ಙ್ಞಾನೋಕ್ತಿಗಳು 19 : 1 (ERVKN)
ಸುಳ್ಳುಹೇಳುವ ಮತ್ತು ಮೋಸಮಾಡುವ ಮೂಢನಾಗಿರುವುದಕ್ಕಿಂತ, ಬಡವನಾಗಿಯೂ ಯಥಾರ್ಥನಾಗಿಯೂ ಇರುವುದು ಲೇಸು.
ಙ್ಞಾನೋಕ್ತಿಗಳು 19 : 2 (ERVKN)
ಯಾವುದೇ ಕಾರ್ಯದಲ್ಲಿ ಉತ್ಸುಕತೆಯೊಂದೇ ಸಾಲದು, ತಿಳುವಳಿಕೆಯೂ ಬೇಕು. ಯಾವುದೇ ಕಾರ್ಯದಲ್ಲಿ ದುಡುಕದಿರಿ; ಇಲ್ಲವಾದರೆ, ತಪ್ಪಾದೀತು!
ಙ್ಞಾನೋಕ್ತಿಗಳು 19 : 3 (ERVKN)
ಮೂಢನ ಮೂಢತನವು ಅವನ ಜೀವನವನ್ನೇ ನಾಶಪಡಿಸುತ್ತದೆ. ಆದರೆ ಅವನು ದೂಷಿಸುವುದು ಯೆಹೋವನನ್ನೇ.
ಙ್ಞಾನೋಕ್ತಿಗಳು 19 : 4 (ERVKN)
ಐಶ್ವರ್ಯವಂತನಿಗೆ ಅನೇಕ ಸ್ನೇಹಿತರಿರುವರು; ಬಡವನಿಗೆ ಇದ್ದ ಸ್ನೇಹಿತರೂ ಬಿಟ್ಟುಹೋಗುವರು.
ಙ್ಞಾನೋಕ್ತಿಗಳು 19 : 5 (ERVKN)
ಮತ್ತೊಬ್ಬನ ಮೇಲೆ ಸುಳ್ಳುಹೇಳುವವನು ದಂಡಿಸಲ್ಪಡುವನು. ಸುಳ್ಳುಸಾಕ್ಷಿಗೆ ಸುರಕ್ಷತೆಯಿಲ್ಲ.
ಙ್ಞಾನೋಕ್ತಿಗಳು 19 : 6 (ERVKN)
ಉದಾರಿಯ ಸ್ನೇಹಿತರಾಗಿರಲು ಅನೇಕರಿಗೆ ಆಸೆ. ದಾನಶೂರನಿಗೆ ಸ್ನೇಹಿತರಾಗಿರಲು ಎಲ್ಲರಿಗೂ ಆಸೆ.
ಙ್ಞಾನೋಕ್ತಿಗಳು 19 : 7 (ERVKN)
ಬಡವನಿಗೆ ಅವನ ಕುಟುಂಬವು ವಿರುದ್ಧವಾಗುವುದು; ಅವನ ಸ್ನೇಹಿತರೆಲ್ಲಾ ಮುಖತಿರುವಿಕೊಂಡು ಅವನಿಗೆ ದೂರವಾಗುವರು. ಆ ಬಡವನು ಸಹಾಯಕ್ಕಾಗಿ ಬೇಡಿಕೊಂಡರೂ ಅವನ ಸಮೀಪಕ್ಕೆ ಯಾರೂ ಹೋಗುವುದಿಲ್ಲ.
ಙ್ಞಾನೋಕ್ತಿಗಳು 19 : 8 (ERVKN)
ತನ್ನನ್ನು ಪ್ರೀತಿಸುವ ಪ್ರತಿಯೊಬ್ಬನು ಜ್ಞಾನಿಯಾಗಲು ಪ್ರಯಾಸಪಡುವನು; ಅಭಿವೃದ್ಧಿಗಾಗಿ ಇಷ್ಟಪಡುವವನು ತಿಳುವಳಿಕೆಯನ್ನು ಹೊಂದಿಕೊಳ್ಳಲು ಪ್ರಯತ್ನಿಸುವನು.
ಙ್ಞಾನೋಕ್ತಿಗಳು 19 : 9 (ERVKN)
ಸುಳ್ಳುಸಾಕ್ಷಿಯು ದಂಡಿಸಲ್ಪಡುವನು; ಸುಳ್ಳುಗಾರನು ನಾಶವಾಗುವನು.
ಙ್ಞಾನೋಕ್ತಿಗಳು 19 : 10 (ERVKN)
ಮೂಢನಿಗೆ ಐಶ್ವರ್ಯವು ಸೂಕ್ತವಲ್ಲ; ರಾಜಕುಮಾರರ ಮೇಲೆ ದೊರೆತನ ಮಾಡುವುದು ಗುಲಾಮನಿಗೆ ಮತ್ತಷ್ಟು ಸೂಕ್ತವಲ್ಲ.
ಙ್ಞಾನೋಕ್ತಿಗಳು 19 : 11 (ERVKN)
ಜ್ಞಾನಿಗೆ ಅವನ ಜ್ಞಾನವೇ ಸನ್ಮಾನವನ್ನು ತರುತ್ತದೆ. ತನಗೆ ತಪ್ಪು ಮಾಡಿದವರನ್ನು ಕ್ಷಮಿಸುವುದು ಅವನ ಸದ್ಗುಣವಾಗಿದೆ.
ಙ್ಞಾನೋಕ್ತಿಗಳು 19 : 12 (ERVKN)
ರಾಜನ ಕೋಪವು ಸಿಂಹ ಬರ್ಜನೆಯಂತಿರುತ್ತದೆ. ರಾಜನಿಗೆ ನಿನ್ನ ಮೇಲಿರುವ ಸಂತೋಷವು ತುಂತುರು ಮಳೆಯಂತಿರುತ್ತದೆ.
ಙ್ಞಾನೋಕ್ತಿಗಳು 19 : 13 (ERVKN)
ಮೂಢನಾದ ಮಗನು ತಂದೆಗೆ ಹಾನಿ; ವಾದಿಸುವ ಹೆಂಡತಿಯು ಸೋರುವ ಮೇಲ್ಛಾವಣಿಯಂತಿದ್ದಾಳೆ.
ಙ್ಞಾನೋಕ್ತಿಗಳು 19 : 14 (ERVKN)
ಮಕ್ಕಳು ತಂದೆಯಿಂದ ಮನೆಗಳನ್ನು ಮತ್ತು ಹಣವನ್ನು ಸ್ವಾಸ್ತ್ಯವಾಗಿ ಪಡೆದುಕೊಳ್ಳುವರು. ವಿವೇಕಿಯಾದ ಹೆಂಡತಿಯಾದರೋ ಯೆಹೋವನಿಂದ ಬಂದ ಉಡುಗೊರೆ.
ಙ್ಞಾನೋಕ್ತಿಗಳು 19 : 15 (ERVKN)
ಸೋಮಾರಿಗೆ ಗಾಢವಾದ ನಿದ್ರೆ. ಮೈಗಳ್ಳನಿಗೆ ಹಸಿವೆ.
ಙ್ಞಾನೋಕ್ತಿಗಳು 19 : 16 (ERVKN)
ಆಜ್ಞೆಗಳಿಗೆ ವಿಧೇಯನಾಗುವವನು ತನ್ನ ಪ್ರಾಣವನ್ನು ಸಂರಕ್ಷಿಸಿಕೊಳ್ಳುವನು. ಆದರೆ ತನ್ನ ನಡತೆಯ ಬಗ್ಗೆ ನಿರ್ಲಕ್ಷ್ಯದಿಂದಿರುವವನು ಸಾವಿಗೀಡಾಗುವನು.
ಙ್ಞಾನೋಕ್ತಿಗಳು 19 : 17 (ERVKN)
ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನಿಗೆ ಮರುಪಾವತಿ ಮಾಡುವನು.
ಙ್ಞಾನೋಕ್ತಿಗಳು 19 : 18 (ERVKN)
ನಿನ್ನ ಮಗನು ತನ್ನ ಮಾರ್ಗಗಳನ್ನು ಸರಿಪಡಿಸಿಕೊಳ್ಳುತ್ತಾನೆ ಎಂಬ ನಿರೀಕ್ಷೆ ಇನ್ನೂ ಇರುವಾಗಲೇ ಅವನನ್ನು ಶಿಸ್ತುಗೊಳಿಸು. ಅವನನ್ನು ಶಿಸ್ತುಗೊಳಿಸದಿದ್ದರೆ ಮರಣಕ್ಕೆ ಈಡು ಮಾಡಿದಂತಾಗುವುದು.
ಙ್ಞಾನೋಕ್ತಿಗಳು 19 : 19 (ERVKN)
ಮುಂಗೋಪಿಯು ತನ್ನ ಕೋಪಕ್ಕೆ ದಂಡ ಕೊಡಲೇಬೇಕು. ಕೊಡಬೇಕಾದ ದಂಡದಿಂದ ತಪ್ಪಿಸಿದರೆ, ಅವನು ಅದೇ ಕಾರ್ಯಗಳನ್ನು ಮತ್ತೆ ಮಾಡುವನು.
ಙ್ಞಾನೋಕ್ತಿಗಳು 19 : 20 (ERVKN)
ಉಪದೇಶಕ್ಕೆ ಕಿವಿಗೊಟ್ಟು ಸರಿಪಡಿಸಿಕೊ. ಆಗ ನೀನು ಜ್ಞಾನಿಯಾಗುವೆ.
ಙ್ಞಾನೋಕ್ತಿಗಳು 19 : 21 (ERVKN)
ಜನರು ಅನೇಕ ಆಲೋಚನೆಗಳನ್ನು ಮಾಡಿಕೊಂಡರೂ ಯೆಹೋವನ ಇಚ್ಛೆಯೇ ನೆರವೇರುವುದು.
ಙ್ಞಾನೋಕ್ತಿಗಳು 19 : 22 (ERVKN)
ದುರಾಶೆಯುಳ್ಳವನಿಗೆ ಅವನ ದುರಾಶೆಯೇ ಅವಮಾನಕರ. ಸುಳ್ಳು ಹೇಳುವುದಕ್ಕಿಂತ ಬಡವನಾಗಿರುವುದೇ ಮೇಲು.
ಙ್ಞಾನೋಕ್ತಿಗಳು 19 : 23 (ERVKN)
ಭಯಭಕ್ತಿಯು ಒಳ್ಳೆಯ ಜೀವನಕ್ಕೆ ನಡೆಸುತ್ತದೆ. ಅದು ಅವನಿಗೆ ತೃಪ್ತಿಯನ್ನೂ ಕೊಡುವುದು; ಕೇಡಿನಿಂದಲೂ ತಪ್ಪಿಸಿ ಕಾಪಾಡುವುದು.
ಙ್ಞಾನೋಕ್ತಿಗಳು 19 : 24 (ERVKN)
ಕೆಲವರಿಗೆ ಊಟಮಾಡುವುದಕ್ಕೂ ಸೋಮಾರಿತನ. ಅವರು ಕೈಯನ್ನು ತಟ್ಟೆಗೆ ಹಾಕಿದರೂ ಊಟವನ್ನು ಬಾಯಿಗೆ ಹಾಕಿಕೊಳ್ಳುವುದಿಲ್ಲ.
ಙ್ಞಾನೋಕ್ತಿಗಳು 19 : 25 (ERVKN)
ದುರಾಭಿಮಾನಿಯನ್ನು ದಂಡಿಸಿದರೆ ಅವನು ಪಾಠವನ್ನು ಕಲಿತುಕೊಳ್ಳಬಹುದು. ವಿವೇಕಿಯನ್ನು ತಿದ್ದಿ ಸರಿಪಡಿಸಿದರೆ ಅವನು ಮತ್ತಷ್ಟು ಜ್ಞಾನವನ್ನು ಗಳಿಸಿಕೊಳ್ಳುವನು.
ಙ್ಞಾನೋಕ್ತಿಗಳು 19 : 26 (ERVKN)
ತಂದೆಗೆ ಹೊಡೆಯುವವನೂ ತಾಯಿಯನ್ನು ಓಡಿಸುವವನೂ ತನಗೇ ನಾಚಿಕೆಯನ್ನು ಮತ್ತು ಅವಮಾನವನ್ನು ತಂದುಕೊಳ್ಳುವನು.
ಙ್ಞಾನೋಕ್ತಿಗಳು 19 : 27 (ERVKN)
ನೀನು ಬುದ್ಧಿವಾದವನ್ನು ಕೇಳದಿದ್ದರೆ, ನಿನ್ನ ತಪ್ಪುಗಳಲ್ಲಿಯೇ ಮುಂದುವರಿಯುವೆ.
ಙ್ಞಾನೋಕ್ತಿಗಳು 19 : 28 (ERVKN)
ದುಷ್ಟಸಾಕ್ಷಿಯು ನ್ಯಾಯವನ್ನು ಪರಿಹಾಸ್ಯ ಮಾಡುವನು; ಕೆಡುಕರ ಮಾತುಗಳು ಅನ್ಯಾಯವನ್ನು ಹರಡುತ್ತವೆ.
ಙ್ಞಾನೋಕ್ತಿಗಳು 19 : 29 (ERVKN)
ದುರಾಭಿಮಾನಿಯು ಶಿಕ್ಷೆಗೆ ಗುರಿಯಾಗಿ ದಂಡಿಸಲ್ಪಡುವನು; ಮೂಢನು ತನಗಾಗಿ ಕಾದಿರುವ ದಂಡನೆಯನ್ನು ಅನುಭವಿಸುವನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29