ಮತ್ತಾಯನು 7 : 1 (ERVKN)
“ಬೇರೆಯವರಿಗೆ ತೀರ್ಪು ನೀಡಬೇಡಿ. ಆಗ ದೇವರೂ ನಿಮಗೆ ತೀರ್ಪು ಮಾಡುವುದಿಲ್ಲ.
ಮತ್ತಾಯನು 7 : 2 (ERVKN)
ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.
ಮತ್ತಾಯನು 7 : 3 (ERVKN)
“ನಿನ್ನ ಸ್ವಂತ ಕಣ್ಣಿನಲ್ಲಿ ಇರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಏಕೆ ನೋಡುವೆ?
ಮತ್ತಾಯನು 7 : 4 (ERVKN)
ನಿನ್ನ ಕಣ್ಣಿನಲ್ಲಿರುವ ಅಣುವನ್ನು ನಾನು ಹೊರಗೆ ತೆಗೆಯಲೇ? ಎಂದು ನಿನ್ನ ಸಹೋದರನಿಗೆ ಹೇಳುವುದೇಕೆ? ಮೊದಲು ನಿನ್ನ ಕಣ್ಣನ್ನು ನೋಡಿಕೊ! ನಿನ್ನ ಕಣ್ಣಿನಲ್ಲಿ ತೊಲೆ ಇನ್ನೂ ಇದೆ.
ಮತ್ತಾಯನು 7 : 5 (ERVKN)
ನೀನು ಕಪಟಿ! ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಹೊರಗೆ ತೆಗೆದುಬಿಡು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಹೊರತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣುವುದು.
ಮತ್ತಾಯನು 7 : 6 (ERVKN)
“ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.
ಮತ್ತಾಯನು 7 : 7 (ERVKN)
“ಬೇಡಿಕೊಳ್ಳಿರಿ, ಆಗ ದೇವರು ನಿಮಗೆ ಕೊಡುತ್ತಾನೆ. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ಬಾಗಿಲು ತಟ್ಟಿರಿ, ಆಗ ಅದು ನಿಮಗೆ ತೆರೆಯುವುದು.
ಮತ್ತಾಯನು 7 : 8 (ERVKN)
ಹೌದು, ಕೇಳುತ್ತಲೇ ಇರುವವನು ಪಡೆದುಕೊಳ್ಳುತ್ತಾನೆ, ಹುಡುಕುತ್ತಲೇ ಇರುವವನು ಕಂಡುಕೊಳ್ಳುತ್ತಾನೆ, ತಟ್ಟುತ್ತಲೇ ಇರುವವನಿಗೆ ಬಾಗಿಲು ತೆರೆಯುತ್ತದೆ.
ಮತ್ತಾಯನು 7 : 9 (ERVKN)
“ನಿಮ್ಮ ಮಗನು ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಡುವಿರೊ?
ಮತ್ತಾಯನು 7 : 10 (ERVKN)
ಮೀನನ್ನು ಕೇಳಿದರೆ, ಹಾವನ್ನು ಕೊಡುವಿರೊ?
ಮತ್ತಾಯನು 7 : 11 (ERVKN)
ನೀವು ದೇವರಂತೆ ಒಳ್ಳೆಯವರಲ್ಲ, ಕೆಟ್ಟವರು. ಆದರೂ ನಿಮ್ಮ ಮಕ್ಕಳಿಗೆ ಒಳ್ಳೆಯ ವಸ್ತುಗಳನ್ನು ಕೊಡಬೇಕೆಂಬುದು ನಿಮಗೆ ತಿಳಿದಿದೆ. ಹೀಗಿರಲಾಗಿ ಪರಲೋಕದ ನಿಮ್ಮ ತಂದೆಯು ಸಹ ತನ್ನನ್ನು ಕೇಳುವವರಿಗೆ ಒಳ್ಳೆಯ ವಸ್ತುಗಳನ್ನು ನಿಶ್ಚಯವಾಗಿಯೂ ಕೊಡುತ್ತಾನೆ.
ಮತ್ತಾಯನು 7 : 12 (ERVKN)
“ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ.
ಮತ್ತಾಯನು 7 : 13 (ERVKN)
“ಇಕ್ಕಟ್ಟಾದ ಬಾಗಿಲಿನ ಮೂಲಕ ಪರಲೋಕ ರಾಜ್ಯವನ್ನು ಪ್ರವೇಶಿಸಿರಿ. ನರಕಕ್ಕೆ ಹೋಗುವ ದಾರಿ ದೊಡ್ಡದು, ಬಾಗಿಲು ಬಹಳ ವಿಶಾಲ. ಅನೇಕ ಜನರು ಆ ಬಾಗಿಲಲ್ಲಿ ಪ್ರವೇಶಿಸುತ್ತಾರೆ.
ಮತ್ತಾಯನು 7 : 14 (ERVKN)
ಆದರೆ ನಿತ್ಯಜೀವಕ್ಕಿರುವ ಬಾಗಿಲು ಬಹಳ ಚಿಕ್ಕದು, ದಾರಿ ಕಷ್ಟಕರ. ಕೆಲವರು ಮಾತ್ರ ಆ ಮಾರ್ಗವನ್ನು ಕಂಡುಕೊಳ್ಳುವರು.
ಮತ್ತಾಯನು 7 : 15 (ERVKN)
“ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.
ಮತ್ತಾಯನು 7 : 16 (ERVKN)
ಅವರ ಕ್ರಿಯೆಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳಿನ ಪೊದೆಗಳಲ್ಲಿ ದ್ರಾಕ್ಷಿಯು ಹೇಗೆ ದೊರೆಯುವುದಿಲ್ಲವೋ ಅದೇ ರೀತಿ ಒಳ್ಳೆಯವುಗಳು ಕೆಟ್ಟ ಜನಗಳಿಂದ ಬರುವುದಿಲ್ಲ. ಅಂಜೂರವು ಮುಳ್ಳುಗಿಡಗಳಲ್ಲಿ ದೊರೆಯುವುದಿಲ್ಲ.
ಮತ್ತಾಯನು 7 : 17 (ERVKN)
ಅದೇ ರೀತಿ ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ.
ಮತ್ತಾಯನು 7 : 18 (ERVKN)
ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ ಮತ್ತು ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
ಮತ್ತಾಯನು 7 : 19 (ERVKN)
ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಎಸೆಯಲಾಗುವುದು.
ಮತ್ತಾಯನು 7 : 20 (ERVKN)
ಈ ಸುಳ್ಳು ಬೋಧಕರನ್ನು ಅವರು ಕೊಡುವ ಫಲದಿಂದಲೇ (ಕಾರ್ಯಗಳಿಂದಲೇ) ನೀವು ತಿಳಿದುಕೊಳ್ಳುವಿರಿ.
ಮತ್ತಾಯನು 7 : 21 (ERVKN)
“‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.
ಮತ್ತಾಯನು 7 : 22 (ERVKN)
ಕೊನೆಯ ದಿನಗಳಲ್ಲಿ ಅನೇಕರು ನನಗೆ, ‘ನೀನೇ ನಮ್ಮ ಪ್ರಭು! ನಿನ್ನ ವಿಷಯವಾಗಿ ನಾವು ಬೋಧಿಸಿದೆವು. ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸಿದೆವು ಮತ್ತು ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆವು’ ಎಂದು ಹೇಳುವರು.
ಮತ್ತಾಯನು 7 : 23 (ERVKN)
ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು.
ಮತ್ತಾಯನು 7 : 24 (ERVKN)
“ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.
ಮತ್ತಾಯನು 7 : 25 (ERVKN)
ಬಿರುಸಾದ ಮಳೆಯು ಸುರಿದು ನೀರು ಮೇಲಕ್ಕೆ ಏರುತ್ತದೆ. ಗಾಳಿ ಬೀಸಿ ಆ ಮನೆಗೆ ಬಡಿಯುತ್ತದೆ. ಆದರೆ ಆ ಮನೆಯನ್ನು ಬಂಡೆಯ ಮೇಲೆ ಕಟ್ಟಿದ್ದರಿಂದ ಅದು ಬೀಳಲಿಲ್ಲ.
ಮತ್ತಾಯನು 7 : 26 (ERVKN)
“ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದವನು ಬುದ್ಧಿಹೀನನಾಗಿದ್ದಾನೆ. ಆ ಬುದ್ಧಿಹೀನನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದನು.
ಮತ್ತಾಯನು 7 : 27 (ERVKN)
ಬಿರುಸಾದ ಮಳೆ ಸುರಿದು ನೀರು ಮೇಲಕ್ಕೆ ಏರಿತು, ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆಗ ಆ ಮನೆಯು ಕುಸಿದು ಬಿತ್ತು.”
ಮತ್ತಾಯನು 7 : 28 (ERVKN)
ಯೇಸು ಉಪದೇಶಿಸಿದ ಈ ಸಂಗತಿಗಳನ್ನು ಕೇಳಿ ಜನರು ಅತ್ಯಾಶ್ಚರ್ಯಪಟ್ಟರು.
ಮತ್ತಾಯನು 7 : 29 (ERVKN)
ಏಕೆಂದರೆ, ಆತನು ಧರ್ಮೋಪದೇಶಕರಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಉಪದೇಶಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29

BG:

Opacity:

Color:


Size:


Font: