ಙ್ಞಾನೋಕ್ತಿಗಳು 1 : 1 (ERVKN)
ಮುನ್ನುಡಿ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು. ಸೊಲೊಮೋನನು ಇಸ್ರೇಲರ ರಾಜನಾಗಿದ್ದನು.
ಙ್ಞಾನೋಕ್ತಿಗಳು 1 : 2 (ERVKN)
ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೂ ಬುದ್ಧಿವಾದವನ್ನು ಗ್ರಹಿಸಿಕೊಳ್ಳುವುದಕ್ಕೂ ಈ ಜ್ಞಾನೋಕ್ತಿಗಳು ಸಹಾಯಕವಾಗಿವೆ.
ಙ್ಞಾನೋಕ್ತಿಗಳು 1 : 3 (ERVKN)
ಈ ಜ್ಞಾನೋಕ್ತಿಗಳು ಯೋಗ್ಯವಾರ್ಗದಲ್ಲಿ ಜೀವಿಸಲು ಅಂದರೆ ಯಥಾರ್ಥವಾಗಿಯೂ ನ್ಯಾಯವಾಗಿಯೂ ಮತ್ತು ಒಳ್ಳೆಯವರಾಗಿಯೂ ಇರಲು ಉಪದೇಶಿಸುತ್ತವೆ.
ಙ್ಞಾನೋಕ್ತಿಗಳು 1 : 4 (ERVKN)
ಈ ಜ್ಞಾನೋಕ್ತಿಗಳು ಸಾಮಾನ್ಯರಿಗೆ ಜಾಣತನವನ್ನು ಯೌವನಸ್ಥರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುತ್ತವೆ.
ಙ್ಞಾನೋಕ್ತಿಗಳು 1 : 5 (ERVKN)
ಈ ಜ್ಞಾನೋಕ್ತಿಗಳಿಗೆ ಕಿವಿಗೊಡುವುದರ ಮೂಲಕ ಜ್ಞಾನಿಗಳು ತಮ್ಮ ಪಾಂಡಿತ್ಯವನ್ನೂ ವಿವೇಕಿಗಳು ತಮ್ಮ ಉಚಿತಾಲೋಚನೆಗಳನ್ನೂ ಹೆಚ್ಚಿಸಿಕೊಳ್ಳಲಿ.
ಙ್ಞಾನೋಕ್ತಿಗಳು 1 : 6 (ERVKN)
ಆಗ ಅವರು ಗಾದೆಗಳನ್ನು, ಸಾಮತಿಗಳನ್ನು, ಜ್ಞಾನದ ನುಡಿಗಳನ್ನು ಮತ್ತು ಒಗಟುಗಳನ್ನು ಅರ್ಥಮಾಡಿಕೊಳ್ಳುವರು.
ಙ್ಞಾನೋಕ್ತಿಗಳು 1 : 7 (ERVKN)
ಯೆಹೋವನಲ್ಲಿಟ್ಟಿರುವ ಭಯಭಕ್ತಿಯೇ ಜ್ಞಾನದ ಮೂಲ. ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ದ್ವೇಷಿಸುವರು.
ಙ್ಞಾನೋಕ್ತಿಗಳು 1 : 8 (ERVKN)
ಸೊಲೊಮೋನನು ತನ್ನ ಮಗನಿಗೆ ಮಾಡಿದ ಉಪದೇಶ ನನ್ನ ಮಗನೇ, ನಿನ್ನ ತಂದೆಯ ಬುದ್ಧಿಮಾತಿಗೆ ಕಿವಿಗೊಡು; ನಿನ್ನ ತಾಯಿಯ ಉಪದೇಶವನ್ನು ಅಲಕ್ಷಿಸಬೇಡ.
ಙ್ಞಾನೋಕ್ತಿಗಳು 1 : 9 (ERVKN)
ನಿನ್ನ ತಂದೆತಾಯಿಗಳ ಮಾತುಗಳು ನಿನ್ನ ತಲೆಗೆ ಸುಂದರವಾದ ಹೂವಿನ ಕಿರೀಟದಂತೆಯೂ ನಿನ್ನ ಕೊರಳಿಗೆ ಸುಂದರವಾದ ಹಾರದಂತೆಯೂ ಇವೆ.
ಙ್ಞಾನೋಕ್ತಿಗಳು 1 : 10 (ERVKN)
ನನ್ನ ಮಗನೇ, ಪಾಪ ಮಾಡಬಯಸುವವರು ನಿನಗೆ ದುಪ್ರೇರಣೆ ಮಾಡಿದರೆ ಅವರನ್ನು ಹಿಂಬಾಲಿಸಕೂಡದು.
ಙ್ಞಾನೋಕ್ತಿಗಳು 1 : 11 (ERVKN)
ನಿನಗೆ, “ನಮ್ಮ ಜೊತೆ ಬಾ! ನಾವು ಅಲ್ಲಿ ಅವಿತುಕೊಂಡಿದ್ದು ಯಾರನ್ನಾದರೂ ಕೊಲೆ ಮಾಡೋಣ; ಕೆಲವು ನಿರಪರಾಧಿಗಳ ಮೇಲೆ ನಿಷ್ಕಾರಣವಾಗಿ ಆಕ್ರಮಣ ಮಾಡಿ
ಙ್ಞಾನೋಕ್ತಿಗಳು 1 : 12 (ERVKN)
ಅವರನ್ನು ಜೀವಂತವಾಗಿ ನುಂಗೋಣ; ಪಾತಾಳವು ನುಂಗುವಂತೆ ಸಂಪೂರ್ಣವಾಗಿ ನುಂಗಿಬಿಡೋಣ.
ಙ್ಞಾನೋಕ್ತಿಗಳು 1 : 13 (ERVKN)
ಬೆಲೆಬಾಳುವ ಎಲ್ಲಾ ಬಗೆಯ ವಸ್ತುಗಳನ್ನು ಕದ್ದು ನಮ್ಮ ಮನೆಗಳಲ್ಲಿ ತುಂಬಿಸಿಕೊಳ್ಳೋಣ.
ಙ್ಞಾನೋಕ್ತಿಗಳು 1 : 14 (ERVKN)
ಅವುಗಳಲ್ಲಿ ನಿನಗೆ ಸಮಪಾಲು ದೊರೆಯುವುದು, ಬಂದು ನಮ್ಮೊಂದಿಗೆ ಸೇರಿಕೊ” ಎಂದು ಆ ಪಾಪಿಗಳು ಹೇಳಬಹುದು.
ಙ್ಞಾನೋಕ್ತಿಗಳು 1 : 15 (ERVKN)
ನನ್ನ ಮಗನೇ, ಅವರ ಜೀವಿತವನ್ನು ಅನುಸರಿಸಬೇಡ. ಅವರ ಜೀವಿತಮಾರ್ಗದಲ್ಲಿ ಮೊದಲನೆ ಹೆಜ್ಜೆಯನ್ನೂ ಇಡಬೇಡ.
ಙ್ಞಾನೋಕ್ತಿಗಳು 1 : 16 (ERVKN)
ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ.
ಙ್ಞಾನೋಕ್ತಿಗಳು 1 : 17 (ERVKN)
ಪಕ್ಷಿಗಳ ಕಣ್ಣೆದುರಿನಲ್ಲಿ ಬಲೆಹಾಕುವುದರಿಂದ ಪ್ರಯೋಜನವೇನೂ ಇಲ್ಲ.
ಙ್ಞಾನೋಕ್ತಿಗಳು 1 : 18 (ERVKN)
ಅವರಾದರೋ ಬೇರೊಬ್ಬನನ್ನು ಕೊಲ್ಲಲು ಅವಿತುಕೊಂಡು ಕಾಯುತ್ತಾರೆ; ಆದರೆ ಅವರು ತಮ್ಮ ಸಂಚಿನಿಂದ ತಮ್ಮನ್ನೇ ನಾಶಪಡಿಸಿಕೊಳ್ಳುತ್ತಾರೆ.
ಙ್ಞಾನೋಕ್ತಿಗಳು 1 : 19 (ERVKN)
ದುರಾಶೆಯುಳ್ಳವರು ತಾವು ದೋಚಿಕೊಳ್ಳುವ ವಸ್ತುಗಳಿಂದಲೇ ನಾಶವಾಗುವರು.
ಙ್ಞಾನೋಕ್ತಿಗಳು 1 : 20 (ERVKN)
ಜ್ಞಾನವೆಂಬಾಕೆ ಜ್ಞಾನವು ಬೀದಿಗಳಲ್ಲಿ ಕೂಗುವ ಸ್ತ್ರೀಯಂತಿದೆ. ಆಕೆಯು ಬಹಿರಂಗ ಸ್ಥಳಗಳಲ್ಲಿ ಕೂಗಿ ಕರೆಯುತ್ತಾಳೆ.
ಙ್ಞಾನೋಕ್ತಿಗಳು 1 : 21 (ERVKN)
ಆಕೆಯು ಜನಸಂದಣಿಯ ರಸ್ತೆಚೌಕಗಳಲ್ಲಿ ಕರೆಯುತ್ತಾಳೆ. ಪಟ್ಟಣದ ಬಾಗಿಲುಗಳ ಬಳಿಯಲ್ಲಿ ಆಕೆಯು ಜನರೊಂದಿಗೆ ಮಾತಾಡುತ್ತಾಳೆ:
ಙ್ಞಾನೋಕ್ತಿಗಳು 1 : 22 (ERVKN)
“ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ?
ಙ್ಞಾನೋಕ್ತಿಗಳು 1 : 23 (ERVKN)
ನೀವು ನನ್ನ ಗದರಿಕೆಗೆ ಕಿವಿಗೊಟ್ಟರೆ, ನನ್ನ ಮನಸ್ಸಿನಲ್ಲಿರುವುದನ್ನೆಲ್ಲ ತಿಳಿಸುವೆನು; ನನ್ನ ಆಲೋಚನೆಗಳನ್ನು ನಿಮಗೆ ಗೊತ್ತುಪಡಿಸುವೆನು.
ಙ್ಞಾನೋಕ್ತಿಗಳು 1 : 24 (ERVKN)
“ಆದರೆ ನೀವು ನನಗೆ ಗಮನಕೊಡಲಿಲ್ಲ. ನಾನು ಸಹಾಯಮಾಡಲು ಪ್ರಯತ್ನಿಸಿದೆ. ನಾನು ಕೈಚಾಚಿದೆ; ಆದರೆ ನೀವು ನನ್ನ ಸಹಾಯವನ್ನು ತೆಗೆದುಕೊಳ್ಳದೆ ತಿರಸ್ಕರಿಸಿದಿರಿ.
ಙ್ಞಾನೋಕ್ತಿಗಳು 1 : 25 (ERVKN)
ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ತಿದ್ದುಪಾಟನ್ನು ತಿರಸ್ಕರಿಸಿದಿರಿ.
ಙ್ಞಾನೋಕ್ತಿಗಳು 1 : 26 (ERVKN)
ಆದ್ದರಿಂದ ನಿಮ್ಮ ಕಷ್ಟದಲ್ಲಿ ನಾನು ನಗುವೆನು; ಅಪಾಯವು ನಿಮಗೆ ಬಡಿಯುವಾಗ ನಿಮ್ಮನ್ನು ಗೇಲಿ ಮಾಡುವೆನು.
ಙ್ಞಾನೋಕ್ತಿಗಳು 1 : 27 (ERVKN)
ಮಹಾ ಸಂಕಷ್ಟವು ಕೆಟ್ಟ ಬಿರುಗಾಳಿಯಂತೆ ನಿಮಗೆ ಬರುವುದು. ತೊಂದರೆಗಳು ಬಲವಾದ ಗಾಳಿಯಂತೆ ನಿಮಗೆ ಬಡಿಯುವುದು. ನಿಮ್ಮ ಕಷ್ಟಗಳು ಮತ್ತು ದುಃಖಗಳು ನಿಮ್ಮ ಮೇಲೆ ಬಹು ಭಾರವಾಗಿರುತ್ತವೆ.
ಙ್ಞಾನೋಕ್ತಿಗಳು 1 : 28 (ERVKN)
“ಇವೆಲ್ಲಾ ನಿಮಗೆ ಸಂಭವಿಸುವಾಗ ನೀವು ಸಹಾಯಕ್ಕಾಗಿ ನನ್ನನ್ನು ಕೇಳುವಿರಿ; ಆದರೆ ನಾನು ನಿಮಗೆ ಸಹಾಯ ಮಾಡುವುದಿಲ್ಲ. ನೀವು ನನಗಾಗಿ ಹುಡುಕುವಿರಿ. ಆದರೆ ನಾನು ನಿಮಗೆ ಸಿಕ್ಕುವುದಿಲ್ಲ.
ಙ್ಞಾನೋಕ್ತಿಗಳು 1 : 29 (ERVKN)
ನಾನು ನಿಮಗೆ ಸಹಾಯ ಮಾಡುವುದಿಲ್ಲ; ಏಕೆಂದರೆ ನೀವೆಂದೂ ನನ್ನ ಜ್ಞಾನವನ್ನು ಬಯಸಲಿಲ್ಲ. ನೀವು ಯೆಹೋವನಲ್ಲಿ ಭಯಭಕ್ತಿಯಿಂದಿರಲು ನಿರ್ಧರಿಸಲಿಲ್ಲ.
ಙ್ಞಾನೋಕ್ತಿಗಳು 1 : 30 (ERVKN)
ನೀವು ನನ್ನ ಗದರಿಕೆಯ ಮಾತುಗಳನ್ನು ತಿರಸ್ಕರಿಸಿದಿರಿ. ನಾನು ನಿಮಗೆ ಸರಿಯಾದ ದಾರಿಯನ್ನು ತೋರಿಸಿದಾಗ ನೀವು ನನಗೆ ಕಿವಿಗೊಡಲಿಲ್ಲ.
ಙ್ಞಾನೋಕ್ತಿಗಳು 1 : 31 (ERVKN)
ಆದ್ದರಿಂದ ನೀವು ನಿಮ್ಮ ದುಷ್ಟನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ.
ಙ್ಞಾನೋಕ್ತಿಗಳು 1 : 32 (ERVKN)
“ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು.
ಙ್ಞಾನೋಕ್ತಿಗಳು 1 : 33 (ERVKN)
ಆದರೆ ನನಗೆ ವಿಧೇಯನಾಗುವವನು ಕ್ಷೇಮವಾಗಿಯೂ ಸುಖವಾಗಿಯೂ ಬದುಕುವನು. ಅವನು ಅಪಾಯಕ್ಕೆ ಭಯಪಡುವ ಅವಶ್ಯವಿಲ್ಲ.”
❮
❯