ನೆಹೆಮಿಯ 3 : 1 (ERVKN)
ಪೌಳಿಗೋಡೆಯನ್ನು ಕಟ್ಟಿದವರು ಎಲ್ಯಾಷೀಬನು ಮಹಾಯಾಜಕನಾಗಿದ್ದನು. ಅವನೂ ಮತ್ತು ಯಾಜಕರುಗಳಾಗಿದ್ದ ಅವನ ಸಹೋದರರೂ ಕುರಿ ಹೆಬ್ಬಾಗಿಲನ್ನು ಕಟ್ಟಿದರು. ನಂತರ ಪ್ರಾರ್ಥಿಸಿ ಯೆಹೋವನಿಗೆ ಅದನ್ನು ಪ್ರತಿಷ್ಠಿಸಿದರು. ಅವರು ಅದಕ್ಕೆ ಬಾಗಿಲುಗಳನ್ನು ಜೋಡಿಸಿದರು. ಆ ಯಾಜಕರು ನೂರುಗೋಪುರ ಮತ್ತು ಹನನೇಲ್ ಗೋಪುರದವರೆಗೂ ಜೆರುಸಲೇಮಿನ ಗೋಡೆಯನ್ನು ಕಟ್ಟಿದ್ದರು. ಅವರು ಪ್ರಾರ್ಥಿಸಿ ಯೆಹೋವನಿಗೆ ಪ್ರತಿಷ್ಠಿಸಿದರು.
ನೆಹೆಮಿಯ 3 : 2 (ERVKN)
ಯಾಜಕರು ಕಟ್ಟಿನಿಲ್ಲಿಸಿದ್ದ ಸ್ಥಳದಿಂದ ಜೆರಿಕೊದವರು ಗೋಡೆ ಕಟ್ಟಿದರು, ಜೆರಿಕೊದವರು ಕಟ್ಟಿ ನಿಲ್ಲಿಸಿದ್ದ ಸ್ಥಳದಿಂದ ಇಮ್ರಿಯ ಮಗನಾದ ಜಕ್ಕೂರನು ಗೋಡೆ ಕಟ್ಟಿದನು.
ನೆಹೆಮಿಯ 3 : 3 (ERVKN)
ಹಸ್ಸೆನಾಹನ ಗಂಡುಮಕ್ಕಳು ಮೀನುಬಾಗಿಲನ್ನು ಕಟ್ಟಿ ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದಗಳು, ಅಗುಳಿ, ತಿರುಗಣೆಗಳನ್ನಿಟ್ಟು ಭದ್ರಪಡಿಸಿದರು.
ನೆಹೆಮಿಯ 3 : 4 (ERVKN)
ಇವನ ನಂತರ ಊರೀಯನ ಮಗನಾದ ಮೆರೇಮೋತನು ಗೋಡೆಯನ್ನು ಕಟ್ಟಿದನು. (ಊರೀಯನು ಹಕ್ಕೋಚನ ಮಗ.) ಇದರ ಮುಂದಿನ ಭಾಗವನ್ನು ಬೆರೆಕ್ಯನ ಮಗನಾದ ಮೆಷುಲ್ಲಾಮನು ಕಟ್ಟಿದನು. (ಬೆರೆಕ್ಯನು ಮೆಷೇಜಬೇಲನ ಮಗ.) ಈ ಗೋಡೆಯ ನಂತರದ ಭಾಗವನ್ನು ಬಾನನ ಮಗನಾದ ಚಾದೋಕನು ಕಟ್ಟಿದನು.
ನೆಹೆಮಿಯ 3 : 5 (ERVKN)
ತೆಕೋವದವರು ಅಲ್ಲಿಂದಾಚೆಗೆ ಗೋಡೆ ಕಟ್ಟಿದರು. ಆದರೆ ಅವರ ನಾಯಕರು ತಮ್ಮ ರಾಜ್ಯಪಾಲನಾದ ನೆಹೆಮೀಯನಿಗಾಗಿ ಕೆಲಸಮಾಡಲು ಒಪ್ಪಲಿಲ್ಲ.
ನೆಹೆಮಿಯ 3 : 6 (ERVKN)
ಯೋಯಾದ ಮತ್ತು ಮೆಷುಲ್ಲಾಮ್ ಹಳೆಬಾಗಿಲನ್ನು ಜೋಡಿಸಿದರು. ಯೋಯಾದನು ಪಾಸೇಹನ ಮಗ; ಮೆಷುಲ್ಲಾಮನು ಬೆಸೋದ್ಯನ ಮಗ. ಅವರು ತೊಲೆಗಳನ್ನು ಇಟ್ಟರು; ಬಾಗಿಲುಗಳನ್ನು, ಕದಗಳನ್ನು, ಅಗುಳಿಗಳನ್ನು ಜೋಡಿಸಿದರು.
ನೆಹೆಮಿಯ 3 : 7 (ERVKN)
ಗಿಬ್ಯೋನ್ ಮತ್ತು ಮಿಚ್ಫದ ಜನರು ಅಲ್ಲಿಂದಾಚೆಗೆ ಗೋಡೆಯನ್ನು ಕಟ್ಟಿದರು. ಗಿಬ್ಯೋನಿನ ಮೆಲೆಟ್ಯ ಎಂಬವನು ಮತ್ತು ಮೇರೋನೋತಿನ ಯಾದೋನ್ ಎಂಬವನು ಈ ಕೆಲಸವನ್ನು ಮಾಡಿದರು. ಗಿಬ್ಯೋನ್ ಮತ್ತು ಮೇರೋನೋತ್ ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರುಗಳ ಆಡಳಿತಕ್ಕೆ ಒಳಪಟ್ಟಿತ್ತು.
ನೆಹೆಮಿಯ 3 : 8 (ERVKN)
ಹರ್ಹಯನ ಮಗನಾದ ಉಜ್ಜೀಯೇಲನು ಅಲ್ಲಿಂದಾಚೆಗೆ ಕಟ್ಟಿದನು. ಉಜ್ಜೀಯೇಲನು ಅಕ್ಕಸಾಲಿಗನಾಗಿದ್ದನು; ಹನನ್ಯನು ಸುಗಂಧದ್ರವ್ಯವನ್ನು ತಯಾರುಮಾಡುತ್ತಿದ್ದನು. ಇವರು, “ಅಗಲಗೋಡೆ”ಯವರೆಗೂ ಜೆರುಸಲೇಮ್ ಗೋಡೆಯನ್ನು ಕಟ್ಟಿದರು.
ನೆಹೆಮಿಯ 3 : 9 (ERVKN)
ಅರ್ಧ ಜೆರುಸಲೇಮಿನ ರಾಜ್ಯಪಾಲನಾಗಿದ್ದ ಹೂರನ ಮಗನಾದ ರೆಫಾಯನು ಮುಂದಿನ ಭಾಗವನ್ನು ಕಟ್ಟಿ ಮುಗಿಸಿದನು.
ನೆಹೆಮಿಯ 3 : 10 (ERVKN)
ಹರೂಮಫನ ಮಗನಾದ ಯೆದಾಯನು ಅಲ್ಲಿಂದಾಚೆಗೆ ಗೋಡೆ ಕಟ್ಟಿದನು. ಅದು ಅವನ ಮನೆಯ ನಂತರವೇ ಇತ್ತು. ಅಲ್ಲಿಂದಾಚೆಗೆ ಹಷಬ್ನೆಯನ ಮಗನಾದ ಹಟ್ಟೂಷನು ಕಟ್ಟಿದನು.
ನೆಹೆಮಿಯ 3 : 11 (ERVKN)
ಹಾರೀಮನ ಮಗನಾದ ಮಲ್ಕೀಯನು, ಪಹತ್‌ಮೋವಾಬನ ಮಗನಾದ ಹಷ್ಷೂಬನು ಅಲ್ಲಿಂದಾಚೆಗೆ ಕಟ್ಟಿದರು. ಅವರು ಒಲೆಬುರುಜನ್ನು ಸಹ ಕಟ್ಟಿದರು.
ನೆಹೆಮಿಯ 3 : 12 (ERVKN)
ಹಲ್ಲೊಹೇಷನ ಮಗನಾದ ಶಲ್ಲೂಮನು ಮುಂದಿನ ಭಾಗವನ್ನು ರಿಪೇರಿ ಮಾಡಿದನು. ಅವನ ಹೆಣ್ಣುಮಕ್ಕಳು ಅವನಿಗೆ ಸಹಾಯ ಮಾಡಿದರು. ಶಲ್ಲೂಮನು ಜೆರುಸಲೇಮಿನ ಇನ್ನೊಂದು ಭಾಗದ ರಾಜ್ಯಪಾಲನಾಗಿದ್ದನು.
ನೆಹೆಮಿಯ 3 : 13 (ERVKN)
ಜಾನೋಹ ಪಟ್ಟಣದಲ್ಲಿ ವಾಸಿಸುವ ಹಾನೂನನೂ ಅವನ ಸಂಗಡಿಗರೂ ಕಣಿವೆ ಬಾಗಿಲನ್ನು ಕಟ್ಟಿ ಅದಕ್ಕೆ ಅಗುಳಿ, ತಿರುಗಣಿ, ಕದಗಳನ್ನಿಟ್ಟು ಭದ್ರಪಡಿಸಿದರು. ಅಲ್ಲದೆ ಒಂದು ಸಾವಿರ ಮೊಳದಷ್ಟು ಉದ್ದದ ಗೋಡೆಯನ್ನು ಕಟ್ಟಿ ತಿಪ್ಪೆಬಾಗಿಲಿನ ತನಕ ಮುಂದುವರಿದರು.
ನೆಹೆಮಿಯ 3 : 14 (ERVKN)
ರೇಕಾಬನ ಮಗನಾದ ಮಲ್ಕೀಯನು ತಿಪ್ಪೆಬಾಗಿಲನ್ನು ರಿಪೇರಿಮಾಡಿಸಿದನು. ಇವನು ಬೇತ್ ಹಕ್ಕೆರಿಮಿನ ರಾಜ್ಯಪಾಲಕನಾಗಿದ್ದನು. ಅವನು ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು.
ನೆಹೆಮಿಯ 3 : 15 (ERVKN)
ಮಿಚ್ಪ ಜಿಲ್ಲಾಧಿಕಾರಿಯಾದ ಶಲ್ಲೂನನು ಬುಗ್ಗೆಬಾಗಿಲನ್ನು ರಿಪೇರಿಮಾಡಿದನು. ಶಲ್ಲೂನನು ಕೊಲ್ಹೋಜಿಯನ ಮಗ. ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು. ನಂತರ ಗೋಡೆಯನ್ನು ರಾಜನ ತೋಟದ ಸಮೀಪದಲ್ಲಿದ್ದ ಸಿಲೋವಕೊಳದ ತನಕ ಮುಂದುವರಿಸಿ ದಾವೀದನಗರಕ್ಕೆ ಪ್ರವೇಶಿಸುವ ಮೆಟ್ಟಿಲುಗಳ ತನಕ ಗೋಡೆಯನ್ನು ಕಟ್ಟಿದನು.
ನೆಹೆಮಿಯ 3 : 16 (ERVKN)
ಅಜ್ಬೂಕನ ಮಗನಾದ ನೆಹೆಮೀಯನು ಗೋಡೆಯ ಮುಂದಿನ ಭಾಗವನ್ನು ಕಟ್ಟಿದನು. ಇವನು ಬೇತ್ಚೂರ್ ಜಿಲ್ಲೆಯ ಅರ್ಧಭಾಗಕ್ಕೆ ಅಧಿಕಾರಿಯಾಗಿದ್ದನು. ದಾವೀದನ ಸಮಾಧಿಯ ತನಕ ಗೋಡೆಯನ್ನು ಮುಂದುವರಿಸಿ ವೀರರ ಮನೆಗಳ ತನಕ ಕಟ್ಟಿದನು.
ನೆಹೆಮಿಯ 3 : 17 (ERVKN)
ಮುಂದಿನ ಭಾಗವನ್ನು ಲೇವಿಯರು ಕಟ್ಟಿದರು. ಅವರ ಮುಖ್ಯಸ್ತನು ಬಾನಿಯ ಮಗನಾದ ರೆಹೂಮನು. ಕೆಯೀಲ ಎಂಬ ಅರ್ಧ ಜಿಲ್ಲೆಗೆ ರಾಜ್ಯಪಾಲಕನಾಗಿದ್ದ ಹಷಬ್ಯನು ಇದರ ಮುಂದಿನ ಭಾಗದ ಗೋಡೆಯನ್ನು ಕಟ್ಟಿದನು. ಇವನು ತನ್ನ ಜಿಲ್ಲೆಯಲ್ಲಿ ಮಾತ್ರ ರಿಪೇರಿ ಮಾಡಿದನು.
ನೆಹೆಮಿಯ 3 : 18 (ERVKN)
ಅವರ ಸಹೋದರರು ಕೆಯೀಲದ ಇನ್ನೊಂದು ಅರ್ಧಜಿಲ್ಲೆಗೆ ರಾಜ್ಯಪಾಲನಾಗಿದ್ದ ಬಿನೈನ ನಾಯಕತ್ವದಲ್ಲಿ ಮುಂದಿನ ಭಾಗದ ಗೋಡೆಯನ್ನು ರಿಪೇರಿಮಾಡಿದರು. ಬಿನೈಹೇನಾದಾದನ ಮಗ.
ನೆಹೆಮಿಯ 3 : 19 (ERVKN)
ಮಿಚ್ಪದ ರಾಜ್ಯಪಾಲನಾದ ಏಜೆರನು ಮುಂದಿನ ಭಾಗವನ್ನು ರಿಪೇರಿ ಮಾಡಿದನು. ಏಜೆರನು ಯೇಷೂವನ ಮಗ. ಇವನು ಆಯುಧ ಕೋಣೆಯಿಂದ ಹಿಡಿದು ಗೋಡೆಯ ಮೂಲೆಯ ತನಕ ರಿಪೇರಿಮಾಡಿದನು.
ನೆಹೆಮಿಯ 3 : 20 (ERVKN)
ಚಬ್ಬಾಯನ ಮಗನಾದ ಬಾರೂಕನು ಮುಂದಿನ ಭಾಗವನ್ನು ರಿಪೇರಿಮಾಡಿದನು. ಇವನು ಪ್ರಯಾಸಪಟ್ಟು ಮೂಲೆಯಿಂದ ಹಿಡಿದು ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆ ಮುಂದಿನ ಬಾಗಿಲಿನ ತನಕ ಗೋಡೆಯನ್ನು ಕಟ್ಟಿದನು.
ನೆಹೆಮಿಯ 3 : 21 (ERVKN)
ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಎಲ್ಯಾಷೀಬನ ಮನೆ ಮುಂದಿನ ಬಾಗಿಲಿನಿಂದ ಆ ಮನೆಯ ಕೊನೆಯತನಕ ಗೋಡೆಯನ್ನು ಕಟ್ಟಿದನು.
ನೆಹೆಮಿಯ 3 : 22 (ERVKN)
ಆ ಪ್ರಾಂತ್ಯದಲ್ಲಿ ವಾಸಿಸಿದ್ದ ಯಾಜಕರು ಸೇರಿ ಮುಂದಿನ ಭಾಗವನ್ನು ಕಟ್ಟಿದರು.
ನೆಹೆಮಿಯ 3 : 23 (ERVKN)
ಬೆನ್ಯಾಮೀನ್ ಮತ್ತು ಹಷ್ಷೂಬ್ ತಮ್ಮ ಸ್ವಂತ ಮನೆಗಳ ಮುಂದಿದ್ದ ಭಾಗವನ್ನು ಕಟ್ಟಿದರು, ಹಾಗೆಯೇ ಮಾಸೇಯನ ಮಗನಾದ ಅಜರ್ಯನು ತನ್ನ ಮನೆ ಮುಂದಿದ್ದ ಗೋಡೆಯನ್ನು ಕಟ್ಟಿದನು.
ನೆಹೆಮಿಯ 3 : 24 (ERVKN)
ಹೇನಾದಾದನ ಮಗನಾದ ಬಿನ್ನೂಯ್ ಅಜರ್ಯನ ಮನೆಯಿಂದ ಹಿಡಿದು ಮೂಲೆಯ ತನಕ ಗೋಡೆಯನ್ನು ಕಟ್ಟಿದನು.
ನೆಹೆಮಿಯ 3 : 25 (ERVKN)
ಊಜೈಯ ಮಗನಾದ ಪಾಲಾಲನು ಮೂಲೆಯಿಂದ ಹಿಡಿದು ರಾಜನ ಮೇಲ್ಮನೆಯ ಬುರುಜಿನ ತನಕ ಮುಂದುವರಿಸಿದನು. ಇದು ರಾಜನ ಕಾವಲುಪಡೆಯ ಅಂಗಳದ ಸಮೀಪದಲ್ಲಿತ್ತು. ಪರೋಷನ ಮಗನಾದ ಪೆದಾಯನು ಅಲ್ಲಿಂದಾಚೆಗೆ ಅಂದರೆ ಪಾಲಾಲನು ಕೊನೆಗೊಳಿಸಿದಾಚಿನಿಂದ ಮುಂದುವರಿಸಿದನು.
ನೆಹೆಮಿಯ 3 : 26 (ERVKN)
ಓಫೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದ ಆಲಯದ ಸೇವಕರು ಮುಂದಿನ ಭಾಗವನ್ನು “ನೀರು” ಎಂಬ ಬಾಗಿಲಿನ ಪೂರ್ವದ ಕಡೆಯವರೆಗೂ ಅದರ ಬಳಿಯಿದ್ದ ಬುರುಜಿನವರೆಗೂ ರಿಪೇರಿ ಮಾಡಿದರು.
ನೆಹೆಮಿಯ 3 : 27 (ERVKN)
ತೆಕೋವದವರು ಉಳಿದ ಆ ಭಾಗವನ್ನು ಅಂದರೆ ದೊಡ್ಡ ಬುರುಜಿನಿಂದ ಹಿಡಿದು ಓಫೇಲ್‌ಗೋಡೆಯ ತನಕ ಮುಂದುವರಿಸಿದರು.
ನೆಹೆಮಿಯ 3 : 28 (ERVKN)
ಯಾಜಕರು ಕುದುರೆಬಾಗಿಲಿನ ಮೇಲಿನ ಭಾಗವನ್ನು ಕಟ್ಟಿದರು. ಪ್ರತಿಯೊಬ್ಬ ಯಾಜಕನು ತನ್ನ ಮನೆ ಮುಂದಿದ್ದ ಭಾಗವನ್ನು ರಿಪೇರಿಮಾಡಿದನು.
ನೆಹೆಮಿಯ 3 : 29 (ERVKN)
ಇಮೇರನ ಮಗನಾದ ಚಾದೋಕನು ತನ್ನ ಮನೆಯ ಮುಂದಿದ್ದ ಗೋಡೆಯ ಭಾಗವನ್ನು ರಿಪೇರಿ ಮಾಡಿದನು. ಪೂರ್ವ ಬಾಗಿಲಿನ ದ್ವಾರಪಾಲಕನಾಗಿರು ಶೆಕನ್ಯನ ಮಗನಾದ ಶೆಮಾಯನು ಮುಂದಿನ ಭಾಗವನ್ನು ರಿಪೇರಿ ಮಾಡಿದನು.
ನೆಹೆಮಿಯ 3 : 30 (ERVKN)
ಶೆಲೆಮ್ಯನ ಮಗನಾದ ಹನನ್ಯನೂ ಮತ್ತು ಚಾಲಾಫನ ಆರನೆಯ ಮಗನಾದ ಹಾನೂನನೂ ಉಳಿದ ಭಾಗವನ್ನು ಮುಗಿಸಿದರು. ಬೆರೆಕ್ಯನ ಮಗನಾದ ಮೆಷುಲ್ಲಾಮ್ ತನ್ನ ಮನೆಯ ಮುಂದಿದ್ದ ಭಾಗವನ್ನು ಕಟ್ಟಿದನು.
ನೆಹೆಮಿಯ 3 : 31 (ERVKN)
ವರ್ತಕರ ಮತ್ತು ಆಲಯದ ಸೇವಕರ ಮನೆಗಳ ತನಕದ ಭಾಗವನ್ನು ಮಲ್ಕೀಯನು ರಿಪೇರಿ ಮಾಡಿದನು. ಇದು, “ತನಿಕೆ” ಎಂಬ ಬಾಗಿಲಿನ ಎದುರಿನಲ್ಲಿತ್ತು. ಮೂಲೆಗೋಡೆಯ ಮೇಲಿರುವ ಕೋಣಿಯ ತನಕದ ಭಾಗವನ್ನು ಅಕ್ಕಸಾಲಿಗನಾದ ಮಲ್ಕೀಯನು ರಿಪೇರಿ ಮಾಡಿದನು.
ನೆಹೆಮಿಯ 3 : 32 (ERVKN)
ಅಕ್ಕಸಾಲಿಗರು ಮತ್ತು ವರ್ತಕರು ಸೇರಿ ಗೋಡೆ ಮೇಲಿರುವ ಕೋಣಿಯಿಂದ ಹಿಡಿದು, “ಕುರಿ” ಎಂಬ ಬಾಗಿಲಿನ ತನಕದ ಗೋಡೆಯನ್ನು ಕಟ್ಟಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32