ಙ್ಞಾನೋಕ್ತಿಗಳು 14 : 1 (ERVKN)
ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಆದರೆ ಜ್ಞಾನಹೀನಳು ತನ್ನ ಕೈಯಿಂದಲೇ ಅದನ್ನು ಬೀಳಿಸುವಳು. [PE][PS]
ಙ್ಞಾನೋಕ್ತಿಗಳು 14 : 2 (ERVKN)
ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯಾದರೋ ಆತನನ್ನು ಕಡೆಗಣಿಸುವನು. [PE][PS]
ಙ್ಞಾನೋಕ್ತಿಗಳು 14 : 3 (ERVKN)
ಮೂಢನ ಮಾತುಗಳು ಅವನಿಗೇ ತೊಂದರೆಯನ್ನು ಉಂಟುಮಾಡುತ್ತವೆ. ಜ್ಞಾನಿಯ ಮಾತುಗಳಾದರೋ ಅವನನ್ನು ಕಾಪಾಡುತ್ತವೆ. [PE][PS]
ಙ್ಞಾನೋಕ್ತಿಗಳು 14 : 4 (ERVKN)
ಎತ್ತುಗಳಿಲ್ಲದಿದ್ದರೆ ಕೊಟ್ಟಿಗೆ ಬರಿದಾಗಿರುವುದು. ದೊಡ್ಡ ಸುಗ್ಗಿಪಡೆಯಲು ಎತ್ತಿನ ಶಕ್ತಿ ಜನರಿಗೆ ಅಗತ್ಯ. [PE][PS]
ಙ್ಞಾನೋಕ್ತಿಗಳು 14 : 5 (ERVKN)
ಸತ್ಯಸಾಕ್ಷಿಯು ಸುಳ್ಳು ಹೇಳುವುದಿಲ್ಲ. ಆದರೆ ಸುಳ್ಳು ಸಾಕ್ಷಿಯು ಸುಳ್ಳನ್ನೇ ಹೇಳುವುದು. [PE][PS]
ಙ್ಞಾನೋಕ್ತಿಗಳು 14 : 6 (ERVKN)
ಜ್ಞಾನದೂಷಕನು ಜ್ಞಾನಕ್ಕಾಗಿ ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ. ಆದರೆ ವಿವೇಕಿಯು ತಿಳುವಳಿಕೆಯನ್ನು ಸರಾಗವಾಗಿ ಕಂಡುಕೊಳ್ಳುವನು. [PE][PS]
ಙ್ಞಾನೋಕ್ತಿಗಳು 14 : 7 (ERVKN)
ಅಜ್ಞಾನಿಯೊಡನೆ ಸ್ನೇಹ ಬೆಳಸಬೇಡಿ; ನಿಮಗೆ ಉಪದೇಶಿಸಲು ಅವನಲ್ಲೇನೂ ಇಲ್ಲ. [PE][PS]
ಙ್ಞಾನೋಕ್ತಿಗಳು 14 : 8 (ERVKN)
ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ. [PE][PS]
ಙ್ಞಾನೋಕ್ತಿಗಳು 14 : 9 (ERVKN)
ಮೂಢರಿಗೆ ಪ್ರಾಯಶ್ಚಿತ್ತವು ಹಾಸ್ಯಾಸ್ಪದವಾಗಿದೆ; ಯಥಾರ್ಥವಂತರು ಕ್ಷಮೆಗಾಗಿ ಶ್ರಮಿಸುವರು. [PE][PS]
ಙ್ಞಾನೋಕ್ತಿಗಳು 14 : 10 (ERVKN)
ಅವನವನ ವ್ಯಥೆಯು ಅವನವನಿಗೆ ಮಾತ್ರ ತಿಳಿದಿದೆ. ಹಾಗೆಯೇ ಅವನವನ ಸಂತೋಷವು ಅವನವನಿಗೆ ಮಾತ್ರ ತಿಳಿದಿರುತ್ತದೆ [PE][PS]
ಙ್ಞಾನೋಕ್ತಿಗಳು 14 : 11 (ERVKN)
ದುಷ್ಟನ ಮನೆ ನಾಶಕರ; ಶಿಷ್ಟನ ಮನೆ ಅಭಿವೃದ್ಧಿಕರ. [PE][PS]
ಙ್ಞಾನೋಕ್ತಿಗಳು 14 : 12 (ERVKN)
ಒಳ್ಳೆಯದೆಂದು ಜನರು ಭಾವಿಸಿಕೊಂಡಿರುವ ಮಾರ್ಗವೊಂದುಂಟು. ಆದರೆ ಅದರ ಅಂತ್ಯ ಮರಣವೇ. [PE][PS]
ಙ್ಞಾನೋಕ್ತಿಗಳು 14 : 13 (ERVKN)
ಒಬ್ಬನು ನಗುತ್ತಿರುವಾಗಲೂ ವ್ಯಸನದಿಂದಿರಲು ಸಾಧ್ಯ. ಅಂತೆಯೇ ಆನಂದವೂ ದುಃಖದಲ್ಲಿ ಅಂತ್ಯವಾಗಬಹುದು. [PE][PS]
ಙ್ಞಾನೋಕ್ತಿಗಳು 14 : 14 (ERVKN)
ದುಷ್ಟರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ಸಂಪೂರ್ಣವಾಗಿ ದಂಡನೆ ಅನುಭವಿಸುವರು. ಆದರೆ ಸಜ್ಜನರು ತಮ್ಮ ಒಳ್ಳೆಯಕಾರ್ಯಗಳಿಗೆ ಸಂಪೂರ್ಣವಾಗಿ ಪ್ರತಿಫಲ ಪಡೆಯುವರು. [PE][PS]
ಙ್ಞಾನೋಕ್ತಿಗಳು 14 : 15 (ERVKN)
ಮೂಢನು ತಾನು ಕೇಳಿದ್ದನ್ನೆಲ್ಲ ನಂಬುವನು. ಆದರೆ ಜಾಣನು ಪ್ರತಿಯೊಂದರ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು. [PE][PS]
ಙ್ಞಾನೋಕ್ತಿಗಳು 14 : 16 (ERVKN)
ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ. [PE][PS]
ಙ್ಞಾನೋಕ್ತಿಗಳು 14 : 17 (ERVKN)
ಮುಂಗೋಪಿಯು ಮೂಢಕಾರ್ಯಗಳನ್ನು ಮಾಡುವನು. ಕುತಂತ್ರಿಗಳನ್ನು ಜನರು ದ್ವೇಷಿಸುವರು. [PE][PS]
ಙ್ಞಾನೋಕ್ತಿಗಳು 14 : 18 (ERVKN)
ದಡ್ಡರಿಗೆ ಮೂಢತನವೇ ಪ್ರತಿಫಲ. ಜಾಣರಾದರೋ ಜ್ಞಾನವೆಂಬ ಕಿರೀಟವನ್ನು ಹೊಂದುವರು. [PE][PS]
ಙ್ಞಾನೋಕ್ತಿಗಳು 14 : 19 (ERVKN)
ಕೊನೆಯಲ್ಲಿ ಕೆಟ್ಟವರ ಮೇಲೆ ಒಳ್ಳೆಯವರು ಜಯಗಳಿಸುವರು. ಕೆಟ್ಟವರು ಬಲವಂತದಿಂದ ಒಳ್ಳೆಯವರ ಮುಂದೆ ತಲೆಬಾಗುವರು. [PE][PS]
ಙ್ಞಾನೋಕ್ತಿಗಳು 14 : 20 (ERVKN)
ಬಡವನು ತನ್ನ ನೆರೆಯವನಿಂದಲೂ ತಿರಸ್ಕರಿಸಲ್ಪಡುವನು. ಐಶ್ವರ್ಯವಂತರಿಗಾದರೋ ಅನೇಕ ಮಂದಿ ಸ್ನೇಹಿತರು. [PE][PS]
ಙ್ಞಾನೋಕ್ತಿಗಳು 14 : 21 (ERVKN)
ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆತೋರಿಸಿ. [PE][PS]
ಙ್ಞಾನೋಕ್ತಿಗಳು 14 : 22 (ERVKN)
ದುರ್ಮಾರ್ಗಿಯು ದಾರಿ ತಪ್ಪುವನು. ಒಳ್ಳೆಯದನ್ನು ಮಾಡಲು ಪ್ರಯತ್ನಿಸುವವನು ಪ್ರೀತಿಗೂ ಭರವಸೆಗೂ ಪಾತ್ರನಾಗುವನು. [PE][PS]
ಙ್ಞಾನೋಕ್ತಿಗಳು 14 : 23 (ERVKN)
ಕಷ್ಟಪಟ್ಟು ದುಡಿದರೆ, ಸಮೃದ್ಧಿಯಿರುವುದು. ಕೇವಲ ಮಾತಾಡಿದರೆ ಬಡತನ ಬರುವುದು. [PE][PS]
ಙ್ಞಾನೋಕ್ತಿಗಳು 14 : 24 (ERVKN)
ಜ್ಞಾನಿಗಳಿಗೆ ದೊರೆಯುವ ಪ್ರತಿಫಲ ಐಶ್ವರ್ಯ. ಜ್ಞಾನಹೀನರಿಗೆ ದೊರೆಯುವ ಪ್ರತಿಫಲ ಮೂಢತನ. [PE][PS]
ಙ್ಞಾನೋಕ್ತಿಗಳು 14 : 25 (ERVKN)
ಸತ್ಯವನ್ನಾಡುವವನು ಬೇರೆಯವರಿಗೆ ಸಹಾಯಿಸುತ್ತಾನೆ. ಸುಳ್ಳುಗಾರನಾದರೋ ಮತ್ತೊಬ್ಬನಿಗೆ ನೋವನ್ನುಂಟು ಮಾಡುತ್ತಾನೆ. [PE][PS]
ಙ್ಞಾನೋಕ್ತಿಗಳು 14 : 26 (ERVKN)
ಯೆಹೋವನಲ್ಲಿ ಭಯಭಕ್ತಿಯುಳ್ಳವನು ಕ್ಷೇಮವಾಗಿರುವನು; ಅವನ ಮಕ್ಕಳು ಸಹ ಕ್ಷೇಮವಾಗಿರುವರು. [PE][PS]
ಙ್ಞಾನೋಕ್ತಿಗಳು 14 : 27 (ERVKN)
ಯೆಹೋವನಲ್ಲಿರುವ ಭಯಭಕ್ತಿ ಜೀವದ ಬುಗ್ಗೆ. ಅದು ಮನುಷ್ಯನನ್ನು ಮರಣದ ಬಲೆಯಿಂದ ಕಾಪಾಡುತ್ತದೆ. [PE][PS]
ಙ್ಞಾನೋಕ್ತಿಗಳು 14 : 28 (ERVKN)
ಅಧಿಕ ಜನಸಂಖ್ಯೆಯು ರಾಜನಿಗೆ ಗೌರವ. ಪ್ರಜೆಗಳೇ ಇಲ್ಲದಿದ್ದರೆ ರಾಜನಿಗೆ ಬೆಲೆಯೇ ಇಲ್ಲ. [PE][PS]
ಙ್ಞಾನೋಕ್ತಿಗಳು 14 : 29 (ERVKN)
ತಾಳ್ಮೆಯುಳ್ಳವನು ತುಂಬಾ ಜಾಣ. ಮುಂಗೋಪಿಯು ತಾನು ಮೂಢ ಎಂಬುದನ್ನು ತೋರಿಸಿಕೊಳ್ಳುತ್ತಾನೆ. [PE][PS]
ಙ್ಞಾನೋಕ್ತಿಗಳು 14 : 30 (ERVKN)
ಮನಶ್ಯಾಂತಿಯುಳ್ಳವನ ದೇಹವು ಆರೋಗ್ಯದಿಂದಿರುವುದು. ಹೊಟ್ಟೆಕಿಚ್ಚು ದೇಹಕ್ಕೆ ಕಾಯಿಲೆಯನ್ನು ಬರಮಾಡುವುದು. [PE][PS]
ಙ್ಞಾನೋಕ್ತಿಗಳು 14 : 31 (ERVKN)
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ. [PE][PS]
ಙ್ಞಾನೋಕ್ತಿಗಳು 14 : 32 (ERVKN)
ದುಷ್ಟರು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವರು ಮರಣದ ಸಮಯದಲ್ಲೂ ಜಯಶಾಲಿಗಳಾಗುವರು. [PE][PS]
ಙ್ಞಾನೋಕ್ತಿಗಳು 14 : 33 (ERVKN)
ವಿವೇಕಿಯು ಯಾವಾಗಲೂ ಜ್ಞಾನದ ಕಾರ್ಯಗಳನ್ನು ಆಲೋಚಿಸುವನು. ಮೂಢನಿಗಾದರೋ ಜ್ಞಾನದ ಬಗ್ಗೆ ಏನೂ ತಿಳಿಯದು. [PE][PS]
ಙ್ಞಾನೋಕ್ತಿಗಳು 14 : 34 (ERVKN)
ಒಳ್ಳೆತನವು ದೇಶದ ಏಳಿಗೆಗೆ ಕಾರಣ. ಪಾಪವು ದೇಶಕ್ಕೆ ಅವಮಾನಕರ. [PE][PS]
ಙ್ಞಾನೋಕ್ತಿಗಳು 14 : 35 (ERVKN)
ಬುದ್ಧಿವಂತ ನಾಯಕನನ್ನು ಹೊಂದಿರುವ ರಾಜನು ಸಂತೋಷವಾಗಿರುವನು. ಅಯೋಗ್ಯನಾದ ಸೇವಕನ ಮೇಲೆ ರಾಜನು ಕೋಪಗೊಳ್ಳುವನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35

BG:

Opacity:

Color:


Size:


Font: