ಮತ್ತಾಯನು 21 : 1 (ERVKN)
{ಅರಸನಂತೆ ಯೇಸುವಿನ ಪ್ರವೇಶ} (ಮಾರ್ಕ 11:1-11; ಲೂಕ 19:28-38; ಯೋಹಾನ 12:12-19) [PS] ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನತ್ತ ಪ್ರಯಾಣ ಮಾಡುತ್ತಾ ಆಲಿವ್ ಗುಡ್ಡದ ಸಮೀಪದಲ್ಲಿದ್ದ ಬೆತ್ಛಗೆಯನ್ನು ಸಮೀಸಿದರು.
ಮತ್ತಾಯನು 21 : 2 (ERVKN)
ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮ ಎದುರಿನಲ್ಲಿ ಇರುವ ಪಟ್ಟಣದೊಳಕ್ಕೆ ಹೋಗಿ. ನೀವು ಅದನ್ನು ಪ್ರವೇಶಿಸಿದಾಗ, ಅಲ್ಲೇ ಕಟ್ಟಿರುವ ಒಂದು ಕತ್ತೆಯನ್ನು ಕಾಣುತ್ತೀರಿ. ಆ ಕತ್ತೆಯ ಜೊತೆಯಲ್ಲಿ ಒಂದು ಕತ್ತೆಮರಿಯನ್ನು ಸಹ ನೀವು ಕಾಣುವಿರಿ. ಆ ಎರಡು ಕತ್ತೆಗಳನ್ನು ಬಿಚ್ಚಿ ಅವುಗಳನ್ನು ನನ್ನ ಬಳಿಗೆ ತನ್ನಿರಿ.
ಮತ್ತಾಯನು 21 : 3 (ERVKN)
ನೀವು ಏಕೆ ಕತ್ತೆಗಳನ್ನು ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ನಿಮ್ಮನ್ನು ಯಾರಾದರೂ ಕೇಳಿದರೆ, ‘ಈ ಕತ್ತೆಗಳು ಗುರುವಿಗೆ ಬೇಕಾಗಿವೆ. ಆತನು ಅವುಗಳನ್ನು ಬೇಗನೆ ಹಿಂದಕ್ಕೆ ಕಳುಹಿಸುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಹೇಳಿ ಕಳುಹಿಸಿದನು. [PE][PS]
ಮತ್ತಾಯನು 21 : 4 (ERVKN)
ಪ್ರವಾದಿಯಾದ ಜೆಕರ್ಯನು ಹೇಳಿದ ಪ್ರವಾದನೆಯು ಇದರಿಂದ ನೆರವೇರಿತು. ಅದೇನೆಂದರೆ:
ಮತ್ತಾಯನು 21 : 5 (ERVKN)
“ಸೀಯೋನ್ ನಗರಿಗೆ ಹೇಳಿರಿ, [QBR2] ‘ನಿನ್ನ ರಾಜನು ಈಗ ನಿನ್ನ ಬಳಿಗೆ ಬರುತ್ತಿದ್ದಾನೆ. [QBR] ದೀನತೆಯಿಂದ ಕತ್ತೆಯ ಮೇಲೆ ಬರುತ್ತಿದ್ದಾನೆ. [QBR2] ಹೌದು, ಪ್ರಾಯದ ಕತ್ತೆಮರಿಯ ಮೇಲೆ ಬರುತ್ತಿದ್ದಾನೆ.’ ” ಜೆಕರ್ಯ 9:9] [PS]
ಮತ್ತಾಯನು 21 : 6 (ERVKN)
ಆ ಶಿಷ್ಯರು ಹೋಗಿ, ಯೇಸು ಹೇಳಿದ್ದಂತೆಯೇ ತಾಯಿ ಕತ್ತೆಯನ್ನೂ ಮತ್ತು ಅದರ ಮರಿಯನ್ನೂ ಯೇಸುವಿನ ಬಳಿಗೆ ತಂದರು.
ಮತ್ತಾಯನು 21 : 7 (ERVKN)
ಅವರು ತಮ್ಮ ಮೇಲಂಗಿಗಳನ್ನು ಅವುಗಳ ಮೇಲೆ ಹಾಕಿದರು.
ಮತ್ತಾಯನು 21 : 8 (ERVKN)
ಆಗ ಯೇಸು ಕುಳಿತುಕೊಂಡು ಜೆರುಸಲೇಮಿಗೆ ಹೋದನು. ಅನೇಕ ಜನರು ತಮ್ಮ ಮೇಲಂಗಿಗಳನ್ನು ಯೇಸುವಿಗಾಗಿ ದಾರಿಯ ಮೇಲೆ ಹಾಸಿದರು. ಕೆಲವರು ಮರಗಳಿಂದ ಚಿಗುರುಗಳನ್ನು ಕತ್ತರಿಸಿಕೊಂಡು ಬಂದು ದಾರಿಯ ಮೇಲೆ ಹರಡಿದರು.
ಮತ್ತಾಯನು 21 : 9 (ERVKN)
ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! [*ಕೊಂಡಾಡಿರಿ ಮೂಲ ಗ್ರಂಥದಲ್ಲಿ “ಹೊಸನ್ನ” ಎಂಬ ಹೀಬ್ರೂ ಪದವನ್ನು ಬಳಸಲಾಗಿದೆ. ಈ ಪದದ ಅರ್ಥ “ರಕ್ಷಿಸು.” ಇದನ್ನು “ಕೊಂಡಾಡಿರಿ” ಎಂಬರ್ಥದಲ್ಲಿ ಬಳಸಲಾಗಿದೆ.] [QBR2] ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಕೀರ್ತನೆ. 118:25-26] ಪರಲೋಕದ ದೇವರನ್ನು ಕೊಂಡಾಡಿರಿ!” [PS]
ಮತ್ತಾಯನು 21 : 10 (ERVKN)
ಬಳಿಕ ಯೇಸು ಜೆರುಸಲೇಮಿನೊಳಗೆ ಹೋದನು. ಪಟ್ಟಣದಲ್ಲಿದ್ದ ಜನರೆಲ್ಲ ಗಲಿಬಿಲಿಗೊಂಡರು. ಅವರು, “ಈ ಮನುಷ್ಯನು ಯಾರು?” ಎಂದು ಕೇಳಿದರು. [PE][PS]
ಮತ್ತಾಯನು 21 : 11 (ERVKN)
ಯೇಸುವನ್ನು ಹಿಂಬಾಲಿಸುತ್ತಿದ್ದ ಅನೇಕ ಜನರು, “ಈತನೇ ಯೇಸು. ಈತನು ಗಲಿಲಾಯ ಪ್ರಾಂತ್ಯದಲ್ಲಿರುವ ನಜರೇತ್ ಎಂಬ ಊರಿನ ಪ್ರವಾದಿ” ಎಂದು ಉತ್ತರಕೊಟ್ಟರು. [PE][PS]
ಮತ್ತಾಯನು 21 : 12 (ERVKN)
{ದೇವಾಲಯವು ಪ್ರಾರ್ಥನಾಲಯ} (ಮಾರ್ಕ 11:15-19; ಲೂಕ 19:45-48; ಯೋಹಾನ 2:13-22) [PS] ಯೇಸು ದೇವಾಲಯದ ಒಳಕ್ಕೆ ಹೋದನು. ಅಲ್ಲಿ ಮಾರುತ್ತಿದ್ದ ಮತ್ತು ಕೊಂಡುಕೊಳ್ಳುತ್ತಿದ್ದ ಜನರನ್ನೆಲ್ಲಾ ಆತನು ಹೊರಗೆ ಓಡಿಸಿಬಿಟ್ಟನು; ನಾಣ್ಯ ವಿನಿಮಯ ಮಾಡುತ್ತಿದ್ದವರ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.
ಮತ್ತಾಯನು 21 : 13 (ERVKN)
ಯೇಸು ಅಲ್ಲಿದ್ದ ಜನರಿಗೆಲ್ಲ, “ ‘ನನ್ನ ಆಲಯವು ಪ್ರಾರ್ಥನಾಲಯ ಎನಿಸಿಕೊಳ್ಳುವುದು’ [✡ಉಲ್ಲೇಖನ: ಯೆಶಾಯ 56:7.] ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರ ಗವಿ’ಯನ್ನಾಗಿ ಮಾಡುತ್ತಿದ್ದೀರಿ” [✡ಉಲ್ಲೇಖನ: ಯೆರೆಮೀಯ 7:11.] ಎಂದು ಹೇಳಿದನು. [PE][PS]
ಮತ್ತಾಯನು 21 : 14 (ERVKN)
ಕೆಲವು ಮಂದಿ ಕುರುಡರು ಮತ್ತು ಕುಂಟರು ದೇವಾಲಯದಲ್ಲಿ ಯೇಸುವಿನ ಬಳಿಗೆ ಬಂದರು. ಯೇಸು ಅವರನ್ನು ಗುಣಪಡಿಸಿದನು.
ಮತ್ತಾಯನು 21 : 15 (ERVKN)
ಮಹಾಯಾಜಕರು ಮತ್ತು ಧರ್ಮೋಪದೇಶಕರು ಇದನ್ನು ನೋಡಿದರು. ಯೇಸು ಮಹತ್ಕಾರ್ಯಗಳನ್ನು ಮಾಡುತ್ತಿರುವುದನ್ನು ಮತ್ತು ದೇವಾಲಯದಲ್ಲಿ ಚಿಕ್ಕಮಕ್ಕಳು ಯೇಸುವನ್ನು ಕೊಂಡಾಡುತ್ತಿರುವುದನ್ನು ಅವರು ಗಮನಿಸಿದರು. ಚಿಕ್ಕ ಮಕ್ಕಳು, “ದಾವೀದನ ಕುಮಾರನಿಗೆ ಸ್ತೋತ್ರವಾಗಲಿ” ಎಂದು ಕೂಗುತ್ತಿದ್ದರು. ಇವುಗಳಿಂದಾಗಿ ಯಾಜಕರು ಮತ್ತು ಧರ್ಮೋಪದೇಶಕರು ಕೋಪಗೊಂಡರು. [PE][PS]
ಮತ್ತಾಯನು 21 : 16 (ERVKN)
ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಈ ಚಿಕ್ಕಮಕ್ಕಳು ಹೇಳುತ್ತಿರುವ ಮಾತುಗಳನ್ನು ನೀನು ಕೇಳಿಸಿಕೊಂಡೆಯೋ?” ಎಂದು ಕೇಳಿದರು. [PE][PS] ಯೇಸು, “ಹೌದು, ‘ನೀನು ಚಿಕ್ಕಮಕ್ಕಳಿಗೂ ಎಳೆಯ ಕೂಸುಗಳಿಗೂ ಸ್ತೋತ್ರಮಾಡಲು ಕಲಿಸಿರುವೆ’ [✡ಉಲ್ಲೇಖನ: ಕೀರ್ತನೆ 8:2.] ಎಂದು ಪವಿತ್ರ ಗ್ರಂಥದಲ್ಲಿ ಹೇಳಿದೆ. ನೀವು ಪವಿತ್ರ ಗ್ರಂಥವನ್ನು ಓದಿಲ್ಲವೇ?” ಎಂದು ಉತ್ತರಕೊಟ್ಟನು. [PE][PS]
ಮತ್ತಾಯನು 21 : 17 (ERVKN)
ಬಳಿಕ ಆತನು ಆ ಸ್ಥಳವನ್ನು ಬಿಟ್ಟು ಬೆಥಾನಿ ಪಟ್ಟಣಕ್ಕೆ ಹೊರಟುಹೋದನು. ಯೇಸು ಆ ರಾತ್ರಿ ಅಲ್ಲಿಯೇ ತಂಗಿದನು. (ಮಾರ್ಕ 11:12-14, 20-24) [PE][PS]
ಮತ್ತಾಯನು 21 : 18 (ERVKN)
{ನಂಬಿಕೆಗಿರುವ ಶಕ್ತಿ} [PS] ಮರುದಿನ ಮುಂಜಾನೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಹೋಗುತ್ತಿದ್ದನು. ಆತನಿಗೆ ಹಸಿವಾಯಿತು.
ಮತ್ತಾಯನು 21 : 19 (ERVKN)
ಆತನು ದಾರಿಯ ಪಕ್ಕದಲ್ಲಿದ್ದ ಒಂದು ಅಂಜೂರದ ಮರವನ್ನು ನೋಡಿ ಹಣ್ಣನ್ನು ತಿನ್ನಲು ಅದರ ಬಳಿಗೆ ಹೋದನು. ಆದರೆ ಮರದಲ್ಲಿ ಬರೀ ಎಲೆಗಳೇ ಇದ್ದವು. ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನೀನೆಂದಿಗೂ ಹಣ್ಣುಬಿಡದಂತಾಗಲಿ!” ಎಂದನು. ಆ ಕೂಡಲೇ ಅಂಜೂರದ ಮರ ಒಣಗಿಹೋಯಿತು. [PE][PS]
ಮತ್ತಾಯನು 21 : 20 (ERVKN)
ಶಿಷ್ಯರು ಇದನ್ನು ನೋಡಿ ಬಹಳ ಆಶ್ಚರ್ಯಪಟ್ಟು, “ಈ ಅಂಜೂರದ ಮರವು ಅಷ್ಟು ಬೇಗನೆ ಹೇಗೆ ಒಣಗಿ ಹೋಯಿತು?” ಎಂದು ಕೇಳಿದರು. [PE][PS]
ಮತ್ತಾಯನು 21 : 21 (ERVKN)
ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಸಂಶಯಪಡದೆ ನಂಬಿದರೆ ನಾನು ಈ ಮರಕ್ಕೆ ಮಾಡಿದಂತೆ ನೀವೂ ಮಾಡಲು ಸಾಧ್ಯ. ಅಲ್ಲದೆ ಇನ್ನೂ ಹೆಚ್ಚಾಗಿ ಮಾಡಲು ಸಾಧ್ಯ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಪೂರ್ಣ ನಂಬಿಕೆಯಿಂದ ಹೇಳಿದರೆ ಅಂತೆಯೇ ಸಂಭವಿಸುವುದು.
ಮತ್ತಾಯನು 21 : 22 (ERVKN)
ನೀವು ನಂಬಿ, ಪ್ರಾರ್ಥನೆಯಲ್ಲಿ ಏನನ್ನೇ ಕೇಳಿದರೂ ನಿಮಗೆ ಅದು ದೊರೆಯುವುದು” ಎಂದು ಉತ್ತರಕೊಟ್ಟನು. [PE][PS]
ಮತ್ತಾಯನು 21 : 23 (ERVKN)
{ಯೇಸುವಿನ ಅಧಿಕಾರದ ಬಗ್ಗೆ ಯೆಹೂದ್ಯನಾಯಕರ ಸಂದೇಹ} (ಮಾರ್ಕ 11:27-33; ಲೂಕ 20:1-8) [PS] ಯೇಸು ದೇವಾಲಯಕ್ಕೆ ಹೋದನು. ಯೇಸು ಅಲ್ಲಿ ಉಪದೇಶಿಸುತ್ತಿದ್ದಾಗ, ಮಹಾಯಾಜಕರು ಮತ್ತು ಜನರ ಹಿರಿಯ ನಾಯಕರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ತಿಳಿಸು!” ಎಂದರು. [PE][PS]
ಮತ್ತಾಯನು 21 : 24 (ERVKN)
ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನಗೆ ಉತ್ತರ ಕೊಟ್ಟರೆ, ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂದು ನಿಮಗೆ ತಿಳಿಸುತ್ತೇನೆ.
ಮತ್ತಾಯನು 21 : 25 (ERVKN)
ದೀಕ್ಷಾಸ್ನಾನ ಕೊಡುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತೋ ಇಲ್ಲವೆ ಮನುಷ್ಯನಿಂದ ಬಂದಿತೋ? ನನಗೆ ಹೇಳಿ!” ಎಂದು ಉತ್ತರ ಕೊಟ್ಟನು. [PE][PS] ಯಾಜಕರು ಮತ್ತು ಯೆಹೂದ್ಯ ನಾಯಕರು ಯೇಸುವಿನ ಪ್ರಶ್ನೆಯನ್ನು ಕುರಿತು ತಮ್ಮೊಳಗೆ, “ ‘ಯೋಹಾನನು ಕೊಟ್ಟ ದೀಕ್ಷಾಸ್ನಾನವು ದೇವರಿಂದ ಬಂದಿತು’ ಎಂದರೆ, ‘ಹಾಗಾದರೆ ಯೋಹಾನನನ್ನು ನೀವು ಏಕೆ ನಂಬಲಿಲ್ಲ?’ ಎಂದು ಕೇಳುವನು.
ಮತ್ತಾಯನು 21 : 26 (ERVKN)
‘ಅದು ಮನುಷ್ಯನಿಂದ ಬಂದಿತು’ ಎಂದರೆ ಜನರೆಲ್ಲರೂ ನಮ್ಮ ಮೇಲೆ ಕೋಪಗೊಳ್ಳುವರು. ಅವರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿ ಎಂದು ನಂಬಿರುವುದರಿಂದ ನಾವು ಅವರಿಗೆ ಹೆದರಬೇಕಾಗಿದೆ” ಎಂದು ಮಾತಾಡಿಕೊಂಡರು. [PE][PS]
ಮತ್ತಾಯನು 21 : 27 (ERVKN)
ಬಳಿಕ ಅವರು, “ಯೋಹಾನನಿಗೆ ಎಲ್ಲಿಂದ ಅಧಿಕಾರ ಬಂದಿತೋ ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. [PE][PS] ಆಗ ಯೇಸು, “ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆ ಎಂಬುದನ್ನು ನಾನು ಸಹ ನಿಮಗೆ ಹೇಳುವುದಿಲ್ಲ” ಎಂದನು. [PS]
ಮತ್ತಾಯನು 21 : 28 (ERVKN)
{ಇಬ್ಬರು ಗಂಡುಮಕ್ಕಳನ್ನು ಕುರಿತು ಯೇಸು ಹೇಳಿದ ಸಾಮ್ಯ} [PS] “ಒಬ್ಬ ಮನುಷ್ಯನಿಗೆ ಇಬ್ಬರು ಗಂಡುಮಕ್ಕಳಿದ್ದರು. ಆ ಮನುಷ್ಯನು ಮೊದಲನೆಯ ಮಗನ ಬಳಿಗೆ ಹೋಗಿ, ‘ಮಗನೇ ಈ ದಿನ ನೀನು ಹೋಗಿ, ನನ್ನ ದ್ರಾಕ್ಷಿತೋಟದಲ್ಲಿ ಕೆಲಸ ಮಾಡು’ ಎಂದು ಹೇಳಿದನು. [PE][PS]
ಮತ್ತಾಯನು 21 : 29 (ERVKN)
“ಅದಕ್ಕೆ ಮಗನು, ‘ನಾನು ಹೋಗುವುದಿಲ್ಲ’ ಎಂದನು. ಆದರೆ ಆ ಬಳಿಕ ತನ್ನ ಮನಸ್ಸನ್ನು ಬದಲಾಯಿಸಿಕೊಂಡು ಕೆಲಸಕ್ಕೆ ಹೋದನು. [PE][PS]
ಮತ್ತಾಯನು 21 : 30 (ERVKN)
“ತಂದೆಯು ಇನ್ನೊಬ್ಬ ಮಗನ ಬಳಿಗೆ ಹೋಗಿ, ‘ಮಗನೇ, ಈ ದಿನ ನೀನು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸ ಮಾಡು’ ಎಂದನು. ಮಗನು, ‘ಆಗಲಿಯಪ್ಪಾ, ನಾನು ಹೋಗಿ ಕೆಲಸ ಮಾಡುತ್ತೇನೆ’ ಎಂದನು. ಆದರೆ ಆ ಮಗನು ಹೋಗಲೇ ಇಲ್ಲ. [PE][PS]
ಮತ್ತಾಯನು 21 : 31 (ERVKN)
“ಈ ಇಬ್ಬರು ಗಂಡುಮಕ್ಕಳಲ್ಲಿ ತಂದೆಗೆ ಯಾರು ವಿಧೇಯರಾದರು?” [PE][PS] ಆಗ ಯೆಹೂದ್ಯ ನಾಯಕರು, “ಮೊದಲನೆಯ ಮಗ” ಎಂದು ಉತ್ತರಕೊಟ್ಟರು. [PE][PS] ಯೇಸು ಅವರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸುಂಕವಸೂಲಿಗಾರರನ್ನು ಮತ್ತು ವೇಶ್ಯೆಯರನ್ನು ಕೆಟ್ಟಜನರೆಂದು ನೀವು ಅಂದುಕೊಂಡಿದ್ದೀರಿ. ಆದರೆ ಅವರು ನಿಮಗಿಂತ ಮುಂಚೆಯೇ ದೇವರ ರಾಜ್ಯಕ್ಕೆ ಪ್ರವೇಶಿಸುತ್ತಾರೆ.
ಮತ್ತಾಯನು 21 : 32 (ERVKN)
ನೀವು ಜೀವಿಸತಕ್ಕ ಸರಿಯಾದ ಮಾರ್ಗವನ್ನು ತೋರಿಸಲು ಯೋಹಾನನು ಬಂದನು. ನೀವು ಯೋಹಾನನನ್ನು ನಂಬಲಿಲ್ಲ, ಆದರೆ ಸುಂಕವಸೂಲಿಗಾರರು ಮತ್ತು ವೇಶ್ಯೆಯರು ನಂಬಿದ್ದನ್ನು ನೀವು ನೋಡಿದ್ದೀರಿ. ಆದರೆ ನೀವಿನ್ನೂ ಬದಲಾವಣೆ ಹೊಂದಲು ಮತ್ತು ಅವನನ್ನು ನಂಬಲು ಇಷ್ಟಪಡುತ್ತಿಲ್ಲ. [PE][PS]
ಮತ್ತಾಯನು 21 : 33 (ERVKN)
{ದೇವರ ಸ್ವಂತ ಮಗನ ಆಗಮನ} (ಮಾರ್ಕ 12:1-12; ಲೂಕ 20:9-19) [PS] “ಈ ಸಾಮ್ಯವನ್ನು ಕೇಳಿರಿ: ಒಬ್ಬ ಮನುಷ್ಯನಿಗೆ ಒಂದು ಸ್ವಂತ ತೋಟವಿತ್ತು. ಅವನು ತೋಟದಲ್ಲಿ ದ್ರಾಕ್ಷಿಯನ್ನು ಬೆಳೆಸಿದನು; ತೋಟದ ಸುತ್ತಲೂ ಗೋಡೆ ಕಟ್ಟಿ ದ್ರಾಕ್ಷಾರಸ ತಯಾರಿಸಲು ಆಲೆಯನ್ನು ಹೂಡಿಸಿದನು. ಕಾವಲಿಗಾಗಿ ಅಟ್ಟಣೆಯನ್ನೂ ಕಟ್ಟಿಸಿದನು. ಅವನು ಆ ತೋಟವನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟು ವಿದೇಶಕ್ಕೆ ಹೊರಟುಹೋದನು.
ಮತ್ತಾಯನು 21 : 34 (ERVKN)
ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂದಾಗ ತನ್ನ ಪಾಲನ್ನು ತೆಗೆದುಕೊಂಡು ಬರಲು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. [PE][PS]
ಮತ್ತಾಯನು 21 : 35 (ERVKN)
“ಆದರೆ ರೈತರು ಆ ಸೇವಕರನ್ನು ಹಿಡಿದುಕೊಂಡು ಒಬ್ಬನನ್ನು ಹೊಡೆದರು; ಬೇರೊಬ್ಬನನ್ನು ಕತ್ತರಿಸಿಹಾಕಿದರು; ಮೂರನೇ ಸೇವಕನನ್ನು ಕಲ್ಲೆಸೆದು ಕೊಂದರು.
ಮತ್ತಾಯನು 21 : 36 (ERVKN)
ಆದ್ದರಿಂದ ಅವನು ಮೊದಲನೆ ಸಲ ಕಳುಹಿಸಿದ ಸೇವಕರಿಗಿಂತಲೂ ಹೆಚ್ಚು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ಆದರೆ ರೈತರು ಮೊದಲನೆ ಸಲ ಮಾಡಿದಂತೆಯೇ ಈ ಸೇವಕರಿಗೂ ಮಾಡಿದರು.
ಮತ್ತಾಯನು 21 : 37 (ERVKN)
ಆಗ ಅವನು, ‘ರೈತರು ನನ್ನ ಮಗನನ್ನು ಗೌರವಿಸುವರು’ ಎಂದುಕೊಂಡು ತನ್ನ ಮಗನನ್ನೇ ಕಳುಹಿಸಿದನು. [PE][PS]
ಮತ್ತಾಯನು 21 : 38 (ERVKN)
“ಆದರೆ ರೈತರು ಮಗನನ್ನು ನೋಡಿದಾಗ, ‘ಇವನು ತೋಟದ ಒಡೆಯನ ಮಗನು. ಈ ತೋಟ ಇವನದಾಗುವುದು. ನಾವು ಇವನನ್ನು ಕೊಂದರೆ, ಈ ತೋಟ ನಮ್ಮದಾಗುವುದು’ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
ಮತ್ತಾಯನು 21 : 39 (ERVKN)
ಆದ್ದರಿಂದ ರೈತರು ಮಗನನ್ನು ಹಿಡಿದು ತೋಟದಿಂದ ಹೊರಕ್ಕೆಸೆದು ಅವನನ್ನು ಕೊಂದುಹಾಕಿದರು. [PE][PS]
ಮತ್ತಾಯನು 21 : 40 (ERVKN)
“ಹೀಗಿರಲು ತೋಟದ ಯಜಮಾನನು ತಾನೇ ಬಂದಾಗ ಈ ರೈತರಿಗೆ ಏನು ಮಾಡುತ್ತಾನೆ?” [PE][PS]
ಮತ್ತಾಯನು 21 : 41 (ERVKN)
ಯೆಹೂದ್ಯ ಯಾಜಕರು ಮತ್ತು ನಾಯಕರು, “ಅವನು ಖಂಡಿತವಾಗಿ ಆ ದುಷ್ಟಜನರನ್ನು ಕೊಂದು ಸುಗ್ಗಿಕಾಲದಲ್ಲಿ ತನ್ನ ಪಾಲನ್ನು ತನಗೆ ಕೊಡುವ ರೈತರಿಗೆ ಅದನ್ನು ಗುತ್ತಿಗೆಗೆ ಕೊಡುತ್ತಾನೆ” ಎಂದು ಹೇಳಿದರು. [PE][PS]
ಮತ್ತಾಯನು 21 : 42 (ERVKN)
ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. [QBR] ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’ ಕೀರ್ತನೆ. 118:22,] 23 [PS]
ಮತ್ತಾಯನು 21 : 43 (ERVKN)
“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ದೇವರ ರಾಜ್ಯವು ನಿಮ್ಮಿಂದ ತೆಗೆದುಹಾಕಲ್ಪಟ್ಟು ಆ ರಾಜ್ಯದಲ್ಲಿ ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಮಾಡುವವರಿಗೆ ಕೊಡಲ್ಪಡುವುದು.
ಮತ್ತಾಯನು 21 : 44 (ERVKN)
ಈ ಕಲ್ಲಿನ ಮೇಲೆ ಬೀಳುವ ಮನುಷ್ಯನು ತುಂಡುತುಂಡಾಗುತ್ತಾನೆ. ಈ ಕಲ್ಲು ಮನುಷ್ಯನ ಮೇಲೆ ಬಿದ್ದರೆ, ಅವನು ಜಜ್ಜಿಹೋಗುವನು.” [PE][PS]
ಮತ್ತಾಯನು 21 : 45 (ERVKN)
ಮಹಾಯಾಜಕರು ಮತ್ತು ಫರಿಸಾಯರು ಯೇಸು ಹೇಳಿದ ಈ ಸಾಮ್ಯಗಳನ್ನು ಕೇಳಿ, ತಮ್ಮನ್ನೇ ಕುರಿತು ಇವುಗಳನ್ನು ಹೇಳಿದನೆಂದು ತಿಳಿದುಕೊಂಡರು.
ಮತ್ತಾಯನು 21 : 46 (ERVKN)
ಅವರು ಯೇಸುವನ್ನು ಬಂಧಿಸಲು ಉಪಾಯ ಹುಡುಕಿದರೂ ಜನರಿಗೆ ಭಯಪಟ್ಟು ಬಂಧಿಸಲಿಲ್ಲ. ಏಕೆಂದರೆ ಯೇಸು ಒಬ್ಬ ಪ್ರವಾದಿ ಎಂದು ಜನರು ನಂಬಿದ್ದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46

BG:

Opacity:

Color:


Size:


Font: