ಙ್ಞಾನೋಕ್ತಿಗಳು 2 : 1 (ERVKN)
{ಜ್ಞಾನದ ಮೌಲ್ಯ} [PS] ನನ್ನ ಮಗನೇ, ನಾನು ಹೇಳುವ ಈ ಮಾತುಗಳನ್ನು ಸ್ವೀಕಾರಮಾಡಿಕೊ. ನನ್ನ ಆಜ್ಞೆಗಳನ್ನು ನೆನಪು ಮಾಡಿಕೊ.
ಙ್ಞಾನೋಕ್ತಿಗಳು 2 : 2 (ERVKN)
ಜ್ಞಾನಕ್ಕೆ ಕಿವಿಗೊಡು; ಅದನ್ನು ಅರ್ಥಮಾಡಿಕೊಳ್ಳಲು ನಿನ್ನಿಂದಾದಷ್ಟು ಪ್ರಯತ್ನಿಸು.
ಙ್ಞಾನೋಕ್ತಿಗಳು 2 : 3 (ERVKN)
ಬುದ್ಧಿಗಾಗಿ ಮೊರೆಯಿಡು! ವಿವೇಕಕ್ಕಾಗಿ ಕೂಗಿಕೊ!
ಙ್ಞಾನೋಕ್ತಿಗಳು 2 : 4 (ERVKN)
ಬೆಳ್ಳಿಯನ್ನು ಹುಡುಕುವಂತೆ ವಿವೇಕವನ್ನು ಹುಡುಕು. ಅಡಗಿರುವ ಭಂಡಾರದಂತೆ ಅದನ್ನು ಹುಡುಕು.
ಙ್ಞಾನೋಕ್ತಿಗಳು 2 : 5 (ERVKN)
ಆಗ ನೀನು ಯೆಹೋವನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವೆ; ದೈವಜ್ಞಾನವನ್ನು ಹೊಂದಿಕೊಳ್ಳುವೆ. [PE][PS]
ಙ್ಞಾನೋಕ್ತಿಗಳು 2 : 6 (ERVKN)
ಜ್ಞಾನವನ್ನು ಕೊಡುವಾತನು ಯೆಹೋವನೇ. ವಿವೇಕ ಮತ್ತು ತಿಳುವಳಿಕೆ ಆತನ ಬಾಯಿಂದ ಬರುತ್ತವೆ.
ಙ್ಞಾನೋಕ್ತಿಗಳು 2 : 7 (ERVKN)
ಆತನು ನೀತಿವಂತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು; ನಿರ್ದೋಷಿಗಳಿಗೆ ಗುರಾಣಿಯಂತಿರುವನು.
ಙ್ಞಾನೋಕ್ತಿಗಳು 2 : 8 (ERVKN)
ಆತನು ನ್ಯಾಯವಂತರನ್ನು ಕಾಪಾಡುತ್ತಾನೆ; ತನ್ನ ಪವಿತ್ರ ಜನರಿಗೆ ಕಾವಲಾಗಿರುತ್ತಾನೆ. [PE][PS]
ಙ್ಞಾನೋಕ್ತಿಗಳು 2 : 9 (ERVKN)
ಆಗ ನೀನು ಒಳ್ಳೆಯದನ್ನೂ ನ್ಯಾಯನೀತಿಗಳನ್ನೂ ಸನ್ಮಾರ್ಗಗಳನ್ನೂ ಅರ್ಥಮಾಡಿಕೊಳ್ಳುವೆ.
ಙ್ಞಾನೋಕ್ತಿಗಳು 2 : 10 (ERVKN)
ಆಗ ಜ್ಞಾನವು ನಿನ್ನ ಹೃದಯದ ಒಳಗೆ ಬರುವುದು; ನಿನ್ನ ಆತ್ಮವು ತಿಳುವಳಿಕೆಯೊಡನೆ ಸಂತೋಷವಾಗಿರುವುದು. [PE][PS]
ಙ್ಞಾನೋಕ್ತಿಗಳು 2 : 11 (ERVKN)
ವಿವೇಕವು ನಿನ್ನನ್ನು ಕಾಪಾಡುವುದು; ಬುದ್ಧಿಯು ನಿನಗೆ ಕಾವಲಾಗಿರುವುದು;
ಙ್ಞಾನೋಕ್ತಿಗಳು 2 : 12 (ERVKN)
ಹೀಗೆ ನೀನು ದುರ್ಮಾರ್ಗಗಳಿಂದಲೂ ಸುಳ್ಳುಗಾರರಿಂದಲೂ ತಪ್ಪಿಸಿಕೊಳ್ಳುವೆ.
ಙ್ಞಾನೋಕ್ತಿಗಳು 2 : 13 (ERVKN)
ಅವರಾದರೊ ನೀತಿಮಾರ್ಗವನ್ನು ಬಿಟ್ಟು ಪಾಪವೆಂಬ ಕತ್ತಲೆಯಲ್ಲಿ ಜೀವಿಸುತ್ತಿದ್ದಾರೆ.
ಙ್ಞಾನೋಕ್ತಿಗಳು 2 : 14 (ERVKN)
ಅವರಿಗೆ ಕೆಟ್ಟದ್ದನ್ನು ಮಾಡುವುದರಲ್ಲೇ ಸಂತೋಷ; ಕೆಡುಕರ ಕೆಟ್ಟಕಾರ್ಯಗಳಲ್ಲೇ ಆನಂದ.
ಙ್ಞಾನೋಕ್ತಿಗಳು 2 : 15 (ERVKN)
ಅವರ ಮಾರ್ಗಗಳು ವಕ್ರವಾಗಿವೆ; ಅವರ ನಡತೆಗಳು ದುರ್ನಡತೆಗಳಾಗಿವೆ. [PE][PS]
ಙ್ಞಾನೋಕ್ತಿಗಳು 2 : 16 (ERVKN)
ವ್ಯಭಿಚಾರಿಣಿಯು ನಿನ್ನೊಡನೆ ಸವಿಮಾತುಗಳನ್ನಾಡಿ ತನ್ನೊಡನೆ ಪಾಪ ಮಾಡುವಂತೆ ನಿನ್ನನ್ನು ಒತ್ತಾಯಿಸಬಹುದು.
ಙ್ಞಾನೋಕ್ತಿಗಳು 2 : 17 (ERVKN)
ಯೌವನಪ್ರಾಯದಲ್ಲಿ ಮದುವೆಮಾಡಿಕೊಂಡ ಅವಳು ತನ್ನ ಗಂಡನನ್ನು ಬಿಟ್ಟುಬಿಟ್ಟಿದ್ದಾಳೆ; ಮದುವೆಯಲ್ಲಿ ದೇವರ ಮುಂದೆ ಮಾಡಿದ ವಾಗ್ದಾನಗಳನ್ನು ಮೀರಿದ್ದಾಳೆ.
ಙ್ಞಾನೋಕ್ತಿಗಳು 2 : 18 (ERVKN)
ನೀನು ಅವಳ ಮನೆಯೊಳಗೆ ಹೋದರೆ, ನಾಶನದ ಕಡೆಗೆ ಮೊದಲನೆ ಹೆಜ್ಜೆ ಹಾಕುತ್ತಿರುವೆ. ನೀವು ಅವಳನ್ನು ಹಿಂಬಾಲಿಸಿದರೆ, ಅವಳು ನಿನ್ನನ್ನು ಸಮಾಧಿಗೆ ನಡೆಸುವಳು.
ಙ್ಞಾನೋಕ್ತಿಗಳು 2 : 19 (ERVKN)
ಅವಳು ಸಮಾಧಿಯಂತೆ ಇದ್ದಾಳೆ. ಅವಳ ಬಳಿಗೆ ಹೋಗುವವನು ಎಂದಿಗೂ ಹಿಂತಿರುಗಿ ಬರುವುದಿಲ್ಲ; ಅವನ ಜೀವನವು ಮೊದಲಿನಂತಿರುವುದಿಲ್ಲ. [PE][PS]
ಙ್ಞಾನೋಕ್ತಿಗಳು 2 : 20 (ERVKN)
ಆದ್ದರಿಂದ ನೀನು ಒಳ್ಳೆಯವರ ಮಾದರಿಯನ್ನು ಅನುಸರಿಸಬೇಕು. ನೀತಿವಂತರ ಮಾರ್ಗದಲ್ಲಿ ಜೀವಿಸಬೇಕು.
ಙ್ಞಾನೋಕ್ತಿಗಳು 2 : 21 (ERVKN)
ಯಥಾರ್ಥವಂತರು ಸ್ವದೇಶದಲ್ಲಿ ವಾಸಿಸುವರು. ನಿರ್ದೋಷಿಗಳು ಸ್ವದೇಶದಲ್ಲಿ ನೆಲೆಸುವರು.
ಙ್ಞಾನೋಕ್ತಿಗಳು 2 : 22 (ERVKN)
ದುಷ್ಟರಾದರೋ ಸ್ವದೇಶದಿಂದ ತೆಗೆದುಹಾಕಲ್ಪಡುವರು; ದ್ರೋಹಿಗಳು ನಿರ್ಮೂಲವಾಗುವರು. [PE]

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: