ಙ್ಞಾನೋಕ್ತಿಗಳು 11 : 1 (ERVKN)
ಯೆಹೋವನು ಮೋಸದ ತಕ್ಕಡಿಗಳನ್ನು ದ್ವೇಷಿಸುತ್ತಾನೆ. ನ್ಯಾಯವಾದ ತಕ್ಕಡಿಗಳಾದರೊ ಆತನನ್ನು ಸಂತೋಷಗೊಳಿಸುತ್ತವೆ.
ಙ್ಞಾನೋಕ್ತಿಗಳು 11 : 2 (ERVKN)
ದುರಾಭಿಮಾನಿಗಳು ನಾಚಿಕೆಗೀಡಾಗುವರು; ದೀನರು ಜ್ಞಾನಿಗಳಾಗಿದ್ದಾರೆ.
ಙ್ಞಾನೋಕ್ತಿಗಳು 11 : 3 (ERVKN)
ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ. ಕೆಡುಕರು ತಮ್ಮ ಮೋಸಕೃತ್ಯಗಳ ಮೂಲಕ ತಮ್ಮನ್ನೇ ನಾಶಮಾಡಿಕೊಳ್ಳುತ್ತಾರೆ.
ಙ್ಞಾನೋಕ್ತಿಗಳು 11 : 4 (ERVKN)
ದೇವರು ಜನರಿಗೆ ನ್ಯಾಯತೀರ್ಪು ಮಾಡುವ ದಿನದಲ್ಲಿ, ಹಣದಿಂದ ಯಾವ ಲಾಭವೂ ಇಲ್ಲ. ಆದರೆ ನೀತಿಯು ಜನರನ್ನು ಮರಣದಿಂದ ಕಾಪಾಡುತ್ತದೆ.
ಙ್ಞಾನೋಕ್ತಿಗಳು 11 : 5 (ERVKN)
ನೀತಿವಂತನು ಯಥಾರ್ಥವಾಗಿದ್ದರೆ ಅವನ ಜೀವನವು ಸರಾಗವಾಗಿರುವುದು. ಆದರೆ ಕೆಡುಕನು ತನ್ನ ಕೆಟ್ಟಕಾರ್ಯಗಳಿಂದ ನಾಶವಾಗುವನು.
ಙ್ಞಾನೋಕ್ತಿಗಳು 11 : 6 (ERVKN)
ನೀತಿಯು ಯಥಾರ್ಥವಂತರನ್ನು ಕಾಪಾಡುತ್ತದೆ. ಆದರೆ ವಂಚಕರು ತಮ್ಮ ಆಸೆಗಳಿಂದಲೇ ಸಿಕ್ಕಿಬೀಳುವರು.
ಙ್ಞಾನೋಕ್ತಿಗಳು 11 : 7 (ERVKN)
ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳೆಲ್ಲಾ ನಾಶವಾಗುತ್ತವೆ. ಅವನ ಅಪೇಕ್ಷೆಗಳೆಲ್ಲಾ ಕೊನೆಗೊಳ್ಳುತ್ತವೆ.
ಙ್ಞಾನೋಕ್ತಿಗಳು 11 : 8 (ERVKN)
ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು. ಅವನ ಬದಲಾಗಿ ದುಷ್ಟನು ಇಕ್ಕಟ್ಟಿನಲ್ಲಿ ಸಿಕ್ಕಿಬೀಳುವನು.
ಙ್ಞಾನೋಕ್ತಿಗಳು 11 : 9 (ERVKN)
ಕೆಡುಕನು ತನ್ನ ಮಾತಿನಿಂದಲೇ ಬೇರೆಯವರನ್ನು ನಾಶಪಡಿಸುತ್ತಾನೆ. ಸಜ್ಜನರಿಗಾದರೋ ಅವರ ತಿಳುವಳಿಕೆಯೇ ರಕ್ಷಣೆ ನೀಡುವುದು.
ಙ್ಞಾನೋಕ್ತಿಗಳು 11 : 10 (ERVKN)
ಸಜ್ಜನರಿಗೆ ಜಯವಾದರೆ ನಗರಕ್ಕೆಲ್ಲ ಸಂತಸ. ಕೆಡುಕರು ನಾಶವಾದರೆ ಜನರು ಜಯಘೋಷ ಮಾಡುವರು.
ಙ್ಞಾನೋಕ್ತಿಗಳು 11 : 11 (ERVKN)
ಪಟ್ಟಣವು ತನ್ನಲ್ಲಿ ವಾಸವಾಗಿರುವ ಯಥಾರ್ಥವಂತರ ಆಶೀರ್ವಾದದಿಂದ ಏಳಿಗೆ ಹೊಂದುವುದು. ಕೆಡುಕರ ಮಾತುಗಳು ಪಟ್ಟಣವನ್ನು ನಾಶಮಾಡುತ್ತವೆ.
ಙ್ಞಾನೋಕ್ತಿಗಳು 11 : 12 (ERVKN)
ಬುದ್ಧಿಹೀನನು ಇತರರನ್ನು ಹೀನೈಸುತ್ತಾನೆ. ಆದರೆ ಬುದ್ಧಿವಂತನು ಮೌನವಾಗಿರುತ್ತಾನೆ.
ಙ್ಞಾನೋಕ್ತಿಗಳು 11 : 13 (ERVKN)
ಗುಟ್ಟು ರಟ್ಟುಮಾಡುವವನನ್ನು ನಂಬಲಾಗದು. ಆದರೆ ನಂಬಿಗಸ್ತನು ವಿಷಯಗಳನ್ನು ರಹಸ್ಯವಾಗಿಡುವನು.
ಙ್ಞಾನೋಕ್ತಿಗಳು 11 : 14 (ERVKN)
ಜ್ಞಾನದ ಮಾರ್ಗದರ್ಶನವಿಲ್ಲದೆ ದೇಶವು ಬಿದ್ದು ಹೋಗುವುದು. ಆದರೆ ಒಳ್ಳೆಯ ಸಲಹೆಗಾರರನ್ನು ಹೊಂದಿರುವ ದೇಶವು ಕ್ಷೇಮವಾಗಿರುವುದು.
ಙ್ಞಾನೋಕ್ತಿಗಳು 11 : 15 (ERVKN)
ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾಗಿದ್ದರೆ ಕಷ್ಟಕ್ಕೀಡಾಗಿರುವೆ; ನೀನು ಜಾಮೀನಾಗಿಲ್ಲದಿದ್ದರೆ ಕ್ಷೇಮವಾಗಿರುವೆ.
ಙ್ಞಾನೋಕ್ತಿಗಳು 11 : 16 (ERVKN)
ದಯೆಯುಳ್ಳ ಸ್ತ್ರೀಯು ಗೌರವವನ್ನು ಪಡೆಯುವಳು. ಬಲಾತ್ಕಾರಿಗಳಾದ ಗಂಡಸರು ಕೇವಲ ಹಣವನ್ನು ಗಳಿಸುವರು.
ಙ್ಞಾನೋಕ್ತಿಗಳು 11 : 17 (ERVKN)
ದಯೆಯುಳ್ಳವನು ತನಗೆ ಲಾಭ ಮಾಡಿಕೊಳ್ಳುವನು. ಕ್ರೂರಿಯು ತನಗೇ ಕೇಡು ಮಾಡಿಕೊಳ್ಳುವನು.
ಙ್ಞಾನೋಕ್ತಿಗಳು 11 : 18 (ERVKN)
ಕೆಡುಕನು ತಾತ್ಕಾಲಿಕವಾದ ಲಾಭವನ್ನು ಮಾಡಿಕೊಳ್ಳುತ್ತಾನೆ. ಆದರೆ ನೀತಿವಂತನು ಯೋಗ್ಯವಾದ ಪ್ರತಿಫಲವನ್ನು ಹೊಂದಿಕೊಳ್ಳುವನು.
ಙ್ಞಾನೋಕ್ತಿಗಳು 11 : 19 (ERVKN)
ನೀತಿವಂತನು ನಿಜವಾಗಿಯೂ ಜೀವವನ್ನು ಹೊಂದಿಕೊಳ್ಳುವನು, ಆದರೆ ಕೆಡುಕನನ್ನು ಹಿಂಬಾಲಿಸುತ್ತಾ ಹೋಗುವವನು ಸಾವಿಗೀಡಾಗುವನು.
ಙ್ಞಾನೋಕ್ತಿಗಳು 11 : 20 (ERVKN)
ಕೆಡುಕರು ಯೆಹೋವನಿಗೆ ಅಸಹ್ಯರು. ಆದರೆ ಸನ್ಮಾರ್ಗಿಗಳು ಆತನ ಮೆಚ್ಚಿಕೆಗೆ ಪಾತ್ರರಾಗಿದ್ದಾರೆ.
ಙ್ಞಾನೋಕ್ತಿಗಳು 11 : 21 (ERVKN)
ದುಷ್ಟರಿಗೆ ದಂಡನೆ ಖಂಡಿತ. ಶಿಷ್ಟರಿಗೆ ಬಿಡುಗಡೆ ನಿಶ್ಚಯ.
ಙ್ಞಾನೋಕ್ತಿಗಳು 11 : 22 (ERVKN)
ಅವಿವೇಕಳಿಗೆ ಸೌಂದರ್ಯವು ಹಂದಿಯ ಮೂಗಿನಲ್ಲಿರುವ ಸುಂದರವಾದ ಚಿನ್ನದ ಮೂಗುತಿಯಂತಿರುವುದು.
ಙ್ಞಾನೋಕ್ತಿಗಳು 11 : 23 (ERVKN)
ಒಳ್ಳೆಯವರ ಬಯಕೆ ಅವರನ್ನು ಕ್ಷೇಮಕ್ಕೆ ನಡೆಸುತ್ತದೆ. ಆದರೆ ದುಷ್ಟರ ಆಕಾಂಕ್ಷೆ ಅವರನ್ನು ದಂಡನೆಗೆ ನಡೆಸುತ್ತದೆ.
ಙ್ಞಾನೋಕ್ತಿಗಳು 11 : 24 (ERVKN)
ಉಚಿತವಾಗಿ ಕೊಡುವವನು ಅದಕ್ಕಿಂತಲೂ ಹೆಚ್ಚುಗಳಿಸುವನು. ಆದರೆ ಕೊಡಲೊಲ್ಲದವನು ಬಡವನಾಗುವನು.
ಙ್ಞಾನೋಕ್ತಿಗಳು 11 : 25 (ERVKN)
ಉದಾರಿಯು ಅಭಿವೃದ್ಧಿಯಾಗುವನು. ಬೇರೆಯವರಿಗೆ ಸಹಾಯಮಾಡುವವನು ಸಹಾಯವನ್ನು ಹೊಂದಿಕೊಳ್ಳುವನು.
ಙ್ಞಾನೋಕ್ತಿಗಳು 11 : 26 (ERVKN)
ಧಾನ್ಯವನ್ನು ಮಾರದೆ ಕೂಡಿಟ್ಟುಕೊಳ್ಳುವವನನ್ನು ಜನರು ಶಪಿಸುವರು. ಧಾನ್ಯ ಮಾರುವವನನ್ನು ಜನರು ಆಶೀರ್ವದಿಸುವರು.
ಙ್ಞಾನೋಕ್ತಿಗಳು 11 : 27 (ERVKN)
ಒಳ್ಳೆಯದನ್ನು ಮಾಡುವವನನ್ನು ಜನರು ಗೌರವಿಸುವರು. ಕೇಡನ್ನು ಮಾಡುವವನಿಗೆ ಕೇವಲ ಕೇಡೇ ಆಗುವುದು.
ಙ್ಞಾನೋಕ್ತಿಗಳು 11 : 28 (ERVKN)
ಐಶ್ವರ್ಯದ ಮೇಲೆ ಭರವಸೆಯಿಟ್ಟಿರುವವನು ಎಲೆಯಂತೆ ಉದುರಿಹೋಗುವನು. ಆದರೆ ಸದ್ದರ್ಮಿಯು ಚಿಗುರಿದ ಎಲೆಯಂತೆ ಬೆಳೆಯುವನು.
ಙ್ಞಾನೋಕ್ತಿಗಳು 11 : 29 (ERVKN)
ತನ್ನ ಕುಟುಂಬಕ್ಕೆ ತೊಂದರೆ ಕೊಡುವವನಿಗೆ ಆಸ್ತಿಯು ದೊರೆಯುವುದಿಲ್ಲ. ಮೂಢನು ಬಲವಂತಕ್ಕೊಳಗಾಗಿ ಜ್ಞಾನಿಯ ಸೇವೆ ಮಾಡಬೇಕಾಗುವುದು.
ಙ್ಞಾನೋಕ್ತಿಗಳು 11 : 30 (ERVKN)
ನೀತಿವಂತನ ಕಾರ್ಯಗಳು ಜೀವವುಳ್ಳ ಮರಗಳಂತಿವೆ. ಜ್ಞಾನಿಯು ಆತ್ಮಗಳನ್ನು ಗೆದ್ದುಕೊಳ್ಳುವನು.
ಙ್ಞಾನೋಕ್ತಿಗಳು 11 : 31 (ERVKN)
ಶಿಷ್ಟರು ಭೂಮಿಯ ಮೇಲೆ ಪ್ರತಿಫಲವನ್ನು ಹೊಂದುವುದಾದರೆ ಕೆಡುಕರು ಸಹ ತಮಗೆ ಬರತಕ್ಕ ದಂಡನೆಯನ್ನು ಹೊಂದುವುದು ನಿಶ್ಚಯ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31

BG:

Opacity:

Color:


Size:


Font: