ಙ್ಞಾನೋಕ್ತಿಗಳು 24 : 1 (ERVKN)
ಕೆಡುಕರ ವಿಷಯದಲ್ಲಿ ಹೊಟ್ಟೆಕಿಚ್ಚುಪಡಬೇಡ; ಅವರೊಂದಿಗಿರಲು ಅಪೇಕ್ಷಿಸಬೇಡ.
ಙ್ಞಾನೋಕ್ತಿಗಳು 24 : 2 (ERVKN)
ಅವರು ಕೇಡು ಮಾಡಲು ತಮ್ಮ ಹೃದಯಗಳಲ್ಲಿ ಆಲೋಚಿಸಿಕೊಳ್ಳುವರು; ಅವರು ಕೇಡನ್ನೇ ಕುರಿತು ಮಾತಾಡುವರು. — 20 —
ಙ್ಞಾನೋಕ್ತಿಗಳು 24 : 3 (ERVKN)
ಒಳ್ಳೆಯ ಮನೆಯು ಜ್ಞಾನದ ಮೇಲೂ ವಿವೇಕದ ಮೇಲೂ ಕಟ್ಟಲ್ಪಟ್ಟಿರುವುದು.
ಙ್ಞಾನೋಕ್ತಿಗಳು 24 : 4 (ERVKN)
ಅದರ ಕೋಣೆಗಳು ಅಮೂಲ್ಯವಾದ ಭಂಡಾರಗಳಿಂದ ತುಂಬಿರುವುದು ಜ್ಞಾನದಿಂದಲೇ. — 21 —
ಙ್ಞಾನೋಕ್ತಿಗಳು 24 : 5 (ERVKN)
ಜ್ಞಾನವು ಮನುಷ್ಯನನ್ನು ಬಲಿಷ್ಠನನ್ನಾಗಿ ಮಾಡುವುದು. ವಿವೇಕವು ಮನುಷ್ಯನಿಗೆ ಬಲವನ್ನು ಕೊಡುತ್ತದೆ.
ಙ್ಞಾನೋಕ್ತಿಗಳು 24 : 6 (ERVKN)
ಯುದ್ಧವನ್ನು ಆರಂಭಿಸುವ ಮೊದಲೇ ಎಚ್ಚರಿಕೆಯಿಂದ ಆಲೋಚಿಸು. ಜಯವನ್ನು ಗಳಿಸಬೇಕಾದರೆ ನಿನಗೆ ಅನೇಕ ಒಳ್ಳೆಯ ಆಲೋಚನೆಗಾರರು ಅಗತ್ಯ. — 22 —
ಙ್ಞಾನೋಕ್ತಿಗಳು 24 : 7 (ERVKN)
ಮೂಢರು ಜ್ಞಾನವನ್ನು ಅರ್ಥಮಾಡಿಕೊಳ್ಳಲಾರರು; ಮುಖ್ಯವಾದ ವಿಷಯಗಳನ್ನು ಚರ್ಚಿಸುವಾಗ ಮೂಢನು ಏನೂ ಹೇಳಲಾರ. — 23 —
ಙ್ಞಾನೋಕ್ತಿಗಳು 24 : 8 (ERVKN)
ಕೇಡುಮಾಡುವವನನ್ನು ಜನರು “ಕೆಡುಕ” ಎಂದು ಕರೆಯುವರು.
ಙ್ಞಾನೋಕ್ತಿಗಳು 24 : 9 (ERVKN)
ಮೂಢನ ಆಲೋಚನೆಗಳೆಲ್ಲಾ ಪಾಪಮಯ. ದುರಾಭಿಮಾನಿಯು ಜನರಿಗೆ ಅಸಹ್ಯ. — 24 —
ಙ್ಞಾನೋಕ್ತಿಗಳು 24 : 10 (ERVKN)
ಕಷ್ಟದ ಸಮಯಗಳಲ್ಲಿ ನೀನು ಬಲಹೀನನಾಗಿದ್ದರೆ, ನೀನು ನಿಜವಾಗಿಯೂ ಬಲಹೀನ. — 25 —
ಙ್ಞಾನೋಕ್ತಿಗಳು 24 : 11 (ERVKN)
ಜನರು ಯಾರನ್ನಾದರೂ ಕೊಲ್ಲಬೇಕೆಂದಿದ್ದರೆ, ಅವನನ್ನು ಉಳಿಸಲು ಪ್ರಯತ್ನಿಸು.
ಙ್ಞಾನೋಕ್ತಿಗಳು 24 : 12 (ERVKN)
“ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು. — 26 —
ಙ್ಞಾನೋಕ್ತಿಗಳು 24 : 13 (ERVKN)
ನನ್ನ ಮಗನೇ, ಜೇನುತುಪ್ಪವನ್ನು ತಿನ್ನು, ಅದು ಒಳ್ಳೆಯದು. ಜೇನುಗೂಡಿನ ಜೇನುತುಪ್ಪ ಸಿಹಿ.
ಙ್ಞಾನೋಕ್ತಿಗಳು 24 : 14 (ERVKN)
ಅದೇರೀತಿ ಜ್ಞಾನವು ನಿನ್ನ ಆತ್ಮಕ್ಕೆ ಒಳ್ಳೆಯದು. ನೀನು ಅದನ್ನು ಕಂಡುಕೊಂಡರೆ ನಿನಗೆ ಒಳ್ಳೆಯ ಭವಿಷ್ಯವಿರುವುದು; ನಿನ್ನ ನಿರೀಕ್ಷೆ ಎಂದಿಗೂ ಕೊನೆಗೊಳ್ಳುವುದಿಲ್ಲ. — 27 —
ಙ್ಞಾನೋಕ್ತಿಗಳು 24 : 15 (ERVKN)
ಒಳ್ಳೆಯವನಿಂದ ಕದ್ದುಕೊಳ್ಳುವ ಅಥವಾ ಅವನ ಮನೆಯನ್ನೇ ತೆಗೆದುಕೊಳ್ಳುವ ಕಳ್ಳನಂತೆ ಇರಬೇಡ.
ಙ್ಞಾನೋಕ್ತಿಗಳು 24 : 16 (ERVKN)
ಒಳ್ಳೆಯವನು ಏಳುಸಲ ಬಿದ್ದರೂ ಅವನು ಮತ್ತೆ ಎದ್ದುನಿಲ್ಲುವನು. ಆದರೆ ಕೆಡುಕರು ಒಂದೇ ಆಪತ್ತಿನಿಂದ ಶಾಶ್ವತವಾಗಿ ಸೋತುಹೋಗುವರು. — 28 —
ಙ್ಞಾನೋಕ್ತಿಗಳು 24 : 17 (ERVKN)
ನಿನ್ನ ವೈರಿ ತೊಂದರೆಯಲ್ಲಿರುವಾಗ ಸಂತೋಷಪಡಬೇಡ; ಅವನು ಬೀಳುವಾಗಲೂ ಸಂತೋಷಪಡಬೇಡ.
ಙ್ಞಾನೋಕ್ತಿಗಳು 24 : 18 (ERVKN)
ಇಲ್ಲವಾದರೆ, ಯೆಹೋವನು ನಿನ್ನ ಮೇಲೆ ಕೋಪಗೊಂಡು ನಿನ್ನ ವೈರಿಯನ್ನು ದಂಡಿಸದೆ ಹೋಗಬಹುದು. — 29 —
ಙ್ಞಾನೋಕ್ತಿಗಳು 24 : 19 (ERVKN)
ಕೆಡುಕರ ಬಗ್ಗೆ ಅತಿಯಾಗಿ ಬೇಸರಗೊಳ್ಳಬೇಡ, ಅವರ ಮೇಲೆ ಹೊಟ್ಟೆಕಿಚ್ಚುಪಡಬೇಡ.
ಙ್ಞಾನೋಕ್ತಿಗಳು 24 : 20 (ERVKN)
ಆ ಕೆಡುಕರಿಗೆ ನಿರೀಕ್ಷೆಯಿಲ್ಲ. ಅವರ ಬೆಳಕು ಕತ್ತಲೆಯಾಗುವುದು. — 30 —
ಙ್ಞಾನೋಕ್ತಿಗಳು 24 : 21 (ERVKN)
ಮಗನೇ, ಯೆಹೋವನನ್ನೂ ರಾಜನನ್ನೂ ಗೌರವಿಸು. ಅವರನ್ನು ವಿರೋಧಿಸುವವರ ಜೊತೆ ಸೇರಬೇಡ.
ಙ್ಞಾನೋಕ್ತಿಗಳು 24 : 22 (ERVKN)
ಯಾಕೆಂದರೆ ಅವರು ಬೇಗನೆ ನಾಶವಾಗುವರು. ದೇವರು ಮತ್ತು ರಾಜನು ತಮ್ಮ ವೈರಿಗಳಿಗೆ ಎಷ್ಟು ಕೇಡುಮಾಡಬಲ್ಲರೆಂಬುದು ನಿನಗೆ ತಿಳಿಯದು.
ಙ್ಞಾನೋಕ್ತಿಗಳು 24 : 23 (ERVKN)
ಮತ್ತಷ್ಟು ಜ್ಞಾನೋಕ್ತಿಗಳು ಇವು ಸಹ ಜ್ಞಾನಿಗಳ ಮಾತುಗಳು: ನ್ಯಾಯಾಧಿಪತಿ ನ್ಯಾಯವಂತನಾಗಿರಬೇಕು. ಅವನು ಕೇವಲ ಪರಿಚಯದ ನಿಮಿತ್ತ ಯಾರಿಗೂ ಸಹಾಯ ಮಾಡಕೂಡದು.
ಙ್ಞಾನೋಕ್ತಿಗಳು 24 : 24 (ERVKN)
ನ್ಯಾಯಾಧೀಶನು ಅಪರಾಧಿಗೆ, “ನೀನು ನಿರಪರಾಧಿ” ಎಂದು ಹೇಳಿದರೆ, ಜನರು ನ್ಯಾಯಾಧೀಶನನ್ನು ಶಪಿಸುವರು; ಜನಾಂಗಗಳು ಅವನನ್ನು ಖಂಡಿಸುವವು.
ಙ್ಞಾನೋಕ್ತಿಗಳು 24 : 25 (ERVKN)
ಆದರೆ ನ್ಯಾಯಾಧೀಶನು ಅಪರಾಧಿಯನ್ನು ದಂಡಿಸಿದರೆ, ಜನರೆಲ್ಲರೂ ಅವನನ್ನು ಮೆಚ್ಚಿಕೊಳ್ಳುವರು; ಅವನಿಗೆ ಮಹಾ ಆಶೀರ್ವಾದ ದೊರೆಯುವುದು.
ಙ್ಞಾನೋಕ್ತಿಗಳು 24 : 26 (ERVKN)
ಯಥಾರ್ಥವಾದ ಉತ್ತರ ಜನರೆಲ್ಲರನ್ನು ಸಂತೋಷಗೊಳಿಸುವುದು; ಅದು ತುಟಿಯ ಮೇಲಿನ ಮುದ್ದಿನಂತಿದೆ.
ಙ್ಞಾನೋಕ್ತಿಗಳು 24 : 27 (ERVKN)
ಹೊಲಗಳಲ್ಲಿ ಬಿತ್ತುವ ಮೊದಲು ಮನೆಯನ್ನು ಕಟ್ಟಬೇಡ. ವಾಸಕ್ಕಾಗಿ ಮನೆಯನ್ನು ಕಟ್ಟುವ ಮೊದಲೇ ನೀನು ಬೇಸಾಯ ಮಾಡಲು ಸಿದ್ಧನಾಗಿರುವಿಯೋ ಎಂಬುದನ್ನು ಖಾತರಿಪಡಿಸಿಕೊ.
ಙ್ಞಾನೋಕ್ತಿಗಳು 24 : 28 (ERVKN)
ಬೇರೊಬ್ಬನ ವಿರೋಧವಾಗಿ ಸಕಾರಣವಿಲ್ಲದೆ ಸಾಕ್ಷಿ ಹೇಳಬೇಡ, ಸುಳ್ಳನ್ನೂ ಹೇಳಬೇಡ.
ಙ್ಞಾನೋಕ್ತಿಗಳು 24 : 29 (ERVKN)
“ಅವನು ನನಗೆ ಕೇಡುಮಾಡಿದನು. ಆದ್ದರಿಂದ ನಾನೂ ಅವನಿಗೆ ಕೇಡುಮಾಡುವೆ. ಅವನು ಮಾಡಿದ ಕೇಡುಗಳಿಗಾಗಿ ಸೇಡು ತೀರಿಸಿಕೊಳ್ಳುವೆ” ಎಂದು ಹೇಳಬೇಡ.
ಙ್ಞಾನೋಕ್ತಿಗಳು 24 : 30 (ERVKN)
ಸೋಮಾರಿಯ ಹೊಲದ ಸಮೀಪದಲ್ಲೂ ಅಜ್ಞಾನಿಯ ದ್ರಾಕ್ಷಿತೋಟದ ಬಳಿಯಲ್ಲೂ ನಡೆದುಹೋದೆನು.
ಙ್ಞಾನೋಕ್ತಿಗಳು 24 : 31 (ERVKN)
ಆ ಹೊಲಗಳಲ್ಲಿ ಮುಳ್ಳುಗಿಡಗಳೂ ಉಪಯೋಗವಿಲ್ಲದ ಸಸಿಗಳೂ ಬೆಳೆಯುತ್ತಿದ್ದವು. ಹೊಲಗಳ ಸುತ್ತಲೂ ಇದ್ದ ಗೋಡೆ ಒಡೆದುಹೋಗಿತ್ತು; ಕುಸಿದು ಬೀಳುತ್ತಿತ್ತು.
ಙ್ಞಾನೋಕ್ತಿಗಳು 24 : 32 (ERVKN)
ಅದನ್ನು ನೋಡಿ, ಆಲೋಚಿಸಿದೆ; ಒಂದು ಪಾಠವನ್ನು ಕಲಿತುಕೊಂಡೆ;
ಙ್ಞಾನೋಕ್ತಿಗಳು 24 : 33 (ERVKN)
ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ವಿಶ್ರಾಂತಿ, ಇನ್ನು ಸ್ವಲ್ಪ ಕೈಮುದುರಿಕೊಳ್ಳುವೆ, ಮಧ್ಯಾಹ್ನ ಇನ್ನು ಸ್ವಲ್ಪ ನಿದ್ರೆ ಮಾಡುವೆ ಎನ್ನುವೆಯಾ?
ಙ್ಞಾನೋಕ್ತಿಗಳು 24 : 34 (ERVKN)
ಇವು ನಿನ್ನನ್ನು ಬೇಗನೆ ಬಡವನನ್ನಾಗಿ ಮಾಡಿ ಬರಿದು ಮಾಡುತ್ತದೆ; ಇದ್ದಕ್ಕಿದ್ದಂತೆ ಬಂದು ಎಲ್ಲವನ್ನು ದೋಚಿಕೊಂಡು ಹೋಗುವ ಕಳ್ಳನಂತಿವೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34