ಅರಣ್ಯಕಾಂಡ 19 : 1 (ERVKN)
{ಕೆಂಪು ಹಸುವಿನ ಬೂದಿ} [PS] ಯೆಹೋವನು ಮೋಶೆ ಮತ್ತು ಆರೋನರೊಡನೆ ಮಾತಾಡಿ ಹೀಗೆಂದನು:
ಅರಣ್ಯಕಾಂಡ 19 : 2 (ERVKN)
“ಯೆಹೋವನು ಆಜ್ಞಾಪಿಸಿದ ಸಂಪ್ರದಾಯದ ನಿಯಮವಿದು. ಯಾವ ದೋಷವಿಲ್ಲದ ಕೆಂಪು ಹಸುವನ್ನು ನಿನಗೆ ತಂದುಕೊಡುವಂತೆ ಇಸ್ರೇಲರಿಗೆ ಹೇಳು. ಆ ಹಸುವಿನಲ್ಲಿ ಯಾವ ಗಾಯಗಳಿರಬಾರದು ಮತ್ತು ಆ ಹಸುವು ಎಂದಿಗೂ ನೊಗವನ್ನು ಹೊತ್ತಿರಬಾರದು.
ಅರಣ್ಯಕಾಂಡ 19 : 3 (ERVKN)
ಅದನ್ನು ಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿರಿ. ಅವನು ಅದನ್ನು ಪಾಳೆಯದ ಹೊರಗೆ ಹೊಡಿಸಿಕೊಂಡು ಹೋಗಿ ತನಗೆದುರಾಗಿಯೇ ಒಬ್ಬನ ಕೈಯಿಂದ ವಧೆ ಮಾಡಿಸಬೇಕು.
ಅರಣ್ಯಕಾಂಡ 19 : 4 (ERVKN)
ಬಳಿಕ ಅವನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು.
ಅರಣ್ಯಕಾಂಡ 19 : 5 (ERVKN)
ಬಳಿಕ ಅವನು ಆ ಹಸುವನ್ನು ಚರ್ಮ, ಮಾಂಸ, ರಕ್ತ ಮತ್ತು ಕಲ್ಮಶಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಬೇಕು.
ಅರಣ್ಯಕಾಂಡ 19 : 6 (ERVKN)
ಯಾಜಕನು ದೇವದಾರು ಮರದ ಕಟ್ಟಿಗೆಯನ್ನೂ ಹಿಸ್ಸೋಪ್ ಗಿಡದ ಎಳೆಕೊಂಬೆಯನ್ನೂ ಕೆಂಪು ದಾರವನ್ನೂ ತೆಗೆದುಕೊಂಡು, ಉರಿಯುತ್ತಿರುವ ಆ ಹಸುವಿನ ಮೇಲೆ ಎಸೆಯಬೇಕು.
ಅರಣ್ಯಕಾಂಡ 19 : 7 (ERVKN)
ಆ ಯಾಜಕನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಅರಣ್ಯಕಾಂಡ 19 : 8 (ERVKN)
ಆ ಹಸುವನ್ನು ಸುಟ್ಟು ಹಾಕಿದವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಿಕೊಳ್ಳಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. [PE][PS]
ಅರಣ್ಯಕಾಂಡ 19 : 9 (ERVKN)
“ಆಗ ಶುದ್ಧನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಇಸ್ರೇಲರ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಆ ಬೂದಿಯನ್ನು ಉಪಯೋಗಿಸಬೇಕು. ಅದು ದೋಷಪರಿಹಾರಕವಾದದ್ದು. [PE][PS]
ಅರಣ್ಯಕಾಂಡ 19 : 10 (ERVKN)
“ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. [PE][PS] “ಇದು ಇಸ್ರೇಲರಿಗೂ ಅವರ ಮಧ್ಯದಲ್ಲಿ ಇಳಿದುಕೊಂಡಿರುವ ಪರದೇಶಸ್ಥರಿಗೂ ಶಾಶ್ವತ ನಿಯಮ.
ಅರಣ್ಯಕಾಂಡ 19 : 11 (ERVKN)
ಯಾವನಾದರೂ ಮನುಷ್ಯ ಶವವನ್ನು ಮುಟ್ಟಿದರೆ, ಏಳು ದಿನಗಳವರೆಗೆ ಅಶುದ್ಧನಾಗಿರುವನು.
ಅರಣ್ಯಕಾಂಡ 19 : 12 (ERVKN)
ಅವನು ಶುದ್ಧೀಕರಣದ ನೀರಿನಿಂದ ಮೂರನೆಯ ದಿನದಲ್ಲಿ ಮತ್ತು ತಿರುಗಿ ಏಳನೆಯ ದಿನದಲ್ಲಿ ತನ್ನನ್ನು ಶುದ್ಧೀಕರಿಸಿಕೊಳ್ಳಬೇಕು. ಆಗ ಅವನು ಶುದ್ಧನಾಗಿರುವನು.
ಅರಣ್ಯಕಾಂಡ 19 : 13 (ERVKN)
ಒಬ್ಬನು ಮನುಷ್ಯ ಶವವನ್ನು ಮುಟ್ಟಿ ತನ್ನನ್ನು ಶುದ್ಧೀಕರಿಸಿಕೊಳ್ಳದೆ ಹೋದರೆ ಅವನು ಯೆಹೋವನ ಪವಿತ್ರ ಗುಡಾರವನ್ನು ಅಶುದ್ಧಮಾಡುತ್ತಾನೆ. ಆದ್ದರಿಂದ ಆ ವ್ಯಕ್ತಿಯನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣದ ವಿಶೇಷ ನೀರು ಅವನ ಮೇಲೆ ಚಿಮಿಕಿಸಲ್ಪಡದ ಕಾರಣ ಅವನು ಅಶುದ್ಧನಾಗಿಯೇ ಇರುವನು. ಅವನ ಅಶುದ್ಧತ್ವ ಅವನಲ್ಲಿ ನೆಲೆಸುವುದು. ಅವನು ಅಶುದ್ಧನಾಗಿಯೇ ಇರುವನು. [PE][PS]
ಅರಣ್ಯಕಾಂಡ 19 : 14 (ERVKN)
“ಯಾವನಾದರೂ ಗುಡಾರದಲ್ಲಿ ಸತ್ತರೆ ಅನುಸರಿಸಬೇಕಾದ ನಿಯಮವಿದು: ಒಬ್ಬನು ಗುಡಾರದಲ್ಲಿ ಸತ್ತರೆ, ಆ ಗುಡಾರವನ್ನು ಪ್ರವೇಶಿಸುವ ಪ್ರತಿಯೊಬ್ಬನು ಮತ್ತು ಆ ಗುಡಾರದಲ್ಲಿರುವ ಪ್ರತಿಯೊಬ್ಬನು ಅಶುದ್ಧನಾಗುವನು. ಅವರು ಏಳು ದಿನಗಳವರೆಗೆ ಅಶುದ್ಧರಾಗಿರುವರು.
ಅರಣ್ಯಕಾಂಡ 19 : 15 (ERVKN)
ಮತ್ತು ಮುಚ್ಚಳವಿಲ್ಲದಿರುವ ಪ್ರತಿಯೊಂದು ಪಾತ್ರೆಯೂ ಅಶುದ್ಧವಾಗಿರುವುದು.
ಅರಣ್ಯಕಾಂಡ 19 : 16 (ERVKN)
ಹೊರಗೆ ಹೋಗಿರುವವನು ಯುದ್ಧದಲ್ಲಿ ಸತ್ತವನ ಶವವನ್ನಾಗಲಿ ಸಹಜವಾಗಿ ಸತ್ತವನ ಶವವನ್ನಾಗಲಿ ಮನುಷ್ಯನ ಮೂಳೆಯನ್ನಾಗಲಿ ಅಥವಾ ಸಮಾಧಿಯನ್ನಾಗಲಿ ಮುಟ್ಟಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರವನು. [PE][PS]
ಅರಣ್ಯಕಾಂಡ 19 : 17 (ERVKN)
“ಆದ್ದರಿಂದ ಅಶುದ್ಧ ವ್ಯಕ್ತಿಯನ್ನು ಶುದ್ಧೀಕರಿಸುವುದಕ್ಕಾಗಿ ಶುದ್ಧೀಕರಣ ಯಜ್ಞದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ತೆಗೆದುಕೊಂಡು ಹರಿಯುವ ನೀರನ್ನು ಅದರ ಮೇಲೆ ಸುರಿಯಬೇಕು.
