ಅರಣ್ಯಕಾಂಡ 17 : 1 (ERVKN)
ಆರೋನನು ಪ್ರಧಾನಯಾಜಕನಾಗಿದ್ದಾನೆಂದು ದೇವರು ಸಾಕ್ಷೀಕರಿಸಿದ್ದು ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
ಅರಣ್ಯಕಾಂಡ 17 : 2 (ERVKN)
“ಇಸ್ರೇಲರ ಸಂಗಡ ಮಾತಾಡಿ ಹೀಗೆ ಮಾಡಬೇಕು: ಅವರ ಕುಲಗಳ ಪ್ರತಿಯೊಬ್ಬ ಪ್ರಧಾನನಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಆಯಾ ಕುಲಪ್ರಧಾನನ ಹೆಸರನ್ನು ಬರೆಯಿಸಬೇಕು.
ಅರಣ್ಯಕಾಂಡ 17 : 3 (ERVKN)
ಲೇವಿ ಕುಲದ ಕೋಲಿನ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು.
ಅರಣ್ಯಕಾಂಡ 17 : 4 (ERVKN)
ನೀನು ಆ ಕುಲಗಳನ್ನು ದೇವದರ್ಶನಗುಡಾರದಲ್ಲಿ ಅಂದರೆ ನಾನು ನಿನ್ನನ್ನು ಸಂಧಿಸುವ ಒಡಂಬಡಿಕೆ ಪೆಟ್ಟಿಗೆಯ ಮುಂದೆ ಇಡಬೇಕು.
ಅರಣ್ಯಕಾಂಡ 17 : 5 (ERVKN)
ನಾನು ಒಬ್ಬನನ್ನು ನನ್ನ ಯಾಜಕನನ್ನಾಗಿ ಆರಿಸಿಕೊಳ್ಳುವೆನು; ಅವನ ಕೋಲು ಚಿಗುರುವುದು, ಇಸ್ರೇಲ್ ಜನರು ನಿಮ್ಮ ವಿರುದ್ಧವಾಗಿ ಹೇಳುತ್ತಿರುವ ದೂರುಗಳನ್ನು ನಾನು ಹೀಗೆ ನಿಲ್ಲಿಸುವೆನು.”
ಅರಣ್ಯಕಾಂಡ 17 : 6 (ERVKN)
ಅದಕ್ಕನುಸಾರವಾಗಿ ಮೋಶೆಯು ಇಸ್ರೇಲರ ಸಂಗಡ ಮಾತಾಡಲಾಗಿ ಅವರ ಕುಲಪ್ರಧಾನರೆಲ್ಲ ಅವನಿಗೆ, ಒಬ್ಬ ಕುಲಪ್ರಧಾನನಿಗೆ ಒಂದು ಕೋಲಿನಂತೆ, ಹನ್ನೆರಡು ಕೋಲುಗಳನ್ನು ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.
ಅರಣ್ಯಕಾಂಡ 17 : 7 (ERVKN)
ಮೋಶೆ ಆ ಕೋಲುಗಳನ್ನು ಒಡಂಬಡಿಕೆಯ ಗುಡಾರದಲ್ಲಿ ಯೆಹೋವನ ಮುಂದೆ ಇಟ್ಟನು. ಆರೋನನು ಪ್ರಧಾನಯಾಜಕನಾಗಿದ್ದಾನೆಂದು ದೇವರು ಸಾಕ್ಷೀಕರಿಸಿದ್ದು
ಅರಣ್ಯಕಾಂಡ 17 : 8 (ERVKN)
ಮರುದಿನ ಮೋಶೆ ಗುಡಾರದೊಳಗೆ ಹೋಗಿ ನೋಡಲಾಗಿ ಲೇವಿಕುಲದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
ಅರಣ್ಯಕಾಂಡ 17 : 9 (ERVKN)
ಮೋಶೆ ಎಲ್ಲಾ ಕೋಲುಗಳನ್ನು ಯೆಹೋವನ ಸನ್ನಿಧಿಯಿಂದ ಹೊರಗೆ ತೆಗೆದುಕೊಂಡು ಬಂದು ಅವುಗಳನ್ನೆಲ್ಲಾ ಇಸ್ರೇಲರಿಗೆ ತೋರಿಸಿದನು. ಪ್ರಧಾನರು ಆ ಕೋಲುಗಳನ್ನು ನೋಡಿ, ತಮ್ಮತಮ್ಮ ಕೋಲುಗಳನ್ನು ತೆಗೆದುಕೊಂಡರು.
ಅರಣ್ಯಕಾಂಡ 17 : 10 (ERVKN)
ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ಮತ್ತೆ ಒಡಂಬಡಿಕೆಯ ಪೆಟ್ಟಿಗೆಯ ಮುಂದಿಡು. ದಂಗೆಕೋರರಿಗೆ ಅದು ಎಚ್ಚರಿಕೆಯಾಗಿ ಅಲ್ಲೇ ಇರಬೇಕು, ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ, ಮರಣಕ್ಕೆ ಗುರಿಯಾಗದಂತೆ ನೀನು ಹೀಗೆ ಮಾಡಬೇಕು” ಎಂದು ಆಜ್ಞಾಪಿಸಿದನು.
ಅರಣ್ಯಕಾಂಡ 17 : 11 (ERVKN)
ಆದ್ದರಿಂದ ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.
ಅರಣ್ಯಕಾಂಡ 17 : 12 (ERVKN)
ಇಸ್ರೇಲರು ಮೋಶೆಗೆ, “ನಾವೆಲ್ಲರು ಪ್ರಾಣ ಕಳೆದುಕೊಂಡು ನಾಶವಾಗುತ್ತೇವಲ್ಲಾ, ನಮ್ಮಲ್ಲಿ ಯಾರೂ ಉಳಿಯುವುದಿಲ್ಲ.
ಅರಣ್ಯಕಾಂಡ 17 : 13 (ERVKN)
ಯೆಹೋವನ ಗುಡಾರದ ಹತ್ತಿರಕ್ಕೆ ಬಂದವರೆಲ್ಲರೂ ಸಾಯುತ್ತಾರಲ್ಲಾ, ನಾವೆಲ್ಲರೂ ಹಾಗೆಯೇ ಸಾಯುತ್ತೇವೋ?” ಎಂದು ಹೇಳಿದರು.

1 2 3 4 5 6 7 8 9 10 11 12 13