ಅರಣ್ಯಕಾಂಡ 15 : 1 (ERVKN)
ಯಜ್ಞಗಳ ನಿಯಮಗಳು ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
ಅರಣ್ಯಕಾಂಡ 15 : 2 (ERVKN)
“ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು: ನಾನು ನಿಮ್ಮ ನಿವಾಸಕ್ಕಾಗಿ ಒಂದು ದೇಶವನ್ನು ಕೊಡುತ್ತಿದ್ದೇನೆ. ನೀವು ಆ ದೇಶಕ್ಕೆ ಸೇರಿದ ನಂತರ
ಅರಣ್ಯಕಾಂಡ 15 : 3 (ERVKN)
ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ನಿಮ್ಮ ಮಂದೆಯಿಂದಾಗಲಿ ಹಿಂಡಿನಿಂದಾಗಲಿ ಅಗ್ನಿಯ ಮೂಲಕ ಯಜ್ಞವನ್ನರ್ಪಿಸುವವನು ಸರ್ವಾಂಗಹೋಮ ಮಾಡಿದರೂ ಅಥವಾ ಸಮಾಧಾನಯಜ್ಞಮಾಡಿದರೂ ಹರಕೆಯ ಯಜ್ಞಮಾಡಿದರೂ ಅಥವಾ ಸ್ವಇಚ್ಛೆಯಿಂದ ಯಜ್ಞಮಾಡಿದರೂ ನಿಯಮಿತ ಹಬ್ಬಗಳಲ್ಲಿ ಯಜ್ಞಮಾಡಿದರೂ
ಅರಣ್ಯಕಾಂಡ 15 : 4 (ERVKN)
ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಒಂದೂವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋಧಿಯ ಹಿಟ್ಟನ್ನೂ
ಅರಣ್ಯಕಾಂಡ 15 : 5 (ERVKN)
ಪಾನದ್ರವ್ಯಕ್ಕಾಗಿ ಒಂದೂವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮವಾಗಿ ಇಲ್ಲವೆ ಸಮಾಧಾನಯಜ್ಞವಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನೂ ಸಮರ್ಪಿಸಬೇಕು.
ಅರಣ್ಯಕಾಂಡ 15 : 6 (ERVKN)
“ನೀವು ಟಗರನ್ನು ಸಮರ್ಪಿಸುವುದಾದರೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಒಳ್ಳೆಯ ಗೋಧಿಯ ಹಿಟ್ಟನ್ನೂ
ಅರಣ್ಯಕಾಂಡ 15 : 7 (ERVKN)
ಪಾನದ್ರವ್ಯಕ್ಕಾಗಿ ಎರಡು ಸೇರು ದ್ರಾಕ್ಷಾರಸವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಯಜ್ಞವಾಗಿರುತ್ತದೆ.
ಅರಣ್ಯಕಾಂಡ 15 : 8 (ERVKN)
“ನಿಮ್ಮಲ್ಲಿ ಎಳೆಹೋರಿಯನ್ನು ಯೆಹೋವನಿಗೆ ಸರ್ವಾಂಗಹೋಮವನ್ನಾಗಲಿ ಹರಕೆಯ ಯಜ್ಞವನ್ನಾಗಲಿ ಸಮಾಧಾನಯಜ್ಞವನ್ನಾಗಲಿ ಅರ್ಪಿಸುವವನು
ಅರಣ್ಯಕಾಂಡ 15 : 9 (ERVKN)
ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋಧಿಯ ಹಿಟ್ಟನ್ನೂ
ಅರಣ್ಯಕಾಂಡ 15 : 10 (ERVKN)
ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಅಗ್ನಿಯ ಮೂಲಕ ಸಮರ್ಪಿಸುವ ಯಜ್ಞವಾಗಿದೆ. ಇದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯನ್ನು ಉಂಟುಮಾಡುತ್ತದೆ.
ಅರಣ್ಯಕಾಂಡ 15 : 11 (ERVKN)
ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಯಾವುದನ್ನು ಅರ್ಪಿಸಿದರೂ ಇದನ್ನು ಮಾಡಲೇಬೇಕು.
ಅರಣ್ಯಕಾಂಡ 15 : 12 (ERVKN)
ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಮಾಡಬೇಕು.
ಅರಣ್ಯಕಾಂಡ 15 : 13 (ERVKN)
“ಇಸ್ರೇಲಿನ ಪ್ರತಿಯೊಬ್ಬ ಸ್ವದೇಶಿಯೂ ಯೆಹೋವನಿಗೆ ಸುಗಂಧಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.
ಅರಣ್ಯಕಾಂಡ 15 : 14 (ERVKN)
ನಿಮ್ಮ ಮಧ್ಯದಲ್ಲಿ ವಾಸಿಸುವ ವಿದೇಶಿಯರಲ್ಲಿ ಯಾವನೇ ಆಗಲಿ, ಯೆಹೋವನಿಗೆ ಸುಗಂಧಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನು ಮಾಡಬೇಕು.
ಅರಣ್ಯಕಾಂಡ 15 : 15 (ERVKN)
ನಿಮಗೂ ನಿಮ್ಮಲ್ಲಿರುವ ಪರದೇಶದವರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವೂ ಪರದೇಶಿಯರೂ ಒಂದೇ ಆಗಿದ್ದೀರಿ.
ಅರಣ್ಯಕಾಂಡ 15 : 16 (ERVKN)
ನಿಮಗೂ ನಿಮ್ಮ ಬಳಿಯಲ್ಲಿ ವಾಸಿಸುವ ಪರದೇಶದವನಿಗೂ ಒಂದೇ ವಿಧವಾದ ಪ್ರಮಾಣ ವಿಧಿಗಳಿರಬೇಕು.”
ಅರಣ್ಯಕಾಂಡ 15 : 17 (ERVKN)
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
ಅರಣ್ಯಕಾಂಡ 15 : 18 (ERVKN)
“ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು: ನಾನು ನಿಮ್ಮನ್ನು ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುತ್ತಿದ್ದೇನೆ.
ಅರಣ್ಯಕಾಂಡ 15 : 19 (ERVKN)
ನೀವು ಆ ದೇಶದ ಭೂಮಿಯ ಬೆಳೆಯನ್ನು ಅನುಭೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.
ಅರಣ್ಯಕಾಂಡ 15 : 20 (ERVKN)
ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮಫಲವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡುವಂತೆಯೇ ನೀವು ಪ್ರಥಮವಾಗಿ ನಾದಿದ ಹಿಟ್ಟಿನಿಂದ ಒಂದು ರೊಟ್ಟಿಯನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು.
ಅರಣ್ಯಕಾಂಡ 15 : 21 (ERVKN)
ನೀವೂ ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.
ಅರಣ್ಯಕಾಂಡ 15 : 22 (ERVKN)
(22-23)“ಯೆಹೋವನು ಮೋಶೆಯ ಮೂಲಕ ಪ್ರಕಟಿಸಿದ ಆಜ್ಞೆಗಳನ್ನು ಅಂದರೆ ಯೆಹೋವನು ಆಜ್ಞೆಯನ್ನು ಕೊಟ್ಟ ದಿನದಿಂದಿಡಿದು ಮುಂದಿನ ಎಲ್ಲಾ ಕಾಲದಲ್ಲಿ ನೀವು ತಿಳಿಯದೆ ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿದರೆ ಹೀಗೆ ಮಾಡಬೇಕು:
ಅರಣ್ಯಕಾಂಡ 15 : 23 (ERVKN)
ಅರಣ್ಯಕಾಂಡ 15 : 24 (ERVKN)
ನಿರುದ್ದೇಶದಿಂದ ಮತ್ತು ಸಮುದಾಯಕ್ಕೆ ತಿಳಿಯದಂತೆ ಇದನ್ನು ಮಾಡಿದ್ದಾಗಿದ್ದರೆ, ಯೆಹೋವನಿಗೆ ಸುಗಂಧ ವಾಸನೆಯನ್ನು ಉಂಟುಮಾಡುವುದಕ್ಕಾಗಿ ಒಂದು ಎಳೆಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಬೇಕು ಮತ್ತು ಅದರೊಡನೆ ಧಾನ್ಯಾರ್ಪಣೆಯನ್ನೂ ಪಾನಾರ್ಪಣೆಯನ್ನೂ ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಅರ್ಪಿಸಬೇಕು.
ಅರಣ್ಯಕಾಂಡ 15 : 25 (ERVKN)
“ಈ ರೀತಿಯಲ್ಲಿ ಇಸ್ರೇಲರ ಇಡೀ ಸಮುದಾಯದವರ ಕ್ಷಮೆಗಾಗಿ ಯಾಜಕನು ಪ್ರಾಯಶ್ಚಿತ್ತ ಮಾಡುವನು. ಯಾಕೆಂದರೆ ಅದು ತಿಳಿಯದೆ ಮಾಡಿದ ತಪ್ಪಾಗಿತ್ತು ಮತ್ತು ಆ ತಪ್ಪಿಗಾಗಿ ಅವರು ತಮ್ಮ ಅರ್ಪಣೆಯನ್ನು ಯೆಹೋವನಿಗೆ ಕಾಣಿಕೆಯಾಗಿ ತಂದರು ಮತ್ತು ಯೆಹೋವನ ಎದುರಿನಲ್ಲಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿದರು.
ಅರಣ್ಯಕಾಂಡ 15 : 26 (ERVKN)
ಆದ್ದರಿಂದ ಇಡೀ ಇಸ್ರೇಲ್ ಸಮುದಾಯದವರಿಗೆ ಕ್ಷಮಾಪಣೆಯಾಗುವುದು ಮತ್ತು ಅವರ ಮಧ್ಯದಲ್ಲಿ ವಾಸಿಸುವ ಪರದೇಶಸ್ಥರಿಗೂ ಕ್ಷಮಾಪಣೆಯಾಗುವುದು; ಯಾಕೆಂದರೆ ಜನರೆಲ್ಲರೂ ನಿರುದ್ದೇಶದಿಂದ ಮಾಡಿದ ಆ ತಪ್ಪಿನಲ್ಲಿ ಸಿಕ್ಕಿಕೊಂಡಿದ್ದರು.
ಅರಣ್ಯಕಾಂಡ 15 : 27 (ERVKN)
“ಆದರೆ ಒಬ್ಬನು ತಿಳಿಯದೆ ಪಾಪಮಾಡಿದರೆ, ಅವನು ಒಂದು ವರ್ಷದ ಹೆಣ್ಣು ಆಡನ್ನು ದೋಷ ಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.
ಅರಣ್ಯಕಾಂಡ 15 : 28 (ERVKN)
ಆಗ ಯಾಜಕನು ನಿರುದ್ದೇಶದಿಂದ ತಪ್ಪುಮಾಡಿದವನ ಕ್ಷಮಾಪಣೆಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.
ಅರಣ್ಯಕಾಂಡ 15 : 29 (ERVKN)
ನಿರುದ್ದೇಶದಿಂದ ತಪ್ಪುಮಾಡಿದ ಪ್ರತಿಯೊಬ್ಬರಿಗೂ ಈ ನಿಯಮ ಅನ್ವಯಿಸುತ್ತದೆ. ಈ ವಿಷಯದಲ್ಲಿ ಇಸ್ರೇಲರಲ್ಲಿರುವ ಸ್ವದೇಶದವರಿಗೂ ಪರದೇಶದವರಿಗೂ ಒಂದೇ ವಿಧಿಯಿರಬೇಕು.
ಅರಣ್ಯಕಾಂಡ 15 : 30 (ERVKN)
“ಆದರೆ ಉದ್ದೇಶಪೂರ್ವಕವಾಗಿ ಪಾಪಮಾಡುವವನು ಯೆಹೋವನಿಗೆ ಅವಮಾನ ಮಾಡುವವನಾಗಿದ್ದಾನೆ. ಅವನನ್ನು ಕುಲದಿಂದ ಬಹಿಷ್ಕರಿಸಬೇಕು. ಈ ನಿಯಮವು ಇಸ್ರೇಲರಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಹಾಗೂ ಪರದೇಶಸ್ಥರಿಗೂ ಅನ್ವಯಿಸುವುದು.
ಅರಣ್ಯಕಾಂಡ 15 : 31 (ERVKN)
ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದ್ದರಿಂದ ಕುಲದಿಂದ ತೆಗೆದುಹಾಕಲ್ಪಡಲೇಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.”
ಅರಣ್ಯಕಾಂಡ 15 : 32 (ERVKN)
ಸಬ್ಬತ್ ದಿನದಲ್ಲಿ ಕೆಲಸಮಾಡುವ ಮನುಷ್ಯನು ಇಸ್ರೇಲರು ಮರುಭೂಮಿಯಲ್ಲಿ ಇನ್ನೂ ಇದ್ದಾಗ ಒಬ್ಬನು ಸಬ್ಬತ್‌ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಜನರು ಕಂಡರು.
ಅರಣ್ಯಕಾಂಡ 15 : 33 (ERVKN)
ಕಂಡವರು ಅವನನ್ನು ಮೋಶೆ ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.
ಅರಣ್ಯಕಾಂಡ 15 : 34 (ERVKN)
ಅವನನ್ನು ಶಿಕ್ಷಿಸಬೇಕಾದ ವಿಧಿಯನ್ನು ಅವರು ತಿಳಿಯದೆ ಇದ್ದುದರಿಂದ ಅವನನ್ನು ಕಾವಲಲ್ಲಿಟ್ಟರು.
ಅರಣ್ಯಕಾಂಡ 15 : 35 (ERVKN)
ಆಗ ಯೆಹೋವನು ಮೋಶೆಗೆ, “ಆ ಮನುಷ್ಯನು ಸಾಯಬೇಕು. ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಎಲ್ಲಾ ಜನರು ಕಲ್ಲೆಸೆದು ಕೊಲ್ಲಬೇಕು” ಎಂದು ಹೇಳಿದನು.
ಅರಣ್ಯಕಾಂಡ 15 : 36 (ERVKN)
ಆಗ ಜನರು ಅವನನ್ನು ಪಾಳೆಯದ ಹೊರಗೆ ಕರೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಇದನ್ನು ಮಾಡಿದರು.
ಅರಣ್ಯಕಾಂಡ 15 : 37 (ERVKN)
ಜನರು ವಿಧಿಗಳನ್ನು ಜ್ಞಾಪಕ ಮಾಡುವಂತೆ ದೇವರು ಸಹಾಯ ಮಾಡಿದ್ದ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
ಅರಣ್ಯಕಾಂಡ 15 : 38 (ERVKN)
“ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು: ನನ್ನ ಅಪ್ಪಣೆಗಳನ್ನು ಜ್ಞಾಪಕಮಾಡುವುದಕ್ಕೆ ನಿಮಗೆ ಒಂದು ಗುರುತನ್ನು ಕೊಡುತ್ತೇನೆ. ನಿಮ್ಮ ಬಟ್ಟೆಗಳ ಮೂಲೆಯಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು. ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿದಾರದಿಂದ ಕೂಡಿರಬೇಕು. ನೀವು ಇವುಗಳನ್ನು ಇಂದಿನಿಂದ ಯಾವಾಗಲೂ ಧರಿಸಿಕೊಳ್ಳಬೇಕು.
ಅರಣ್ಯಕಾಂಡ 15 : 39 (ERVKN)
ಈ ಗೊಂಡೆಗಳನ್ನು ನೀವು ನೋಡುವಾಗ, ಯೆಹೋವನು ನಿಮಗೆ ಕೊಟ್ಟ ಅಪ್ಪಣೆಗಳನ್ನೆಲ್ಲ ಜ್ಞಾಪಕಮಾಡಿಕೊಳ್ಳಬೇಕು ಮತ್ತು ಅವುಗಳಿಗೆ ವಿಧೇಯರಾಗಬೇಕು. ನೀವು ನಿಮ್ಮ ಮನಸ್ಸಿಗೆ ಮತ್ತು ಕಣ್ಣಿಗೆ ತೋರಿದ ಪ್ರಕಾರ ನಡೆಯದೆ ನಂಬಿಗಸ್ತರಾಗಿರಬೇಕು.
ಅರಣ್ಯಕಾಂಡ 15 : 40 (ERVKN)
ನೀವು ನನ್ನ ಎಲ್ಲಾ ಆಜ್ಞೆಗಳನ್ನು ಜ್ಞಾಪಿಸಿಕೊಂಡು ವಿಧೇಯರಾಗಿರಬೇಕು. ಆಗ ನೀವು ನಿಮ್ಮ ದೇವರ ವಿಶೇಷವಾದ ಜನರಾಗಿರುವಿರಿ.
ಅರಣ್ಯಕಾಂಡ 15 : 41 (ERVKN)
ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆತಂದ ನಿಮ್ಮ ದೇವರಾದ ಯೆಹೋವನು ನಾನೇ.”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41