ಅರಣ್ಯಕಾಂಡ 31 : 1 (ERVKN)
ಇಸ್ರೇಲರು ಮಿದ್ಯಾನ್ಯರನ್ನು ಸಂಹರಿಸಿದ್ದು ಯೆಹೋವನು ಮೋಶೆಯೊಡನೆ ಮಾತಾಡಿ ಹೀಗೆಂದನು:
ಅರಣ್ಯಕಾಂಡ 31 : 2 (ERVKN)
“ನೀನು ಇಸ್ರೇಲರಿಗೋಸ್ಕರ ಮಿದ್ಯಾನ್ಯರ ಮೇಲೆ ಆಕ್ರಮಣಮಾಡಿ ಸೇಡು ತೀರಿಸಿಕೊ. ಇದಾದ ನಂತರ ನೀನು ಸಾಯುವಿ.”
ಅರಣ್ಯಕಾಂಡ 31 : 3 (ERVKN)
ಆಗ ಮೋಶೆ ಇಸ್ರೇಲರಿಗೆ, “ಮಿದ್ಯಾನ್ಯರು ಯೆಹೋವನಿಗೆ ವಿರೋಧವಾಗಿ ಮಾಡಿದ ಕೃತ್ಯಗಳಿಗಾಗಿ ಅವರ ಮೇಲೆ ಆಕ್ರಮಣ ಮಾಡಿ ದಂಡಿಸಲು ನಿಮ್ಮಲ್ಲಿರುವ ಗಂಡಸರಲ್ಲಿ ಕೆಲವರನ್ನು ದಂಡೆಯಾತ್ರೆಗೆ ಆರಿಸಿಕೊಳ್ಳಬೇಕು.
ಅರಣ್ಯಕಾಂಡ 31 : 4 (ERVKN)
ಇಸ್ರೇಲಿನ ಕುಲಗಳವರಲ್ಲಿ ಪ್ರತಿಯೊಂದು ಕುಲದಿಂದ ಒಂದು ಸಾವಿರ ಗಂಡಸರನ್ನು ದಂಡೆಯಾತ್ರೆಗೆ ಕಳುಹಿಸಬೇಕು.
ಅರಣ್ಯಕಾಂಡ 31 : 5 (ERVKN)
ಆದ್ದರಿಂದ ಇಸ್ರೇಲರ ಕುಲಗಳಿಂದ ಪ್ರತಿಯೊಂದು ಕುಲಕ್ಕೆ ಒಂದು ಸಾವಿರ ಗಂಡಸರ ಪ್ರಕಾರ ಹನ್ನೆರಡು ಸಾವಿರ ಗಂಡಸರನ್ನು ಯುದ್ಧಕ್ಕೆ ಆರಿಸಿಕೊಳ್ಳಬೇಕು” ಅಂದನು.
ಅರಣ್ಯಕಾಂಡ 31 : 6 (ERVKN)
ಮೋಶೆಯು ಅವರನ್ನು ಯುದ್ಧಕ್ಕೆ ಕಳುಹಿಸಿದನು. ಅವರ ಸಂಗಡ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ ಕಳುಹಿಸಿದನು. ಫೀನೆಹಾಸನು ಪವಿತ್ರವಸ್ತುಗಳನ್ನು ತೆಗೆದುಕೊಂಡನು ಮತ್ತು ಸೂಚನೆ ಕೊಡುವುದಕ್ಕಾಗಿ ತುತ್ತೂರಿಗಳನ್ನು ತೆಗೆದುಕೊಂಡನು.
ಅರಣ್ಯಕಾಂಡ 31 : 7 (ERVKN)
ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರೇಲರು ಮಿದ್ಯಾನ್ಯರೊಡನೆ ಯುದ್ಧಮಾಡಿದರು. ಅವರು ಮಿದ್ಯಾನ್ಯರ ಗಂಡಸರೆಲ್ಲರನ್ನು ಕೊಂದರು.
ಅರಣ್ಯಕಾಂಡ 31 : 8 (ERVKN)
ಅವರು ಕೊಂದವರಲ್ಲಿ ಎವೀ, ರೆಕೆಮ್, ಜೂರ್, ಹೂರ್ ಮತ್ತು ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಸೇರಿದ್ದರು. ಅವರು ಕತ್ತಿಯಿಂದ ಬೆಯೋರನ ಮಗನಾದ ಬಿಳಾಮನನ್ನೂ ಕೊಂದರು.
ಅರಣ್ಯಕಾಂಡ 31 : 9 (ERVKN)
ಇಸ್ರೇಲರು ಮಿದ್ಯಾನ್ಯರ ಹೆಂಗಸರನ್ನು ಮತ್ತು ಮಕ್ಕಳನ್ನು ಸೆರೆಹಿಡಿದರು. ಅವರು ಮಿದ್ಯಾನ್ಯರ ಎಲ್ಲಾ ಪಶುಗಳನ್ನು ಮತ್ತು ಇತರ ಅಮೂಲ್ಯವಾದ ವಸ್ತುಗಳನ್ನು ತೆಗೆದುಕೊಂಡರು.
ಅರಣ್ಯಕಾಂಡ 31 : 10 (ERVKN)
ಅವರು ನೆಲೆಸಿದ್ದ ಊರುಗಳನ್ನೂ ಪಾಳೆಯಗಳನ್ನೂ ಸುಟ್ಟುಹಾಕಿದರು.
ಅರಣ್ಯಕಾಂಡ 31 : 11 (ERVKN)
ಎಲ್ಲಾ ಜನರನ್ನೂ ಪಶುಗಳನ್ನೂ ಹಿಡಿದು,
ಅರಣ್ಯಕಾಂಡ 31 : 12 (ERVKN)
ತಾವು ಸೆರೆಹಿಡಿದವರನ್ನೂ ಪಶುಗಳನ್ನೂ ಆಸ್ತಿಯನ್ನೂ ತೆಗೆದುಕೊಂಡು ಜೆರಿಕೊ ಪಟ್ಟಣದ ಆಚೆ ಜೋರ್ಡನ್ ಹೊಳೆಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿದ್ದ ಪಾಳೆಯಕ್ಕೆ ಅಂದರೆ ಮೋಶೆ, ಯಾಜಕನಾದ ಎಲ್ಲಾಜಾರ್ ಮತ್ತು ಇಸ್ರೇಲರ ಸರ್ವಸಮೂಹದವರು ಇದ್ದಲ್ಲಿಗೆ ಬಂದರು.
ಅರಣ್ಯಕಾಂಡ 31 : 13 (ERVKN)
ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಬಂದು ಸೈನಿಕರನ್ನು ಎದುರುಗೊಂಡರು.
ಅರಣ್ಯಕಾಂಡ 31 : 14 (ERVKN)
ಮೋಶೆಯು ಯುದ್ಧದಿಂದ ಹಿಂತಿರುಗಿ ಬರುತ್ತಿದ್ದ ಸೈನ್ಯಾಧಿಕಾರಿಗಳ ಮೇಲೆ ಅಂದರೆ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.
ಅರಣ್ಯಕಾಂಡ 31 : 15 (ERVKN)
ಅವನು ಅವರಿಗೆ, “ನೀವು ಎಲ್ಲಾ ಹೆಂಗಸರನ್ನು ಉಳಿಸಿದ್ದೇಕೆ?
ಅರಣ್ಯಕಾಂಡ 31 : 16 (ERVKN)
ಬಿಳಾಮನ ಸಲಹೆಯನ್ನು ಅನುಸರಿಸಿ, ಯೆಹೋವನಿಗೆ ವಿರೋಧವಾಗಿ ಇಸ್ರೇಲರು ಪಾಪಮಾಡುವಂತೆ ಮಾಡಿ ಪೆಗೋರದ ಬಾಳನ ಸಂಗತಿಗೆ ಕಾರಣರಾದವರು ಇವರೇ ಅಲ್ಲವೇ? ಅದರ ಫಲವಾಗಿ ಭಯಂಕರವಾದ ಕಾಯಿಲೆಯು ಜನರಿಗೆ ಬಂದಿತು.
ಅರಣ್ಯಕಾಂಡ 31 : 17 (ERVKN)
ಆದ್ದರಿಂದ ಈ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಮಿದ್ಯಾನ್ ಹೆಂಗಸರನ್ನೂ ಕೊಲ್ಲಬೇಕು.
ಅರಣ್ಯಕಾಂಡ 31 : 18 (ERVKN)
ಪುರುಷಸಂಗಮ ಮಾಡದಿರುವ ಕನ್ಯೆಯರನ್ನು ನಿಮಗಾಗಿ ಉಳಿಸಿರಿ.
ಅರಣ್ಯಕಾಂಡ 31 : 19 (ERVKN)
ನೀವಾದರೋ ಏಳು ದಿನಗಳವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯರನ್ನು ಕೊಂದವರೂ ಶವಸೋಂಕಿದವರೂ ನಿಮ್ಮವರಾಗಿರಲಿ ಸೆರೆಯವರಾಗಿರಲಿ ಮೂರನೆಯ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಶುದ್ಧೀಕರಿಸಿಕೊಳ್ಳಬೇಕು.
ಅರಣ್ಯಕಾಂಡ 31 : 20 (ERVKN)
ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ ತೊಗಲಿನ ಸಾಮಾನುಗಳನ್ನೂ ಮೇಕೆ ಕೂದಲಿನ ವಸ್ತುಗಳನ್ನೂ ಮರದ ಸಾಮಾನನ್ನೂ ಶುದ್ಧ ಮಾಡಬೇಕು.”
ಅರಣ್ಯಕಾಂಡ 31 : 21 (ERVKN)
ಆಗ ಯಾಜಕನಾದ ಎಲ್ಲಾಜಾರನು ಸೈನಿಕರೊಡನೆ ಮಾತಾಡಿ ಇಂತೆಂದೆನು: “ಯೆಹೋವನು ಮೋಶೆಗೆ ಯುದ್ಧದಿಂದ ಮರಳಿಬರುವ ಸೈನಿಕರ ಬಗ್ಗೆ ಆ ನಿಯಮಗಳನ್ನು ಕೊಟ್ಟನು:
ಅರಣ್ಯಕಾಂಡ 31 : 22 (ERVKN)
(22-23) ಬೆಂಕಿಯನ್ನು ಸಹಿಸಬಲ್ಲ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿಯಲ್ಲಿ ಹಾಯಿಸಿ ಶುದ್ಧಮಾಡಬೇಕು. ಬಳಿಕ ಶುದ್ಧೀಕರಣದ ನೀರಿನಿಂದ ಅವುಗಳನ್ನು ಶುದ್ಧೀಕರಿಸಬೇಕು. ಬೆಂಕಿಯನ್ನು ಸಹಿಸಲಾರದ ವಸ್ತುಗಳನ್ನು ನೀರಿನಿಂದ ಮಾತ್ರ ತೊಳೆಯಬೇಕು.
ಅರಣ್ಯಕಾಂಡ 31 : 23 (ERVKN)
ಅರಣ್ಯಕಾಂಡ 31 : 24 (ERVKN)
ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ನೀವು ಶುದ್ಧರಾಗುವಿರಿ. ಆಮೇಲೆ ನೀವು ಪಾಳೆಯದೊಳಗೆ ಬರಬಹುದು.”
ಅರಣ್ಯಕಾಂಡ 31 : 25 (ERVKN)
ಅರಣ್ಯಕಾಂಡ 31 : 26 (ERVKN)
“ನೀನೂ ಯಾಜಕನಾದ ಎಲ್ಲಾಜಾರನೂ ಸಮುದಾಯದ ಎಲ್ಲಾ ಕುಲಪ್ರಧಾನರೂ ಸೆರೆಸಿಕ್ಕಿದ ಮನುಷ್ಯರನ್ನು ಮತ್ತು ಪಶುಗಳನ್ನು ಲೆಕ್ಕಿಸಿ ಪಟ್ಟಿಮಾಡಬೇಕು.
ಅರಣ್ಯಕಾಂಡ 31 : 27 (ERVKN)
ಅವುಗಳನ್ನು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಸೈನಿಕರಿಗೆ ಅರ್ಧವನ್ನು ಮಿಕ್ಕ ಸಮೂಹದವರಿಗೆ ಅರ್ಧವನ್ನು ಹಂಚಿಕೊಡಬೇಕು.
ಅರಣ್ಯಕಾಂಡ 31 : 28 (ERVKN)
ಯುದ್ಧಕ್ಕೆ ಹೋದ ಸೈನಿಕರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು ಮತ್ತು ಕುರಿಗಳನ್ನು
ಅರಣ್ಯಕಾಂಡ 31 : 29 (ERVKN)
ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೋಸ್ಕರ ಕಪ್ಪಕಾಣಿಕೆಯನ್ನು ತೆಗೆದುಕೊಂಡು, ಅದನ್ನು ಪ್ರತ್ಯೇಕಿಸಿ ಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.
ಅರಣ್ಯಕಾಂಡ 31 : 30 (ERVKN)
ಮಿಕ್ಕ ಇಸ್ರೇಲರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು, ಕುರಿಗಳನ್ನು ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಳ್ಳಬೇಕು. ಅದನ್ನು ಯೆಹೋವನ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.
ಅರಣ್ಯಕಾಂಡ 31 : 31 (ERVKN)
ಯೆಹೋವನು ಆಜ್ಞಾಪಿಸಿದ್ದಂತೆಯೇ ಮೋಶೆ ಮತ್ತು ಎಲ್ಲಾಜಾರನು ಮಾಡಿದರು.
ಅರಣ್ಯಕಾಂಡ 31 : 32 (ERVKN)
ಸೈನಿಕರು ಆರು ಲಕ್ಷದ ಎಪ್ಪತ್ತೈದು ಸಾವಿರ ಕುರಿಗಳನ್ನು,
ಅರಣ್ಯಕಾಂಡ 31 : 33 (ERVKN)
ಎಪ್ಪತ್ತೆರಡು ಸಾವಿರ ದನಕರುಗಳನ್ನು,
ಅರಣ್ಯಕಾಂಡ 31 : 34 (ERVKN)
ಅರವತ್ತೊಂದು ಸಾವಿರ ಕತ್ತೆಗಳನ್ನು,
ಅರಣ್ಯಕಾಂಡ 31 : 35 (ERVKN)
ಮೂವತ್ತೆರಡು ಸಾವಿರ ಕನ್ನಿಕೆಯರನ್ನು ಪಡೆದುಕೊಂಡರು.
ಅರಣ್ಯಕಾಂಡ 31 : 36 (ERVKN)
ಯುದ್ಧಕ್ಕೆ ಹೋದ ಸೈನಿಕರು ಅರ್ಧಭಾಗವನ್ನು ಅಂದರೆ ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳನ್ನು ಪಡೆದುಕೊಂಡರು.
ಅರಣ್ಯಕಾಂಡ 31 : 37 (ERVKN)
ಅವರು ಆರುನೂರ ಐವತ್ತೇಳು ಕುರಿಗಳನ್ನು ಯೆಹೋವನಿಗೆ ಕೊಟ್ಟರು.
ಅರಣ್ಯಕಾಂಡ 31 : 38 (ERVKN)
ಸೈನಿಕರು ಮೂವತ್ತಾರು ಸಾವಿರ ದನಕರುಗಳನ್ನು ಪಡೆದುಕೊಂಡರು. ಅವುಗಳಲ್ಲಿ ಎಪ್ಪತ್ತೆರಡು ದನಕರುಗಳನ್ನು ಯೆಹೋವನಿಗೆ ಕೊಟ್ಟರು.
ಅರಣ್ಯಕಾಂಡ 31 : 39 (ERVKN)
ಸೈನಿಕರು ಮೂವತ್ತು ಸಾವಿರದ ಐನೂರು ಕತ್ತೆಗಳನ್ನು ಪಡೆದುಕೊಂಡರು. ಅವರು ಅರವತ್ತೊಂದು ಕತ್ತೆಗಳನ್ನು ಯೆಹೋವನಿಗೆ ಕೊಟ್ಟರು.
ಅರಣ್ಯಕಾಂಡ 31 : 40 (ERVKN)
ಸೈನಿಕರು ಹದಿನಾರು ಸಾವಿರ ಮಂದಿ ಕನ್ನಿಕೆಯರನ್ನು ಪಡೆದುಕೊಂಡರು. ಅವರು ಮೂವತ್ತೆರಡು ಮಂದಿ ಕನ್ನಿಕೆಯರನ್ನು ಯೆಹೋವನಿಗೆ ಕೊಟ್ಟರು.
ಅರಣ್ಯಕಾಂಡ 31 : 41 (ERVKN)
ಮೋಶೆಯು ಯೆಹೋವನ ಅಪ್ಪಣೆಯ ಮೇರೆಗೆ ಆ ಕಪ್ಪವನ್ನೆಲ್ಲ ಯೆಹೋವನಿಗೆ ಕೊಡುಗೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಟ್ಟನು.
ಅರಣ್ಯಕಾಂಡ 31 : 42 (ERVKN)
(42-43) ಮೋಶೆಯು ಜನರಿಗೆ ಸೇರಿದ ಅರ್ಧಭಾಗವನ್ನು ಎಣಿಸಿದನು. ಯುದ್ಧಕ್ಕೆ ಹೋಗಿದ್ದ ಸೈನಿಕರಿಂದ ಮೋಶೆಯು ತೆಗೆದುಕೊಂಡ ಅರ್ಧಭಾಗ: ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು,
ಅರಣ್ಯಕಾಂಡ 31 : 43 (ERVKN)
ಅರಣ್ಯಕಾಂಡ 31 : 44 (ERVKN)
ಮೂವತ್ತಾರು ಸಾವಿರ ದನಕರುಗಳು,
ಅರಣ್ಯಕಾಂಡ 31 : 45 (ERVKN)
ಮೂವತ್ತು ಸಾವಿರದ ಐನೂರು ಕತ್ತೆಗಳು
ಅರಣ್ಯಕಾಂಡ 31 : 46 (ERVKN)
ಮತ್ತು ಹದಿನಾರು ಸಾವಿರ ಸ್ತ್ರೀಯರು.
ಅರಣ್ಯಕಾಂಡ 31 : 47 (ERVKN)
ಇಸ್ರೇಲ್ ಜನರಿಗೆ ದೊರಕಿದ ಅರ್ಧ ಭಾಗದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಮೋಶೆ ಐವತ್ತನೆ ಒಂದು ಭಾಗವನ್ನು ತೆಗೆದುಕೊಂಡು ಯೆಹೋವನ ಪವಿತ್ರಗುಡಾರವನ್ನು ನೋಡಿಕೊಳ್ಳುತ್ತಿದ್ದ ಲೇವಿಯರಿಗೆ ಕೊಟ್ಟನು.
ಅರಣ್ಯಕಾಂಡ 31 : 48 (ERVKN)
ಆಗ ದಂಡಿನ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು,
ಅರಣ್ಯಕಾಂಡ 31 : 49 (ERVKN)
“ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಸೈನಿಕರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ತಿಳಿಯಿತು.
ಅರಣ್ಯಕಾಂಡ 31 : 50 (ERVKN)
ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ ಮುಂತಾದವುಗಳನ್ನು ನಮ್ಮ ಶುದ್ಧೀಕರಣಕ್ಕಾಗಿ ಯೆಹೋವನಿಗೆ ತಂದಿದ್ದೇವೆ” ಅಂದರು.
ಅರಣ್ಯಕಾಂಡ 31 : 51 (ERVKN)
ಅವರು ಕೊಟ್ಟ ಎಲ್ಲಾ ಚಿನ್ನದ ಒಡವೆಗಳನ್ನು ಮೋಶೆಯು ಮತ್ತು ಯಾಜಕನಾದ ಎಲ್ಲಾಜಾರನು ತೆಗೆದುಕೊಂಡರು. ಅವುಗಳನ್ನು ಕುಶಲತೆಯಿಂದ ತಯಾರಿಸಿದ ಒಡವೆಗಳಾಗಿದ್ದವು.
ಅರಣ್ಯಕಾಂಡ 31 : 52 (ERVKN)
ಸಹಸ್ರಾಧಿಪತಿಗಳು ಮತ್ತು ಶತಾಧಿಪತಿಗಳು ಯೆಹೋವನಿಗೆ ಕೊಟ್ಟ ಚಿನ್ನವು ನಾನೂರಿಪ್ಪತ್ತು ಪೌಂಡು ತೂಕವಿತ್ತು.
ಅರಣ್ಯಕಾಂಡ 31 : 53 (ERVKN)
ಉಳಿದದ್ದನ್ನು ಸೈನಿಕರು ತಮಗಾಗಿ ಇಟ್ಟುಕೊಂಡರು.
ಅರಣ್ಯಕಾಂಡ 31 : 54 (ERVKN)
ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ತೆಗೆದುಕೊಂಡು ದೇವದರ್ಶನಗುಡಾರದಲ್ಲಿ ಇಟ್ಟರು. ಇಸ್ರೇಲರ ವಿಷಯದಲ್ಲಿ ಜ್ಞಾಪಕಾರ್ಥವಾಗಿ ಇದು ಯೆಹೋವನ ಸನ್ನಿಧಿಯಲ್ಲಿ ಇಡಲ್ಪಟ್ಟಿತು.
❮
❯