ಮತ್ತಾಯನು 3 : 1 (ERVKN)
ಸ್ನಾನಿಕ ಯೋಹಾನನ ಉಪದೇಶ ಆ ಕಾಲದಲ್ಲಿ ಸ್ನಾನಿಕ ಯೋಹಾನನು ಜುದೇಯದ ಅಡವಿಯಲ್ಲಿ ಬೋಧಿಸುವುದಕ್ಕೆ ಪ್ರಾರಂಭಿಸಿದನು.
ಮತ್ತಾಯನು 3 : 2 (ERVKN)
“ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.
ಮತ್ತಾಯನು 3 : 3 (ERVKN)
“ ‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ;
ಆತನ ಹಾದಿಗಳನ್ನು ನೆಟ್ಟಗೆಮಾಡಿರಿ’ ಎಂದು ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ” ಯೆಶಾಯ 40:3 ಎಂದು ಸ್ನಾನಿಕ ಯೋಹಾನನನ್ನೇ ಕುರಿತು ಪ್ರವಾದಿಯಾದ ಯೆಶಾಯ ಹೇಳಿದ್ದನು.
ಮತ್ತಾಯನು 3 : 4 (ERVKN)
ಯೋಹಾನನ ಉಡುಪುಗಳು ಒಂಟೆಯ ಕೂದಲಿನಿಂದ ಮಾಡಲ್ಪಟ್ಟಿದ್ದವು. ಅವನಿಗೆ ಸೊಂಟದಲ್ಲಿ ತೊಗಲಿನ ನಡುಪಟ್ಟಿ ಇತ್ತು. ಅವನು ಮಿಡತೆ ಮತ್ತು ಕಾಡುಜೇನನ್ನು ಆಹಾರವಾಗಿ ತಿನ್ನುತ್ತಿದ್ದನು.
ಮತ್ತಾಯನು 3 : 5 (ERVKN)
ಜನರು ಯೋಹಾನನ ಉಪದೇಶವನ್ನು ಕೇಳಲು ಜೆರುಸಲೇಮಿನಿಂದಲೂ, ಜುದೇಯ ಮತ್ತು ಜೋರ್ಡನ್ ನದಿಯ ಸುತ್ತಲಿದ್ದ ಎಲ್ಲಾ ಸ್ಥಳಗಳಿಂದಲೂ ಬರುತ್ತಿದ್ದರು.
ಮತ್ತಾಯನು 3 : 6 (ERVKN)
ಜನರು ತಾವು ಮಾಡಿದ ಪಾಪಗಳನ್ನು ಒಪ್ಪಿಕೊಂಡ ಮೇಲೆ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಡುತ್ತಿದ್ದನು.
ಮತ್ತಾಯನು 3 : 7 (ERVKN)
ಅನೇಕ ಫರಿಸಾಯರು ಮತ್ತು ಸದ್ದುಕಾಯರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರನ್ನು ನೋಡಿ, “ನೀವೆಲ್ಲರು ಸರ್ಪಗಳು! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳಲು ನಿಮಗೆ ಎಚ್ಚರಿಸಿದವರು ಯಾರು?
ಮತ್ತಾಯನು 3 : 8 (ERVKN)
ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದನ್ನು ನೀವು ತಕ್ಕ ಕಾರ್ಯಗಳ ಮೂಲಕ ತೋರಿಸಿ.
ಮತ್ತಾಯನು 3 : 9 (ERVKN)
‘ಅಬ್ರಹಾಮನು ನಮ್ಮ ತಂದೆ’ ಎಂದು ನೀವು ಜಂಬಪಡುವುದೇಕೆ? ದೇವರು ಅಬ್ರಹಾಮನಿಗಾಗಿ ಇಲ್ಲಿರುವ ಬಂಡೆಗಳಿಂದಲೂ ಮಕ್ಕಳನ್ನು ಸೃಷ್ಟಿಸಬಲ್ಲನು ಎಂದು ನಾನು ನಿಮಗೆ ಹೇಳುತ್ತೇನೆ.
ಮತ್ತಾಯನು 3 : 10 (ERVKN)
ಮರಗಳನ್ನು ಕಡಿದುಹಾಕಲು ಕೊಡಲಿ ಈಗಲೇ ಸಿದ್ಧವಾಗಿದೆ. ಒಳ್ಳೆಯ ಫಲಬಿಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.
ಮತ್ತಾಯನು 3 : 11 (ERVKN)
“ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದಕ್ಕೆ ಗುರುತಾಗಿ ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನನ್ನ ಹಿಂದೆ ಬರುವವನು ನನಗಿಂತ ಹೆಚ್ಚಿನವನು. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.
ಮತ್ತಾಯನು 3 : 12 (ERVKN)
ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.
ಮತ್ತಾಯನು 3 : 13 (ERVKN)
ಯೋಹಾನನಿಂದ ಯೇಸುವಿಗೆ ದೀಕ್ಷಾಸ್ನಾನ (ಮಾರ್ಕ 1:9-11; ಲೂಕ 3:21-22) ಆ ಸಮಯದಲ್ಲಿ ಯೋಹಾನನಿಂದ ಯೇಸು ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಗಲಿಲಾಯದಿಂದ ಜೋರ್ಡನ್ ನದಿಗೆ ಬಂದನು.
ಮತ್ತಾಯನು 3 : 14 (ERVKN)
ಆದರೆ ಯೋಹಾನನು, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿದೆ. ಹೀಗಿರಲು ನನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ನೀನು ಬರುವುದೇಕೆ?” ಎಂದು ಹೇಳಿ ಆತನನ್ನು ತಡೆಯಲೆತ್ನಿಸಿದನು.
ಮತ್ತಾಯನು 3 : 15 (ERVKN)
ಯೇಸು, “ಸದ್ಯಕ್ಕೆ ಒಪ್ಪಿಕೊ. ನಾವು ಯೋಗ್ಯವಾದ ಕಾರ್ಯಗಳನ್ನೆಲ್ಲ ಮಾಡಬೇಕು” ಎಂದು ಉತ್ತರಕೊಟ್ಟನು. ಆಗ ಯೋಹಾನನು ಯೇಸುವಿಗೆ ದೀಕ್ಷಾಸ್ನಾನ ಮಾಡಿಸಲು ಒಪ್ಪಿಕೊಂಡನು.
ಮತ್ತಾಯನು 3 : 16 (ERVKN)
ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದನು. ಕೂಡಲೇ ಆಕಾಶವು ತೆರೆಯಿತು. ದೇವರಾತ್ಮನು ಪಾರಿವಾಳದ ರೂಪದಲ್ಲಿ ಕೆಳಗಿಳಿದು ತನ್ನ ಮೇಲೆ ಬರುತ್ತಿರುವುದನ್ನು ಯೇಸು ಕಂಡನು.
ಮತ್ತಾಯನು 3 : 17 (ERVKN)
ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ಈತನೇ (ಯೇಸು) ನನ್ನ ಪ್ರಿಯ ಮಗನು. ಈತನನ್ನು ನಾನು ಬಹಳ ಮೆಚ್ಚಿದ್ದೇನೆ” ಎಂದು ಹೇಳಿತು.
❮
❯
1
2
3
4
5
6
7
8
9
10
11
12
13
14
15
16
17