ಅರಣ್ಯಕಾಂಡ 13 : 1 (ERVKN)
ಗೂಢಚಾರರು ಕಾನಾನ್ ದೇಶಕ್ಕೆ ಹೋದದ್ದು ಯೆಹೋವನು ಮೋಶೆಗೆ,
ಅರಣ್ಯಕಾಂಡ 13 : 2 (ERVKN)
“ಕಾನಾನ್ ದೇಶದ ಬಗ್ಗೆ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಗೂಢಚಾರರನ್ನು ಕಳುಹಿಸು. ನಾನು ಇಸ್ರೇಲರಿಗೆ ಕೊಡುವ ದೇಶ ಇದಾಗಿದೆ. ಹನ್ನೆರಡು ಕುಲಗಳಿಂದ ಒಬ್ಬೊಬ್ಬ ನಾಯಕನನ್ನು ಕಳುಹಿಸು” ಎಂದು ಹೇಳಿದನು.
ಅರಣ್ಯಕಾಂಡ 13 : 3 (ERVKN)
ಜನರು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡಿದ್ದಾಗ ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯು ಈ ನಾಯಕರನ್ನು ಕಳುಹಿಸಿದನು.
ಅರಣ್ಯಕಾಂಡ 13 : 4 (ERVKN)
ಆ ನಾಯಕರು ಯಾರೆಂದರೆ: ರೂಬೇನ್ ಕುಲದಿಂದ ಜಕ್ಕೂರನ ಮಗನಾದ ಶಮ್ಮೂವ,
ಅರಣ್ಯಕಾಂಡ 13 : 5 (ERVKN)
ಸಿಮೆಯೋನ್ ಕುಲದಿಂದ ಹೋರಿಯ ಮಗನಾದ ಶಾಫಾಟ್,
ಅರಣ್ಯಕಾಂಡ 13 : 6 (ERVKN)
ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,
ಅರಣ್ಯಕಾಂಡ 13 : 7 (ERVKN)
ಇಸ್ಸಾಕಾರ್ ಕುಲದಿಂದ ಯೋಸೇಫನ ಮಗನಾದ ಇಗಾಲ್,
ಅರಣ್ಯಕಾಂಡ 13 : 8 (ERVKN)
ಎಫ್ರಾಯೀಮ್ ಕುಲದಿಂದ ನೂನನ ಮಗನಾದ ಹೋಶೇಯ,
ಅರಣ್ಯಕಾಂಡ 13 : 9 (ERVKN)
ಬೆನ್ಯಾಮೀನ್ ಕುಲದಿಂದ ರಾಫೂವನ ಮಗನಾದ ಪಲ್ಟೀ,
ಅರಣ್ಯಕಾಂಡ 13 : 10 (ERVKN)
ಜೆಬುಲೂನ್ ಕುಲದಿಂದ ಸೋದೀಯ ಮಗನಾದ ಗದ್ದೀಯೇಲ್,
ಅರಣ್ಯಕಾಂಡ 13 : 11 (ERVKN)
ಯೋಸೇಫನ ಮಗನಾದ ಮನಸ್ಸೆ ಕುಲದಿಂದ ಸೂಸೀಯ ಮಗನಾದ ಗದ್ದೀ.
ಅರಣ್ಯಕಾಂಡ 13 : 12 (ERVKN)
ದಾನ್ ಕುಲದಿಂದ ಗೆಮಲ್ಲೀಯ ಮಗನಾದ ಅಮ್ಮೀಯೇಲ್.
ಅರಣ್ಯಕಾಂಡ 13 : 13 (ERVKN)
ಆಶೇರ್ ಕುಲದಿಂದ ಮೀಕಾಯೇಲನ ಮಗನಾದ ಸೆತೂರ್,
ಅರಣ್ಯಕಾಂಡ 13 : 14 (ERVKN)
ನಫ್ತಾಲಿ ಕುಲದಿಂದ ವಾಪೆಸೀಯನ ಮಗನಾದ ನಹಬೀ,
ಅರಣ್ಯಕಾಂಡ 13 : 15 (ERVKN)
ಗಾದ್ ಕುಲದಿಂದ ಮಾಕೀಯನ ಮಗನಾದ ಗೆಯೂವೇಲ್.
ಅರಣ್ಯಕಾಂಡ 13 : 16 (ERVKN)
ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಕಳುಹಿಸಿದ ಗೂಢಚಾರರ ಹೆಸರುಗಳು ಇವೇ. (ಮೋಶೆಯು ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.)
ಅರಣ್ಯಕಾಂಡ 13 : 17 (ERVKN)
ಕಾನಾನ್ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಬೆಟ್ಟದ ಸೀಮೆಗೆ ನೆಗೆವ್ ಮೂಲಕ ಹತ್ತಿ ಹೋಗಿ
ಅರಣ್ಯಕಾಂಡ 13 : 18 (ERVKN)
ಆ ದೇಶದ ಸಂಗತಿಯನ್ನೆಲ್ಲಾ ತಿಳಿದುಕೊಳ್ಳಿರಿ. ಅಲ್ಲಿನ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಮಂದಿಯೋ ಅಥವಾ ಸ್ವಲ್ಪ ಮಂದಿಯೋ,
ಅರಣ್ಯಕಾಂಡ 13 : 19 (ERVKN)
ಅವರ ದೇಶ ಒಳ್ಳೆಯದೋ ಅಥವಾ ಕೆಟ್ಟದ್ದೋ, ಅವರ ಪಟ್ಟಣಗಳು ಗೋಡೆಗಳನ್ನು ಹೊಂದಿವೆಯೋ ಅಥವಾ ಇಲ್ಲವೋ,
ಅರಣ್ಯಕಾಂಡ 13 : 20 (ERVKN)
ಭೂಮಿಯು ಸಾರವಾದದ್ದೋ ಅಥವಾ ನಿಸ್ಸಾರವಾದದ್ದೋ, ಮರಗಳನ್ನು ಹೊಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಲು ಪ್ರಯತ್ನ ಮಾಡಿ” ಎಂದು ಹೇಳಿದನು. (ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.)
ಅರಣ್ಯಕಾಂಡ 13 : 21 (ERVKN)
ಅವರು ಬೆಟ್ಟದ ಸೀಮೆಗೆ ಹತ್ತಿಹೋಗಿ, ಚಿನ್ ಮರುಭೂಮಿಯಿಂದಿಡಿದು ಲೆಬೊಹಮಾತಿನ ಬಳಿಯಲ್ಲಿರುವ ರೆಹೋಬಿನವರೆಗೂ ದೇಶದ ವಿಷಯಗಳನ್ನು ಸಂಗ್ರಹಿಸಿಕೊಂಡರು.
ಅರಣ್ಯಕಾಂಡ 13 : 22 (ERVKN)
ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು.
ಅರಣ್ಯಕಾಂಡ 13 : 23 (ERVKN)
ಬಳಿಕ ಅವರು ಎಷ್ಕೋಲ್ ಕಣಿವೆಗೆ ಹೋದರು. ಅಲ್ಲಿ ಅವರು ದ್ರಾಕ್ಷಾಲತೆಯಿಂದ ಒಂದು ಕೊಂಬೆಯನ್ನು ಕಡಿದರು. ಆ ಕೊಂಬೆಯಲ್ಲಿ ದ್ರಾಕ್ಷೆಯ ಗೊಂಚಲಿತ್ತು. ಅವರು ಅದನ್ನು ಒಂದು ಕೋಲಿಗೆ ಕಟ್ಟಿ ಇಬ್ಬರು ಅದನ್ನು ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಹಣ್ಣುಗಳನ್ನು ಮತ್ತು ಅಂಜೂರದ ಹಣ್ಣುಗಳನ್ನು ಹೊತ್ತು ತಂದರು.
ಅರಣ್ಯಕಾಂಡ 13 : 24 (ERVKN)
ಇಸ್ರೇಲರು ಅಲ್ಲಿ ದ್ರಾಕ್ಷೆಯ ಗೊಂಚಲನ್ನು ಕತ್ತರಿಸಿದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಕಣಿವೆ ಎಂದು ಹೆಸರಾಯಿತು.
ಅರಣ್ಯಕಾಂಡ 13 : 25 (ERVKN)
ಜನರು ನಲವತ್ತು ದಿನಗಳವರೆಗೆ ದೇಶವನ್ನು ಸಂಚರಿಸಿ ನೋಡಿ, ತಮ್ಮ ಪಾಳೆಯಕ್ಕೆ ಹಿಂತಿರುಗಿದರು.
ಅರಣ್ಯಕಾಂಡ 13 : 26 (ERVKN)
ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲಾ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು.
ಅರಣ್ಯಕಾಂಡ 13 : 27 (ERVKN)
ಜನರು ಮೋಶೆಗೆ, “ನೀನು ಕಳುಹಿಸಿದ ದೇಶಕ್ಕೆ ನಾವು ಹೋಗಿ ಸಂಚರಿಸಿ ನೋಡಿದೆವು. ಅದು ಹಾಲೂ ಜೇನೂ ಹರಿಯುವ ದೇಶವಾಗಿದೆ. ಇಗೋ, ಹಣ್ಣುಗಳಲ್ಲಿ ಕೆಲವು ಇಲ್ಲಿವೆ.
ಅರಣ್ಯಕಾಂಡ 13 : 28 (ERVKN)
ಅಲ್ಲಿನ ಜನರು ಬಲಿಷ್ಠರು. ಪಟ್ಟಣಗಳೂ ಬಹಳ ದೊಡ್ಡದಾಗಿವೆ. ಪಟ್ಟಣಗಳು ಕೋಟೆಕೊತ್ತಲುಗಳುಳ್ಳದಾಗಿವೆ. ನಾವು ಕೆಲವು ಅನಾಕ್ಯರನ್ನು ಸಹ ನೋಡಿದೆವು.
ಅರಣ್ಯಕಾಂಡ 13 : 29 (ERVKN)
ಅಮಾಲೇಕ್ಯರು ನೆಗೆವ್‌ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು.
ಅರಣ್ಯಕಾಂಡ 13 : 30 (ERVKN)
ಕಾಲೇಬನು ಮೋಶೆಯ ಬಳಿಯಲ್ಲಿದ್ದ ಗುಣುಗುಟ್ಟುವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿಕೊಳ್ಳಬಹುದು” ಎಂದು ಹೇಳಿದನು.
ಅರಣ್ಯಕಾಂಡ 13 : 31 (ERVKN)
ಆದರೆ ಅವನೊಡನೆ ಹೋದ ಜನರು, “ನಾವು ಆ ಜನರೊಡನೆ ಹೋರಾಡಲಾರೆವು, ಅವರು ನಮಗಿಂತಲೂ ಬಲಿಷ್ಠರು” ಎಂದು ಹೇಳಿದರು.
ಅರಣ್ಯಕಾಂಡ 13 : 32 (ERVKN)
“ನಾವು ಸಂಚರಿಸಿ ವಿಷಯ ಸಂಗ್ರಹಿಸಿಕೊಂಡು ಬಂದ ದೇಶವು ಅಲ್ಲಿ ವಾಸಿಸುವವರನ್ನು ನಾಶಪಡಿಸುವ ದೇಶವಾಗಿದೆ. ನಾವು ಅಲ್ಲಿ ನೋಡಿದ ಎಲ್ಲಾ ಜನರು ರಾಕ್ಷಸರಂತಿದ್ದಾರೆ.
ಅರಣ್ಯಕಾಂಡ 13 : 33 (ERVKN)
ಷಸರಾದ ನೆಫೀಲಿಯರು ಅಲ್ಲಿ ವಾಸವಾಗಿರುವುದನ್ನು ನಾವು ನೋಡಿದೆವು. (ಅನಾಕ್ಯರು ನೆಫೀಲಿಯ ಜನರ ಸಂತತಿಯವರಾಗಿದ್ದಾರೆ.) ಅವರ ಮುಂದೆ ನಾವು ಮಿಡತೆಗಳೊ ಎಂದೆನಿಸಿತು. ಅವರಿಗೂ ಸಹ ನಾವು ಮಿಡತೆಗಳಂತೆ ಕಂಡುಬಂದೆವು” ಎಂದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33