ಅರಣ್ಯಕಾಂಡ 19 : 18 (ERVKN)
ಆಗ ಶುದ್ಧನಾಗಿರುವ ಒಬ್ಬನು ಹಿಸ್ಸೋಪ್ ಗಿಡದ ಎಳೆಕೊಂಬೆಯನ್ನು ಆ ನೀರಿನಲ್ಲಿ ಅದ್ದಿ ಗುಡಾರದ ಮೇಲೆಯೂ ಪಾತ್ರೆಗಳ ಮೇಲೆಯೂ ಮತ್ತು ಅದರೊಳಗಿದ್ದ ವ್ಯಕ್ತಿಗಳ ಮೇಲೆಯೂ ಚಿಮಿಕಿಸಬೇಕು. ಸತ್ತವನ ದೇಹವನ್ನು ಮುಟ್ಟಿದವನಿಗೂ ಯುದ್ಧದಲ್ಲಿ ಕೊಲ್ಲಲ್ಪಟ್ಟವನ ದೇಹವನ್ನು ಮುಟ್ಟಿದವನಿಗೂ ಸತ್ತವನ ಮೂಳೆಗಳನ್ನು ಮುಟ್ಟಿದವನಿಗೂ ನೀವು ಹೀಗೆ ಮಾಡಲೇಬೇಕು. [PE][PS]
ಅರಣ್ಯಕಾಂಡ 19 : 19 (ERVKN)
“ಶುದ್ಧನಾಗಿರುವವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಚಿಮಿಕಿಸಬೇಕು. ಹೀಗೆ ಅವನು ಏಳನೆಯ ದಿನದಲ್ಲಿ ಶುದ್ಧನಾಗುವನು. ಬಳಿಕ ಅಶುದ್ಧನಾದವನು ತನ್ನ ಬಟ್ಟೆಯನ್ನು ತೊಳೆದುಕೊಳ್ಳಬೇಕು. [PE][PS]
ಅರಣ್ಯಕಾಂಡ 19 : 20 (ERVKN)
“ಅಶುದ್ಧನಾಗಿದ್ದರೂ ತನ್ನನ್ನು ಶುದ್ಧಮಾಡಿಕೊಳ್ಳದವನು ಯೆಹೋವನ ಗುಡಾರವನ್ನು ಅಶುದ್ಧಮಾಡಿದವನಾಗಿರುತ್ತಾನೆ. ಆದ್ದರಿಂದ ಅವನನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧಪಡಿಸಿಕೊಳ್ಳುವ ನೀರನ್ನು ಚಿಮಿಕಿಸಿಕೊಳ್ಳದೆ ಹೋದದರಿಂದ ಅವನು ಅಶುದ್ಧನೇ.
ಅರಣ್ಯಕಾಂಡ 19 : 21 (ERVKN)
ಇದು ನಿಮಗೆ ಶಾಶ್ವತನಿಯಮ. ಶುದ್ಧಪಡಿಸುವ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಮತ್ತು ಆ ನೀರನ್ನು ಯಾವನಾದರೂ ಮುಟ್ಟಿದರೆ, ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಅರಣ್ಯಕಾಂಡ 19 : 22 (ERVKN)
ಅಶುದ್ಧನಾದವನು ಮುಟ್ಟುವುದೆಲ್ಲಾ ಅಶುದ್ಧವಾಗುತ್ತದೆ. ಅಲ್ಲದೆ ಅವನನ್ನು ಮಟ್ಟುವವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.” [PE]

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: