ಙ್ಞಾನೋಕ್ತಿಗಳು 12 : 1 (ERVKN)
ಶಿಸ್ತನ್ನು ಇಷ್ಟಪಡುವವನು ಕಲಿಯಲು ಇಷ್ಟಪಡುತ್ತಾನೆ; ತಿದ್ದುಪಡಿಯನ್ನು ದ್ವೇಷಿಸುವವನು ಬುದ್ಧಿಹೀನ.
ಙ್ಞಾನೋಕ್ತಿಗಳು 12 : 2 (ERVKN)
ಯೆಹೋವನು ಒಳ್ಳೆಯವನನ್ನು ಸ್ವೀಕರಿಸಿಕೊಳ್ಳುವನು; ಕುಯುಕ್ತಿಯುಳ್ಳವನನ್ನು ಖಂಡಿಸುವನು.
ಙ್ಞಾನೋಕ್ತಿಗಳು 12 : 3 (ERVKN)
ಕೆಡುಕರಿಗೆ ಎಂದಿಗೂ ಕ್ಷೇಮವಿಲ್ಲ; ಒಳ್ಳೆಯವರಾದರೋ ಸಮಾಧಾನದಿಂದಿರುವರು.
ಙ್ಞಾನೋಕ್ತಿಗಳು 12 : 4 (ERVKN)
ಗುಣವಂತಳಾದ ಹೆಂಡತಿಯು ಗಂಡನಿಗೆ ಕಿರೀಟದಂತಿರುವಳು; ಗಂಡನನ್ನು ನಾಚಿಕೆಗೆ ಗುರಿಮಾಡುವ ಹೆಂಡತಿಯು ಗಂಡನ ಎಲುಬಿಗೆ ಕ್ಷಯದಂತಿರುವಳು.
ಙ್ಞಾನೋಕ್ತಿಗಳು 12 : 5 (ERVKN)
ಶಿಷ್ಟರ ಆಲೋಚನೆ ನ್ಯಾಯವಾಗಿವೆ. ದುಷ್ಟರ ಉಪದೇಶ ಮೋಸಕರ.
ಙ್ಞಾನೋಕ್ತಿಗಳು 12 : 6 (ERVKN)
ಕೆಡುಕರು ತಮ್ಮ ಮಾತುಗಳಿಂದ ಬೇರೆಯವರನ್ನು ನೋಯಿಸುತ್ತಾರೆ. ಒಳ್ಳೆಯವರ ಮಾತುಗಳಾದರೋ ಜನರನ್ನು ಅಪಾಯದಿಂದ ರಕ್ಷಿಸುತ್ತವೆ.
ಙ್ಞಾನೋಕ್ತಿಗಳು 12 : 7 (ERVKN)
ದುರ್ಜನರು ಸರ್ವನಾಶವಾಗುವರು; ಆದರೆ ಸಜ್ಜನರ ಕುಟುಂಬವು ಸ್ಥಿರವಾಗಿರುವುದು.
ಙ್ಞಾನೋಕ್ತಿಗಳು 12 : 8 (ERVKN)
ಜನರು ಜ್ಞಾನಿಗಳನ್ನು ಹೊಗಳುವರು; ಮೂಢನನ್ನು ಕಡೆಗಣಿಸುವರು.
ಙ್ಞಾನೋಕ್ತಿಗಳು 12 : 9 (ERVKN)
ಪ್ರಮುಖನಂತೆ ವರ್ತಿಸುತ್ತಾ ಆಹಾರವಿಲ್ಲದಿರುವುದಕ್ಕಿಂತ ಪ್ರಮುಖನಲ್ಲದವನಾಗಿದ್ದು ಸೇವಕನಂತೆ ಇರುವುದು ಮೇಲು.
ಙ್ಞಾನೋಕ್ತಿಗಳು 12 : 10 (ERVKN)
ಶಿಷ್ಟನು ತನ್ನ ಪಶುಗಳನ್ನು ನೋಡಿಕೊಳ್ಳುತ್ತಾನೆ. ಆದರೆ ದುಷ್ಟನ ವಾತ್ಸಲ್ಯವು ಕ್ರೂರವಾಗಿದೆ.
ಙ್ಞಾನೋಕ್ತಿಗಳು 12 : 11 (ERVKN)
ತನ್ನ ಜಮೀನಿನಲ್ಲಿ ದುಡಿಯುವ ರೈತನಿಗೆ ಸಾಕಷ್ಟು ಆಹಾರವಿರುವುದು. ಆದರೆ ಮೂಢನು ಪ್ರಯೋಜನವಿಲ್ಲದ ಸಂಗತಿಗಳಲ್ಲಿ ತನ್ನ ಸಮಯವನ್ನು ಹಾಳುಮಾಡುವನು.
ಙ್ಞಾನೋಕ್ತಿಗಳು 12 : 12 (ERVKN)
ಕಳವು ಮಾಲುಗಳಲ್ಲಿ ದುಷ್ಟರಿಗೆ ಆಸೆ. ಒಳ್ಳೆಯವರಿಗಾದರೊ ತಮ್ಮಲ್ಲಿರುವುದನ್ನು ಬೇರೆಯವರಿಗೆ ಕೊಡಬೇಕೆಂಬ ಆಸೆ.
ಙ್ಞಾನೋಕ್ತಿಗಳು 12 : 13 (ERVKN)
ಕೆಡುಕನು ತನ್ನ ಕೆಟ್ಟಮಾತುಗಳಿಂದಲೇ ಸಿಕ್ಕಿಕೊಳ್ಳುವನು. ಆದರೆ ಒಳ್ಳೆಯವನು ಇಕ್ಕಟ್ಟುಗಳಿಂದ ಪಾರಾಗುವನು.
ಙ್ಞಾನೋಕ್ತಿಗಳು 12 : 14 (ERVKN)
ಮನುಷ್ಯನು ತನ್ನ ಒಳ್ಳೆಯ ಮಾತುಗಳಿಗೆ ಪ್ರತಿಫಲವನ್ನು ಪಡೆಯುವನು. ಅದೇ ರೀತಿಯಲ್ಲಿ, ಅವನ ಕೆಲಸವು ಅವನಿಗೆ ಲಾಭವನ್ನು ಕೊಡುವುದು.
ಙ್ಞಾನೋಕ್ತಿಗಳು 12 : 15 (ERVKN)
ಮೂಢನು ತನ್ನ ದಾರಿಯನ್ನೇ ಒಳ್ಳೆಯದೆಂದು ಭಾವಿಸಿಕೊಂಡಿರುತ್ತಾನೆ. ಜ್ಞಾನಿಯಾದರೋ ಉಪದೇಶಕ್ಕೆ ಕಿವಿಗೊಡುತ್ತಾನೆ.
ಙ್ಞಾನೋಕ್ತಿಗಳು 12 : 16 (ERVKN)
ಮೂಢನು ತನ್ನ ಸಿಟ್ಟನ್ನು ತಟ್ಟನೆ ತೋರಿಸುವನು. ಆದರೆ ಜ್ಞಾನಿಯು ಅವಮಾನವನ್ನು ಕಡೆಗಣಿಸುವನು.
ಙ್ಞಾನೋಕ್ತಿಗಳು 12 : 17 (ERVKN)
ಸತ್ಯಸಾಕ್ಷಿಯು ನ್ಯಾಯವನ್ನು ಪ್ರತಿಪಾದಿಸುವನು. ಆದರೆ ಸುಳ್ಳುಸಾಕ್ಷಿಯು ಅನ್ಯಾಯವನ್ನು ಪ್ರಕಟಿಸುವನು.
ಙ್ಞಾನೋಕ್ತಿಗಳು 12 : 18 (ERVKN)
ದುಡುಕಿದ ಮಾತು ಖಡ್ಗದಂತೆ ನೋವು ಮಾಡುತ್ತದೆ; ಜ್ಞಾನಿಯ ಮಾತು ಗುಣಪಡಿಸುತ್ತದೆ.
ಙ್ಞಾನೋಕ್ತಿಗಳು 12 : 19 (ERVKN)
ಸುಳ್ಳುತುಟಿಗಳು ಕ್ಷಣಿಕ. ಆದರೆ ಸತ್ಯವು ಶಾಶ್ವತ.
ಙ್ಞಾನೋಕ್ತಿಗಳು 12 : 20 (ERVKN)
ಕೆಡುಕರು ಯಾವಾಗಲೂ ಕೇಡು ಮಾಡಲಿಚ್ಛಿಸುವರು. ಸಮಾಧಾನವನ್ನು ಅಪೇಕ್ಷಿಸುವವರು ಸಂತೋಷವಾಗಿರುವರು.
ಙ್ಞಾನೋಕ್ತಿಗಳು 12 : 21 (ERVKN)
ಸಜ್ಜನರು ಯೆಹೋವನಿಂದ ಕ್ಷೇಮವಾಗಿರುವರು. ಆದರೆ ದುರ್ಜನರಿಗೆ ಅನೇಕ ತೊಂದರೆಗಳಿರುತ್ತವೆ.
ಙ್ಞಾನೋಕ್ತಿಗಳು 12 : 22 (ERVKN)
ಸುಳ್ಳುಗಾರರು ಯೆಹೋವನಿಗೆ ಅಸಹ್ಯ. ಆದರೆ ಸತ್ಯವಂತರು ಆತನಿಗೆ ಇಷ್ಟಕರ.
ಙ್ಞಾನೋಕ್ತಿಗಳು 12 : 23 (ERVKN)
ಜಾಣನು ತನ್ನ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳುವುದಿಲ್ಲ. ಆದರೆ ಮೂಢನು ದುಡುಕಿ ಮಾತಾಡಿ ತಾನು ಮೂಢನೆಂದು ತೋರಿಸಿಕೊಳ್ಳುತ್ತಾನೆ.
ಙ್ಞಾನೋಕ್ತಿಗಳು 12 : 24 (ERVKN)
ಕಷ್ಟಪಟ್ಟು ಕೆಲಸ ಮಾಡುವವನು ಅಧಿಪತಿಯಾಗುವನು. ಸೋಮಾರಿಯನ್ನು ಗುಲಾಮನನ್ನಾಗಿ ಮಾಡಲಾಗುವುದು.
ಙ್ಞಾನೋಕ್ತಿಗಳು 12 : 25 (ERVKN)
ಚಿಂತೆಯು ಮನುಷ್ಯನ ಸಂತೋಷವನ್ನು ತೆಗೆದುಹಾಕುತ್ತದೆ; ಕನಿಕರದ ಮಾತು ಮನುಷ್ಯನನ್ನು ಸಂತೋಷಗೊಳಿಸುತ್ತದೆ.
ಙ್ಞಾನೋಕ್ತಿಗಳು 12 : 26 (ERVKN)
ಸನ್ಮಾರ್ಗಿಯು ತನ್ನ ನೆರೆಯವನಿಗೆ ಒಳ್ಳೆಯ ಮಾರ್ಗವನ್ನು ತೋರಿಸುತ್ತಾನೆ; ದುರ್ಮಾರ್ಗಿಯು ಬೇರೆಯವರನ್ನು ದಾರಿ ತಪ್ಪಿಸುವನು.
ಙ್ಞಾನೋಕ್ತಿಗಳು 12 : 27 (ERVKN)
ಸೋಮಾರಿಯಾದ ಬೇಟೆಗಾರನು ಬೇಟೆಯಾಡುವುದಿಲ್ಲ. ಐಶ್ವರ್ಯವು ಕಷ್ಟಪಟ್ಟು ಕೆಲಸ ಮಾಡುವವನಿಗೆ ಬರುತ್ತದೆ.
ಙ್ಞಾನೋಕ್ತಿಗಳು 12 : 28 (ERVKN)
ನೀತಿಯ ಮಾರ್ಗದಲ್ಲಿ ಜೀವವಿದೆ. ಆದರೆ ಮರಣಕ್ಕೆ ನಡೆಸುವ ಮತ್ತೊಂದು ಮಾರ್ಗವಿದೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28