ಅರಣ್ಯಕಾಂಡ 34 : 1 (ERVKN)
ಕಾನಾನಿನ ಮೇರೆಗಳು ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
ಅರಣ್ಯಕಾಂಡ 34 : 2 (ERVKN)
“ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು: ನೀವು ಕಾನಾನ್ ದೇಶವನ್ನು ಪ್ರವೇಶಿಸಿದಾಗ, ಇಡೀ ಕಾನಾನ್ ದೇಶವನ್ನು ಅದರ ಗಡಿಗಳೊಡನೆ ನಿಮಗೆ ಸ್ವಾಸ್ತ್ಯವಾಗಿ ಕೊಡಲಾಗುವುದು.
ಅರಣ್ಯಕಾಂಡ 34 : 3 (ERVKN)
ದಕ್ಷಿಣಭಾಗವು ಎದೋಮಿನ ಗಡಿಯಲ್ಲಿರುವ ಚಿನ್ ಮರುಭೂಮಿಯನ್ನು ಒಳಗೊಂಡಿದೆ. ಪೂರ್ವದ ಕಡೆಯಿರುವ ದಕ್ಷಿಣ ಗಡಿಯು ಉಪ್ಪುಸಮುದ್ರದ ದಕ್ಷಿಣಭಾಗದಿಂದ ಆರಂಭವಾಗುತ್ತದೆ.
ಅರಣ್ಯಕಾಂಡ 34 : 4 (ERVKN)
ಅಲ್ಲಿಂದ ಅದು ಅಕ್ರಬ್ಬೀಮ್ ಕಣಿವೆಗೆ ತಿರುಗಿಕೊಂಡು ಚಿನಿಗೆ ಮುಂದುವರಿಯುವುದು. ಅದರ ಪರಿಮಿತಿ ದಕ್ಷಿಣ ಕಾದೇಶ್ ಬರ್ನೇಯಾ. ಅಲ್ಲಿಂದ ಅದು ಹಚರದ್ದಾರ್‌ಗೆ ಹೋಗಿ ಅಚ್ಮೋನಿಗೆ ಮುಂದುವರಿಯುತ್ತದೆ.
ಅರಣ್ಯಕಾಂಡ 34 : 5 (ERVKN)
ಗಡಿಯು ಅಚ್ಮೋನಿನಿಂದ ಈಜಿಪ್ಟಿನ ನದಿಯ ಕಡೆಗೆ ತಿರುಗಿಕೊಂಡು ಸಮುದ್ರವನ್ನು ಸೇರುವುದು.
ಅರಣ್ಯಕಾಂಡ 34 : 6 (ERVKN)
ಪಶ್ಚಿಮದಿಕ್ಕಿನಲ್ಲಿ ಮೆಡಿಟೆರೇನಿಯನ್ ಸಮುದ್ರದ ತೀರ ನಿಮ್ಮ ದೇಶದ ಮೇರೆಯಾಗಿರುವುದು.
ಅರಣ್ಯಕಾಂಡ 34 : 7 (ERVKN)
ಉತ್ತರದಿಕ್ಕಿನ ಮೇರೆ ಮೆಡಿಟೆರೇನಿಯನ್ ಸಮುದ್ರದಿಂದ ಹಿಡಿದು ಲೆಬನೋನಿನಲ್ಲಿರುವ ಹೋರ್ ಬೆಟ್ಟದವರೆಗೂ ಇರುವುದು.
ಅರಣ್ಯಕಾಂಡ 34 : 8 (ERVKN)
ಹೋರ್ ಬೆಟ್ಟದಿಂದ ಅದು ಲೆಬೊಹಮಾತಿಗೆ ಹೋಗಿ ಅಲ್ಲಿಂದ ಚೆದಾದಿಗೆ ಹೋಗುವುದು.
ಅರಣ್ಯಕಾಂಡ 34 : 9 (ERVKN)
ಬಳಿಕ ಆ ಮೇರೆಯು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯುವುದು. ಹೀಗೆ ಅದು ನಿಮ್ಮ ಉತ್ತರ ಮೇರೆಯಾಗಿರುವುದು.
ಅರಣ್ಯಕಾಂಡ 34 : 10 (ERVKN)
ನಿಮ್ಮ ಪೂರ್ವಮೇರೆಯು ಹಚರೇನಾನಿನಿಂದ ಹೊರಟು ಶೆಫಾಮಿಗೆ ಹೋಗುವುದು.
ಅರಣ್ಯಕಾಂಡ 34 : 11 (ERVKN)
ಶೆಫಾಮಿನಿಂದ ಆ ಮೇರೆಯು ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಹೋಗಿ ಗಲಿಲೇಯ ಸರೋವರದ ಪೂರ್ವದಲ್ಲಿರುವ ಬೆಟ್ಟಗಳನ್ನು ಮುಟ್ಟುವುದು.
ಅರಣ್ಯಕಾಂಡ 34 : 12 (ERVKN)
ಬಳಿಕ ಈ ಮೇರೆಯು ಜೋರ್ಡನ್ ನದಿಯ ಉದ್ದಕ್ಕೂ ಮುಂದುವರೆಯುವುದು. ಅದು ಉಪ್ಪು ಸಮುದ್ರದಲ್ಲಿ ಕೊನೆಗೊಳ್ಳುವುದು. ಇವುಗಳೇ ನಿಮ್ಮ ದೇಶದ ಸುತ್ತಲಿನ ಮೇರೆಗಳು.”
ಅರಣ್ಯಕಾಂಡ 34 : 13 (ERVKN)
ಮೋಶೆಯು ಇಸ್ರೇಲರಿಗೆ ಹೀಗೆ ಆಜ್ಞಾಪಿಸಿದನು: “ನೀವು ಚೀಟುಹಾಕಿ ಭಾಗಮಾಡಿಕೊಳ್ಳುವ ದೇಶವೇ ಇದು. ಒಂಭತ್ತುವರೆ ಕುಲಗಳವರಿಗೆ ಈ ದೇಶವನ್ನು ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
ಅರಣ್ಯಕಾಂಡ 34 : 14 (ERVKN)
(14-15) ಬೇರೆ ಎರಡೂವರೆ ಕುಲಗಳವರು ಅಂದರೆ ರೂಬೇನ್ ಕುಲ ಮತ್ತು ಗಾದ್ ಕುಲ ಮತ್ತು ಮನಸ್ಸೆಯ ಅರ್ಧಕುಲವು ಜೆರಿಕೊ ಪಟ್ಟಣದ ಆಚೆಯಲ್ಲಿರುವ ಜೋರ್ಡನ್ ನದಿಯ ಪೂರ್ವಭಾಗದಲ್ಲಿ ಈಗಾಗಲೇ ಸ್ವಾಸ್ತ್ಯವನ್ನು ಹೊಂದಿ ತಮ್ಮ ಕುಟುಂಬಗಳ ಪ್ರಕಾರ ಹಂಚಿಕೊಂಡಿದ್ದಾರೆ.”
ಅರಣ್ಯಕಾಂಡ 34 : 15 (ERVKN)
ಅರಣ್ಯಕಾಂಡ 34 : 16 (ERVKN)
ಆಗ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ:
ಅರಣ್ಯಕಾಂಡ 34 : 17 (ERVKN)
“ನಿಮಗೋಸ್ಕರ ದೇಶವನ್ನು ಹಂಚಿಕೊಡುವ ಕುಲಪ್ರಧಾನರು ಯಾರೆಂದರೆ: ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ
ಅರಣ್ಯಕಾಂಡ 34 : 18 (ERVKN)
ಮತ್ತು ಪ್ರತಿಯೊಂದು ಕುಲದಿಂದ ಒಬ್ಬ ಕುಲಪ್ರಧಾನ.
ಅರಣ್ಯಕಾಂಡ 34 : 19 (ERVKN)
ಪ್ರತಿಯೊಂದು ಕುಲದಿಂದ ನೀವು ನೇಮಿಸಬೇಕಾದವರು ಇವರೇ: ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್.
ಅರಣ್ಯಕಾಂಡ 34 : 20 (ERVKN)
ಸಿಮೆಯೋನ್ ಕುಲದಿಂದ ಅಮ್ಮೀಹೂದನ ಮಗನಾದ ಶೆಮೂವೇಲ್.
ಅರಣ್ಯಕಾಂಡ 34 : 21 (ERVKN)
ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗನಾದ ಎಲೀದಾದ್.
ಅರಣ್ಯಕಾಂಡ 34 : 22 (ERVKN)
ದಾನ್ ಕುಲದಿಂದ ಯೊಗ್ಲೀಯ ಮಗನಾದ ಬುಕ್ಕೀ ಕುಲಾಧಿಪತಿ.
ಅರಣ್ಯಕಾಂಡ 34 : 23 (ERVKN)
ಯೋಸೇಫನ ಸಂತತಿಯವರಲ್ಲಿ ಮನಸ್ಸೆ ಕುಲದಿಂದ ಏಫೋದನ ಮಗನಾದ ಹನ್ನೀಯೇಲ್ ಕುಲಾಧಿಪತಿ.
ಅರಣ್ಯಕಾಂಡ 34 : 24 (ERVKN)
ಎಫ್ರಾಯೀಮ್ ಕುಲದಿಂದ ಶಿಫ್ಟಾನನ ಮಗನಾದ ಕೆಮೂವೇಲ್ ಕುಲಾಧಿಪತಿ.
ಅರಣ್ಯಕಾಂಡ 34 : 25 (ERVKN)
ಜೆಬುಲೂನ್ ಕುಲದಿಂದ ಪರ್ನಾಕನ ಮಗನಾದ ಎಲೀಚಾಫಾನ್ ಕುಲಾಧಿಪತಿ.
ಅರಣ್ಯಕಾಂಡ 34 : 26 (ERVKN)
ಇಸ್ಸಾಕಾರ್ ಕುಲದಿಂದ ಅಜ್ಜಾನನ ಮಗನಾದ ಪಲ್ಟೀಯೇಲ್ ಕುಲಾಧಿಪತಿ.
ಅರಣ್ಯಕಾಂಡ 34 : 27 (ERVKN)
ಆಶೇರ್ ಕುಲದಿಂದ ಶೆಲೋಮಿಯ ಮಗನಾದ ಅಹೀಹೂದ್ ಕುಲಾಧಿಪತಿ.
ಅರಣ್ಯಕಾಂಡ 34 : 28 (ERVKN)
ನಫ್ತಾಲಿ ಕುಲದಿಂದ ಅಮ್ಮೀಹೂದನ ಮಗನಾದ ಪೆದಹೇಲ್ ಕುಲಾಧಿಪತಿ.”
ಅರಣ್ಯಕಾಂಡ 34 : 29 (ERVKN)
ಕಾನಾನ್ ದೇಶದಲ್ಲಿ, ಇಸ್ರೇಲರಿಗೆ ಅವರವರ ಸ್ವಾಸ್ತ್ಯಗಳನ್ನು ಹಂಚಿಕೊಡುವುದಕ್ಕೆ ಯೆಹೋವನು ಇವರನ್ನೆಲ್ಲಾ ನೇಮಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29