ನೆಹೆಮಿಯ 8 : 1 (ERVKN)
ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ಒಂದೇ ಮನಸ್ಸುಳ್ಳವರಾಗಿ ಕೂಡಿಬಂದರು. ಅವರು ಬುಗ್ಗೆ ಬಾಗಿಲಿನ ಮುಂದಿದ್ದ ಜಾಗದಲ್ಲಿ ಸೇರಿಬಂದರು. ಇಸ್ರೇಲರಿಗೆ ಮೋಶೆಯ ಮೂಲಕವಾಗಿ ಯೆಹೋವನು ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಓದಲು ಜನರು ಎಜ್ರನನ್ನು ಕೇಳಿಕೊಂಡರು.
ನೆಹೆಮಿಯ 8 : 2 (ERVKN)
ಹೀಗೆ ಆ ವರ್ಷದ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಎಜ್ರನು ಧರ್ಮಶಾಸ್ತ್ರವನ್ನು ಆ ಜನರ ಮುಂದೆ ತಂದನು. ಆ ಜನಸಮೂಹದಲ್ಲಿ ಧರ್ಮಶಾಸ್ತ್ರಕ್ಕೆ ಕಿವಿಗೊಟ್ಟು ಗ್ರಹಿಸಿಕೊಳ್ಳಬಲ್ಲ ಸ್ತ್ರೀಪುರುಷರಿದ್ದರು.
ನೆಹೆಮಿಯ 8 : 3 (ERVKN)
ಎಜ್ರನು ಮುಂಜಾನೆಯಿಂದ ಹಿಡಿದು ಮಧ್ಯಾಹ್ನದವರೆಗೆ ಬುಗ್ಗೆಬಾಗಿಲಿನ ಮುಂದೆ ಇರುವ ಮೈದಾನದಲ್ಲಿ ಸೇರಿ ಬಂದಿದ್ದ ಜನರೆದುರಾಗಿ ನಿಂತು ಗಟ್ಟಿಯಾಗಿ ಧರ್ಮಶಾಸ್ತ್ರವನ್ನು ಓದಿದನು. ಎಲ್ಲಾ ಜನರು ಎಚ್ಚರಿಕೆಯಿಂದ ಕೇಳಿ ಧರ್ಮಶಾಸ್ತ್ರವನ್ನು ಗ್ರಹಿಸಿಕೊಂಡರು.
ನೆಹೆಮಿಯ 8 : 4 (ERVKN)
ಆ ಸಮಯಕ್ಕೋಸ್ಕರವೇ ಕಟ್ಟಿದ ಮರದ ವೇದಿಕೆಯ ಮೇಲೆ ಎಜ್ರನು ನಿಂತಿದ್ದನು. ಅವನ ಬಲಬದಿಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ ಮತ್ತು ಮಾಸೇಯ; ಎಡಬದಿಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ ಮತ್ತು ಮೆಷುಲ್ಲಾಮ್ ನಿಂತಿದ್ದರು.
ನೆಹೆಮಿಯ 8 : 5 (ERVKN)
ಎಜ್ರನು ಎತ್ತರವಾದ ವೇದಿಕೆಯ ಮೇಲೆ ನಿಂತಿದ್ದರಿಂದ ಎಲ್ಲರೂ ಅವನನ್ನು ನೋಡಲು ಸಾಧ್ಯವಾಯಿತು. ಎಜ್ರನು ಧರ್ಮಶಾಸ್ತವನ್ನು ತೆರೆಯುವಾಗ ಎಲ್ಲಾ ಜನರು ನಿಂತರು.
ನೆಹೆಮಿಯ 8 : 6 (ERVKN)
ಎಜ್ರನು ಮಹೋನ್ನತ ದೇವರಾದ ಯೆಹೋವನನ್ನು ಸ್ತುತಿಸಿದನು. ಆಗ ಜನರೆಲ್ಲರೂ ಕೈಗಳನ್ನೆತ್ತಿ, “ಆಮೆನ್! ಆಮೆನ್!” ಎಂದು ಹೇಳಿದರು; ತಲೆಬಾಗಿ ಯೆಹೋವನನ್ನು ಆರಾಧಿಸಿದರು.
ನೆಹೆಮಿಯ 8 : 7 (ERVKN)
ಅವರೆಲ್ಲಾ ನಿಂತಿರುವಾಗ ಲೇವಿಯರು ಧರ್ಮಶಾಸ್ತ್ರವನ್ನು ಅವರಿಗೆ ಓದಿತಿಳಿಸಿದರು. ಅವರು ಯಾರೆಂದರೆ: ಯೇಷೂವ, ಬಾನೀ, ಶೇರಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್ ಮತ್ತು ಪೆಲಾಯ.
ನೆಹೆಮಿಯ 8 : 8 (ERVKN)
ಈ ಲೇವಿಯರು ಜನರಿಗೆ ಅರ್ಥವಾಗುವ ರೀತಿಯಲ್ಲಿ ದೇವರ ಧರ್ಮಶಾಸ್ತ್ರವನ್ನು ವಿವರಿಸಿ ಹೇಳಿದರು.
ನೆಹೆಮಿಯ 8 : 9 (ERVKN)
ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದುದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.
ನೆಹೆಮಿಯ 8 : 10 (ERVKN)
“ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.
ನೆಹೆಮಿಯ 8 : 11 (ERVKN)
ಲೇವಿಯರು ಜನರಿಗೆ, “ದುಃಖಿಸಬೇಡಿರಿ, ಈ ದಿನ ವಿಶೇಷ ದಿನ. ಸಮಾಧಾನ ಮಾಡಿಕೊಳ್ಳಿ” ಎಂದು ಹೇಳಿದರು.
ನೆಹೆಮಿಯ 8 : 12 (ERVKN)
ಅನಂತರ ಎಲ್ಲರೂ ವಿಶೇಷ ಊಟಕ್ಕೆ ಹೋದರು, ಅವರು ತಮ್ಮ ಆಹಾರವನ್ನು ಮತ್ತು ಪಾನೀಯವನ್ನು ಹಂಚಿಕೊಂಡರು. ಅವರೆಲ್ಲರೂ ಸಂತೋಷದಿಂದ ಆ ವಿಶೇಷ ದಿನವನ್ನು ಆಚರಿಸಿದರು, ಧರ್ಮೋಪದೇಶಕರು ಉಪದೇಶಿಸಿದ ಯೆಹೋವನ ಕಟ್ಟಳೆಗಳನ್ನು ಅವರು ಅರ್ಥಮಾಡಿಕೊಂಡರು.
ನೆಹೆಮಿಯ 8 : 13 (ERVKN)
ಆ ತಿಂಗಳ ಎರಡನೆಯ ದಿನದಲ್ಲಿ ಗೋತ್ರಪ್ರಧಾನರೂ ಯಾಜಕರೂ ಲೇವಿಯರೂ ಧರ್ಮಶಾಸ್ತ್ರವನ್ನು ಅಭ್ಯಾಸಿಸಲು ಉಪದೇಶಕನಾದ ಎಜ್ರನ ಸುತ್ತಲೂ ಸೇರಿಬಂದರು.
ನೆಹೆಮಿಯ 8 : 14 (ERVKN)
[This verse may not be a part of this translation]
ನೆಹೆಮಿಯ 8 : 15 (ERVKN)
[This verse may not be a part of this translation]
ನೆಹೆಮಿಯ 8 : 16 (ERVKN)
ಜನರು ಹೋಗಿ ರೆಂಬೆಗಳನ್ನು ತಂದು ತಮಗಾಗಿ ತಾತ್ಕಾಲಿಕ ಬಿಡಾರಗಳನ್ನು ಮಾಡಿಕೊಂಡರು. ಅವರು ಈ ಬಿಡಾರಗಳನ್ನು ತಮ್ಮ ಮನೆಯ ಮೇಲ್ಛಾವಣಿಗೆಯಲ್ಲೂ ಮನೆಯ ಅಂಗಳಗಳಲ್ಲಿಯೂ, ದೇವಾಲಯದ ಅಂಗಳದಲ್ಲಿಯೂ “ಬುಗ್ಗೆ” ಮತ್ತು “ಎಫ್ರಾಯೀಮ್” ಎಂಬ ದ್ವಾರಗಳ ಸಮೀಪದಲ್ಲಿದ್ದ ಬಯಲುಗಳಲ್ಲಿಯೂ ಹಾಕಿಕೊಂಡರು.
ನೆಹೆಮಿಯ 8 : 17 (ERVKN)
ಸೆರೆವಾಸದಿಂದ ಮರಳಿಬಂದ ಇಸ್ರೇಲರು ಬಿಡಾರಗಳನ್ನು ಹಾಕಿಕೊಂಡು ಅವುಗಳಲ್ಲಿ ವಾಸಿಸಿದರು. ನೂನನ ಮಗನಾದ ಯೆಹೋಶುವನ ಕಾಲದಿಂದ ಇಂದಿನವರೆಗೂ ಇಸ್ರೇಲರು ಇಂಥ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲಿಲ್ಲ. ಪ್ರತಿಯೊಬ್ಬರೂ ಬಹು ಸಂತೋಷಗೊಂಡಿದ್ದರು.
ನೆಹೆಮಿಯ 8 : 18 (ERVKN)
ಆ ಹಬ್ಬದ ದಿನಗಳ ಪ್ರತಿಯೊಂದು ದಿನದಲ್ಲಿ ಎಜ್ರನು ಧರ್ಮಶಾಸ್ತ್ರ ಪಾರಾಯಣ ಮಾಡಿದನು. ಮೊದಲನೆ ದಿನದಿಂದ ಪ್ರಾರಂಭಿಸಿ ಕಡೆಯ ದಿನದ ತನಕ ಇಸ್ರೇಲರೆಲ್ಲರೂ ಈ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು. ಎಂಟನೆಯ ದಿನದಲ್ಲಿ ಧರ್ಮಶಾಸ್ತ್ರದ ಪ್ರಕಾರ ವಿಶೇಷ ಕೂಟಗಳಿಗಾಗಿ ಜನರು ಒಟ್ಟಾಗಿ ಸೇರಿಬಂದರು.

1 2 3 4 5 6 7 8 9 10 11 12 13 14 15 16 17 18

BG:

Opacity:

Color:


Size:


Font: