ಙ್ಞಾನೋಕ್ತಿಗಳು 27 : 1 (ERVKN)
ಭವಿಷ್ಯತ್ತಿನ ಕುರಿತು ಜಂಬಪಡಬೇಡ. ನಾಳೆ ಏನಾಗುವುದೋ ನಿನಗೆ ತಿಳಿಯದು.
ಙ್ಞಾನೋಕ್ತಿಗಳು 27 : 2 (ERVKN)
ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ; ಬೇಕಿದ್ದರೆ ಬೇರೆಯವರೇ ನಿನ್ನನ್ನು ಹೊಗಳಲಿ.
ಙ್ಞಾನೋಕ್ತಿಗಳು 27 : 3 (ERVKN)
ಕಲ್ಲು ಭಾರ, ಮರಳು ಭಾರ, ಮೂಢನಿಂದಾಗುವ ಕೇಡು ಇವೆರಡಕ್ಕಿಂತಲೂ ಬಹು ಭಾರ.
ಙ್ಞಾನೋಕ್ತಿಗಳು 27 : 4 (ERVKN)
ಕೋಪವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ.
ಙ್ಞಾನೋಕ್ತಿಗಳು 27 : 5 (ERVKN)
ಬಹಿರಂಗವಾದ ಟೀಕೆ ಗುಟ್ಟಾದ ಪ್ರೀತಿಗಿಂತಲೂ ಉತ್ತಮ.
ಙ್ಞಾನೋಕ್ತಿಗಳು 27 : 6 (ERVKN)
ಸ್ನೇಹಿತನಿಂದಾಗುವ ಗಾಯಗಳು ಸಹಾಯಕರ. ಶತ್ರುವಿನ ಮುತ್ತುಗಳಾದರೋ ಮೋಸಕರ.
ಙ್ಞಾನೋಕ್ತಿಗಳು 27 : 7 (ERVKN)
ಹೊಟ್ಟೆ ತುಂಬಿದವನು ಜೇನುತುಪ್ಪವನ್ನೂ ತಿರಸ್ಕರಿಸುವನು; ಹಸಿವೆಗೊಂಡಿರುವವನಿಗೋ ಕಹಿಯೂ ಸಿಹಿ.
ಙ್ಞಾನೋಕ್ತಿಗಳು 27 : 8 (ERVKN)
ಮನೆಯಿಂದ ದೂರವಿರುವ ಗಂಡಸು ಗೂಡಿನಿಂದ ದೂರವಿರುವ ಪಕ್ಷಿಯಂತಿರುವನು.
ಙ್ಞಾನೋಕ್ತಿಗಳು 27 : 9 (ERVKN)
ಪರಿಮಳತೈಲ ಮತ್ತು ಧೂಪ ನಿನ್ನನ್ನು ಸಂತೋಷಗೊಳಿಸುತ್ತವೆ; ಆದರೆ ಸ್ನೇಹಿತನ ಮಧುರವಾದ ಉಪದೇಶದಿಂದ ಸ್ವಂತ ನಿರ್ಧಾರಕ್ಕಿಂತಲೂ ಹೆಚ್ಚು ಆನಂದವಾಗುವುದು.
ಙ್ಞಾನೋಕ್ತಿಗಳು 27 : 10 (ERVKN)
ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ.
ಙ್ಞಾನೋಕ್ತಿಗಳು 27 : 11 (ERVKN)
ನನ್ನ ಮಗನೇ, ನೀನು ಜ್ಞಾನಿಯಾಗಿದ್ದರೆ ನನಗೆ ಸಂತೋಷ ಆಗ, ನನ್ನನ್ನು ಟೀಕಿಸುವವನಿಗೆ ಉತ್ತರ ಕೊಡಲು ನಾನು ಶಕ್ತನಾಗುವೆ.
ಙ್ಞಾನೋಕ್ತಿಗಳು 27 : 12 (ERVKN)
ಜ್ಞಾನಿಯು ಕೇಡನ್ನು ಕಂಡು ಆ ದಾರಿಯನ್ನೇ ಬಿಟ್ಟು ಹೋಗುವನು. ಮೂಢನಾದರೋ ಕೇಡಿಗೆ ನೇರವಾಗಿ ನಡೆದು ಕಷ್ಟಕ್ಕೆ ಗುರಿಯಾಗುವನು.
ಙ್ಞಾನೋಕ್ತಿಗಳು 27 : 13 (ERVKN)
ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾದರೆ, ನಿನ್ನ ಅಂಗಿಯನ್ನೂ ಕಳೆದುಕೊಳ್ಳುವೆ.
ಙ್ಞಾನೋಕ್ತಿಗಳು 27 : 14 (ERVKN)
ಹೊತ್ತಾರೆಯಲ್ಲಿ ನಿನ್ನ ನೆರೆಯವನಿಗೆ, “ನಮಸ್ಕಾರ!” ಎಂದು ಕೂಗಿ ಎಬ್ಬಿಸಬೇಡ. ಅವನಿಗೆ ಅದು ಆಶೀರ್ವಾದದಂತೆ ಕಾಣದೆ ಶಾಪದಂತೆಯೇ ಕಾಣುವುದು.
ಙ್ಞಾನೋಕ್ತಿಗಳು 27 : 15 (ERVKN)
ವಾದವನ್ನೇ ಇಚ್ಛಿಸುವ ಹೆಂಡತಿ ಮಳೆ ದಿನದಲ್ಲಿ ಸೋರುತ್ತಲೇ ಇರುವ ಮೇಲ್ಛಾವಣಿಯಂತಿರುವಳು.
ಙ್ಞಾನೋಕ್ತಿಗಳು 27 : 16 (ERVKN)
ಆಕೆಯ ಬಾಯನ್ನು ಮುಚ್ಚಿಸಲು ಮಾಡುವ ಪ್ರಯತ್ನ ಗಾಳಿಯನ್ನು ನಿಲ್ಲಿಸಲು ಪ್ರಯತ್ನಿಸಿದಂತೆಯೂ ಅಂಗೈಯಲಿ ಎಣ್ಣೆಯನ್ನು ಹಿಡಿದುಕೊಳ್ಳಲು ಪ್ರಯತ್ನಿಸಿದಂತೆಯೂ ಇದೆ.
ಙ್ಞಾನೋಕ್ತಿಗಳು 27 : 17 (ERVKN)
ಕಬ್ಬಿಣವು ಕಬ್ಬಿಣವನ್ನು ಹರಿತಗೊಳಿಸುವುದು; ಅಂತೆಯೇ ಸ್ನೇಹಿತನು ಸ್ನೇಹಿತನನ್ನು ಉತ್ತಮಪಡಿಸುವನು.
ಙ್ಞಾನೋಕ್ತಿಗಳು 27 : 18 (ERVKN)
ಅಂಜೂರದ ಮರಗಳನ್ನು ನೋಡಿಕೊಳ್ಳುವವನು ಅವುಗಳ ಹಣ್ಣನ್ನು ತಿನ್ನುವನು; ಯಜಮಾನನನ್ನು ನೋಡಿಕೊಳ್ಳುವವನು ಪ್ರತಿಫಲವನ್ನು ಹೊಂದುವನು.
ಙ್ಞಾನೋಕ್ತಿಗಳು 27 : 19 (ERVKN)
ನೀರನ್ನು ನೋಡುವವನಿಗೆ ಅವನ ಮುಖವು ಕಾಣುವುದು. ಅಂತೆಯೇ ಹೃದಯವು ವ್ಯಕ್ತಿಯ ನಿಜರೂಪವನ್ನು ತೋರುವುದು.
ಙ್ಞಾನೋಕ್ತಿಗಳು 27 : 20 (ERVKN)
ಮರಣಕ್ಕಾಗಲಿ ಸಮಾಧಿಗಾಗಲಿ ತೃಪ್ತಿಯೇ ಇಲ್ಲ. ಅಂತೆಯೇ ಮನುಷ್ಯನ ಬಯಕೆಗಳಿಗೂ ಕೊನೆಯಿಲ್ಲ.
ಙ್ಞಾನೋಕ್ತಿಗಳು 27 : 21 (ERVKN)
ಚಿನ್ನವಾಗಲಿ ಬೆಳ್ಳಿಯಾಗಲಿ ಬೆಂಕಿಯಿಂದ ಶುದ್ಧೀಕರಿಸಲ್ಪಡುವಂತೆಯೇ ಮನುಷ್ಯನು ಜನರಿಂದ ಬರುವ ಹೊಗಳಿಕೆಯಿಂದ ಪರೀಕ್ಷಿತನಾಗುವನು.
ಙ್ಞಾನೋಕ್ತಿಗಳು 27 : 22 (ERVKN)
ನೀನು ಮೂಢನನ್ನು ಅರೆದು ಪುಡಿಪುಡಿ ಮಾಡಿದರೂ ಅವನ ಮೂಢತನವನ್ನು ತೊಲಗಿಸಲಾರೆ.
ಙ್ಞಾನೋಕ್ತಿಗಳು 27 : 23 (ERVKN)
ನಿನ್ನ ಕುರಿಗಳನ್ನೂ ಪಶುಗಳನ್ನೂ ಎಚ್ಚರಿಕೆಯಿಂದ ಕಾಯ್ದುಕೊಂಡಿರು; ನಿನ್ನಿಂದಾದಷ್ಟು ಮಟ್ಟಿಗೆ ಅವುಗಳ ಮೇಲೆ ಗಮನವಿಟ್ಟು ನೋಡಿಕೊ.
ಙ್ಞಾನೋಕ್ತಿಗಳು 27 : 24 (ERVKN)
ಐಶ್ವರ್ಯ ಸದಾಕಾಲ ಇರುವಂಥದ್ದಲ್ಲ. ಅಂತೆಯೇ ಸಾಮ್ರಾಜ್ಯಗಳು ಶಾಶ್ವತವಾಗಿರುವುದಿಲ್ಲ.
ಙ್ಞಾನೋಕ್ತಿಗಳು 27 : 25 (ERVKN)
ಹುಲ್ಲನ್ನು ಕತ್ತರಿಸಿದ ಮೇಲೆ ಹೊಸಹುಲ್ಲು ಬೆಳೆಯಲಾರಂಭಿಸುವುದು; ಒಣಹುಲ್ಲನ್ನು ಬೆಟ್ಟಗಳ ಮೇಲೆ ಸಂಗ್ರಹಿಸಲಾಗುವುದು.
ಙ್ಞಾನೋಕ್ತಿಗಳು 27 : 26 (ERVKN)
ಬಳಿಕ ನಿನ್ನ ಕುರಿಗಳ ಉಣ್ಣೆಯಿಂದ ಬಟ್ಟೆಗಳನ್ನು ತಯಾರಿಸಬಹುದು. ನಿನ್ನ ಆಡುಗಳನ್ನು ಮಾರಿ ಬಂದ ಹಣದಿಂದ ಜಮೀನನ್ನು ಕೊಂಡುಕೊಳ್ಳಬಹುದು.
ಙ್ಞಾನೋಕ್ತಿಗಳು 27 : 27 (ERVKN)
ನಿನ್ನ ಇನ್ನಿತರ ಆಡುಗಳು ನಿನಗೆ ಬೇಕಾದಷ್ಟು ಹಾಲನ್ನು ಕೊಡುತ್ತವೆ. ಅದರಿಂದ ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸೇವಕಿಯರಿಗೂ ಬೇಕಾದಷ್ಟು ಆಹಾರವಿರುವುದು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27