ಮತ್ತಾಯನು 27 : 1 (ERVKN)
{ರಾಜ್ಯಪಾಲನ ಮುಂದೆ ಯೇಸು} (ಮಾರ್ಕ 15:1; ಲೂಕ 23:1-2; ಯೇಹಾನ 18:28-32) [PS] ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು.
ಮತ್ತಾಯನು 27 : 2 (ERVKN)
ಅವರು ಆತನನ್ನು ಸರಪಣಿಗಳಿಂದ ಬಂಧಿಸಿ ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದೊಯ್ದು ಅವನಿಗೆ ಒಪ್ಪಿಸಿದರು. (ಅಪೊ. ಕಾರ್ಯ. 1:18-19) [PE][PS]
ಮತ್ತಾಯನು 27 : 3 (ERVKN)
{ಯೂದನ ಆತ್ಮಹತ್ಯೆ} [PS] ಯೇಸುವನ್ನು ಆತನ ವೈರಿಗಳಿಗೆ ಒಪ್ಪಿಸಿಕೊಟ್ಟ ಯೂದನು, ಯೇಸುವಿಗೆ ಸಂಭವಿಸಿದ್ದನ್ನು ಕಂಡು, ತಾನು ಮಾಡಿದ ದ್ರೋಹಕ್ಕಾಗಿ ಬಹಳ ಪಶ್ಚಾತ್ತಾಪಪಟ್ಟನು. ಅವನು ಬೆಳ್ಳಿಯ ನಾಣ್ಯಗಳನ್ನು ಮಹಾಯಾಜಕರ ಮತ್ತು ಹಿರಿಯನಾಯಕರ ಬಳಿಗೆ ತೆಗೆದುಕೊಂಡು ಹೋಗಿ,
ಮತ್ತಾಯನು 27 : 4 (ERVKN)
“ನಾನು ಪಾಪ ಮಾಡಿದೆ, ನಿರಪರಾಧಿಯನ್ನು ಕೊಲ್ಲಲು ನಿಮಗೆ ಒಪ್ಪಿಸಿಬಿಟ್ಟೆ” ಎಂದು ಹೇಳಿದನು. [PE][PS] ಯೆಹೂದ್ಯ ನಾಯಕರು, “ಅದಕ್ಕೆ ನಾವೇನು ಮಾಡೋಣ! ಅದು ನಿನ್ನ ಸಮಸ್ಯೆ, ನಮ್ಮದಲ್ಲ!” ಎಂದು ಉತ್ತರಕೊಟ್ಟರು. [PE][PS]
ಮತ್ತಾಯನು 27 : 5 (ERVKN)
ಆಗ ಯೂದನು ಆ ಹಣವನ್ನು ದೇವಾಲಯದೊಳಗೆ ಬಿಸಾಡಿ ಹೊರಟುಹೋಗಿ ನೇಣು ಹಾಕಿಕೊಂಡನು. [PE][PS]
ಮತ್ತಾಯನು 27 : 6 (ERVKN)
ಮಹಾಯಾಜಕರು ದೇವಾಲಯದಲ್ಲಿದ್ದ ಬೆಳ್ಳಿಯ ನಾಣ್ಯಗಳನ್ನು ಆಯ್ದುಕೊಂಡು, “ಈ ಹಣವನ್ನು ಒಬ್ಬ ಮನುಷ್ಯನ ಹತ್ಯೆಗಾಗಿ ಕೊಟ್ಟಿದ್ದ ಕಾರಣ ಇದನ್ನು ದೇವಾಲಯದ ಹಣದೊಂದಿಗೆ ಸೇರಿಸುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧ” ಎಂದು ಹೇಳಿದರು.
ಮತ್ತಾಯನು 27 : 7 (ERVKN)
ಆದ್ದರಿಂದ ಅವರು ಆ ಹಣದಿಂದ “ಕುಂಬಾರನ ಹೊಲ” ಎಂಬ ಜಮೀನನ್ನು ಕೊಂಡುಕೊಳ್ಳಲು ತೀರ್ಮಾನಿಸಿದರು. ಜೆರುಸಲೇಮಿಗೆ ಪ್ರವಾಸ ಬಂದವರು ಸತ್ತರೆ, ಅವರನ್ನು ಈ ಹೊಲದಲ್ಲಿ ಸಮಾಧಿ ಮಾಡಬೇಕೆಂದು ನಿರ್ಧರಿಸಲಾಯಿತು.
ಮತ್ತಾಯನು 27 : 8 (ERVKN)
ಆದಕಾರಣವೇ ಆ ಹೊಲವನ್ನು ಇಂದಿಗೂ “ಜೀವಹತ್ಯೆಯ ಹೊಲ”ವೆಂದು ಕರೆಯುತ್ತಾರೆ.
ಮತ್ತಾಯನು 27 : 9 (ERVKN)
ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ: “ಅವರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡರು. ಯೆಹೂದ್ಯರು ಆತನ ಜೀವಕ್ಕೆ ನಿರ್ಧರಿಸಿದ ಬೆಲೆಯೇ ಅಷ್ಟು.
ಮತ್ತಾಯನು 27 : 10 (ERVKN)
ಪ್ರಭುವು ನನಗೆ ಆಜ್ಞಾಪಿಸಿದಂತೆ, ಅವರು ಮೂವತ್ತು ಬೆಳ್ಳಿಯ ನಾಣ್ಯಗಳಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.” [*ಅವರು … ಕೊಂಡರು ನೋಡಿರಿ: ಜೆಕರ್ಯ 11:12-13; ಯೆರೆಮೀಯ 32:6-9.] [PE][PS]
ಮತ್ತಾಯನು 27 : 11 (ERVKN)
{ರಾಜ್ಯಪಾಲ ಪಿಲಾತನಿಂದ ಯೇಸುವಿಗಾದ ವಿಚಾರಣೆ} (ಮಾರ್ಕ 15:2-5; ಲೂಕ 23:3-5; ಯೋಹಾನ 18:33-38) [PS] ಯೇಸುವನ್ನು ರಾಜ್ಯಪಾಲ ಪಿಲಾತನ ಎದುರಿನಲ್ಲಿ ನಿಲ್ಲಿಸಿದರು. ಪಿಲಾತನು ಆತನಿಗೆ, “ನೀನು ಯೆಹೂದ್ಯರ ರಾಜನೇ?” ಎಂದು ಕೇಳಿದನು. [PE][PS] ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು” ಎಂದು ಉತ್ತರಕೊಟ್ಟನು. [PE][PS]
ಮತ್ತಾಯನು 27 : 12 (ERVKN)
ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಯೇಸುವಿನ ಮೇಲೆ ದೂರು ಹೇಳಿದಾಗ, ಆತನು ಮೌನವಾಗಿದ್ದನು. [PE][PS]
ಮತ್ತಾಯನು 27 : 13 (ERVKN)
ಆದ್ದರಿಂದ ಪಿಲಾತನು ಯೇಸುವನ್ನು, “ಈ ಜನರು ನಿನ್ನ ಮೇಲೆ ಹೇಳುತ್ತಿರುವ ಈ ದೂರುಗಳನ್ನೆಲ್ಲ ನೀನು ಕೇಳುತ್ತಿದ್ದರೂ ಏಕೆ ಉತ್ತರ ಕೊಡುತ್ತಿಲ್ಲ?” ಎಂದು ಕೇಳಿದನು. [PE][PS]
ಮತ್ತಾಯನು 27 : 14 (ERVKN)
ಆದರೆ ಯೇಸು ಪಿಲಾತನಿಗೆ ಉತ್ತರ ಕೊಡಲೇ ಇಲ್ಲ. ಪಿಲಾತನಿಗೆ ಬಹಳ ಆಶ್ಚರ್ಯವಾಯಿತು. [PE][PS]
ಮತ್ತಾಯನು 27 : 15 (ERVKN)
{ಯೇಸುವನ್ನು ಬಿಡಿಸಲು ಪಿಲಾತನ ವಿಫಲ ಯತ್ನ} (ಮಾರ್ಕ 15:6-15; ಲೂಕ 23:13-25; ಯೋಹಾನ 18:39-19:16) [PS] ಪ್ರತಿವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸುವ ಕೈದಿಗಳಲ್ಲಿ ಒಬ್ಬನನ್ನು ರಾಜ್ಯಪಾಲನು ಬಿಡುಗಡೆ ಮಾಡಬೇಕೆಂಬುದು ಅಂದಿನ ಪದ್ಧತಿಯಾಗಿತ್ತು.
ಮತ್ತಾಯನು 27 : 16 (ERVKN)
ಆ ಕಾಲದಲ್ಲಿ ಪ್ರಸಿದ್ಧನಾದ ಕೈದಿಯೊಬ್ಬನು ಸೆರೆಮನೆಯಲ್ಲಿದ್ದನು. ಅವನ ಹೆಸರು ಬರಬ್ಬ. [†ಬರಬ್ಬ ಕೆಲವು ಗ್ರೀಕ್ ಪ್ರತಿಗಳಲ್ಲಿ “ಏಸು ಬರಬ್ಬ” ಎಂದಿದೆ.] [PE][PS]
ಮತ್ತಾಯನು 27 : 17 (ERVKN)
ಜನರೆಲ್ಲರೂ ಪಿಲಾತನ ಭವನದ ಬಳಿ ನೆರೆದಿದ್ದರು. ಪಿಲಾತನು ಅವರಿಗೆ, “ನಾನು ನಿಮಗಾಗಿ ಯಾವ ಕೈದಿಯನ್ನು ಬಿಡುಗಡೆ ಮಾಡಲಿ, ಬರಬ್ಬನನ್ನೋ ಅಥವಾ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನೋ?” ಎಂದು ಕೇಳಿದನು.
ಮತ್ತಾಯನು 27 : 18 (ERVKN)
ಜನರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ಗೊತ್ತಿತ್ತು. [PE][PS]
ಮತ್ತಾಯನು 27 : 19 (ERVKN)
ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ. [PE][PS]
ಮತ್ತಾಯನು 27 : 20 (ERVKN)
ಆದರೆ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಬರಬ್ಬನನ್ನು ಬಿಡುಗಡೆ ಮಾಡಬೇಕೆಂದೂ ಯೇಸುವನ್ನು ಕೊಲ್ಲಿಸಬೇಕೆಂದೂ ಕೇಳಿಕೊಳ್ಳಲು ಜನರಿಗೆ ಹೇಳಿಕೊಟ್ಟರು. [PE][PS]
ಮತ್ತಾಯನು 27 : 21 (ERVKN)
ಪಿಲಾತನು, “ನಿಮಗಾಗಿ ನಾನು ಯಾರನ್ನು ಬಿಡುಗಡೆ ಮಾಡಲಿ? ಬರಬ್ಬನನ್ನೋ? ಯೇಸುವನ್ನೋ?” ಎಂದು ಕೇಳಿದನು. [PE][PS] ಜನರು “ಬರಬ್ಬನನ್ನು!” ಎಂದು ಉತ್ತರಕೊಟ್ಟರು. [PE][PS]
ಮತ್ತಾಯನು 27 : 22 (ERVKN)
ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು. [PE][PS] ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು. [PE][PS]
ಮತ್ತಾಯನು 27 : 23 (ERVKN)
ಪಿಲಾತನು, “ಅವನನ್ನು ಶಿಲುಬೆಗೇರಿಸೆಂದು ನೀವು ಕೇಳುವುದೇಕೆ? ಅವನೇನು ತಪ್ಪುಮಾಡಿದ್ದಾನೆ?” ಎಂದು ಕೇಳಿದನು. [PE][PS] ಆದರೆ ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಕೂಗಿದರು. [PE][PS]
ಮತ್ತಾಯನು 27 : 24 (ERVKN)
ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು. [PE][PS]
ಮತ್ತಾಯನು 27 : 25 (ERVKN)
ಜನರೆಲ್ಲರೂ, “ಅವನ ಸಾವಿಗೆ ನಾವೇ ಜವಾಬ್ದಾರರು. ಅವನ ಸಾವಿಗೆ ಏನಾದರೂ ದಂಡನೆಯಿದ್ದರೆ ಅದನ್ನು ನಾವು ಮತ್ತು ನಮ್ಮ ಮಕ್ಕಳು ಅನುಭವಿಸುತ್ತೇವೆ” ಎಂದು ಉತ್ತರಕೊಟ್ಟರು. [PE][PS]
ಮತ್ತಾಯನು 27 : 26 (ERVKN)
ಆಗ ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊರಡೆಗಳಿಂದ ಹೊಡೆಯಿಸಿ ಶಿಲುಬೆಗೇರಿಸಲು ಸೈನಿಕರಿಗೆ ಒಪ್ಪಿಸಿಬಿಟ್ಟನು. [PE][PS]
ಮತ್ತಾಯನು 27 : 27 (ERVKN)
{ಪಿಲಾತನ ಸೈನಿಕರು ಯೇಸುವಿಗೆ ಮಾಡಿದ ಅಪಹಾಸ್ಯ} (ಮಾರ್ಕ 15:16-20; ಯೋಹಾನ 19:2-3) [PS] ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಸೈನಿಕರೆಲ್ಲರೂ ಯೇಸುವನ್ನು ಸುತ್ತುಗಟ್ಟಿದರು.
ಮತ್ತಾಯನು 27 : 28 (ERVKN)
ಸೈನಿಕರು ಆತನ ಬಟ್ಟೆಗಳನ್ನು ತೆಗೆದುಹಾಕಿ ಆತನಿಗೆ ಒಂದು ಕೆಂಪು ನಿಲುವಂಗಿಯನ್ನು ತೊಡಿಸಿದರು.
ಮತ್ತಾಯನು 27 : 29 (ERVKN)
ಮುಳ್ಳಿನ ಬಳ್ಳಿಯಿಂದ ಒಂದು ಕಿರೀಟವನ್ನು ಹೆಣೆದು ಆತನ ತಲೆಯ ಮೇಲಿಟ್ಟರು. ಆತನ ಬಲಗೈಗೆ ಒಂದು ಕೋಲನ್ನು ಕೊಟ್ಟರು. ಬಳಿಕ ಸೈನಿಕರು ಯೇಸುವಿನ ಮುಂದೆ ಬಾಗಿ, “ಯೆಹೂದ್ಯರ ರಾಜನೇ, ನಮಸ್ಕಾರ” ಎಂದು ಅಪಹಾಸ್ಯ ಮಾಡಿದರು.
ಮತ್ತಾಯನು 27 : 30 (ERVKN)
ಆತನ ಮೇಲೆ ಉಗುಳಿದರು. ಆತನ ಕೈಯಿಂದ ಕೋಲನ್ನು ತೆಗೆದುಕೊಂಡು ತಲೆಯ ಮೇಲೆ ಹೊಡೆದರು.
ಮತ್ತಾಯನು 27 : 31 (ERVKN)
ಹೀಗೆ ಅಪಹಾಸ್ಯ ಮಾಡಿದ ಬಳಿಕ, ಆತನ ನಿಲುವಂಗಿಯನ್ನು ತೆಗೆದುಹಾಕಿ ಆತನ ಬಟ್ಟೆಗಳನ್ನು ಮತ್ತೆ ಆತನಿಗೆ ತೊಡಿಸಿ ಶಿಲುಬೆಗೇರಿಸಲು ಕರೆದೊಯ್ದರು. [PE][PS]
ಮತ್ತಾಯನು 27 : 32 (ERVKN)
{ಶಿಲುಬೆಗೇರಿಸಲ್ಪಟ್ಟ ಯೇಸು} (ಮಾರ್ಕ 15:21-32; ಲೂಕ 23:26-43; ಯೋಹಾನ 19:17-27) [PS] ಸೈನಿಕರು ಯೇಸುವಿನೊಂದಿಗೆ ನಗರದಿಂದ ಹೊರಕ್ಕೆ ಹೋಗುತ್ತಿರುವಾಗ ಸಿರೇನ ಪಟ್ಟಣದ “ಸಿಮೋನ” ಎಂಬ ವ್ಯಕ್ತಿಯನ್ನು ಕಂಡರು. ಆತನ ಶಿಲುಬೆ ಹೊರುವುದಕ್ಕಾಗಿ ಅವರು ಅವನನ್ನು ಬಲವಂತಪಡಿಸಿದರು.
ಮತ್ತಾಯನು 27 : 33 (ERVKN)
ಅವರು ಗೊಲ್ಗೊಥಾ ಎಂಬ ಸ್ಥಳಕ್ಕೆ ಬಂದರು. (ಗೊಲ್ಗೊಥಾ ಎಂದರೆ “ಕಪಾಲ ಸ್ಥಳ” ಎಂದರ್ಥ.)
ಮತ್ತಾಯನು 27 : 34 (ERVKN)
ಗೊಲ್ಗೊಥಾದಲ್ಲಿ ಸೈನಿಕರು ಆತನಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟರು. ಈ ದ್ರಾಕ್ಷಾರಸಕ್ಕೆ ನೋವು ನಿವಾರಕ ಔಷಧಿಯನ್ನು ಬೆರೆಸಿದ್ದರು. ಆತನು ದ್ರಾಕ್ಷಾರಸದ ರುಚಿ ನೋಡಿ ಅದನ್ನು ಕುಡಿಯಲಿಲ್ಲ. [PE][PS]
ಮತ್ತಾಯನು 27 : 35 (ERVKN)
ಸೈನಿಕರು ಆತನನ್ನು ಶಿಲುಬೆಗೆ ಮೊಳೆಗಳಿಂದ ಜಡಿದರು. ನಂತರ ಉಡುಪಿಗಾಗಿ ತಮ್ಮಲ್ಲಿಯೇ ಚೀಟಿಹಾಕಿ ತೆಗೆದುಕೊಂಡರು.
ಮತ್ತಾಯನು 27 : 36 (ERVKN)
ಸೈನಿಕರು ಯೇಸುವನ್ನು ಕಾಯುತ್ತಾ ಅಲ್ಲೇ ಕುಳಿತಿದ್ದರು.
ಮತ್ತಾಯನು 27 : 37 (ERVKN)
ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು. “ಈತನು ಯೇಸು, ಯೆಹೂದ್ಯರ ರಾಜ” ಎಂಬುದೇ ಆ ಅಪರಾಧ. [PE][PS]
ಮತ್ತಾಯನು 27 : 38 (ERVKN)
ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದ್ದರು. ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು.
ಮತ್ತಾಯನು 27 : 39 (ERVKN)
ದಾರಿಯಲ್ಲಿ ಹೋಗುತ್ತಿದ್ದ ಜನರು ತಲೆಯಾಡಿಸುತ್ತಾ,
ಮತ್ತಾಯನು 27 : 40 (ERVKN)
“ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆಂದು ಹೇಳುತ್ತಿದ್ದೆ. ಆದರೆ ಈಗ ನಿನ್ನನ್ನು ನೀನೇ ರಕ್ಷಿಸಿಕೊ! ನೀನು ನಿಜವಾಗಿಯೂ ದೇವರ ಮಗನಾಗಿದ್ದರೆ, ಶಿಲುಬೆಯಿಂದ ಕೆಳಗಿಳಿದು ಬಾ!” ಎಂದು ಹಾಸ್ಯಮಾಡಿದರು. [PE][PS]
ಮತ್ತಾಯನು 27 : 41 (ERVKN)
ಮಹಾಯಾಜಕರೂ ಧರ್ಮೋಪದೇಶಕರೂ ಮತ್ತು ಹಿರಿಯ ಯೆಹೂದ್ಯ ನಾಯಕರೂ ಅಲ್ಲಿದ್ದರು. ಇವರು ಸಹ ಇತರ ಜನರಂತೆ ಯೇಸುವನ್ನು ಗೇಲಿ ಮಾಡಿದರು.
ಮತ್ತಾಯನು 27 : 42 (ERVKN)
“ಇವನು ಬೇರೆಯವರನ್ನು ರಕ್ಷಿಸಿದನು. ಆದರೆ ತನ್ನನ್ನು ರಕ್ಷಿಸಿಕೊಳ್ಳಲಾರ! ಇಸ್ರೇಲರ ರಾಜ ಎಂದು ಜನ ಹೇಳುತ್ತಾರೆ. ಇವನು ರಾಜನಾಗಿದ್ದರೆ ಶಿಲುಬೆಯಿಂದ ಕೆಳಗಿಳಿದು ಬರಲಿ. ಆಗ ನಾವು ಇವನನ್ನು ನಂಬುತ್ತೇವೆ.
ಮತ್ತಾಯನು 27 : 43 (ERVKN)
ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು.
ಮತ್ತಾಯನು 27 : 44 (ERVKN)
ಅದೇ ರೀತಿಯಲ್ಲಿ ಯೇಸುವಿನ ಎಡಬಲಗಳಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ನಿಂದಿಸಿದರು. [PE][PS]
ಮತ್ತಾಯನು 27 : 45 (ERVKN)
{ಯೇಸುವಿನ ಮರಣ} (ಮಾರ್ಕ 15:33-41; ಲೂಕ 23:44-49; ಯೋಹಾನ 19:28-30) [PS] ಅಂದು ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ದೇಶದಲ್ಲೆಲ್ಲಾ ಕತ್ತಲೆ ಕವಿಯಿತು.
ಮತ್ತಾಯನು 27 : 46 (ERVKN)
ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸು, “ಏಲೀ, ಏಲೀ, ಲಮಾ ಸಬಕ್ತಾನಿ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದನು. ಹೀಗೆಂದರೆ, “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟುಬಿಟ್ಟೆ?” [✡ಉಲ್ಲೇಖನ: ಕೀರ್ತನೆ. 22:1.] ಎಂದರ್ಥ. [PE][PS]
ಮತ್ತಾಯನು 27 : 47 (ERVKN)
ಅಲ್ಲಿ ನಿಂತಿದ್ದ ಕೆಲವು ಜನರು ಇದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಎಂದು ಹೇಳಿದರು. [PE][PS]
ಮತ್ತಾಯನು 27 : 48 (ERVKN)
ಆ ಜನರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು, ಅದರಲ್ಲಿ ಹುಳಿರಸವನ್ನು ತುಂಬಿಸಿ, ಅದನ್ನು ಒಂದು ಕೋಲಿಗೆ ಕಟ್ಟಿ ಆ ಕೋಲಿನಿಂದ ಸ್ಪಂಜನ್ನು ಯೇಸುವಿಗೆ ಕುಡಿಯಲು ಕೊಟ್ಟನು.
ಮತ್ತಾಯನು 27 : 49 (ERVKN)
ಆದರೆ ಇತರ ಜನರು, “ಅವನ ಬಗ್ಗೆ ಚಿಂತಿಸಬೇಡ, ಅವನನ್ನು ರಕ್ಷಿಸಲು ಎಲೀಯನು ಬರಬಹುದೇನೋ ನೋಡೋಣ” ಎಂದು ಹೇಳಿದರು. [PE][PS]
ಮತ್ತಾಯನು 27 : 50 (ERVKN)
ಬಳಿಕ ಯೇಸು ಮತ್ತೆ ಗಟ್ಟಿಯಾದ ಧ್ವನಿಯಲ್ಲಿ ಕೂಗಿ ಪ್ರಾಣಬಿಟ್ಟನು. [PE][PS]
ಮತ್ತಾಯನು 27 : 51 (ERVKN)
ಆಗ ದೇವಾಲಯದ ತೆರೆಯು ಮೇಲ್ಗಡೆಯಿಂದ ತಳಭಾಗದವರೆಗೂ ಹರಿದು ಎರಡು ಭಾಗವಾಯಿತು. ಭೂಮಿಯು ನಡುಗಿತು. ಬಂಡೆಗಳು ಒಡೆದುಹೋದವು.
ಮತ್ತಾಯನು 27 : 52 (ERVKN)
ಸಮಾಧಿಗಳು ತೆರೆದವು, ಸತ್ತುಹೋಗಿದ್ದ ಅನೇಕ ದೇವಜನರು ಸಮಾಧಿಗಳೊಳಗಿಂದ ಜೀವಂತವಾಗಿ ಮೇಲೆದ್ದರು.
ಮತ್ತಾಯನು 27 : 53 (ERVKN)
ಯೇಸು ಪುನರುತ್ಥಾನ ಹೊಂದಿದ ಬಳಿಕ, ಅವರು ಪವಿತ್ರ ನಗರವಾದ ಜೆರುಸಲೇಮಿಗೆ ಹೋದರು. ಜನರು ಅವರನ್ನು ಕಣ್ಣಾರೆ ಕಂಡರು. [PE][PS]
ಮತ್ತಾಯನು 27 : 54 (ERVKN)
ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು. [PE][PS]
ಮತ್ತಾಯನು 27 : 55 (ERVKN)
ಯೇಸುವಿನ ಸೇವೆ ಮಾಡುತ್ತಾ ಗಲಿಲಾಯದಿಂದ ಆತನನ್ನು ಹಿಂಬಾಲಿಸಿಕೊಂಡು ಬಂದಿದ್ದ ಅನೇಕ ಸ್ತ್ರೀಯರು ದೂರದಲ್ಲಿ ನೋಡುತ್ತಾ ನಿಂತಿದ್ದರು.
ಮತ್ತಾಯನು 27 : 56 (ERVKN)
ಮಗ್ದಲದ ಮರಿಯಳು, ಯಾಕೋಬ ಮತ್ತು ಯೋಸೇಫನ ತಾಯಿಯಾದ ಮರಿಯಳು, ಹಾಗೂ ಯೋಹಾನ ಮತ್ತು ಯಾಕೋಬನ ತಾಯಿ ಅಲ್ಲಿದ್ದರು. [PE][PS]
ಮತ್ತಾಯನು 27 : 57 (ERVKN)
{ಯೇಸುವಿನ ಸಮಾಧಿ} (ಮಾರ್ಕ 15:42-47; ಲೂಕ 23:50-56; ಯೋಹಾನ 19:38-42) [PS] ಆ ಸಂಜೆ ಯೋಸೇಫ ಎಂಬ ಶ್ರೀಮಂತ ವ್ಯಕ್ತಿ ಜೆರುಸಲೇಮಿಗೆ ಬಂದನು. ಅರಿಮತಾಯ ಪಟ್ಟಣದವನಾದ ಇವನು ಯೇಸುವಿನ ಶಿಷ್ಯನಾಗಿದ್ದನು.
ಮತ್ತಾಯನು 27 : 58 (ERVKN)
ಇವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಕೇಳಿದನು. ಯೇಸುವಿನ ದೇಹವನ್ನು ಯೋಸೇಫನಿಗೆ ಕೊಡುವಂತೆ ಪಿಲಾತನು ಸೈನಿಕರಿಗೆ ಅಪ್ಪಣೆ ಮಾಡಿದನು.
ಮತ್ತಾಯನು 27 : 59 (ERVKN)
ಯೋಸೇಫನು ಆತನ ದೇಹವನ್ನು ತೆಗೆದುಕೊಂಡು, ಅದನ್ನು ಹೊಸ ನಾರುಮಡಿಯ ಬಟ್ಟೆಯಿಂದ ಸುತ್ತಿ
ಮತ್ತಾಯನು 27 : 60 (ERVKN)
ಬಂಡೆಯಲ್ಲಿ ತಾನು ತೋಡಿಸಿದ್ದ ಹೊಸ ಸಮಾಧಿಯಲ್ಲಿ ಇಟ್ಟನು. ಸಮಾಧಿಯ ಬಾಗಿಲಿಗೆ ಒಂದು ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು.
ಮತ್ತಾಯನು 27 : 61 (ERVKN)
ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಯ ಹತ್ತಿರ ಕುಳಿತುಕೊಂಡಿದ್ದರು. [PS]
ಮತ್ತಾಯನು 27 : 62 (ERVKN)
{ಯೇಸುವಿನ ಸಮಾಧಿಗೆ ಕಾವಲು} [PS] ಶುಕ್ರವಾರ ಮುಗಿದ ಮೇಲೆ ಮಹಾಯಾಜಕರು ಮತ್ತು ಫರಿಸಾಯರು ಪಿಲಾತನ ಬಳಿಗೆ ಹೋಗಿ,
ಮತ್ತಾಯನು 27 : 63 (ERVKN)
“ಸ್ವಾಮೀ, ಆ ಸುಳ್ಳುಗಾರನು ಬದುಕಿದ್ದಾಗ, ‘ಮೂರು ದಿನಗಳ ಬಳಿಕ ನಾನು ಪುನರುತ್ಥಾನ ಹೊಂದುತ್ತೇನೆ’ ಎಂದು ಹೇಳಿದ್ದು ನಮಗಿನ್ನೂ ನೆನಪಿದೆ.
ಮತ್ತಾಯನು 27 : 64 (ERVKN)
ಆದ್ದರಿಂದ ಮೂರು ದಿನಗಳವರೆಗೆ ಆ ಸಮಾಧಿಯನ್ನು ಭದ್ರವಾಗಿ ಕಾಯಲು ಆಜ್ಞಾಪಿಸಿರಿ. ಅವನ ಶಿಷ್ಯರು ಬಂದು, ಅವನ ದೇಹವನ್ನು ಕದ್ದುಕೊಂಡು ಹೋಗಿ, ಅವನು ಸಮಾಧಿಯಿಂದ ಮೇಲೆದ್ದಿದ್ದಾನೆ ಎಂದು ಜನರಿಗೆ ಹೇಳಬಹುದು. ಆಗ ಮೊದಲನೆಯ ಮೋಸಕ್ಕಿಂತ ಕಡೆಯದೇ ಕಡು ಮೋಸವಾದೀತು” ಎಂದು ಹೇಳಿದರು. [PE][PS]
ಮತ್ತಾಯನು 27 : 65 (ERVKN)
ಪಿಲಾತನು, “ಕೆಲವು ಸೈನಿಕರನ್ನು ಕರೆದುಕೊಂಡು ಹೋಗಿ, ನಿಮಗೆ ಬೇಕಾದ ರೀತಿಯಲ್ಲಿ ಸಮಾಧಿಯನ್ನು ಭದ್ರಪಡಿಸಿರಿ” ಎಂದು ಹೇಳಿದನು.
ಮತ್ತಾಯನು 27 : 66 (ERVKN)
ಅವರು ಹೋಗಿ, ಸಮಾಧಿಗೆ ಮುದ್ರೆ ಹಾಕಿ, ಸೈನಿಕರನ್ನು ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು. [PE]
❮
❯