ನಿಯಮ (ಮಾರ್ಕ 7:1-23) ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಿಂದ ಯೇಸುವಿನ ಬಳಿಗೆ ಬಂದು,
ಮತ್ತಾಯನು 15 : 2 (ERVKN)
“ನಮ್ಮ ಪೂರ್ವಿಕರಿಂದ ಬಂದ ಸಂಪ್ರದಾಯಗಳಿಗೆ ನಿನ್ನ ಶಿಷ್ಯರು ಏಕೆ ವಿಧೇಯರಾಗಿರುವುದಿಲ್ಲ? ನಿನ್ನ ಶಿಷ್ಯರು ಊಟ ಮಾಡುವುದಕ್ಕೆ ಮುಂಚೆ ಕೈ ತೊಳೆಯುವುದಿಲ್ಲವೇಕೆ?” ಎಂದು ಕೇಳಿದರು.
ಮತ್ತಾಯನು 15 : 3 (ERVKN)
ಯೇಸು, “ನಿಮ್ಮ ಸಂಪ್ರದಾಯಗಳನ್ನು ಅನುಸರಿಸಲು ದೇವರ ಆಜ್ಞೆಗೆ ಅವಿಧೇಯರಾಗುವುದೇಕೆ?
ಮತ್ತಾಯನು 15 : 4 (ERVKN)
‘ನಿಮ್ಮ ತಂದೆತಾಯಿಗಳಿಗೆ ಗೌರವ ನೀಡಿ’ ಉಲ್ಲೇಖನ: ವಿಮೋಚನ. 20:12; ಧರ್ಮೋಪದೇಶ. 5:16. ಎಂಬುದು ದೇವರ ಆಜ್ಞೆ. ‘ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೀನೈಸಿದರೆ ಅವನನ್ನು ಕೊಲ್ಲಬೇಕು’ ಉಲ್ಲೇಖನ: ವಿಮೋಚನ. 21:17. ಎಂಬುದೂ ದೇವರ ಆಜ್ಞೆ.
ಮತ್ತಾಯನು 15 : 5 (ERVKN)
ಆದರೆ ಒಬ್ಬ ವ್ಯಕ್ತಿಯು ತನ್ನ ತಂದೆಗಾಗಲಿ ತಾಯಿಗಾಗಲಿ ‘ನಿಮಗೆ ಸಹಾಯ ಮಾಡಲು ನನಗೆ ಸಾಧ್ಯವಿಲ್ಲ, ಏಕೆಂದರೆ ನನ್ನಲ್ಲಿರುವ ಪ್ರತಿಯೊಂದು ದೇವರಿಗೆ ಪ್ರತಿಷ್ಠಿತವಾಗಿದೆ’ ಎಂದು ಹೇಳಿದರೆ,
ಮತ್ತಾಯನು 15 : 6 (ERVKN)
ಅವನು ತನ್ನ ತಂದೆಯನ್ನು ಗೌರವಿಸಬೇಕಿಲ್ಲ ಎಂದು ನೀವು ಬೋಧಿಸುತ್ತೀರಿ. ಹೀಗಿರಲು ನಿಮ್ಮ ಸಂಪ್ರದಾಯವೇ ದೇವರ ಆಜ್ಞೆಯನ್ನು ತಳ್ಳಿಹಾಕಿದೆ.
ಮತ್ತಾಯನು 15 : 7 (ERVKN)
ನೀವು ಕಪಟಿಗಳು. ಯೆಶಾಯನು ನಿಮ್ಮನ್ನು ಕುರಿತು ಸರಿಯಾಗಿ ಹೇಳಿದ್ದಾನೆ. ಅದೇನೆಂದರೆ:
ಮತ್ತಾಯನು 15 : 8 (ERVKN)
‘ಇವರು ನನ್ನನ್ನು ಮಾತಿನಿಂದ ಗೌರವಿಸುತ್ತಾರೆ. ಇವರ ಮನಸ್ಸಾದರೋ ನನಗೆ ದೂರವಾಗಿದೆ.
ಮತ್ತಾಯನು 15 : 9 (ERVKN)
ಇವರು ನನ್ನನ್ನು ಆರಾಧಿಸುವುದೂ ನಿರರ್ಥಕ. ಇವರು ಮನುಷ್ಯರ ಕಟ್ಟಳೆಗಳನ್ನೇ ಉಪದೇಶಿಸುತ್ತಾರೆ.’ ” ಯೆಶಾಯ 29:13]
ಮತ್ತಾಯನು 15 : 10 (ERVKN)
ಯೇಸು ಜನರನ್ನು ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಆಲಿಸಿರಿ ಮತ್ತು ಅರ್ಥಮಾಡಿಕೊಳ್ಳಿರಿ.
ಮತ್ತಾಯನು 15 : 11 (ERVKN)
ಒಬ್ಬನು ಕಲುಷಿತನಾಗುವುದು ತನ್ನ ಬಾಯಿಂದ ತಿನ್ನುವ ಪದಾರ್ಥಗಳಿಂದಲ್ಲ. ಅವನ ಬಾಯಿಂದ ಬರುವ ಕೆಟ್ಟಮಾತುಗಳೇ ಅವನನ್ನು ಕಲುಷಿತಗೊಳಿಸುತ್ತವೆ” ಎಂದು ಹೇಳಿದನು.
ಮತ್ತಾಯನು 15 : 12 (ERVKN)
ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಹೇಳಿದ್ದನ್ನು ಕೇಳಿ ಫರಿಸಾಯರು ಬೇಸರಗೊಂಡದ್ದು ನಿನಗೆ ತಿಳಿಯಿತೋ?” ಎಂದು ಕೇಳಿದರು.
ಮತ್ತಾಯನು 15 : 13 (ERVKN)
ಯೇಸು, “ಪರಲೋಕದಲ್ಲಿರುವ ನನ್ನ ತಂದೆ ನೆಡದಿರುವ ಪ್ರತಿಯೊಂದು ಗಿಡವನ್ನು ಬೇರಿನೊಂದಿಗೆ ಕಿತ್ತುಹಾಕಲಾಗುವುದು.
ಮತ್ತಾಯನು 15 : 14 (ERVKN)
ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.
ಮತ್ತಾಯನು 15 : 15 (ERVKN)
ಆಗ ಪೇತ್ರನು, “ನೀನು ಜನರಿಗೆ ಮೊದಲು ಹೇಳಿದ್ದನ್ನು ನಮಗೆ ವಿವರಿಸು” ಎಂದನು.
ಮತ್ತಾಯನು 15 : 16 (ERVKN)
ಯೇಸು, “ನಿಮಗೆ ಇನ್ನೂ ಅರ್ಥವಾಗುವುದಿಲ್ಲವೇ?
ಮತ್ತಾಯನು 15 : 17 (ERVKN)
ಒಬ್ಬ ಮನುಷ್ಯನ ಬಾಯಿಂದ ಆಹಾರ ಹೊಟ್ಟೆಯೊಳಕ್ಕೆ ಹೋಗುತ್ತದೆ. ನಂತರ ಅದು ದೇಹದಿಂದ ಹೊರಗೆ ಹೋಗಿಬಿಡುತ್ತದೆ. ಇದು ನಿಮಗೆ ತಿಳಿದೇ ಇದೆ.
ಮತ್ತಾಯನು 15 : 18 (ERVKN)
ಆದರೆ ಒಬ್ಬ ಮನುಷ್ಯನ ಬಾಯಿಂದ ಹೊರಡುವ ಕೆಟ್ಟಮಾತುಗಳು ಅವನ ಆಲೋಚನೆಯಿಂದ ಉದ್ಭವಿಸಿ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ.
ಮತ್ತಾಯನು 15 : 19 (ERVKN)
ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟುಬರುತ್ತವೆ.
ಮತ್ತಾಯನು 15 : 20 (ERVKN)
ಇವು ಮನುಷ್ಯನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಆದರೆ ಊಟಕ್ಕೆ ಮೊದಲು ಕೈತೊಳೆಯದ ಮಾತ್ರಕ್ಕೆ ಮನುಷ್ಯನೇನೂ ಅಶುದ್ಧನಾಗುವುದಿಲ್ಲ” ಎಂದು ಹೇಳಿದನು.
ಮತ್ತಾಯನು 15 : 21 (ERVKN)
ಯೆಹೂದ್ಯಳಲ್ಲದ ಸ್ತ್ರೀಗೆ ಯೇಸು ಮಾಡಿದ ಸಹಾಯ (ಮಾರ್ಕ 7:24-30) ಯೇಸು ಆ ಸ್ಥಳವನ್ನು ಬಿಟ್ಟು, ಟೈರ್ ಮತ್ತು ಸೀದೋನ್‌ಗಳ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು.
ಮತ್ತಾಯನು 15 : 22 (ERVKN)
ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.
ಮತ್ತಾಯನು 15 : 23 (ERVKN)
ಆದರೆ ಯೇಸು ಆ ಸ್ತ್ರೀಗೆ ಉತ್ತರ ಕೊಡಲಿಲ್ಲ. ಆದ್ದರಿಂದ ಶಿಷ್ಯರು ಯೇಸುವಿನ ಬಳಿಗೆ ಬಂದು, “ಆ ಸ್ತ್ರೀಗೆ ಹೊರಟುಹೋಗುವುದಕ್ಕೆ ಹೇಳು. ಆಕೆಯು ಕೂಗಿಕೊಂಡು ನಮ್ಮ ಹಿಂದೆಯೇ ಬರುತ್ತಿದ್ದಾಳೆ” ಎಂದು ಕೇಳಿಕೊಂಡರು.
ಮತ್ತಾಯನು 15 : 24 (ERVKN)
ಯೇಸು, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಮಾತ್ರ ದೇವರು ನನ್ನನ್ನು ಕಳುಹಿಸಿದನು” ಎಂದನು.
ಮತ್ತಾಯನು 15 : 25 (ERVKN)
ಆಗ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನನಗೆ ಸಹಾಯ ಮಾಡು” ಎಂದು ಕೇಳಿದಳು.
ಮತ್ತಾಯನು 15 : 26 (ERVKN)
ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.
ಮತ್ತಾಯನು 15 : 27 (ERVKN)
ಆ ಸ್ತ್ರೀಯು, “ಹೌದು ಪ್ರಭುವೇ, ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ಆಹಾರದ ತುಂಡುಗಳನ್ನು ತಿನ್ನುತ್ತವೆಯಲ್ಲಾ” ಎಂದಳು.
ಮತ್ತಾಯನು 15 : 28 (ERVKN)
ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.
ಮತ್ತಾಯನು 15 : 29 (ERVKN)
ಯೇಸುವಿನಿಂದ ಅನೇಕರಿಗೆ ಸ್ವಸ್ಥತೆ ಆಗ ಯೇಸು ಆ ಸ್ಥಳವನ್ನು ಬಿಟ್ಟು ಗಲಿಲಾಯ ಸರೋವರದ ದಡಕ್ಕೆ ಹೋಗಿ ಒಂದು ಬೆಟ್ಟದ ಮೇಲೆ ಕುಳಿತುಕೊಂಡನು.
ಮತ್ತಾಯನು 15 : 30 (ERVKN)
ಜನರು ಗುಂಪುಗುಂಪಾಗಿ ಯೇಸುವಿನ ಬಳಿಗೆ ಬಂದರು. ಅವರು ಅನೇಕ ಬಗೆಯ ಕಾಯಿಲೆಯವರನ್ನು ಕರೆದುತಂದು, ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಅಲ್ಲಿ ಅಂಗವಿಕಲರು, ಕುರುಡರು, ಕುಂಟರು, ಕಿವುಡರು ಮತ್ತು ಇತರ ಅನೇಕ ಜನರಿದ್ದರು. ಆತನು ಇವರನ್ನೆಲ್ಲರನ್ನು ಗುಣಪಡಿಸಿದನು.
ಮತ್ತಾಯನು 15 : 31 (ERVKN)
ಮೂಕರು ಮತ್ತೆ ಮಾತಾಡುವುದನ್ನೂ ಕುಂಟರು ನಡೆದಾಡುವುದನ್ನೂ ಅಂಗವಿಕಲರು ಸ್ವಸ್ಥರಾದದ್ದನ್ನೂ ಕುರುಡರಿಗೆ ಮತ್ತೆ ದೃಷ್ಟಿ ಬಂದದ್ದನ್ನೂ ಕಂಡು ಜನರೆಲ್ಲರೂ ಅತ್ಶಾಶ್ಚರ್ಯಪಟ್ಟು ಇಸ್ರೇಲರ ದೇವರನ್ನು ಕೊಂಡಾಡಿದರು.
ಮತ್ತಾಯನು 15 : 32 (ERVKN)
ನಾಲ್ಕು ಸಾವಿರಕ್ಕಿಂತ ಹೆಚ್ಚು ಜನರಿಗೆ ಆಹಾರದಾನ (ಮಾರ್ಕ 8:1-10) ಯೇಸು ತನ್ನ ಶಿಷ್ಯರನ್ನು ಕರೆದು, “ನಾನು ಈ ಜನರಿಗಾಗಿ ದುಃಖಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಈಗ ಇವರಿಗೆ ಊಟಕ್ಕೆ ಏನೂ ಇಲ್ಲ. ಇವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಮನಸ್ಸಿಲ್ಲ. ಇವರು ಮನೆಗೆ ಹೋಗುತ್ತಿರುವಾಗ ಬಳಲಿಹೋಗಬಹುದು” ಎಂದು ಹೇಳಿದನು.
ಮತ್ತಾಯನು 15 : 33 (ERVKN)
ಶಿಷ್ಯರು ಯೇಸುವಿಗೆ, “ಈ ಜನರೆಲ್ಲರಿಗೂ ಊಟಕ್ಕೆ ಬೇಕಾಗುವಷ್ಟು ರೊಟ್ಟಿ ನಮಗೆ ಎಲ್ಲಿ ಸಿಕ್ಕುತ್ತದೆ? ಇಲ್ಲಿಗೆ ಯಾವ ಊರೂ ಸಮೀಪವಾಗಿಲ್ಲ” ಎಂದು ಹೇಳಿದರು.
ಮತ್ತಾಯನು 15 : 34 (ERVKN)
ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದನು. ಶಿಷ್ಯರು, “ನಮ್ಮಲ್ಲಿ ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳಿವೆ” ಎಂದರು.
ಮತ್ತಾಯನು 15 : 35 (ERVKN)
ಆಗ ಜನರಿಗೆ ನೆಲದ ಮೇಲೆ ಕುಳಿತುಕೊಳ್ಳುವುದಕ್ಕೆ ಆತನು ಆಜ್ಞಾಪಿಸಿ,
ಮತ್ತಾಯನು 15 : 36 (ERVKN)
ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಅವುಗಳನ್ನು ಜನರಿಗೆ ಹಂಚಿದರು.
ಮತ್ತಾಯನು 15 : 37 (ERVKN)
ಜನರೆಲ್ಲರೂ ತಿಂದು ತೃಪ್ತರಾದರು. ಬಳಿಕ ತಿನ್ನಲಾರದೆ ಉಳಿದುಹೋದ ಆಹಾರದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಏಳು ಬುಟ್ಟಿಗಳು ತುಂಬಿಹೋದವು.
ಮತ್ತಾಯನು 15 : 38 (ERVKN)
ಅಂದು ಊಟ ಮಾಡಿದ್ದವರಲ್ಲಿ ಗಂಡಸರೇ ಸುಮಾರು ನಾಲ್ಕುಸಾವಿರ ಮಂದಿಯಿದ್ದರು. ಇವರಲ್ಲದೆ ಹೆಂಗಸರು ಮತ್ತು ಮಕ್ಕಳು ಸಹ ಊಟಮಾಡಿದರು.
ಮತ್ತಾಯನು 15 : 39 (ERVKN)
ಬಳಿಕ ಯೇಸು ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಅವರಿಗೆ ಹೇಳಿ ಕಳುಹಿಸಿದನು. ಅನಂತರ ದೋಣಿಯನ್ನು ಹತ್ತಿ ಮಗದಾನ್ ಎಂಬ ಪ್ರಾಂತ್ಯಕ್ಕೆ ಹೋದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39