ಮತ್ತಾಯನು 9 : 1 (ERVKN)
{ಸ್ವಸ್ಥತೆಯನ್ನು ಹೊಂದಿದ ಪಾರ್ಶ್ವವಾಯು ರೋಗಿ} (ಮಾರ್ಕ 2:1-12; 5:17-26) [PS] ಯೇಸು ದೋಣಿಯನ್ನು ಹತ್ತಿ ಸರೋವರವನ್ನು ದಾಟಿ ತನ್ನ ಸ್ವಂತ ಊರಿಗೆ ಹೋದನು.
ಮತ್ತಾಯನು 9 : 2 (ERVKN)
ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಯೇಸುವಿನ ಬಳಿಗೆ ತಂದರು. ಅವನು ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಯೇಸು ಈ ಜನರಲ್ಲಿದ್ದ ದೊಡ್ಡ ನಂಬಿಕೆಯನ್ನು ಕಂಡು ಪಾರ್ಶ್ವವಾಯು ರೋಗಿಗೆ, “ಯುವಕನೇ, ಸಂತೋಷಪಡು. ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. [PE][PS]
ಮತ್ತಾಯನು 9 : 3 (ERVKN)
ಅಲ್ಲಿದ್ದ ಧರ್ಮೋಪದೇಶಕರು ಇದನ್ನು ಕೇಳಿ, “ಇದು ದೇವದೂಷಣೆ” ಎಂದು ತಮ್ಮೊಳಗೆ ಅಂದುಕೊಂಡರು. [PE][PS]
ಮತ್ತಾಯನು 9 : 4 (ERVKN)
ಅವರು ಹೀಗೆ ಆಲೋಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆತನು ಅವರಿಗೆ, “ನೀವು ಏಕೆ ದುರಾಲೋಚನೆ ಮಾಡುತ್ತಿದ್ದೀರಿ?
ಮತ್ತಾಯನು 9 : 5 (ERVKN)
ಯಾವುದು ಸುಲಭ? ಈ ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಹೇಳುವುದೇ ಅಥವಾ ‘ಮೇಲಕ್ಕೆದ್ದು ನಡೆ’ ಎಂದು ಹೇಳುವುದೇ?
ಮತ್ತಾಯನು 9 : 6 (ERVKN)
ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸಲು ಭೂಲೋಕದಲ್ಲಿ ಅಧಿಕಾರವಿದೆ ಎಂಬುದನ್ನು ನಾನು ನಿಮಗೆ ನಿರೂಪಿಸುತ್ತೇನೆ” ಎಂದನು. ನಂತರ ಯೇಸು ಪಾರ್ಶ್ವವಾಯು ರೋಗಿಗೆ, “ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು. [PE][PS]
ಮತ್ತಾಯನು 9 : 7 (ERVKN)
ಆಗ ಅವನು ಎದ್ದು ಮನೆಗೆ ಹೋದನು.
ಮತ್ತಾಯನು 9 : 8 (ERVKN)
ಜನರು ಇದನ್ನು ನೋಡಿ ಆಶ್ಚರ್ಯಚಕಿತರಾದರು. ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟಿದ್ದಕ್ಕಾಗಿ ಜನರು ದೇವರನ್ನು ಕೊಂಡಾಡಿದರು. [PE][PS]
ಮತ್ತಾಯನು 9 : 9 (ERVKN)
{ಸುಂಕದವನು} (ಮಾರ್ಕ 2:13-17; ಲೂಕ 5:27-32) [PS] ಯೇಸು ಹೋಗುತ್ತಿರುವಾಗ, ಮತ್ತಾಯ ಎಂಬ ವ್ಯಕ್ತಿಯನ್ನು ಕಂಡನು. ಮತ್ತಾಯನು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಅಂದನು. ಆಗ ಮತ್ತಾಯನು ಎದ್ದು ಯೇಸುವನ್ನು ಹಿಂಬಾಲಿಸಿದನು. [PE][PS]
ಮತ್ತಾಯನು 9 : 10 (ERVKN)
ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತುಕೊಂಡನು. ಅನೇಕ ಮಂದಿ ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಸಹ ಯೇಸುವಿನ ಸಂಗಡ ಮತ್ತು ಆತನ ಹಿಂಬಾಲಕರ ಸಂಗಡ ಊಟಕ್ಕೆ ಕುಳಿತುಕೊಂಡರು.
ಮತ್ತಾಯನು 9 : 11 (ERVKN)
ಇದನ್ನು ಕಂಡ ಫರಿಸಾಯರು ಯೇಸುವಿನ ಶಿಷ್ಯರಿಗೆ, “ನಿಮ್ಮ ಬೋಧಕನು ಸುಂಕವಸೂಲಿಗಾರರೊಂದಿಗೆ ಮತ್ತು ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು. [PE][PS]
ಮತ್ತಾಯನು 9 : 12 (ERVKN)
ಫರಿಸಾಯರು ಹೇಳಿದ್ದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ಆರೋಗ್ಯವುಳ್ಳ ಜನರಿಗೆ ವೈದ್ಯನ ಅವಶ್ಯಕತೆಯಿಲ್ಲ. ಕಾಯಿಲೆಯ ಜನರಿಗೆ ವೈದ್ಯನು ಅವಶ್ಯ.
ಮತ್ತಾಯನು 9 : 13 (ERVKN)
ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ [✡ಉಲ್ಲೇಖನ: ಹೋಶೇಯ 6:6.] ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು. [PE][PS]
ಮತ್ತಾಯನು 9 : 14 (ERVKN)
{ಯೇಸು ಇತರ ಧಾರ್ಮಿಕ ಯೆಹೂದ್ಯರಂತಲ್ಲ} (ಮಾರ್ಕ 2:18-22; ಲೂಕ 5:33-39) [PS] ನಂತರ ಯೋಹಾನನ ಶಿಷ್ಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನಾವು ಮತ್ತು ಫರಿಸಾಯರು ಆಗಾಗ್ಗೆ ಉಪವಾಸ ಮಾಡುತ್ತೇವೆ. ಆದರೆ ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ?” ಎಂದು ಕೇಳಿದರು. [PE][PS]
ಮತ್ತಾಯನು 9 : 15 (ERVKN)
ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ. [PE][PS]
ಮತ್ತಾಯನು 9 : 16 (ERVKN)
“ಒಬ್ಬನು ಹರಿದುಹೋದ ಹಳೆ ಮೇಲಂಗಿಗೆ ಹೊಸ ಬಟ್ಟೆಯ ತುಂಡನ್ನು ತೇಪೆಹಾಕಿ ಹೊಲಿಯುವುದಿಲ್ಲ. ಒಂದುವೇಳೆ ಹೊಲಿದರೆ, ಆ ತೇಪೆಯು ಹಿಂಜಿಕೊಂಡು ಮೇಲಂಗಿಯಿಂದ ಕಿತ್ತುಬರುವುದು. ಆಗ ಆ ಮೇಲಂಗಿಯು ಮತ್ತಷ್ಟು ಹರಿದುಹೋಗುವುದು.
ಮತ್ತಾಯನು 9 : 17 (ERVKN)
ಇದಲ್ಲದೆ ಜನರು ಹೊಸ ದ್ರಾಕ್ಷಾರಸವನ್ನು ಹಳೆ ದ್ರಾಕ್ಷಾರಸದ ಬುದ್ದಲಿಗಳಲ್ಲಿ ಹಾಕುವುದಿಲ್ಲ; ಏಕೆಂದರೆ ಹಳೆ ಬುದ್ದಲಿಗಳು ಒಡೆದುಹೋಗುತ್ತವೆ; ಮತ್ತು ದ್ರಾಕ್ಷಾರಸವು ಚೆಲ್ಲಿಹೋಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುವರು. ಆಗ ಎರಡೂ ಉಳಿಯುತ್ತವೆ” ಅಂದನು. [PE][PS]
ಮತ್ತಾಯನು 9 : 18 (ERVKN)
{ಮರುಜೀವ ಹೊಂದಿದ ಬಾಲಕಿ ಮತ್ತು ಗುಣಮುಖಳಾದ ಸ್ತ್ರೀ} (ಮಾರ್ಕ 5:21-43; ಲೂಕ 8:40-56) [PS] ಯೇಸು ಈ ಸಂಗತಿಗಳನ್ನು ಹೇಳುತ್ತಿರುವಾಗ ಸಭಾಮಂದಿರದ ಅಧಿಕಾರಿಯೊಬ್ಬನು ಆತನ ಬಳಿಗೆ ಬಂದು ಆತನಿಗೆ ಬಾಗಿ ನಮಸ್ಕರಿಸಿ, “ನನ್ನ ಮಗಳು ಈಗ ತಾನೇ ಸತ್ತುಹೋದಳು. ನೀನು ಬಂದು ಅವಳನ್ನು ಮುಟ್ಟಿದರೆ ಅವಳು ಮತ್ತೆ ಜೀವಂತಳಾಗುವಳು” ಎಂದು ಹೇಳಿದನು. [PE][PS]
ಮತ್ತಾಯನು 9 : 19 (ERVKN)
ಆದ್ದರಿಂದ ಯೇಸು ಎದ್ದು ಅಧಿಕಾರಿಯ ಸಂಗಡ ಹೋದನು. ಯೇಸುವಿನ ಶಿಷ್ಯರು ಸಹ ಹೋದರು. [PE][PS]
ಮತ್ತಾಯನು 9 : 20 (ERVKN)
ಹನ್ನೆರಡು ವರ್ಷಗಳಿಂದ ರಕ್ತಸ್ರಾವ ಕಾಯಿಲೆ ಹೊಂದಿದ್ದ ಒಬ್ಬ ಹೆಂಗಸು ಅಲ್ಲಿದ್ದಳು. ಆ ಹೆಂಗಸು ಯೇಸುವಿನ ಹಿಂದೆಯೇ ಬಂದು ಆತನ ಮೇಲಂಗಿಯ ತುದಿಯನ್ನು ಮುಟ್ಟಿದಳು.
ಮತ್ತಾಯನು 9 : 21 (ERVKN)
ಆ ಹೆಂಗಸು, “ನಾನು ಆತನ ಅಂಗಿಯನ್ನು ಮುಟ್ಟಿದರೆ ಸಾಕು, ನಾನು ಗುಣವಾಗಬಲ್ಲೆ” ಎಂದು ಆಲೋಚನೆ ಮಾಡಿಕೊಂಡಿದ್ದಳು. [PE][PS]
ಮತ್ತಾಯನು 9 : 22 (ERVKN)
ಯೇಸು ಹಿಂತಿರುಗಿ ಆ ಹೆಂಗಸನ್ನು ನೋಡಿ, “ಮಗಳೇ, ಸಂತೋಷಪಡು! ನಿನ್ನ ನಂಬಿಕೆಯಿಂದಲೇ ನಿನಗೆ ಗುಣವಾಯಿತು” ಎಂದು ಹೇಳಿದನು. ಆಗ ಅವಳು ಗುಣಮುಖಳಾದಳು. [PE][PS]
ಮತ್ತಾಯನು 9 : 23 (ERVKN)
ಬಳಿಕ ಯೇಸು ಅಧಿಕಾರಿಯೊಡನೆ ಮುಂದೆ ಸಾಗಿ ಅವನ ಮನೆಯೊಳಕ್ಕೆ ಹೋದನು. ಶವಸಂಸ್ಕಾರಕ್ಕಾಗಿ ಬಂದಿದ್ದ ವಾದ್ಯವೃಂದದವರಿಗೂ ಗೋಳಾಡುತ್ತಿದ್ದವರಿಗೂ ಯೇಸು,
ಮತ್ತಾಯನು 9 : 24 (ERVKN)
“ದೂರ ಹೋಗಿರಿ, ಹುಡುಗಿ ಸತ್ತಿಲ್ಲ. ಅವಳು ನಿದ್ದೆ ಮಾಡುತ್ತಿದ್ದಾಳೆ” ಅಂದನು. ಆದರೆ ಅವರು ಯೇಸುವನ್ನು ಅಪಹಾಸ್ಯ ಮಾಡಿದರು.
ಮತ್ತಾಯನು 9 : 25 (ERVKN)
ಜನರನ್ನು ಮನೆಯ ಹೊರಗೆ ಕಳುಹಿಸಿದ ಮೇಲೆ ಯೇಸು ಹುಡುಗಿಯ ಕೋಣೆಯ ಒಳಗೆ ಹೋದನು. ಯೇಸು ಹುಡುಗಿಯ ಕೈಯನ್ನು ಹಿಡಿದಾಗ ಆ ಹುಡುಗಿಯು ಎದ್ದುನಿಂತಳು.
ಮತ್ತಾಯನು 9 : 26 (ERVKN)
ಈ ಸುದ್ದಿಯು ಸುತ್ತಮುತ್ತಲಿನ ಪ್ರದೇಶದಲ್ಲೆಲ್ಲಾ ಹಬ್ಬಿತು. [PS]
ಮತ್ತಾಯನು 9 : 27 (ERVKN)
{ಅನೇಕರಿಗೆ ಸ್ವಸ್ಥತೆ} [PS] ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು, “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು. [PE][PS]
ಮತ್ತಾಯನು 9 : 28 (ERVKN)
ಯೇಸು ಮನೆಯೊಳಗೆ ಹೋದನು. ಕುರುಡರೂ ಆತನ ಸಂಗಡ ಹೋದರು. ಯೇಸು ಅವರಿಗೆ, “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ನಂಬುತ್ತೀರೋ?” ಎಂದು ಕೇಳಿದನು. ಕುರುಡರು, “ಹೌದು ಪ್ರಭುವೇ, ನಾವು ನಂಬುತ್ತೇವೆ” ಎಂದು ಉತ್ತರಕೊಟ್ಟರು. [PE][PS]
ಮತ್ತಾಯನು 9 : 29 (ERVKN)
ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನೀವು ನಂಬಿದಂತೆಯೇ ನಿಮಗೆ ಗುಣವಾಗಲಿ” ಅಂದನು.
ಮತ್ತಾಯನು 9 : 30 (ERVKN)
ಕೂಡಲೇ ಅವರಿಗೆ ದೃಷ್ಟಿ ಬಂದಿತು. “ಈ ವಿಷಯವನ್ನು ಯಾರಿಗೂ ಹೇಳಬಾರದು” ಎಂದು ಯೇಸು ಅವರಿಗೆ ಎಚ್ಚರಿಕೆ ನೀಡಿದನು.
ಮತ್ತಾಯನು 9 : 31 (ERVKN)
ಆದರೆ ಆ ಕುರುಡರು ಅಲ್ಲಿಂದ ಹೊರಟುಹೋಗಿ ಯೇಸುವಿನ ಸುದ್ದಿಯನ್ನು ಆ ಪ್ರದೇಶದ ಸುತ್ತಮುತ್ತಲೆಲ್ಲಾ ಹಬ್ಬಿಸಿದರು. [PE][PS]
ಮತ್ತಾಯನು 9 : 32 (ERVKN)
ಅವರಿಬ್ಬರು ಹೋಗುತ್ತಿರುವಾಗ ಕೆಲವರು ಬೇರೊಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಮೂಕನಾಗಿದ್ದನು.
ಮತ್ತಾಯನು 9 : 33 (ERVKN)
ಯೇಸು ಆ ದೆವ್ವಕ್ಕೆ ಅವನನ್ನು ಬಿಟ್ಟುಹೋಗುವಂತೆ ಆಜ್ಞಾಪಿಸಿದನು. ಅವನು ಮಾತನಾಡತೊಡಗಿದನು. ಇದನ್ನು ಕಂಡ ಜನರು ಆಶ್ಚರ್ಯಚಕಿತರಾಗಿ, “ಇಸ್ರೇಲಿನಲ್ಲಿ ಇಂಥ ಕಾರ್ಯವನ್ನು ನೋಡಿಯೇ ಇಲ್ಲ” ಅಂದರು. [PE][PS]
ಮತ್ತಾಯನು 9 : 34 (ERVKN)
ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದರು. [PS]
ಮತ್ತಾಯನು 9 : 35 (ERVKN)
{ಜನರ ವಿಷಯದಲ್ಲಿ ಯೇಸುವಿನ ದುಃಖ} [PS] ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.
ಮತ್ತಾಯನು 9 : 36 (ERVKN)
ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.
ಮತ್ತಾಯನು 9 : 37 (ERVKN)
ಯೇಸು ತನ್ನ ಶಿಷ್ಯರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಸ್ವಲ್ಪ.
ಮತ್ತಾಯನು 9 : 38 (ERVKN)
ಬೆಳೆಯ ಯಜಮಾನ ದೇವರೇ. ಆದ್ದರಿಂದ ಹೆಚ್ಚು ಕೆಲಸಗಾರರನ್ನು ಸುಗ್ಗಿಗಾಗಿ ಕಳುಹಿಸಿಕೊಡುವಂತೆ ಆತನಿಗೆ ಪ್ರಾರ್ಥನೆ ಮಾಡಿರಿ” ಎಂದು ಹೇಳಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38

BG:

Opacity:

Color:


Size:


Font: