ನೆಹೆಮಿಯ 7 : 1 (ERVKN)
ಗೋಡೆಯ ಕೆಲಸ ಪೂರ್ತಿಯಾದ ಬಳಿಕ ದ್ವಾರಗಳಿಗೆ ಬಾಗಿಲುಗಳನ್ನು ಇಡಲು ಪ್ರಾರಂಭಿಸಿದೆವು. ಮತ್ತು ಬಾಗಿಲುಗಳಿಗೆ ಕಾವಲುಗಾರರನ್ನು ನೇಮಿಸಿದೆವು. ದೇವಾಲಯದಲ್ಲಿ ಬೇಕಾಗಿರುವ ಗಾಯಕರನ್ನು ಮತ್ತು ಯಾಜಕರಿಗೆ ಬೇಕಾದ ಸಹಾಯಕರನ್ನು ಆರಿಸಿದೆವು.
ನೆಹೆಮಿಯ 7 : 2 (ERVKN)
ಇದಾದ ಬಳಿಕ ನನ್ನ ಸಹೋದರ ಹಾನಾನಿಯನನ್ನು ಜೆರುಸಲೇಮಿಸ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹಾನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದುದರಿಂದ ನಾನು ಅವನನ್ನು ಆರಿಸಿಕೊಂಡೆನು.
ನೆಹೆಮಿಯ 7 : 3 (ERVKN)
ಹನಾನಿಗೆ ಮತ್ತು ಹನನ್ಯನಿಗೆ ನಾನು ಆಜ್ಞಾಪಿಸಿದ್ದೇನೆಂದರೆ: “ಸೂರ್ಯೋದಯವಾಗಿ ಕೆಲವು ತಾಸು ಕಳೆದ ಮೇಲೆಯೇ ನೀವು ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬೇಕು; ಸೂರ್ಯನು ಮುಳುಗುವ ಮೊದಲೇ ನೀವು ಬಾಗಿಲುಗಳನ್ನು ಮುಚ್ಚಿ ಬೀಗ ಹಾಕಬೇಕು. ಜೆರುಸಲೇಮಿನಲ್ಲಿ ವಾಸವಾಗಿರುವವರನ್ನೇ ಕಾವಲುಗಾರರನ್ನಾಗಿ ಆರಿಸಿಕೊಳ್ಳಿರಿ. ವಿಶೇಷವಾದ ಸ್ಥಳಗಳಲ್ಲಿ ಪಟ್ಟಣವನ್ನು ಕಾಯುವುದಕ್ಕಾಗಿ ಅವರಲ್ಲಿ ಕೆಲವರನ್ನು ನೇಮಿಸಿರಿ; ಉಳಿದವರನ್ನು ಅವರವರ ಮನೆಯ ಸಮೀಪದಲ್ಲಿಯೇ ಕಾಯಲು ನೇಮಿಸಿರಿ.”
ನೆಹೆಮಿಯ 7 : 4 (ERVKN)
ಸೆರೆಹಿಡಿಯಲ್ಪಟ್ಟವರಲ್ಲಿ ಹಿಂತಿರುಗಿಬಂದವರ ಪಟ್ಟಿ ಜೆರುಸಲೇಮ್ ಪಟ್ಟಣವು ವಿಸ್ತಾರವಾಗಿದ್ದರೂ ಅದರಲ್ಲಿ ವಾಸಿಸುವ ಜನರು ಸ್ವಲ್ಪವೇ ಆಗಿದ್ದರು. ಕೆಡವಲ್ಪಟ್ಟಿದ್ದ ಮನೆಗಳು ತಿರುಗಿ ಕಟ್ಟಲ್ಪಡಲಿಲ್ಲ.
ನೆಹೆಮಿಯ 7 : 5 (ERVKN)
ಆದ್ದರಿಂದ ನನ್ನ ದೇವರು ನಮ್ಮ ಜನರನ್ನು ಒಟ್ಟುಗೂಡಿಸುವಂತೆ ನನ್ನನ್ನು ಪ್ರೇರೇಪಿಸಿದನು. ಅಂತೆಯೇ ನಾನು ಎಲ್ಲಾ ಗಣ್ಯರನ್ನು, ಅಧಿಕಾರಿಗಳನ್ನು ಮತ್ತು ಸಾಮಾನ್ಯರನ್ನು ಒಟ್ಟಾಗಿ ಸೇರಿಬರಲು ಆಮಂತ್ರಿಸಿದೆನು. ಇವರ ಕುಟುಂಬಗಳ ಪಟ್ಟಿಯನ್ನು ನಾನು ಮಾಡಬೇಕಿತ್ತು. ಮೊಟ್ಟಮೊದಲನೆಯ ಸಾರಿ ಸೆರೆಯಿಂದ ಹಿಂತಿರುಗಿ ಬಂದ ಸಂಸಾರಗಳ ಪಟ್ಟಿಯು ನನಗೆ ದೊರೆಯಿತು. ಅದರ ವಿವರ ಹೀಗಿದೆ:
ನೆಹೆಮಿಯ 7 : 6 (ERVKN)
ಬಹಳ ಕಾಲದ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಯಾಳುಗಳನ್ನಾಗಿ ಬಾಬಿಲೋನಿಗೆ ಒಯ್ದಿದ್ದನು. ಇವರು ಹಿಂದೆ ಜೆರುಸಲೇಮಿಗೂ ಯೆಹೂದ ಪ್ರಾಂತ್ಯಕ್ಕೂ ಹಿಂತಿರುಗಿ ತಮ್ಮತಮ್ಮ ಊರುಗಳಿಗೆ ಹೋಗಿ ನೆಲೆಸಿದರು.
ನೆಹೆಮಿಯ 7 : 7 (ERVKN)
ಇವರು ಜೆರುಬ್ಬಾಬೆಲ್ನೊಂದಿಗೆ ಹಿಂತಿರುಗಿದರು. ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್ ಮತ್ತು ಬಾಣ. ಇಸ್ರೇಲಿನ ಜನರಲ್ಲಿ ಹಿಂದೆ ಬಂದವರ ವಿವರ:
ನೆಹೆಮಿಯ 7 : 11 (ERVKN)
ಪಹತ್ ಮೋವಾಬಿನವರಾದ ಯೇಷೂವನ ಮತ್ತು ಯೋವಾಬನ ಸಂತಾನದವರು 2,818
ನೆಹೆಮಿಯ 7 : 21 (ERVKN)
ಹಿಜ್ಕೀಯ ಕುಟುಂಬಕ್ಕೆ ಸೇರಿದ ಆಟೇರಿನ ಸಂತಾನದವರು 98
ನೆಹೆಮಿಯ 7 : 26 (ERVKN)
ಬೆತ್ಲೆಹೇಮ್ ಮತ್ತು ನೆಟೋಫ ಊರಿನವರು 188
ನೆಹೆಮಿಯ 7 : 29 (ERVKN)
ಕಿರ್ಯತ್ಯಾರೀಮ್, ಕೆಫೀರಾ ಮತ್ತು ಬೇರೋತ್ ಪಟ್ಟಣದವರು 743
ನೆಹೆಮಿಯ 7 : 30 (ERVKN)
ರಾಮಾ ಮತ್ತು ಗೆಬ ಪಟ್ಟಣದವರು 621
ನೆಹೆಮಿಯ 7 : 32 (ERVKN)
ಬೇತೇಲ್ ಮತ್ತು ಆಯಿ ಪಟ್ಟಣದವರು 123
ನೆಹೆಮಿಯ 7 : 33 (ERVKN)
ನೆಬೋ ಎಂಬ ಇನ್ನೊಂದು ಪಟ್ಟಣದವರು 52
ನೆಹೆಮಿಯ 7 : 34 (ERVKN)
ಏಲಾಮ್ ಎಂಬ ಇನ್ನೊಂದು ಊರಿನವರು 1,254
ನೆಹೆಮಿಯ 7 : 37 (ERVKN)
ಲೋದ್, ಹಾದೀದ್ ಮತ್ತು ಓನೋ ಪಟ್ಟಣದವರು 721
ನೆಹೆಮಿಯ 7 : 39 (ERVKN)
ಯಾಜಕರಲ್ಲಿ: ಯೆದಾಯನವರಾದ ಯೇಷೂವನ ಸಂತಾನದವರು 973
ನೆಹೆಮಿಯ 7 : 43 (ERVKN)
ಲೇವಿಕುಲದವರಲ್ಲಿ: ಹೋದವ್ಯನವರಾದ ಯೇಷೂವನ ಮತ್ತು ಕದ್ಮೀಯೇಲನ ಸಂತಾನದವರು 74
ನೆಹೆಮಿಯ 7 : 44 (ERVKN)
ಗಾಯಕರಲ್ಲಿ: ಅಸಾಫನ ಸಂತಾನದವರು 148
ನೆಹೆಮಿಯ 7 : 45 (ERVKN)
ದ್ವಾರಪಾಲಕರಲ್ಲಿ: ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ ಮತ್ತು ಶೋಬೈಯ ಸಂತಾನದವರು 138
ನೆಹೆಮಿಯ 7 : 46 (ERVKN)
ದೇವಾಲಯದ ಸೇವಕರಲ್ಲಿ: ಜೀಹನ ಸಂತಾನದವರು, ಹಸೂಫ, ಟಬ್ಬಾವೋತ್,
ನೆಹೆಮಿಯ 7 : 52 (ERVKN)
ಬೇಸೈ, ಮೆಯನೀಮ್, ನೆಫೀಷೆಸೀಮ್,
ನೆಹೆಮಿಯ 7 : 53 (ERVKN)
ಬಕ್ಬೂಕ್, ಹಕ್ಕೂಫ, ಹರ್ಹೂರ್,
ನೆಹೆಮಿಯ 7 : 57 (ERVKN)
ಇವರು ಸೊಲೊಮೋನನ ಸೇವಕರ ಸಂತಾನದವರು: ಸೋಟೈ, ಸೋಫೆರೆತ್, ಪೆರೀದ,
ನೆಹೆಮಿಯ 7 : 59 (ERVKN)
ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್ ಮತ್ತು ಆಮೋನ್.
ನೆಹೆಮಿಯ 7 : 60 (ERVKN)
ದೇವಾಲಯದ ಸೇವಕರು ಮತ್ತು ಸೊಲೊಮೋನನ ಸೇವಕರ ಸಂತಾನದವರು 392
ನೆಹೆಮಿಯ 7 : 61 (ERVKN)
ತೇಲ್ಮೆಲಹ ತೇಲ್ಹರ್ಷ, ಕೆರೂಬದ್ದೋನ್ ಮತ್ತು ಇಮ್ಮೇರ್ ಪಟ್ಟಣಗಳಿಂದ ಜೆರುಸಲೇಮಿಗೆ ಕೆಲವು ಮಂದಿ ಬಂದರು. ಆದರೆ ಇವರು ನಿಜವಾಗಿಯೂ ಇಸ್ರೇಲ್ ಜನಾಂಗದವರೆಂಬದಾಗಿ ಅವರಿಗೆ ರುಜುವಾತು ಮಾಡಲಾಗಲಿಲ್ಲ.
ನೆಹೆಮಿಯ 7 : 62 (ERVKN)
ದೆಲಾಯ, ಟೋಬೀಯ ಮತ್ತು ನೆಕೋದನ ಸಂತಾನದವರು 642
ನೆಹೆಮಿಯ 7 : 63 (ERVKN)
ಯಾಜಕರಲ್ಲಿ: ಹೋಬಾಯ, ಹಕ್ಕೋಚ್ ಮತ್ತು ಬರ್ಜಿಲ್ಲೈ (ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಗಳನ್ನು ಮದುವೆಯಾದವನು ಬರ್ಜಿಲ್ಲೈ ಎಂಬ ಹೆಸರನ್ನು ಇಟ್ಟುಕೊಂಡಿದ್ದನು.) ಸಂತಾನದವರು.
ನೆಹೆಮಿಯ 7 : 64 (ERVKN)
ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಾಡಿದರೂ ಸಿಗಲಿಲ್ಲ. ತಮ್ಮ ಪೂರ್ವಿಕರು ಯಾಜಕರೆಂದು ರುಜುವಾತು ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯಾಜಕ ಪಟ್ಟಿಯಲ್ಲಿ ಅವರನ್ನು ಸೇರಿಸಲಿಲ್ಲ.
ನೆಹೆಮಿಯ 7 : 65 (ERVKN)
ಒಬ್ಬ ಪ್ರಧಾನ ಯಾಜಕನು ಊರೀಮ್ ತುಮ್ಮೀಮ್ ಧರಿಸಿ ದೇವರಿಂದ ಉತ್ತರವನ್ನು ಹೊಂದುವ ತನಕ ಅವರಲ್ಲಿ ಯಾರೂ ಪವಿತ್ರ ಆಹಾರದಲ್ಲಿ ಯಾವುದನ್ನೂ ತಿನ್ನಬಾರದೆಂದು ರಾಜ್ಯಪಾಲನು ಆಜ್ಞಾಪಿಸಿದನು.
ನೆಹೆಮಿಯ 7 : 66 (ERVKN)
(66-67) ಹೀಗೆ ಹಿಂತಿರುಗಿ ಬಂದವರ ಒಟ್ಟು ಸಂಖ್ಯೆ 42, 360 ಇವರಲ್ಲಿ 7,337 ಮಂದಿ ಅವರ ಸೇವಕಸೇವಕಿಯರಾಗಿದ್ದರು. 245 ಮಂದಿ ಗಾಯಕಗಾಯಕಿಯರು ಈ ಸಂಖ್ಯೆಯಲ್ಲಿ ಸೇರಿರಲಿಲ್ಲ.
ನೆಹೆಮಿಯ 7 : 68 (ERVKN)
(68-69) ಅವರಲ್ಲಿ 736 ಕುದುರೆಗಳು, 245 ಹೇಸರಕತ್ತೆಗಳು, 435 ಒಂಟೆಗಳು ಮತ್ತು 6,720 ಕತ್ತೆಗಳು ಇದ್ದವು.
ನೆಹೆಮಿಯ 7 : 70 (ERVKN)
ಇವರ ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕಾಗಿ ಹಣವನ್ನು ದಾನವಾಗಿ ಕೊಟ್ಟರು. ರಾಜ್ಯಪಾಲನು ಹತ್ತೊಂಭತ್ತು ಪೌಂಡು ಬಂಗಾರವನ್ನು. ಐವತ್ತು ಬೋಗುಣಿಗಳನ್ನು ಮತ್ತು ಐನೂರ ಮೂವತ್ತು ಯಾಜಕರ ವಸ್ತ್ರಗಳನ್ನು ಕೊಟ್ಟನು.
ನೆಹೆಮಿಯ 7 : 71 (ERVKN)
ಗೋತ್ರಪ್ರಧಾನರು ಮೂನ್ನೂರ ಎಪ್ಪತ್ತೈದು ಪೌಂಡು ಬಂಗಾರವನ್ನು, ಹದಿಮೂರುವರೆ ಕ್ವಿಂಟಾಲ್ ಬೆಳ್ಳಿಯನ್ನು ದಾನವಾಗಿ ಕೊಟ್ಟರು.
ನೆಹೆಮಿಯ 7 : 72 (ERVKN)
ಒಟ್ಟು ಇತರರು ಮುನ್ನೂರ ಎಪ್ಪತ್ತೈದು ಪೌಂಡು ಬಂಗಾರ, ಹದಿಮೂರುವರೆ ಕ್ವಿಂಟಾಲ್ ಬೆಳ್ಳಿ ಮತ್ತು ಅರವತ್ತೇಳು ಯಾಜಕರ ಬಟ್ಟೆಯನ್ನು ದಾನವಾಗಿ ಕೊಟ್ಟರು.
ನೆಹೆಮಿಯ 7 : 73 (ERVKN)
ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು ಮತ್ತು ದೇವಾಲಯದ ಸೇವಕರು ತಮ್ಮ ತಮ್ಮ ಊರುಗಳಿಗೆ ಹೋಗಿ ನೆಲೆಸಿದರು. ಇತರ ಎಲ್ಲಾ ಇಸ್ರೇಲರು ತಮ್ಮ ಪಟ್ಟಣಗಳಲ್ಲಿ ನೆಲೆಸಿದರು. ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ತಮ್ಮತಮ್ಮ ಪಟ್ಟಣಗಳಲ್ಲಿ ನೆಲೆಸಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52
53
54
55
56
57
58
59
60
61
62
63
64
65
66
67
68
69
70
71
72
73