ಙ್ಞಾನೋಕ್ತಿಗಳು 15 : 1 (ERVKN)
ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು. [PE][PS]
ಙ್ಞಾನೋಕ್ತಿಗಳು 15 : 2 (ERVKN)
ಜ್ಞಾನಿಯ ಮಾತನ್ನು ಜನರು ಕೇಳಬಯಸುತ್ತಾರೆ. ಮೂಢನು ಕೇವಲ ಮೂರ್ಖತನವನ್ನೇ ಮಾತಾಡುವನು. [PE][PS]
ಙ್ಞಾನೋಕ್ತಿಗಳು 15 : 3 (ERVKN)
ಯೆಹೋವನ ದೃಷ್ಟಿಗೆ ಪ್ರತಿಯೊಂದೂ ಕಾಣುತ್ತದೆ. ಆತನು ಕೆಡುಕರನ್ನೂ ಒಳ್ಳೆಯವರನ್ನೂ ಗಮನಿಸುತ್ತಿದ್ದಾನೆ. [PE][PS]
ಙ್ಞಾನೋಕ್ತಿಗಳು 15 : 4 (ERVKN)
ಹಿತನುಡಿಗಳು ಜೀವವುಳ್ಳ ಮರದಂತಿವೆ. ಸುಳ್ಳು ಮಾತುಗಳು ಮನುಷ್ಯನ ಆತ್ಮವನ್ನು ಜಜ್ಜಿಹಾಕುತ್ತವೆ. [PE][PS]
ಙ್ಞಾನೋಕ್ತಿಗಳು 15 : 5 (ERVKN)
ಮೂರ್ಖನು ತಂದೆಯ ಬುದ್ಧಿಮಾತನ್ನು ತಿರಸ್ಕರಿಸುವನು. ಬುದ್ಧಿಮಾತನ್ನು ಸ್ವೀಕರಿಸಿಕೊಳ್ಳುವವನು ಜ್ಞಾನಿಯಾಗುತ್ತಾನೆ. [PE][PS]
ಙ್ಞಾನೋಕ್ತಿಗಳು 15 : 6 (ERVKN)
ಒಳ್ಳೆಯವರ ಮನೆಗಳಲ್ಲಿ ಬಹಳ ಐಶ್ವರ್ಯವಿರುತ್ತದೆ. ಕೆಡುಕರ ಸಂಪಾದನೆಯಾದರೋ ಆಪತ್ತನ್ನು ಬರಮಾಡುತ್ತದೆ. [PE][PS]
ಙ್ಞಾನೋಕ್ತಿಗಳು 15 : 7 (ERVKN)
ಜ್ಞಾನಿಯ ಮಾತುಗಳು ತಿಳುವಳಿಕೆಯನ್ನು ಹರಡುತ್ತವೆ. ಮೂಢರ ಮಾತುಗಳು ಕೇಳಲು ಯೋಗ್ಯವಲ್ಲ. [PE][PS]
ಙ್ಞಾನೋಕ್ತಿಗಳು 15 : 8 (ERVKN)
ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು. [PE][PS]
ಙ್ಞಾನೋಕ್ತಿಗಳು 15 : 9 (ERVKN)
ದುಷ್ಟರ ಜೀವಿತವು ಯೆಹೋವನಿಗೆ ಅಸಹ್ಯ. ಒಳ್ಳೆಯದನ್ನು ಮಾಡಲಿಚ್ಛಿಸುವವರು ಯೆಹೋವನಿಗೆ ಪ್ರಿಯ. [PE][PS]
ಙ್ಞಾನೋಕ್ತಿಗಳು 15 : 10 (ERVKN)
ನೀತಿಮಾರ್ಗವನ್ನು ತೊರೆದವರಿಗೆ ಮಹಾದಂಡನೆಯಾಗುವುದು; ಶಿಕ್ಷಣ, ಗದರಿಕೆಯನ್ನು ದ್ವೇಷಿಸುವವನು ನಾಶವಾಗುವನು. [PE][PS]
ಙ್ಞಾನೋಕ್ತಿಗಳು 15 : 11 (ERVKN)
ಮೃತ್ಯುಲೋಕದಲ್ಲಿ ನಡೆಯುತ್ತಿರುವುದು ಯೆಹೋವನಿಗೆ ತಿಳಿದಿದೆ. ಜನರ ಹೃದಯಗಳಲ್ಲಿರುವ ಆಲೋಚನೆಗಳು ಸಹ ಆತನಿಗೆ ಗೊತ್ತಿವೆ. [PE][PS]
ಙ್ಞಾನೋಕ್ತಿಗಳು 15 : 12 (ERVKN)
ಮೂಢನು ತನ್ನ ತಪ್ಪನ್ನು ಬೇರೆಯವರಿಂದ ಕೇಳಲು ಇಷ್ಟಪಡನು. ಮೂಢನು ಉಪದೇಶಕ್ಕಾಗಿ ಜ್ಞಾನಿಗಳ ಬಳಿಗೆ ಹೋಗುವುದಿಲ್ಲ. [PE][PS]
ಙ್ಞಾನೋಕ್ತಿಗಳು 15 : 13 (ERVKN)
ಸಂತೋಷವಾಗಿರುವವನ ಮುಖದಲ್ಲಿ ಆನಂದ ಎದ್ದುಕಾಣುವುದು. ದುಃಖಗೊಂಡಿರುವವನ ಆತ್ಮದಲ್ಲಿ ವ್ಯಥೆ ಎದ್ದುಕಾಣುವುದು. [PE][PS]
ಙ್ಞಾನೋಕ್ತಿಗಳು 15 : 14 (ERVKN)
ವಿವೇಕಿಯು ಮತ್ತಷ್ಟು ತಿಳುವಳಿಕೆಯನ್ನು ಪಡೆದುಕೊಳ್ಳಲು ಪ್ರಯತ್ನಿಸುವನು. ಮೂಢನು ಮತ್ತಷ್ಟು ಮೂಢತನವನ್ನು ಬಯಸುತ್ತಾನೆ. [PE][PS]
ಙ್ಞಾನೋಕ್ತಿಗಳು 15 : 15 (ERVKN)
ಬಡಜನರ ದಿನಗಳೆಲ್ಲಾ ದುಃಖಕರ. ಸಂತೋಷದ ಹೃದಯದಲ್ಲಿ ಸದಾ ಔತಣ. [PE][PS]
ಙ್ಞಾನೋಕ್ತಿಗಳು 15 : 16 (ERVKN)
ಬಹಳ ಐಶ್ವರ್ಯವನ್ನು ಹೊಂದಿದ್ದು ಸಮಾಧಾನವಿಲ್ಲದೆ ಇರುವುದಕ್ಕಿಂತ ಸ್ವಲ್ಪ ಐಶ್ವರ್ಯವನ್ನು ಹೊಂದಿದ್ದು ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಮೇಲು. [PE][PS]
ಙ್ಞಾನೋಕ್ತಿಗಳು 15 : 17 (ERVKN)
ದ್ವೇಷವಿರುವಲ್ಲಿ ಹೆಚ್ಚಾಗಿ ತಿನ್ನುವುದಕ್ಕಿಂತಲೂ ಪ್ರೀತಿಯಿರುವಲ್ಲಿ ಸ್ವಲ್ಪ ತಿನ್ನುವುದೇ ಉತ್ತಮ. [PE][PS]
ಙ್ಞಾನೋಕ್ತಿಗಳು 15 : 18 (ERVKN)
ಮುಂಗೋಪಿಯು ಜಗಳವನ್ನು ಎಬ್ಬಿಸುವನು. ತಾಳ್ಮೆಯುಳ್ಳವನು ಶಾಂತಿ ಸ್ಥಾಪಿಸುವನು. [PE][PS]
ಙ್ಞಾನೋಕ್ತಿಗಳು 15 : 19 (ERVKN)
ಸೋಮಾರಿಗೆ ಎಲ್ಲೆಲ್ಲೂ ತೊಂದರೆ, ಯಥಾರ್ಥವಂತರಿಗೆ ಜೀವನ ಸರಾಗ. [PE][PS]
ಙ್ಞಾನೋಕ್ತಿಗಳು 15 : 20 (ERVKN)
ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದರೋ ತನ್ನ ತಾಯಿಯನ್ನು ಕಡೆಗಣಿಸುವನು. [PE][PS]
ಙ್ಞಾನೋಕ್ತಿಗಳು 15 : 21 (ERVKN)
ಮೂಢನಿಗೆ ಮೂಢತನದಲ್ಲಿ ಸಂತೋಷ. ಜ್ಞಾನಿಯು ಎಚ್ಚರಿಕೆಯಿಂದಿದ್ದು ಒಳ್ಳೆಯದನ್ನು ಮಾಡುವನು. [PE][PS]
ಙ್ಞಾನೋಕ್ತಿಗಳು 15 : 22 (ERVKN)
ಆಲೋಚನೆಯಿಲ್ಲದ ಯೋಜನೆಗಳು ವಿಫಲವಾಗುತ್ತವೆ. ಆಲೋಚಿಸಿ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. [PE][PS]
ಙ್ಞಾನೋಕ್ತಿಗಳು 15 : 23 (ERVKN)
ಸಮರ್ಪಕವಾದ ಉತ್ತರ ಸಂತೋಷವನ್ನು ಉಂಟುಮಾಡುವುದು; ತಕ್ಕ ಸಮಯದಲ್ಲಿ ಸಮಯೋಚಿತವಾದ ಮಾತು ಅತ್ಯುತ್ತಮ. [PE][PS]
ಙ್ಞಾನೋಕ್ತಿಗಳು 15 : 24 (ERVKN)
ಜ್ಞಾನಿಯ ಕಾರ್ಯಗಳು ಅವನನ್ನು ಯಶಸ್ಸಿಗೆ ನಡೆಸುತ್ತವೆ; ಅವು ಅವನನ್ನು ಮರಣದ ಹಾದಿಯಿಂದ ತಪ್ಪಿಸುತ್ತವೆ. [PE][PS]
ಙ್ಞಾನೋಕ್ತಿಗಳು 15 : 25 (ERVKN)
ಅಹಂಕಾರಿಗಳ ಆಸ್ತಿಯನ್ನು ಯೆಹೋವನು ನಾಶಗೊಳಿಸುತ್ತಾನೆ; ಆದರೆ ವಿಧವೆಯರ ಆಸ್ತಿಯನ್ನು ಕಾಪಾಡುವನು. [PE][PS]
ಙ್ಞಾನೋಕ್ತಿಗಳು 15 : 26 (ERVKN)
ಯೆಹೋವನು ದುರಾಲೋಚನೆಗಳನ್ನು ದ್ವೇಷಿಸುವನು; ಕನಿಕರದ ಮಾತುಗಳಲ್ಲಾದರೋ ಸಂತೋಷಪಡುವನು. [PE][PS]
ಙ್ಞಾನೋಕ್ತಿಗಳು 15 : 27 (ERVKN)
ದುರಾಶೆಪಡುವವನು ತನ್ನ ಕುಟುಂಬಕ್ಕೆ ಆಪತ್ತನ್ನು ಬರಮಾಡಿಕೊಳ್ಳುವನು. ಲಂಚ ತೆಗೆದುಕೊಳ್ಳದವನಿಗೆ ಯಾವ ಸಮಸ್ಯೆಯೂ ಇರುವುದಿಲ್ಲ. [PE][PS]
ಙ್ಞಾನೋಕ್ತಿಗಳು 15 : 28 (ERVKN)
ಒಳ್ಳೆಯವರು ಎಚ್ಚರಿಕೆಯಿಂದ ಯೋಚಿಸಿ ಉತ್ತರ ಕೊಡುವರು. ದುಷ್ಟರಾದರೋ ಯೋಚಿಸದೆ ಮಾತಾಡುವರು; ಅದರಿಂದ ಜನರಿಗೆ ಕೇವಲ ತೊಂದರೆಯಷ್ಟೇ. [PE][PS]
ಙ್ಞಾನೋಕ್ತಿಗಳು 15 : 29 (ERVKN)
ಯೆಹೋವನು ದುಷ್ಟರಿಗೆ ಬಹುದೂರ. ಶಿಷ್ಟರ ಪ್ರಾರ್ಥನೆಯನ್ನಾದರೋ ಆತನು ಯಾವಾಗಲೂ ಕೇಳುತ್ತಾನೆ. [PE][PS]
ಙ್ಞಾನೋಕ್ತಿಗಳು 15 : 30 (ERVKN)
ನಗುಮುಖವು ಜನರನ್ನು ಸಂತೋಷಗೊಳಿಸುವುದು; ಒಳ್ಳೆಯ ಸುದ್ದಿಯಿಂದ ಜನರ ಆರೋಗ್ಯ ಹೆಚ್ಚುವುದು. [PE][PS]
ಙ್ಞಾನೋಕ್ತಿಗಳು 15 : 31 (ERVKN)
ತನ್ನ ತಪ್ಪನ್ನು ಎಚ್ಚರಿಕೆಯಿಂದ ಕೇಳುವವನು ಬಹು ಜ್ಞಾನಿ. [PE][PS]
ಙ್ಞಾನೋಕ್ತಿಗಳು 15 : 32 (ERVKN)
ಶಿಕ್ಷೆಯನ್ನು ಒಪ್ಪದವನು ತನಗೇ ಕೇಡುಮಾಡಿಕೊಳ್ಳುತ್ತಾನೆ. ಗದರಿಕೆಯನ್ನು ಕೇಳುವವನು ತಿಳುವಳಿಕೆಯನ್ನು ಪಡೆದುಕೊಳ್ಳುವನು. [PE][PS]
ಙ್ಞಾನೋಕ್ತಿಗಳು 15 : 33 (ERVKN)
ಯೆಹೋವನಲ್ಲಿ ಭಯಭಕ್ತಿಯುಳ್ಳವನು ಜ್ಞಾನಿಯಾಗುತ್ತಿದ್ದಾನೆ. ಸನ್ಮಾನ ಹೊಂದಬೇಕೆನ್ನುವವನು ಮೊದಲು ದೀನನಾಗಿರಬೇಕು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: