ಫಿಲಿಪ್ಪಿಯವರಿಗೆ 4 : 1 (ERVKN)
{ಮಾಡಬೇಕಾದ ಕಾರ್ಯಗಳು} [PS] ನನ್ನ ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ನಿಮ್ಮನ್ನು ನೋಡಬಯಸುತ್ತೇನೆ. ನೀವು ನನಗೆ ಆನಂದವನ್ನು ಉಂಟುಮಾಡಿ, ನಿಮ್ಮ ವಿಷಯದಲ್ಲಿ ನಾನು ಹೆಮ್ಮಪಡುವಂತೆ ಮಾಡಿದ್ದೀರಿ. ನಾನು ನಿಮಗೆ ಹೇಳಿದಂತೆ ಪ್ರಭುವನ್ನು ಅನುಸರಿಸಿರಿ. [PE][PS]
ಫಿಲಿಪ್ಪಿಯವರಿಗೆ 4 : 2 (ERVKN)
ಪ್ರಭುವಿನಲ್ಲಿ ಒಂದೇ ಮನಸ್ಸನ್ನು ಹೊಂದಿರಬೇಕೆಂದು ನಾನು ಯವೋದ್ಯಳನ್ನೂ ಸಂತುಕೆಯನ್ನೂ ಕೇಳಿಕೊಳ್ಳುತ್ತೇನೆ.
ಫಿಲಿಪ್ಪಿಯವರಿಗೆ 4 : 3 (ERVKN)
ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ [*ಜೀವಬಾಧ್ಯರ ಪುಸ್ತಕ ಆಯ್ಕೆಗೊಂಡ ದೇವಮಕ್ಕಳೆಲ್ಲರ ಹೆಸರನ್ನು ಹೊಂದಿರುವ ದೇವರ ಪುಸ್ತಕ. ನೋಡಿರಿ: ಪ್ರಕಟನೆ 3:5; 21:27.] ಬರೆಯಲ್ಪಟ್ಟಿವೆ. [PE][PS]
ಫಿಲಿಪ್ಪಿಯವರಿಗೆ 4 : 4 (ERVKN)
ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ. [PE][PS]
ಫಿಲಿಪ್ಪಿಯವರಿಗೆ 4 : 5 (ERVKN)
ನಿಮ್ಮ ಮೃದುಸ್ವಭಾವವನ್ನೂ ಕರುಣೆಯನ್ನೂ ಜನರೆಲ್ಲರೂ ನೋಡುವಂತಾಗಲಿ. ಪ್ರಭುವು ಬೇಗನೆ ಬರುತ್ತಾನೆ.
ಫಿಲಿಪ್ಪಿಯವರಿಗೆ 4 : 6 (ERVKN)
ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲಾ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.
ಫಿಲಿಪ್ಪಿಯವರಿಗೆ 4 : 7 (ERVKN)
ದೇವಶಾಂತಿಯು ಕ್ರಿಸ್ತ ಯೇಸುವಿನಲ್ಲಿ ನಿಮ್ಮ ಹೃದಯಗಳನ್ನೂ ಮನಸ್ಸುಗಳನ್ನೂ ಕಾಯುವುದು. ದೇವರು ಕೊಡುವ ಆ ಶಾಂತಿಯು ನಾವು ಅರ್ಥಮಾಡಿಕೊಳ್ಳಲಾಗದಷ್ಟು ಅಗಮ್ಯವಾಗಿದೆ. [PE][PS]
ಫಿಲಿಪ್ಪಿಯವರಿಗೆ 4 : 8 (ERVKN)
ಸಹೋದರ ಸಹೋದರಿಯರೇ, ಒಳ್ಳೆಯದಾದ ಮತ್ತು ಸ್ತುತಿಗೆ ಯೋಗ್ಯವಾದ ಸಂಗತಿಗಳ ಬಗ್ಗೆ ಆಲೋಚಿಸಿರಿ. ಸತ್ಯವಾದ, ಮಾನ್ಯವಾದ, ನ್ಯಾಯವಾದ, ಶುದ್ಧವಾದ, ಸುಂದರವಾದ ಮತ್ತು ಗೌರವಯುತವಾದ ವಿಷಯಗಳ ಬಗ್ಗೆ ಆಲೋಚಿಸಿರಿ.
ಫಿಲಿಪ್ಪಿಯವರಿಗೆ 4 : 9 (ERVKN)
ನೀವು ನನ್ನಿಂದ ಕಲಿತುಕೊಂಡದ್ದನ್ನು, ಹೊಂದಿಕೊಂಡದ್ದನ್ನು, ಕೇಳಿದ್ದನ್ನು ಮತ್ತು ಕಣ್ಣಾರೆ ಕಂಡದ್ದನ್ನು ಮಾಡಿರಿ. ಆಗ, ಶಾಂತಿಯನ್ನು ಕೊಡುವ ದೇವರು ನಿಮ್ಮೊಂದಿಗಿರುವನು. [PS]
ಫಿಲಿಪ್ಪಿಯವರಿಗೆ 4 : 10 (ERVKN)
{ಫಿಲಿಪ್ಪಿ ಕ್ರೈಸ್ತರಿಗೆ ಪೌಲನ ವಂದನೆ} [PS] ನನ್ನ ಮೇಲೆ ನಿಮಗಿರುವ ಚಿಂತೆಯನ್ನು ನೀವು ಮತ್ತೆ ತೋರಿಸಿದ್ದಕ್ಕಾಗಿ ನಾನು ಪ್ರಭುವಿನಲ್ಲಿ ಬಹು ಸಂತೋಷಪಡುತ್ತೇನೆ. ನೀವು ನನ್ನ ಬಗ್ಗೆ ಚಿಂತಿಸುತ್ತಲೇ ಇದ್ದೀರಿ. ಆದರೆ ಅದನ್ನು ತೋರಿಸಲು ನಿಮಗೆ ಅವಕಾಶವೇ ಇರಲಿಲ್ಲ.
ಫಿಲಿಪ್ಪಿಯವರಿಗೆ 4 : 11 (ERVKN)
ನಾನು ಈ ಮಾತುಗಳನ್ನು ಹೇಳುತ್ತಿರುವುದು ನನಗಿರುವ ಕೊರತೆಯ ದೆಸೆಯಿಂದಲ್ಲ. ನನ್ನಲ್ಲಿರುವಂಥವುಗಳಲ್ಲಿ ಮತ್ತು ನನಗೆ ಸಂಭವಿಸುವ ಪ್ರತಿಯೊಂದರಲ್ಲಿ ತೃಪ್ತನಾಗಿರಲು ನಾನು ಕಲಿತುಕೊಂಡಿದ್ದೇನೆ.
ಫಿಲಿಪ್ಪಿಯವರಿಗೆ 4 : 12 (ERVKN)
ಹಸಿವೆಯಿಂದಿರುವಾಗಲೂ ಸಮೃದ್ಧಿಯುಳ್ಳವನಾಗಿರುವಾಗಲೂ ಹೇಗೆ ಜೀವಿಸಬೇಕೆಂಬುದು ನನಗೆ ತಿಳಿದಿದೆ. ಯಾವ ಸಮಯದಲ್ಲಾಗಲಿ ಯಾವ ಪರಿಸ್ಥಿತಿಯಲ್ಲಾಗಲಿ ಸಂತೋಷದಿಂದಿರುವ ಗುಟ್ಟು ನನಗೆ ತಿಳಿದಿದೆ. ಊಟಕ್ಕೆ ಬೇಕಾದಷ್ಟು ಇರುವಾಗಲೂ ಇಲ್ಲದಿರುವಾಗಲೂ ನನಗೆ ಅಗತ್ಯವಾದವುಗಳನ್ನು ಹೊಂದಿರುವಾಗಲೂ ಹೊಂದಿಲ್ಲದಿರುವಾಗಲೂ ಸಂತೋಷವಾಗಿರಲು ಕಲಿತುಕೊಂಡಿದ್ದೇನೆ.
ಫಿಲಿಪ್ಪಿಯವರಿಗೆ 4 : 13 (ERVKN)
ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ. [PE][PS]
ಫಿಲಿಪ್ಪಿಯವರಿಗೆ 4 : 14 (ERVKN)
ಆದರೂ ನಾನು ಕೊರತೆಯಲ್ಲಿದ್ದಾಗ ನೀವು ನನಗೆ ಸಹಾಯ ಮಾಡಿದ್ದು ಒಳ್ಳೆಯದಾಯಿತು.
ಫಿಲಿಪ್ಪಿಯವರಿಗೆ 4 : 15 (ERVKN)
ಇದಲ್ಲದೆ ಫಿಲಿಪ್ಪಿ ಪಟ್ಟಣದವರೇ, ನಾನು ಮೊದಲು ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ ಮಕೆದೋನಿಯಕ್ಕೆ ಹೊರಟಾಗ, ನಿಮ್ಮ ಸಭೆಯೊಂದೇ ನನಗೆ ಸಹಾಯ ಮಾಡಿದ್ದು ನಿಮಗೆ ಗೊತ್ತಿದೆ.
ಫಿಲಿಪ್ಪಿಯವರಿಗೆ 4 : 16 (ERVKN)
ನಾನು ಥೆಸಲೋನಿಕದಲ್ಲಿದ್ದಾಗ ನನಗೆ ಅಗತ್ಯವಾದವುಗಳನ್ನು ನೀವು ಹಲವಾರು ಸಲ ಕಳುಹಿಸಿಕೊಟ್ಟಿರಿ.
ಫಿಲಿಪ್ಪಿಯವರಿಗೆ 4 : 17 (ERVKN)
ನಿಜವಾಗಿಯೂ, ನಿಮ್ಮಿಂದ ಕೊಡುಗೆಗಳನ್ನು ಪಡೆದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಲ್ಲ. ಆದರೆ ಕೊಡುವುದರ ಮೂಲಕ ಮುಂದೆ ಹೇರಳವಾಗಿ ದೊರೆಯುವ ಆಶೀರ್ವಾದಗಳನ್ನು ನೀವು ಹೊಂದಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ.
ಫಿಲಿಪ್ಪಿಯವರಿಗೆ 4 : 18 (ERVKN)
ಎಪಫ್ರೊದೀತನು ನಿಮ್ಮ ಕೊಡುಗೆಯನ್ನು ತಂದು ಕೊಟ್ಟಿದ್ದರಿಂದ ಬೇಕಾದದ್ದೆಲ್ಲ ನನ್ನಲ್ಲಿ ಹೇರಳವಾಗಿದೆ. ನಿಮ್ಮ ಕೊಡುಗೆಯು ದೇವರಿಗೆ ಅರ್ಪಿಸಲ್ಪಟ್ಟ ಪರಿಮಳಭರಿತವಾದ ಯಜ್ಞವಾಗಿದೆ. ಇದು ದೇವರಿಗೆ ಮೆಚ್ಚಿಕೆಯಾದದ್ದೂ ಆಗಿದೆ.
ಫಿಲಿಪ್ಪಿಯವರಿಗೆ 4 : 19 (ERVKN)
ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ಅನುಗುಣವಾಗಿ ನಿಮ್ಮ ಪ್ರತಿಯೊಂದು ಕೊರತೆಯನ್ನು ನೀಗಿಸುವನು.
ಫಿಲಿಪ್ಪಿಯವರಿಗೆ 4 : 20 (ERVKN)
ನಮ್ಮ ತಂದೆಯಾದ ದೇವರಿಗೆ ಸದಾಕಾಲ ಮಹಿಮೆಯಾಗಲಿ. ಆಮೆನ್. [PE][PS]
ಫಿಲಿಪ್ಪಿಯವರಿಗೆ 4 : 21 (ERVKN)
ದೇವಜನರೆಲ್ಲರಿಗೂ ಕ್ರಿಸ್ತ ಯೇಸುವಿನಲ್ಲಿ ನನ್ನ ವಂದನೆ ತಿಳಿಸಿ. ನನ್ನೊಂದಿಗಿರುವ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ.
ಫಿಲಿಪ್ಪಿಯವರಿಗೆ 4 : 22 (ERVKN)
ಎಲ್ಲಾ ದೇವಮಕ್ಕಳು ನಿಮಗೆ ವಂದನೆ ತಿಳಿಸಿದ್ದಾರೆ. ಸೀಸರನ ಅರಮನೆಯಲ್ಲಿರುವ ವಿಶ್ವಾಸಿಗಳೂ ಸಹ ನಿಮಗೆ ವಂದನೆ ತಿಳಿಸಿದ್ದಾರೆ. [PE][PS]
ಫಿಲಿಪ್ಪಿಯವರಿಗೆ 4 : 23 (ERVKN)
ಪ್ರಭು ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. [PE]
❮
❯