ಅರಣ್ಯಕಾಂಡ 10 : 1 (ERVKN)
ಬೆಳ್ಳಿಯ ತುತ್ತೂರಿಗಳು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ:
ಅರಣ್ಯಕಾಂಡ 10 : 2 (ERVKN)
“ನೀನು ಬೆಳ್ಳಿಯ ತಗಡುಗಳಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಒಟ್ಟಾಗಿ ಕರೆಸುವುದಕ್ಕೂ ಅವರು ಯಾವಾಗ ಹೊರಡಬೇಕೆಂದು ಹೇಳುವುದಕ್ಕೂ ಇವುಗಳನ್ನು ಉಪಯೋಗಿಸಬೇಕು.
ಅರಣ್ಯಕಾಂಡ 10 : 3 (ERVKN)
ನೀನು ಎರಡು ತುತ್ತೂರಿಗಳನ್ನು ಲಬುಸ್ವರದಿಂದ ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಕೂಡಿರಬೇಕು.
ಅರಣ್ಯಕಾಂಡ 10 : 4 (ERVKN)
ಆದರೆ ನೀನು ಒಂದು ತುತ್ತೂರಿಯನ್ನು ಮಾತ್ರ ಊದಿಸಿದರೆ ಇಸ್ರೇಲಿನ ಕುಲಪ್ರಧಾನರಾದ ಮುಖ್ಯಸ್ಥರು ಮಾತ್ರ ನಿನ್ನನ್ನು ಸಂಧಿಸಲು ಬರಬೇಕು.
ಅರಣ್ಯಕಾಂಡ 10 : 5 (ERVKN)
“ಜನರ ಕುಲಗಳು ಪಾಳೆಯದಿಂದ ಪ್ರಯಾಣ ಮಾಡಬೇಕೆಂಬುದಕ್ಕೆ ಸೂಚನೆಗಾಗಿ ತುತ್ತೂರಿಯನ್ನು ಆರ್ಭಟದಿಂದ ಊದಿಸಬೇಕು. ನೀವು ಮೊದಲನೆ ಸಲ ತುತ್ತೂರಿಯನ್ನು ಆರ್ಭಟದಿಂದ ಊದಿಸುವಾಗ ದೇವದರ್ಶನಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯ ಹಾಕಿಕೊಂಡಿರುವ ಕುಲಗಳು ಹೊರಡಬೇಕು.
ಅರಣ್ಯಕಾಂಡ 10 : 6 (ERVKN)
ನೀವು ಎರಡನೆಯ ಸಲ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸುವಾಗ ದೇವದರ್ಶನಗುಡಾರದ ದಕ್ಷಿಣ ದಿಕ್ಕಿನಲ್ಲಿ ಪಾಳೆಯ ಹಾಕಿಕೊಂಡಿರುವ ಕುಲಗಳು ಹೊರಡಬೇಕು.
ಅರಣ್ಯಕಾಂಡ 10 : 7 (ERVKN)
ಆದರೆ ಜನಸಮುದಾಯವು ಕೂಡಿಬರಬೇಕಾದಾಗ ತುತ್ತೂರಿಗಳನ್ನು ಲಬುಸ್ವರದಲ್ಲಿ ಊದಿಸಬೇಕೇ ಹೊರತು ಆರ್ಭಟ ಸ್ವರದಲ್ಲಲ್ಲ.
ಅರಣ್ಯಕಾಂಡ 10 : 8 (ERVKN)
ಯಾಜಕರಾದ ಆರೋನನ ಪುತ್ರರು ಮಾತ್ರವೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ.
ಅರಣ್ಯಕಾಂಡ 10 : 9 (ERVKN)
“ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ರಕ್ಷಿಸುವನು.
ಅರಣ್ಯಕಾಂಡ 10 : 10 (ERVKN)
ಇದಲ್ಲದೆ, ನೀವು ಉತ್ಸವಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ನಿಮ್ಮನ್ನು ಗಮನಿಸಬೇಕೆಂದು ಆ ತುತ್ತೂರಿ ಧ್ವನಿಗಳು ನಿಮ್ಮ ದೇವರಿಗೆ ನೆನಪನ್ನುಂಟುಮಾಡುತ್ತವೆ. ನೀವು ಇದನ್ನು ಮಾಡಬೇಕೆಂದು ನಾನು ಆಜ್ಞಾಪಿಸುತ್ತೇನೆ. ನಿಮ್ಮ ದೇವರಾದ ಯೆಹೋವನು ನಾನೇ.”
ಅರಣ್ಯಕಾಂಡ 10 : 11 (ERVKN)
ಇಸ್ರೇಲರ ಪ್ರಯಾಣ ಇಸ್ರೇಲರು ಈಜಿಪ್ಟನ್ನು ಬಿಟ್ಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಮೇಘವು ಒಡಂಬಡಿಕೆಯ ಗುಡಾರದಿಂದ ಮೇಲೆ ಎದ್ದಿತು.
ಅರಣ್ಯಕಾಂಡ 10 : 12 (ERVKN)
ಆದ್ದರಿಂದ, ಇಸ್ರೇಲರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ಅವರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮೇಘವು ಪಾರಾನ್ ಮರುಭೂಮಿಯಲ್ಲಿ ನಿಲ್ಲುವವರೆಗೆ ಪ್ರಯಾಣ ಮಾಡಿದರು.
ಅರಣ್ಯಕಾಂಡ 10 : 13 (ERVKN)
ಯೆಹೋವನು ಮೋಶೆಯ ಮೂಲಕ ಕೊಟ್ಟ ಸೂಚನೆಯ ಪ್ರಕಾರ ಅವರು ಮೊಟ್ಟಮೊದಲನೆಯ ಸಲ ಪ್ರಯಾಣವನ್ನು ಆರಂಭಿಸಿದರು.
ಅರಣ್ಯಕಾಂಡ 10 : 14 (ERVKN)
ಮೊದಲು ಯೆಹೂದ ಪಾಳೆಯದ ಮೂರು ದಂಡುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀನಾದ್ವಾನ ಮಗನಾದ ನಹಶೋನನು ಯೆಹೂದ ಕುಲದ ಸೇನಾಧಿಪತಿಯಾಗಿದ್ದನು.
ಅರಣ್ಯಕಾಂಡ 10 : 15 (ERVKN)
ಚೂವಾರನ ಮಗನಾದ ನೆತನೇಲನು ಇಸ್ಸಾಕಾರನ ಕುಲದ ಸೇನಾಧಿಪತಿ.
ಅರಣ್ಯಕಾಂಡ 10 : 16 (ERVKN)
ಹೇಲೋನನ ಮಗನಾದ ಎಲೀಯಾಬನು ಜೆಬುಲೂನ್ ಕುಲದ ಸೇನಾಧಿಪತಿ.
ಅರಣ್ಯಕಾಂಡ 10 : 17 (ERVKN)
ಬಳಿಕ ಪವಿತ್ರ ಗುಡಾರವನ್ನು ಕೆಳಗಿಳಿಸಲಾಯಿತು. ಗೇರ್ಷೋನ್ ಮತ್ತು ಮೆರಾರೀ ಕುಲಗಳ ಗಂಡಸರು ಪವಿತ್ರ ಗುಡಾರವನ್ನು ಹೊತ್ತುಕೊಂಡು ಅವರ ಹಿಂದೆ ಹೊರಟರು.
ಅರಣ್ಯಕಾಂಡ 10 : 18 (ERVKN)
ಅವರ ತರುವಾಯ ರೂಬೇನ್ ಕುಲದಿಂದ ಮುನ್ನಡೆಸಲ್ಪಟ್ಟ ಮೂರು ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಹೊರಟರು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೇನಾಧಿಪತಿಯಾಗಿದ್ದನು.
ಅರಣ್ಯಕಾಂಡ 10 : 19 (ERVKN)
ಚೂರೀಷದ್ದೈನ ಮಗನಾದ ಶೆಲುಮೀಯೇಲನು ಸಿಮೆಯೋನ್ ಕುಲದ ಸೇನಾಧಿಪತಿ.
ಅರಣ್ಯಕಾಂಡ 10 : 20 (ERVKN)
ದೆಗೂವೇಲನ ಮಗನಾದ ಎಲ್ಯಾಸಾಫನು ಗಾದ್ ಕುಲದ ಸೇನಾಧಿಪತಿ.
ಅರಣ್ಯಕಾಂಡ 10 : 21 (ERVKN)
ಬಳಿಕ ಕೆಹಾತನ ಕುಲದವರು ಹೊರಟರು. ಅವರು ದೇವಸ್ಥಾನದ ಪವಿತ್ರವಸ್ತುಗಳನ್ನು ಹೊತ್ತುಕೊಂಡಿದ್ದರು. ಕೆಹಾತ್ಯರು ಪವಿತ್ರವಸ್ತುಗಳೊಡನೆ ಬರುವಷ್ಟರೊಳಗೆ ಇತರ ಲೇವಿಯರು ದೇವದರ್ಶನಗುಡಾರವನ್ನು ಎತ್ತಿ ನಿಲ್ಲಿಸಿದರು.
ಅರಣ್ಯಕಾಂಡ 10 : 22 (ERVKN)
ಬಳಿಕ ಎಫ್ರಾಯೀಮ್ ಪಾಳೆಯದಿಂದ ಮೂರು ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಹೂದನ ಮಗನಾದ ಎಲೀಷಾಮನು ಎಫ್ರಾಯೀಮ್ ಕುಲದ ಸೇನಾಧಿಪತಿ.
ಅರಣ್ಯಕಾಂಡ 10 : 23 (ERVKN)
ಪೆದಾಚೂರನ ಮಗನಾದ ಗಮ್ಲೀಯೇಲನು ಮನಸ್ಸೆ ಕುಲದ ಸೇನಾಧಿಪತಿ.
ಅರಣ್ಯಕಾಂಡ 10 : 24 (ERVKN)
ಗಿದ್ಯೋನಿಯ ಮಗನಾದ ಅಬೀದಾನನು ಬೆನ್ಯಾಮೀನ್ ಕುಲದ ಸೇನಾಧಿಪತಿ.
ಅರಣ್ಯಕಾಂಡ 10 : 25 (ERVKN)
ಆಮೇಲೆ ಎಲ್ಲಾ ಕುಲಗಳ ಹಿಂಭಾಗದಲ್ಲಿ ದಾನ್ ಕುಲದಿಂದ ಮುನ್ನಡೆಸಲ್ಪಟ್ಟ ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಷದ್ದೈನ ಮಗನಾದ ಅಹೀಗೆಜೆರನು ದಾನ್ ಕುಲದ ಸೇನಾಧಿಪತಿ.
ಅರಣ್ಯಕಾಂಡ 10 : 26 (ERVKN)
ಆಶೇರನ ಕುಲಕ್ಕೆ ಒಕ್ರಾನನ ಮಗನಾದ ಪಗೀಯೇಲನು ಸೇನಾಧಿಪತಿಯಾಗಿದ್ದನು.
ಅರಣ್ಯಕಾಂಡ 10 : 27 (ERVKN)
ನಫ್ತಾಲಿ ಕುಲಕ್ಕೆ ಏನಾನನ ಮಗನಾದ ಅಹೀರನು ಸೇನಾಧಿಪತಿಯಾಗಿದ್ದನು.
ಅರಣ್ಯಕಾಂಡ 10 : 28 (ERVKN)
ಈ ರೀತಿಯಾಗಿ ಇಸ್ರೇಲರು ತಮ್ಮ ಗುಂಪುಗಳಲ್ಲಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡಿದರು.
ಅರಣ್ಯಕಾಂಡ 10 : 29 (ERVKN)
ಹೋಬಾಬನು ಮಿದ್ಯಾನ್ಯನಾದ ರೆಗೂವೇಲನ ಮಗನು. ರೆಗೂವೇಲನು ಮೋಶೆಯ ಮಾವ. ಮೋಶೆಯು ಹೋಬಾಬನಿಗೆ, “ದೇವರು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣ ಮಾಡುತ್ತಿದ್ದೇವೆ. ನಮ್ಮೊಂದಿಗೆ ಬಾ. ನೀನು ನಮ್ಮೊಂದಿಗೆ ಉದ್ದಾರವಾಗುವೆ; ಯಾಕೆಂದರೆ ಯೆಹೋವನು ಇಸ್ರೇಲರಿಗೆ ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾನೆ.”
ಅರಣ್ಯಕಾಂಡ 10 : 30 (ERVKN)
ಆದರೆ ಹೋಬಾಬನು, “ಇಲ್ಲ. ನಾನು ನಿಮ್ಮೊಂದಿಗೆ ಬರುವುದಿಲ್ಲ. ನಾನು ನನ್ನ ದೇಶಕ್ಕೂ ನನ್ನ ಜನರ ಬಳಿಗೂ ಹೋಗುವೆನು” ಎಂದು ಉತ್ತರಕೊಟ್ಟನು.
ಅರಣ್ಯಕಾಂಡ 10 : 31 (ERVKN)
ಆಗ ಮೋಶೆ, “ದಯಮಾಡಿ ನಮ್ಮನ್ನು ಬಿಟ್ಟು ಹೋಗಬೇಡ. ನಾವು ಮರುಭೂಮಿಯಲ್ಲಿ ಎಲ್ಲಿ ಪಾಳೆಯ ಮಾಡಿಕೊಳ್ಳಬಹುದೆಂಬುದು ನಿನಗೆ ಗೊತ್ತಿದೆ. ನೀನು ನಮ್ಮ ಮಾರ್ಗದರ್ಶಕನಾಗಿರಬಹುದು.
ಅರಣ್ಯಕಾಂಡ 10 : 32 (ERVKN)
ನೀನು ನಮ್ಮೊಂದಿಗೆ ಬಂದರೆ, ಯೆಹೋವನು ನಮಗೆ ಕೊಡುವ ಎಲ್ಲಾ ಒಳ್ಳೆಯ ವಸ್ತುಗಳಲ್ಲಿ ನಿನಗೆ ಪಾಲು ಕೊಡುವೆವು” ಎಂದು ಹೇಳಿದನು.
ಅರಣ್ಯಕಾಂಡ 10 : 33 (ERVKN)
ಅವರು ಯೆಹೋವನ ಬೆಟ್ಟದಿಂದ ಹೊರಟು ಮೂರು ದಿನ ಪ್ರಯಾಣ ಮಾಡಿದರು. ಲೇವಿಯರು ಹೊತ್ತುಕೊಂಡಿದ್ದ ಯೆಹೋವನ ಒಡಂಬಡಿಕೆ ಪೆಟ್ಟಿಗೆಯು ಮತ್ತೆ ಪಾಳೆಯ ಹಾಕಲು ಯೋಗ್ಯವಾದ ಸ್ಥಳವನ್ನು ಎದುರು ನೋಡುತ್ತಾ ಜನರ ಮುಂದೆ ಮೂರು ದಿನಗಳವರೆಗೆ ಹೋಯಿತು.
ಅರಣ್ಯಕಾಂಡ 10 : 34 (ERVKN)
ಅವರು ಪಾಳೆಯದೊಡನೆ ಹೊರಟಾಗ ಪ್ರತಿದಿನವೂ ಯೆಹೋವನ ಮೋಡವು ಅವರ ಮೇಲಿರುತ್ತಿತ್ತು.
ಅರಣ್ಯಕಾಂಡ 10 : 35 (ERVKN)
ಜನರು ಪವಿತ್ರ ಪೆಟ್ಟಿಗೆಯನ್ನು ಎತ್ತಿಕೊಂಡು ಹೊರಡುವಾಗ, ಮೋಶೆಯು, “ಯೆಹೋವನೇ, ಎದ್ದೇಳು! ನಿನ್ನ ವೈರಿಗಳು ಚದರಿಹೋಗಲಿ, ನಿನ್ನ ಶತ್ರುಗಳು ಬೆನ್ನುಕೊಟ್ಟು ಓಡಿಹೋಗಲಿ” ಎಂದು ಹೇಳುತ್ತಿದ್ದನು.
ಅರಣ್ಯಕಾಂಡ 10 : 36 (ERVKN)
ಪವಿತ್ರ ಪೆಟ್ಟಿಗೆಯು ಕೆಳಗಿಳಿಸಲ್ಪಟ್ಟಾಗ, ಮೋಶೆಯು, “ಯೆಹೋವನೇ ಇಸ್ರೇಲರ ಲಕ್ಷಾಂತರ ಕುಟುಂಬಗಳ ಬಳಿಗೆ ಹಿಂತಿರುಗಿ ಬಾ” ಎಂದು ಹೇಳುತ್ತಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36