ಙ್ಞಾನೋಕ್ತಿಗಳು 28 : 1 (ERVKN)
ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿ ಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು. [PE][PS]
ಙ್ಞಾನೋಕ್ತಿಗಳು 28 : 2 (ERVKN)
ದೇಶದಲ್ಲಿ ದಂಗೆಯೇಳುತ್ತಲೇ ಇದ್ದರೆ ಅಧಿಪತಿಗಳು ಬದಲಾಗುತ್ತಲೇ ಇರುವರು. ಜ್ಞಾನಿಯೂ ಅನುಭವಸ್ಥನೂ ಆಗಿರುವ ಅಧಿಪತಿಯ ದೇಶ ಸ್ಥಿರವಾಗಿರುವುದು. [PE][PS]
ಙ್ಞಾನೋಕ್ತಿಗಳು 28 : 3 (ERVKN)
ಬಡಜನರನ್ನು ದರೋಡೆಮಾಡುವ ಬಡವನು ಬೆಳೆಯನ್ನು ನಾಶಮಾಡುವ ಬಿರುಸಾದ ಮಳೆಯಂತಿರುವನು. [PE][PS]
ಙ್ಞಾನೋಕ್ತಿಗಳು 28 : 4 (ERVKN)
ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗದಿದ್ದರೆ ಕೆಡುಕರ ಪರವಾಗಿರುವೆ. ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗಿದ್ದರೆ ಕೆಡುಕರಿಗೆ ವಿರೋಧವಾಗಿರುವೆ. [PE][PS]
ಙ್ಞಾನೋಕ್ತಿಗಳು 28 : 5 (ERVKN)
ಕೆಡುಕರು ನ್ಯಾಯವನ್ನು ಅರ್ಥಮಾಡಿಕೊಳ್ಳಲಾರರು; ಯೆಹೋವನನ್ನು ಪ್ರೀತಿಸುವ ಜನರಾದರೋ ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವರು. [PE][PS]
ಙ್ಞಾನೋಕ್ತಿಗಳು 28 : 6 (ERVKN)
ಮೋಸದಿಂದ ಐಶ್ವರ್ಯವಂತರಾಗುವುದಕ್ಕಿಂತ ಯಥಾರ್ಥವಾಗಿದ್ದು ಬಡವರಾಗಿರುವುದೇ ಮೇಲು. [PE][PS]
ಙ್ಞಾನೋಕ್ತಿಗಳು 28 : 7 (ERVKN)
ನ್ಯಾಯಪ್ರಮಾಣಕ್ಕೆ ವಿಧೇಯನಾಗುವವನು ಜಾಣ. ಅಯೋಗ್ಯರ ಸ್ನೇಹಿತನು ತನ್ನ ತಂದೆಗೇ ಅವಮಾನ ತರುವನು. [PE][PS]
ಙ್ಞಾನೋಕ್ತಿಗಳು 28 : 8 (ERVKN)
ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದು ಹೋಗುವುದು; ಬಡವರಿಗೆ ದಯೆ ತೋರುವವನಿಗೆ ಅದು ದೊರೆಯುವುದು. [PE][PS]
ಙ್ಞಾನೋಕ್ತಿಗಳು 28 : 9 (ERVKN)
ದೇವರ ಉಪದೇಶವನ್ನು ತಿರಸ್ಕರಿಸುವವನ ಪ್ರಾರ್ಥನೆಯನ್ನು ದೇವರೂ ತಿರಸ್ಕರಿಸುವನು. [PE][PS]
ಙ್ಞಾನೋಕ್ತಿಗಳು 28 : 10 (ERVKN)
ಯಥಾರ್ಥವಂತರನ್ನು ದಾರಿತಪ್ಪಿಸಿ ಅಪಾಯದ ಮಾರ್ಗದಲ್ಲಿ ನಡೆಸುವವನು ತಾನು ತೋಡಿದ ಗುಂಡಿಗೆ ತಾನೇ ಬೀಳುವನು. [PE][PS]
ಙ್ಞಾನೋಕ್ತಿಗಳು 28 : 11 (ERVKN)
ಐಶ್ವರ್ಯವಂತನು ತಾನೇ ಬುದ್ಧಿವಂತನೆಂದು ಭಾವಿಸುತ್ತಾನೆ. ವಿವೇಕಿಯಾದ ಬಡವನಾದರೊ ಸತ್ಯವನ್ನು ಕಾಣಬಲ್ಲನು. [PE][PS]
ಙ್ಞಾನೋಕ್ತಿಗಳು 28 : 12 (ERVKN)
ಒಳ್ಳೆಯವರು ನಾಯಕರಾದಾಗ ಎಲ್ಲರಿಗೂ ಸಂತೋಷ. ಆದರೆ ಕೆಡುಕನು ಅಧಿಪತಿಯಾದಾಗ ಎಲ್ಲರೂ ಅಡಗಿಕೊಳ್ಳುವರು. [PE][PS]
ಙ್ಞಾನೋಕ್ತಿಗಳು 28 : 13 (ERVKN)
ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು. [PE][PS]
ಙ್ಞಾನೋಕ್ತಿಗಳು 28 : 14 (ERVKN)
ಕೇಡನ್ನು ಮಾಡಲು ಭಯಪಡುವವನು ಆಶೀರ್ವಾದ ಹೊಂದುವನು. ಆದರೆ ಮೊಂಡನು ಆಪತ್ತಿಗೆ ಸಿಕ್ಕಿಬೀಳುವನು. [PE][PS]
ಙ್ಞಾನೋಕ್ತಿಗಳು 28 : 15 (ERVKN)
ಬಲಹೀನರನ್ನು ಆಳುವ ಕೆಡುಕನು ಗರ್ಜಿಸುವ ಸಿಂಹದಂತಿರುವನು; ಮೇಲೆರಗಲಿರುವ ಕರಡಿಯಂತಿರುವನು. [PE][PS]
ಙ್ಞಾನೋಕ್ತಿಗಳು 28 : 16 (ERVKN)
ವಿವೇಕವಿಲ್ಲದ ಅಧಿಪತಿ ತನ್ನ ಅಧೀನದಲ್ಲಿರುವವರಿಗೆ ಕೇಡುಮಾಡುವನು. ಅನ್ಯಾಯದ ಹಣವನ್ನು ತೆಗೆದುಕೊಳ್ಳದ ಅಧಿಪತಿ ಬಹುಕಾಲ ಆಳುವನು. [PE][PS]
ಙ್ಞಾನೋಕ್ತಿಗಳು 28 : 17 (ERVKN)
ಕೊಲೆಮಾಡಿದ ಅಪರಾಧಿಯು ತನ್ನ ಸಮಾಧಿಗೆ ಓಡಿಹೋಗಲಿ. ಅವನಿಗೆ ಸಹಾಯಮಾಡಬೇಡ. [PE][PS]
ಙ್ಞಾನೋಕ್ತಿಗಳು 28 : 18 (ERVKN)
ಒಳ್ಳೆಯವನು ಕ್ಷೇಮವಾಗಿರುವನು; ಕೆಡುಕನಾದರೋ ಇದ್ದಕ್ಕಿದ್ದಂತೆ ಹಾಳಾಗುವನು. [PE][PS]
ಙ್ಞಾನೋಕ್ತಿಗಳು 28 : 19 (ERVKN)
ಕಷ್ಟಪಟ್ಟು ದುಡಿಯುವವನಿಗೆ ಬೇಕಾದಷ್ಟು ಆಹಾರವಿರುವುದು. ನನಸಾಗದ ಕನಸುಗಳನ್ನೇ ಆಲೋಚಿಸಿಕೊಂಡಿರುವವನು ಬಡವನಾಗಿಯೇ ಇರುವನು. [PE][PS]
ಙ್ಞಾನೋಕ್ತಿಗಳು 28 : 20 (ERVKN)
ನಂಬಿಗಸ್ತನು ಬಹಳವಾಗಿ ಆಶೀರ್ವದಿಸಲ್ಪಡುವನು. ಐಶ್ವರ್ಯವಂತನಾಗುವುದಕ್ಕಾಗಿಯೇ ಪ್ರಯತ್ನಿಸುವವನು ದಂಡನೆ ಹೊಂದುವನು. [PE][PS]
ಙ್ಞಾನೋಕ್ತಿಗಳು 28 : 21 (ERVKN)
ಪಕ್ಷಪಾತ ತಪ್ಪು. ಕೆಲವರಾದರೋ ಒಂದು ತುಂಡು ರೊಟ್ಟಿಗಾಗಿಯೂ ತಪ್ಪು ಮಾಡುವರು. [PE][PS]
ಙ್ಞಾನೋಕ್ತಿಗಳು 28 : 22 (ERVKN)
ಜಿಪುಣನು ಐಶ್ವರ್ಯವಂತನಾಗಲು ಆತುರಪಡುವನು: ಆದರೆ ತಾನು ಬೇಗನೆ ಬಡವನಾಗಲಿರುವುದನ್ನು ಅವನು ಗ್ರಹಿಸಿಕೊಳ್ಳಲಾರನು. [PE][PS]
ಙ್ಞಾನೋಕ್ತಿಗಳು 28 : 23 (ERVKN)
ಗದರಿಸುವವನು ಸ್ವಲ್ಪಕಾಲದ ನಂತರ ಮುಖಸ್ತುತಿ ಮಾಡುವವನಿಗಿಂತಲೂ ಹೆಚ್ಚಾಗಿ ಗೌರವಿಸಲ್ಪಡುವನು. [PE][PS]
ಙ್ಞಾನೋಕ್ತಿಗಳು 28 : 24 (ERVKN)
ಕೆಲವರು ತಮ್ಮ ತಂದೆತಾಯಿಗಳಿಂದ ಕದ್ದುಕೊಂಡು, “ಅದು ತಪ್ಪಲ್ಲ” ಎಂದು ಹೇಳುವರು. ಆದರೆ ಆ ವ್ಯಕ್ತಿಯು ಮನೆಯೊಳಗೆ ನುಗ್ಗಿ ಸರ್ವಸ್ವವನ್ನು ನಾಶಮಾಡುವ ವ್ಯಕ್ತಿಯಂತೆಯೇ ಕೆಟ್ಟವನಾಗಿದ್ದಾನೆ. [PE][PS]
ಙ್ಞಾನೋಕ್ತಿಗಳು 28 : 25 (ERVKN)
ದುರಾಶೆಯುಳ್ಳವನು ಜಗಳಗಳನ್ನು ಎಬ್ಬಿಸುತ್ತಾನೆ. ಯೆಹೋವನಲ್ಲಿ ಭರವಸೆ ಇಡುವವನಾದರೋ ಅಭಿವೃದ್ಧಿ ಹೊಂದುವನು. [PE][PS]
ಙ್ಞಾನೋಕ್ತಿಗಳು 28 : 26 (ERVKN)
ಸ್ವಂತ ಆಲೋಚನೆಯ ಮೇಲೆ ಭರವಸೆ ಇಡುವವನು ಮೂರ್ಖನಾಗಿದ್ದಾನೆ. ಜ್ಞಾನಮಾರ್ಗದಲ್ಲಿ ನಡೆಯುವವನು ಸುರಕ್ಷಿತನಾಗಿರುವನು. [PE][PS]
ಙ್ಞಾನೋಕ್ತಿಗಳು 28 : 27 (ERVKN)
ಬಡವರಿಗೆ ಕೊಡುವವನು ತನಗೆ ಅಗತ್ಯವಾದ ಪ್ರತಿಯೊಂದನ್ನೂ ಹೊಂದಿಕೊಳ್ಳುವನು. ಬಡವರಿಗೆ ಸಹಾಯಮಾಡದವನಿಗೆ ಅನೇಕ ಶಾಪಗಳು ಬರುತ್ತವೆ. [PE][PS]
ಙ್ಞಾನೋಕ್ತಿಗಳು 28 : 28 (ERVKN)
ಕೆಡುಕನು ಅಧಿಕಾರಕ್ಕೆ ಬಂದರೆ, ಜನರೆಲ್ಲರೂ ಅಡಗಿಕೊಳ್ಳುವರು. ಕೆಡುಕನು ಸೋತುಹೋದಾಗ ಒಳ್ಳೆಯವರು ಮತ್ತೆ ಆಳುವರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28

BG:

Opacity:

Color:


Size:


Font: