ಮತ್ತಾಯನು 19 : 1 (ERVKN)
ವಿವಾಹ ವಿಚ್ಛೇದನದ ಕುರಿತು ಯೇಸುವಿನ ಬೋಧನೆ (ಮಾರ್ಕ 10:1-12) ಯೇಸು ಈ ಸಂಗತಿಗಳನ್ನು ಹೇಳಿದ ಬಳಿಕ ಗಲಿಲಾಯದಿಂದ ಹೊರಟು ಜೋರ್ಡನ್ ನದಿಯ ಮತ್ತೊಂದು ತೀರದಲ್ಲಿದ್ದ ಜುದೇಯ ಪ್ರಾಂತ್ಯಕ್ಕೆ ಬಂದನು.
ಮತ್ತಾಯನು 19 : 2 (ERVKN)
ಯೇಸುವನ್ನು ಅನೇಕ ಜನರು ಹಿಂಬಾಲಿಸಿದರು. ಯೇಸು ಅಲ್ಲಿ ರೋಗಿಗಳನ್ನು ಗುಣಪಡಿಸಿದನು.
ಮತ್ತಾಯನು 19 : 3 (ERVKN)
ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು ಆತನನ್ನು ತಪ್ಪಿನಲ್ಲಿ ಸಿಕ್ಕಿಸುವುದಕ್ಕಾಗಿ, “ತನ್ನದೇ ಆದ ಯಾವ ಕಾರಣಕ್ಕಾಗಲಿ ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಸರಿಯೇ?” ಎಂದು ಕೇಳಿದರು.
ಮತ್ತಾಯನು 19 : 4 (ERVKN)
ಯೇಸು, “ನೀವು ನಿಜವಾಗಿಯೂ ಇದನ್ನು ಪವಿತ್ರಗ್ರಂಥದಲ್ಲಿ ಓದಿದ್ದೀರಿ. ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಸೃಷ್ಟಿಸಿದನು. ✡ಉಲ್ಲೇಖನ: ಆದಿಕಾಂಡ 1:27; 5:2.
ಮತ್ತಾಯನು 19 : 5 (ERVKN)
ಆದಕಾರಣ ದೇವರು, ‘ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗುವರು.’ ✡ಉಲ್ಲೇಖನ: ಆದಿಕಾಂಡ 2:24. ಎಂದು ಹೇಳಿದನು.
ಮತ್ತಾಯನು 19 : 6 (ERVKN)
ಆದ್ದರಿಂದ ಇವರಿಬ್ಬರು ಇನ್ನು ಮೇಲೆ ಇಬ್ಬರಲ್ಲ, ಒಬ್ಬರೇ. ಅವರಿಬ್ಬರನ್ನು ದೇವರೇ ಒಟ್ಟಿಗೆ ಕೂಡಿಸಿದ್ದಾನೆ. ಆದ್ದರಿಂದ ಯಾವ ಮನುಷ್ಯನೂ ಅವರನ್ನು ಪ್ರತ್ಯೇಕಿಸಬಾರದು” ಎಂದು ಉತ್ತರಕೊಟ್ಟನು.
ಮತ್ತಾಯನು 19 : 7 (ERVKN)
ಫರಿಸಾಯರು, “ಹಾಗಾದರೆ ಒಬ್ಬ ಪುರುಷನು ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದೇಕೆ?” ಎಂದು ಕೇಳಿದರು.
ಮತ್ತಾಯನು 19 : 8 (ERVKN)
ಯೇಸು, “ನೀವು ದೇವರ ಬೋಧನೆಯನ್ನು ಸ್ವೀಕರಿಸದಿದ್ದ ಕಾರಣ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಮೋಶೆ ಅವಕಾಶಕೊಟ್ಟನು. ಆದರೆ ಹೆಂಡತಿಯನ್ನು ಬಿಟ್ಟುಬಿಡುವುದಕ್ಕೆ ಆರಂಭದಲ್ಲಿ ಅವಕಾಶ ಇರಲಿಲ್ಲ.
ಮತ್ತಾಯನು 19 : 9 (ERVKN)
ನಾನು ನಿಮಗೆ ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ. ಮೊದಲಿನ ಹೆಂಡತಿಯು ಬೇರೊಬ್ಬನೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವನು ಆಕೆಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆ ಆಗಬಹುದು” ಎಂದು ಉತ್ತರಿಸಿದನು.
ಮತ್ತಾಯನು 19 : 10 (ERVKN)
ಶಿಷ್ಯರು ಯೇಸುವಿಗೆ, “ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡಲು ಇದೊಂದೇ ಕಾರಣವಾಗಿದ್ದರೆ, ಮದುವೆ ಆಗದಿರುವುದೇ ಉತ್ತಮ” ಎಂದರು.
ಮತ್ತಾಯನು 19 : 11 (ERVKN)
ಅದಕ್ಕೆ ಯೇಸು, “ಮದುವೆಯ ವಿಷಯವಾದ ಈ ಸತ್ಯವನ್ನು ಪ್ರತಿಯೊಬ್ಬರೂ ಸ್ವೀಕರಿಸಲು ಸಾಧ್ಯವಿಲ್ಲ. ಇದನ್ನು ಸ್ವೀಕರಿಸಲು ದೇವರು ಯಾರನ್ನು ಸಮರ್ಥರನ್ನಾಗಿ ಮಾಡಿದ್ದಾನೋ ಅವರಿಗೆ ಮಾತ್ರ ಸಾಧ್ಯ.
ಮತ್ತಾಯನು 19 : 12 (ERVKN)
ಕೆಲವರು ಮದುವೆ ಆಗದಿರಲು ಬೇರೆಬೇರೆ ಕಾರಣಗಳಿವೆ. ಹುಟ್ಟಿದಂದಿನಿಂದಲೇ ಕೆಲವರು ನಪುಂಸಕರಾಗಿರುತ್ತಾರೆ. ಇನ್ನು ಕೆಲವರು ಬೇರೆಯವರಿಂದ ನಪುಂಸಕರಾಗಿ ಮಾಡಲ್ಪಡುತ್ತಾರೆ. ಬೇರೆ ಕೆಲವರು ಪರಲೋಕರಾಜ್ಯಕ್ಕೋಸ್ಕರ ಮದುವೆಯನ್ನು ತೊರೆದುಬಿಡುತ್ತಾರೆ. ಆದರೆ ಮದುವೆ ಆಗುವಂಥವನು ಮದುವೆ ವಿಷಯವಾದ ಈ ಬೋಧನೆಯನ್ನು ಸ್ವೀಕರಿಸಬೇಕು” ಎಂದು ಉತ್ತರಕೊಟ್ಟನು.
ಮತ್ತಾಯನು 19 : 13 (ERVKN)
ಯೇಸುವಿನಿಂದ ಮಕ್ಕಳಿಗೆ ಸ್ವಾಗತ (ಮಾರ್ಕ 10:13-16; ಲೂಕ 18:15-17) ಬಳಿಕ ಜನರು ಯೇಸುವಿನ ಬಳಿಗೆ ಬಂದು ತಮ್ಮ ಚಿಕ್ಕ ಮಕ್ಕಳನ್ನು ತಂದು ಅವರಿಗಾಗಿ ಪ್ರಾರ್ಥಿಸಬೇಕೆಂದು ಆತನನ್ನು ಬೇಡಿಕೊಂಡರು. ಇದನ್ನು ಕಂಡ ಶಿಷ್ಯರು ಚಿಕ್ಕ ಮಕ್ಕಳನ್ನು ಆತನ ಬಳಿಗೆ ತರಕೂಡದೆಂದು ಗದರಿಸಿದರು.
ಮತ್ತಾಯನು 19 : 14 (ERVKN)
ಆದರೆ ಯೇಸು, “ಚಿಕ್ಕ ಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿ ಮಾಡಬೇಡಿ. ಏಕೆಂದರೆ ಪರಲೋಕರಾಜ್ಯ ಈ ಚಿಕ್ಕ ಮಕ್ಕಳಂಥವರದೇ” ಎಂದನು.
ಮತ್ತಾಯನು 19 : 15 (ERVKN)
ನಂತರ ಯೇಸು ತನ್ನ ಕೈಗಳನ್ನು ಮಕ್ಕಳ ಮೇಲೆ ಇಟ್ಟು ಆಶೀರ್ವದಿಸಿದನು. ಬಳಿಕ ಅಲ್ಲಿಂದ ಹೊರಟುಹೋದನು.
ಮತ್ತಾಯನು 19 : 16 (ERVKN)
ಧನಿಕ ಯುವಕನ ಸಮಸ್ಯೆ (ಮಾರ್ಕ 10:17-31; ಲೂಕ 18:18-30) ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವ ಹೊಂದಲು ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.
ಮತ್ತಾಯನು 19 : 17 (ERVKN)
ಯೇಸು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ಕೇಳುವುದೇಕೆ? ದೇವರೊಬ್ಬನೇ ಒಳ್ಳೆಯವನು. ಆದರೆ ನೀನು ನಿತ್ಯಜೀವವನ್ನು ಹೊಂದಬೇಕೆಂದಿದ್ದರೆ ಈ ಆಜ್ಞೆಗಳಿಗೆ ವಿಧೇಯನಾಗು” ಎಂದು ಉತ್ತರಕೊಟ್ಟನು.
ಮತ್ತಾಯನು 19 : 18 (ERVKN)
ಆ ಮನುಷ್ಯನು, “ಯಾವ ಆಜ್ಞೆಗಳು?” ಎಂದು ಕೇಳಿದನು. ಯೇಸು “ಕೊಲೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು.
ಮತ್ತಾಯನು 19 : 19 (ERVKN)
ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು ನಿನ್ನನ್ನು ನೀನು ಪ್ರೀತಿಸುವಂತೆ ಬೇರೆಯವರನ್ನೂ ಪ್ರೀತಿಸಬೇಕು” ✡ಉಲ್ಲೇಖನ: ವಿಮೋಚನ. 20:12-16; ಧರ್ಮೋಪದೇಶ. 5:16-20; ಯಾಜಕ. 19:18. ಎಂದು ಉತ್ತರಕೊಟ್ಟನು.
ಮತ್ತಾಯನು 19 : 20 (ERVKN)
ಆ ಯುವಕನು, “ನಾನು ಇವೆಲ್ಲವುಗಳಿಗೆ ವಿಧೇಯನಾಗಿದ್ದೇನೆ. ನಾನು ಬೇರೆ ಏನಾದರೂ ಮಾಡಬೇಕೇ?” ಎಂದು ಕೇಳಿದನು.
ಮತ್ತಾಯನು 19 : 21 (ERVKN)
ಯೇಸು, “ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ಆಗ ನಿನಗೆ ಪರಲೋಕದಲ್ಲಿ ದೊಡ್ಡ ಭಂಡಾರ ಇರುವುದು. ನಂತರ ಬಂದು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.
ಮತ್ತಾಯನು 19 : 22 (ERVKN)
ಇದನ್ನು ಕೇಳಿದಾಗ ಅವನು ಬಹಳ ದುಃಖದಿಂದ ಹೊರಟುಹೋದನು. ಏಕೆಂದರೆ ಅವನು ದೊಡ್ಡ ಐಶ್ವರ್ಯವಂತನಾಗಿದ್ದನು.
ಮತ್ತಾಯನು 19 : 23 (ERVKN)
ಆಗ ಯೇಸು ತನ್ನ ಶಿಷ್ಯರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಐಶ್ವರ್ಯವಂತನು ಪರಲೋಕರಾಜ್ಯಕ್ಕೆ ಪ್ರವೇಶಿಸುವುದು ಬಹಳ ಕಷ್ಟಕರ.
ಮತ್ತಾಯನು 19 : 24 (ERVKN)
ಹೌದು, ಐಶ್ವರ್ಯವಂತನು ದೇವರ ರಾಜ್ಯ ಪ್ರವೇಶಿಸುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂದು ನಾನು ನಿಮಗೆ ಹೇಳುತ್ತೇನೆ” ಎಂದನು.
ಮತ್ತಾಯನು 19 : 25 (ERVKN)
ಶಿಷ್ಯರು ಇದನ್ನು ಕೇಳಿ ಬಹಳ ಆಶ್ಚರ್ಯದಿಂದ, “ಹಾಗಾದರೆ ಯಾರು ರಕ್ಷಣೆ ಹೊಂದಬಲ್ಲರು?” ಎಂದು ಕೇಳಿದರು.
ಮತ್ತಾಯನು 19 : 26 (ERVKN)
ಯೇಸು ತನ್ನ ಶಿಷ್ಯರ ಕಡೆಗೆ ದೃಷ್ಟಿಸಿ, “ಇದು ಮನುಷ್ಯರಿಗೆ ಅಸಾಧ್ಯವಾದ ಕಾರ್ಯ. ಆದರೆ ದೇವರಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.
ಮತ್ತಾಯನು 19 : 27 (ERVKN)
ಪೇತ್ರನು ಯೇಸುವಿಗೆ, “ನಾವು ನಮಗಿದ್ದ ಪ್ರತಿಯೊಂದನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು. ನಮಗೆ ಏನು ದೊರಕುವುದು” ಎಂದನು.
ಮತ್ತಾಯನು 19 : 28 (ERVKN)
ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
ಮತ್ತಾಯನು 19 : 29 (ERVKN)
ನನ್ನನ್ನು ಹಿಂಬಾಲಿಸಲು ತಮ್ಮ ಮನೆಗಳನ್ನು, ಸಹೋದರ ಸಹೋದರಿಯರನ್ನು, ತಂದೆತಾಯಿಗಳನ್ನು, ಮಕ್ಕಳನ್ನು ಇಲ್ಲವೆ ಆಸ್ತಿಯನ್ನು ತ್ಯಜಿಸಿದ ಪ್ರತಿಯೊಬ್ಬರು ತಾವು ಬಿಟ್ಟವುಗಳಿಗಿಂತ ಹೆಚ್ಚಾಗಿ ಪಡೆಯುತ್ತಾರೆ. ಅಲ್ಲದೆ ನಿತ್ಯಜೀವವನ್ನೂ ಹೊಂದಿಕೊಳ್ಳುತ್ತಾರೆ.
ಮತ್ತಾಯನು 19 : 30 (ERVKN)
ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30