ಙ್ಞಾನೋಕ್ತಿಗಳು 10 : 1 (ERVKN)
ಇವು ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದ ಮಗನಿಂದ ತಾಯಿಗೆ ದುಃಖ.
ಙ್ಞಾನೋಕ್ತಿಗಳು 10 : 2 (ERVKN)
ಅನ್ಯಾಯದ ಹಣವು ನಿಷ್ಪ್ರಯೋಜಕವಾಗಿದೆ. ನೀತಿಯ ಜೀವಿತವು ಮರಣದಿಂದ ರಕ್ಷಿಸಬಲ್ಲದು.
ಙ್ಞಾನೋಕ್ತಿಗಳು 10 : 3 (ERVKN)
ನೀತಿವಂತರು ಹಸಿವೆಯಿಂದಿರಲು ಯೆಹೋವನು ಬಿಡುವುದಿಲ್ಲ. ದುಷ್ಟರ ಆಸೆಯನ್ನಾದರೊ ಆತನು ಭಂಗಪಡಿಸುತ್ತಾನೆ.
ಙ್ಞಾನೋಕ್ತಿಗಳು 10 : 4 (ERVKN)
ಸೋಮಾರಿಯು ಬಡವನಾಗಿರುತ್ತಾನೆ. ಕಷ್ಟಪಟ್ಟು ಕೆಲಸ ಮಾಡುವವನು ಐಶ್ವರ್ಯವಂತನಾಗುತ್ತಾನೆ.
ಙ್ಞಾನೋಕ್ತಿಗಳು 10 : 5 (ERVKN)
ಬುದ್ಧಿವಂತನು ತಕ್ಕಕಾಲದಲ್ಲಿ ಬೆಳೆಯನ್ನು ಕೊಯ್ಯುತ್ತಾನೆ. ಸುಗ್ಗೀಕಾಲದಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.
ಙ್ಞಾನೋಕ್ತಿಗಳು 10 : 6 (ERVKN)
ಒಳ್ಳೆಯವನನ್ನು ಆಶೀರ್ವದಿಸುವಂತೆ ಜನರು ದೇವರನ್ನು ಪ್ರಾರ್ಥಿಸುವರು. ದುಷ್ಟನ ಮಾತುಗಳಲ್ಲಾದರೊ ಕುತಂತ್ರವೇ ಅಡಗಿಕೊಂಡಿದೆ.
ಙ್ಞಾನೋಕ್ತಿಗಳು 10 : 7 (ERVKN)
ನೀತಿವಂತರ ನೆನಪು ಆಶೀರ್ವಾದದಾಯಕ. ಕೆಡುಕರಾದರೊ ಬಹುಬೇಗನೆ ಮರೆಯಲ್ಪಡುವರು.
ಙ್ಞಾನೋಕ್ತಿಗಳು 10 : 8 (ERVKN)
ಜ್ಞಾನಿಯು ಆಜ್ಞೆಗಳಿಗೆ ವಿಧೇಯನಾಗುತ್ತಾನೆ. ಮೂಢನಾದರೊ ವಾದಮಾಡಿ ತನಗೇ ತೊಂದರೆ ತಂದುಕೊಳ್ಳುತ್ತಾನೆ.
ಙ್ಞಾನೋಕ್ತಿಗಳು 10 : 9 (ERVKN)
ಒಳ್ಳೆಯವನೂ ಯಥಾರ್ಥನೂ ಆದ ಮನುಷ್ಯನು ಕ್ಷೇಮವಾಗಿರುವನು. ಮೋಸಮಾಡುವ ಕುಟಿಲ ಮನುಷ್ಯನಾದರೊ ಸಿಕ್ಕಿಕೊಳ್ಳುವನು.
ಙ್ಞಾನೋಕ್ತಿಗಳು 10 : 10 (ERVKN)
ಸತ್ಯವನ್ನು ಅಡಗಿಸಿಕೊಳ್ಳುವವನು ತೊಂದರೆಯನ್ನು ಉಂಟುಮಾಡುವನು. ಧೈರ್ಯದಿಂದ ಮಾತಾಡುವವನು ಸಮಾಧಾನಕರನು.
ಙ್ಞಾನೋಕ್ತಿಗಳು 10 : 11 (ERVKN)
ಒಳ್ಳೆಯವನ ಮಾತುಗಳು ನೀರಿನ ಬುಗ್ಗೆಯಂತೆ ಜೀವದಾಯಕ. ಕೆಡುಕನ ಮಾತುಗಳಲ್ಲಿ ಕೆಟ್ಟದ್ದೇ ಅಡಗಿಕೊಂಡಿರುತ್ತದೆ.
ಙ್ಞಾನೋಕ್ತಿಗಳು 10 : 12 (ERVKN)
ದ್ವೇಷವು ವಾದವನ್ನು ಉಂಟುಮಾಡುತ್ತದೆ. ಆದರೆ ಪ್ರೀತಿಯು ಎಲ್ಲಾ ತಪ್ಪುಗಳನ್ನು ಕ್ಷಮಿಸುತ್ತದೆ.
ಙ್ಞಾನೋಕ್ತಿಗಳು 10 : 13 (ERVKN)
ಬುದ್ಧಿವಂತನು ವಿವೇಕದಿಂದ ಮಾತಾಡುತ್ತಾನೆ. ಆದರೆ ಬುದ್ಧಿಹೀನನಿಗೆ ಹೊಡೆತ ಬೀಳುವುದು.
ಙ್ಞಾನೋಕ್ತಿಗಳು 10 : 14 (ERVKN)
ಜ್ಞಾನಿಗಳು ಮೌನವಾಗಿದ್ದು ಹೊಸ ಸಂಗತಿಗಳನ್ನು ಕಲಿತುಕೊಳ್ಳುತ್ತಾರೆ. ಮೂಢರಾದರೊ ಮಾತಾಡಿ ತಮಗೇ ತೊಂದರೆಯನ್ನು ತಂದುಕೊಳ್ಳುತ್ತಾರೆ.
ಙ್ಞಾನೋಕ್ತಿಗಳು 10 : 15 (ERVKN)
ಐಶ್ವರ್ಯವು ಸಾಹುಕಾರನನ್ನು ಕಾಪಾಡುತ್ತದೆ. ಬಡತನವಾದರೊ ಬಡವನನ್ನು ನಾಶಗೊಳಿಸುತ್ತದೆ.
ಙ್ಞಾನೋಕ್ತಿಗಳು 10 : 16 (ERVKN)
ಒಳ್ಳೆಯವರಿಗೆ ಪ್ರತಿಫಲವಾಗಿ ಜೀವ ದೊರೆಯುವುದು. ಕೆಡುಕರಿಗೆ ದಂಡನೆಯೇ ಸಂಬಳ.
ಙ್ಞಾನೋಕ್ತಿಗಳು 10 : 17 (ERVKN)
ಶಿಸ್ತನ್ನು ಸ್ವೀಕರಿಸಿಕೊಳ್ಳುವವನು ಜೀವಮಾರ್ಗವನ್ನು ತೋರಿಸುತ್ತಾನೆ. ತಿದ್ದುಪಡಿಯನ್ನು ಅಲಕ್ಷಿಸುವವನು ಇತರರನ್ನು ದಾರಿ ತಪ್ಪಿಸುತ್ತಾನೆ.
ಙ್ಞಾನೋಕ್ತಿಗಳು 10 : 18 (ERVKN)
ದ್ವೇಷವನ್ನು ಮರೆಮಾಡಲು ಒಬ್ಬನು ಸುಳ್ಳು ಹೇಳಬೇಕಾಗಬಹುದು. ಆದರೆ ಹರಟೆಗಾರನು ನಿಜವಾಗಿಯೂ ಮೂಢನಾಗಿದ್ದಾನೆ.
ಙ್ಞಾನೋಕ್ತಿಗಳು 10 : 19 (ERVKN)
ಅತಿಯಾಗಿ ಮಾತಾಡುವವನು ತನ್ನನ್ನೇ ತೊಂದರೆಗೆ ಸಿಕ್ಕಿಸಿಕೊಳ್ಳುತ್ತಾನೆ. ವಿವೇಕಿಯು ಮೌನವಾಗಿರಲು ಕಲಿತುಕೊಳ್ಳುತ್ತಾನೆ.
ಙ್ಞಾನೋಕ್ತಿಗಳು 10 : 20 (ERVKN)
ಒಳ್ಳೆಯವನ ಮಾತುಗಳು ಶುದ್ಧ ಬೆಳ್ಳಿಯಂತಿವೆ. ಕೆಡುಕನ ಆಲೋಚನೆಗಳಾದರೊ ಪ್ರಯೋಜನಕ್ಕೆ ಬಾರವು.
ಙ್ಞಾನೋಕ್ತಿಗಳು 10 : 21 (ERVKN)
ಒಳ್ಳೆಯವನ ಮಾತುಗಳು ಅನೇಕರಿಗೆ ಸಹಾಯಮಾಡುತ್ತವೆ. ಮೂಢನ ಮೂಢತನವಾದರೊ ಅನೇಕರನ್ನು ಕೊಲ್ಲುವುದು.
ಙ್ಞಾನೋಕ್ತಿಗಳು 10 : 22 (ERVKN)
ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.
ಙ್ಞಾನೋಕ್ತಿಗಳು 10 : 23 (ERVKN)
ಅವಿವೇಕಿಯು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸುತ್ತಾನೆ. ವಿವೇಕಿಯು ಜ್ಞಾನದಲ್ಲಿ ಸಂತೋಷಿಸುತ್ತಾನೆ.
ಙ್ಞಾನೋಕ್ತಿಗಳು 10 : 24 (ERVKN)
ಕೆಡುಕನಿಗೆ ಅವನು ಭಯಪಡುವುದೇ ಸಂಭವಿಸುವುದು. ಒಳ್ಳೆಯವನಾದರೊ ತನಗೆ ಬೇಕಾದದ್ದನ್ನೆಲ್ಲ ಪಡೆದುಕೊಳ್ಳುವನು.
ಙ್ಞಾನೋಕ್ತಿಗಳು 10 : 25 (ERVKN)
ಆಪತ್ತು ಬಂದಾಗ ದುಷ್ಟನು ನಾಶವಾಗುವನು. ಆದರೆ ಒಳ್ಳೆಯವರು ಸದಾಕಾಲ ಬಲವಾಗಿ ನಿಲ್ಲುವರು.
ಙ್ಞಾನೋಕ್ತಿಗಳು 10 : 26 (ERVKN)
ಸೋಮಾರಿಗೆ ಯಾವ ಕೆಲಸವನ್ನೂ ಒಪ್ಪಿಸಬೇಡಿ. ಅವನು ಬಾಯಿಗೆ ಹುಳಿಯಂತೆಯೂ ಕಣ್ಣುಗಳಿಗೆ ಹೊಗೆಯಂತೆಯೂ ನಿಮ್ಮನ್ನು ಬೇಸರಗೊಳಿಸುವನು.
ಙ್ಞಾನೋಕ್ತಿಗಳು 10 : 27 (ERVKN)
ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೆ ಬಹುಕಾಲ ಬದುಕುವಿರಿ. ಆದರೆ ಕೆಡುಕರು ತಮ್ಮ ಜೀವಮಾನದ ವರ್ಷಗಳನ್ನು ಕಳೆದುಕೊಳ್ಳುವರು.
ಙ್ಞಾನೋಕ್ತಿಗಳು 10 : 28 (ERVKN)
ಒಳ್ಳೆಯವರ ನಿರೀಕ್ಷೆಗೆ ಸಂತೋಷವೇ ಫಲಿತಾಂಶ. ಕೆಟ್ಟವರ ನಿರೀಕ್ಷೆಗೆ ಶೂನ್ಯವೇ ಫಲಿತಾಂಶ.
ಙ್ಞಾನೋಕ್ತಿಗಳು 10 : 29 (ERVKN)
ಯೆಹೋವನು ಒಳ್ಳೆಯವರನ್ನು ಕೋಟೆಯಂತೆ ಕಾಪಾಡುತ್ತಾನೆ; ಕೆಡುಕರನ್ನಾದರೊ ನಾಶಮಾಡುತ್ತಾನೆ.
ಙ್ಞಾನೋಕ್ತಿಗಳು 10 : 30 (ERVKN)
ಒಳ್ಳೆಯವರು ಯಾವಾಗಲೂ ಕ್ಷೇಮವಾಗಿರುವರು. ಆದರೆ ಕೆಡುಕರನ್ನು ದೇಶದಿಂದ ಬಲವಂತವಾಗಿ ಹೊರಗಟ್ಟಲಾಗುವುದು.
ಙ್ಞಾನೋಕ್ತಿಗಳು 10 : 31 (ERVKN)
ಒಳ್ಳೆಯವರು ಯಾವಾಗಲೂ ಜ್ಞಾನದ ಮಾತುಗಳನ್ನು ಹೇಳುತ್ತಾರೆ; ಕೆಡುಕರ ಮಾತನ್ನು ಜನರು ಕೇಳುವುದಿಲ್ಲ.
ಙ್ಞಾನೋಕ್ತಿಗಳು 10 : 32 (ERVKN)
ಒಳ್ಳೆಯವನು ಯೋಗ್ಯವಾದವುಗಳನ್ನು ಹೇಳುವನು. ಕೆಡುಕನು ಸುಳ್ಳನ್ನು ಮಾತ್ರ ಹೇಳುತ್ತಾನೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32

BG:

Opacity:

Color:


Size:


Font: