ಙ್ಞಾನೋಕ್ತಿಗಳು 3 : 1 (ERVKN)
ಜ್ಞಾನದ ಆಶೀರ್ವಾದಗಳು ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೊ.
ಙ್ಞಾನೋಕ್ತಿಗಳು 3 : 2 (ERVKN)
ಅವು ನಿನಗೆ ದೀರ್ಘಾಯುಷ್ಯವನ್ನು ನೀಡಿ ಸಂತೋಷ ಸಮಾಧಾನಗಳಿಂದ ಕೂಡಿದ ಜೀವಿತವನ್ನು ಕೊಡುತ್ತವೆ.
ಙ್ಞಾನೋಕ್ತಿಗಳು 3 : 3 (ERVKN)
ಪ್ರೀತಿಯೂ ನಂಬಿಗಸ್ತಿಕೆಯೂ ನಿನ್ನನ್ನು ಬಿಟ್ಟು ಹೋಗದಿರಲಿ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೊ; ನಿನ್ನ ಹೃದಯದ ಮೇಲೆ ಬರೆದುಕೊ.
ಙ್ಞಾನೋಕ್ತಿಗಳು 3 : 4 (ERVKN)
ಆಗ ನೀನು ದೇವರಿಂದಲೂ ಮನುಷ್ಯರಿಂದಲೂ ಮೆಚ್ಚಿಕೆಯನ್ನು ಮತ್ತು ಒಳ್ಳೆಯ ಹೆಸರನ್ನು ಸಂಪಾದಿಸಿಕೊಳ್ಳುವೆ.
ಙ್ಞಾನೋಕ್ತಿಗಳು 3 : 5 (ERVKN)
ಯೆಹೋವನಲ್ಲಿ ಸಂಪೂರ್ಣವಾಗಿ ಭರವಸೆ ಇಡು. ನಿನ್ನ ಸ್ವಂತ ಜ್ಞಾನವನ್ನು ಅವಲಂಬಿಸಬೇಡ.
ಙ್ಞಾನೋಕ್ತಿಗಳು 3 : 6 (ERVKN)
ನಿನ್ನ ಎಲ್ಲಾ ಕಾರ್ಯಗಳಲ್ಲಿ ಆತನನ್ನು ಜ್ಞಾಪಿಸಿಕೊ. ಆಗ ಆತನು ನಿನಗೆ ಸಹಾಯ ಮಾಡುವನು.
ಙ್ಞಾನೋಕ್ತಿಗಳು 3 : 7 (ERVKN)
ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು.
ಙ್ಞಾನೋಕ್ತಿಗಳು 3 : 8 (ERVKN)
ನೀನು ಹೀಗೆ ಮಾಡುವುದಾದರೆ, ಅದು ನಿನ್ನ ದೇಹಕ್ಕೆ ಒಳ್ಳೆಯ ಆರೋಗ್ಯವನ್ನೂ ನಿನ್ನ ಎಲುಬುಗಳಿಗೆ ಹೊಸ ಶಕ್ತಿಯನ್ನೂ ಕೊಡುವುದು.
ಙ್ಞಾನೋಕ್ತಿಗಳು 3 : 9 (ERVKN)
ನಿನಗೆ ಬರುವ ಆದಾಯದಿಂದಲೂ ಬೆಳೆಯ ಪ್ರಥಮ ಫಲದಿಂದಲೂ ಯೆಹೋವನನ್ನು ಸನ್ಮಾನಿಸು.
ಙ್ಞಾನೋಕ್ತಿಗಳು 3 : 10 (ERVKN)
ಆಗ ನಿನ್ನ ಕಣಜಗಳು ದವಸಧಾನ್ಯಗಳಿಂದ ತುಂಬಿರುತ್ತವೆ. ನಿನ್ನ ದ್ರಾಕ್ಷಾರಸದ ತೊಟ್ಟಿಗಳು ತುಂಬಿತುಳುಕುತ್ತವೆ.
ಙ್ಞಾನೋಕ್ತಿಗಳು 3 : 11 (ERVKN)
ನನ್ನ ಮಗನೇ, ಯೆಹೋವನು ನಿನ್ನನ್ನು ಶಿಕ್ಷಿಸುವಾಗ ಕೋಪಗೊಳ್ಳಬೇಡ. ಆತನು ಗದರಿಸುವಾಗ ಬೇಸರಪಡಬೇಡ.
ಙ್ಞಾನೋಕ್ತಿಗಳು 3 : 12 (ERVKN)
ತಂದೆಯು ತನ್ನ ಮಗನನ್ನು ಗದರಿಸುವಂತೆಯೇ ಯೆಹೋವನು ತಾನು ಪ್ರೀತಿಸುವವರನ್ನು ಶಿಕ್ಷಿಸುತ್ತಾನೆ.
ಙ್ಞಾನೋಕ್ತಿಗಳು 3 : 13 (ERVKN)
ಜ್ಞಾನವನ್ನು ಕಂಡುಕೊಂಡು ವಿವೇಕವನ್ನು ಸಂಪಾದಿಸಿಕೊಳ್ಳುವವನೇ ಭಾಗ್ಯವಂತನು.
ಙ್ಞಾನೋಕ್ತಿಗಳು 3 : 14 (ERVKN)
ಜ್ಞಾನವು ಬೆಳ್ಳಿಗಿಂತಲೂ ಲಾಭದಾಯಕ. ಅದರ ಆದಾಯವು ಬಂಗಾರಕ್ಕಿಂತಲೂ ಅಧಿಕ.
ಙ್ಞಾನೋಕ್ತಿಗಳು 3 : 15 (ERVKN)
ಜ್ಞಾನವು ರತ್ನಕ್ಕಿಂತಲೂ ಅಮೂಲ್ಯವಾದದ್ದು. ನಿನ್ನ ಇಷ್ಟ ವಸ್ತುಗಳಲ್ಲಿ ಯಾವುದೂ ಅದಕ್ಕೆ ಸಮವಿಲ್ಲ.
ಙ್ಞಾನೋಕ್ತಿಗಳು 3 : 16 (ERVKN)
ಜ್ಞಾನವೆಂಬಾಕೆಯ ಬಲಗೈಯಿಂದ ದೀರ್ಘಾಯುಷ್ಯವೂ ಎಡಗೈಯಿಂದ ಐಶ್ವರ್ಯವೂ ಘನತೆಯೂ ಬರುವವು.
ಙ್ಞಾನೋಕ್ತಿಗಳು 3 : 17 (ERVKN)
ಜ್ಞಾನವು ನಿನ್ನ ಜೀವನವನ್ನು ಸುಖಕರವನ್ನಾಗಿ ಮಾಡುತ್ತದೆ; ಸಮಾಧಾನವನ್ನು ಬರಮಾಡುತ್ತದೆ.
ಙ್ಞಾನೋಕ್ತಿಗಳು 3 : 18 (ERVKN)
ಜ್ಞಾನವು ತನ್ನನ್ನು ಅವಲಂಬಿಸಿಕೊಳ್ಳುವವರಿಗೆ ಜೀವದಾಯಕ ಮರದಂತಿದೆ. ಅದನ್ನು ಹೊಂದಿರುವವರು ಧನ್ಯರಾಗಿದ್ದಾರೆ.
ಙ್ಞಾನೋಕ್ತಿಗಳು 3 : 19 (ERVKN)
ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸೃಷ್ಟಿಸಿದನು. ಆತನು ವಿವೇಕದ ಮೂಲಕ ಆಕಾಶವನ್ನು ಸೃಷ್ಟಿಸಿದನು.
ಙ್ಞಾನೋಕ್ತಿಗಳು 3 : 20 (ERVKN)
ಯೆಹೋವನು ತನ್ನ ತಿಳುವಳಿಕೆಯಿಂದ ಸಮುದ್ರಗಳನ್ನು ವಿಭಜಿಸಿದನು. ಮೋಡವು ಮಳೆಸುರಿಸುವುದಕ್ಕೆ ಆತನ ತಿಳುವಳಿಕೆಯೇ ಕಾರಣ.
ಙ್ಞಾನೋಕ್ತಿಗಳು 3 : 21 (ERVKN)
ನನ್ನ ಮಗನೇ, ಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ. ನಿನ್ನ ದೃಷ್ಟಿಯು ಅವುಗಳ ಮೇಲೇ ಇರಲಿ.
ಙ್ಞಾನೋಕ್ತಿಗಳು 3 : 22 (ERVKN)
ಜ್ಞಾನವಿವೇಕಗಳು ನಿನಗೆ ಜೀವವನ್ನೂ ನಿನ್ನ ಜೀವಿತಕ್ಕೆ ಸೌಂದರ್ಯವನ್ನೂ ನೀಡುತ್ತವೆ.
ಙ್ಞಾನೋಕ್ತಿಗಳು 3 : 23 (ERVKN)
ಆಗ ನೀನು ಎಡವಿಬೀಳದೆ ಸುರಕ್ಷಿತವಾಗಿ ನಡೆಯುವೆ.
ಙ್ಞಾನೋಕ್ತಿಗಳು 3 : 24 (ERVKN)
ಆಗ ನೀನು ನಿರ್ಭಯದಿಂದ ಮಲಗಿಕೊಂಡು ಸುಖವಾಗಿ ನಿದ್ರಿಸುವೆ.
ಙ್ಞಾನೋಕ್ತಿಗಳು 3 : 25 (ERVKN)
ದುಷ್ಟರ ಮೇಲೆ ಇದ್ದಕ್ಕಿದ್ದಂತೆ ಬರುವ ಅಪಾಯಕ್ಕಾಗಲಿ ನಾಶನಕ್ಕಾಗಲಿ ಹೆದರಿಕೊಳ್ಳಬೇಡ.
ಙ್ಞಾನೋಕ್ತಿಗಳು 3 : 26 (ERVKN)
ಯೆಹೋವನು ನಿನ್ನೊಂದಿಗಿದ್ದಾನೆ. ನೀನು ಬಲೆಗೆ ಸಿಕ್ಕಿಬೀಳದಂತೆ ಆತನು ನಿನ್ನನ್ನು ಕಾಪಾಡುತ್ತಾನೆ.
ಙ್ಞಾನೋಕ್ತಿಗಳು 3 : 27 (ERVKN)
ನಿನಗೆ ಸಾಧ್ಯವಾದಾಗಲೆಲ್ಲಾ ಉಪಕಾರಮಾಡು.
ಙ್ಞಾನೋಕ್ತಿಗಳು 3 : 28 (ERVKN)
ನಿನ್ನ ನೆರೆಯವನಿಗೆ ಕೊಡತಕ್ಕದ್ದು ನಿನ್ನಲ್ಲಿರುವಾಗ, “ನಾಳೆ ಬಾ, ಕೊಡುತ್ತೇನೆ” ಎಂದು ಹೇಳಬೇಡ.
ಙ್ಞಾನೋಕ್ತಿಗಳು 3 : 29 (ERVKN)
ನಿನ್ನ ನೆರೆಯವನಿಗೆ ಕೇಡನ್ನು ಕಲ್ಪಿಸಬೇಡ. ನಿನ್ನ ಸುರಕ್ಷತೆಗಾಗಿಯೇ ನಿನ್ನ ನೆರೆಯವನ ಸಮೀಪದಲ್ಲಿ ವಾಸಿಸುತ್ತಿದ್ದೀಯಲ್ಲಾ!
ಙ್ಞಾನೋಕ್ತಿಗಳು 3 : 30 (ERVKN)
ನಿನಗೆ ಕೇಡನ್ನು ಮಾಡಿಲ್ಲದಿರುವವನನ್ನು ನಿಷ್ಕಾರಣವಾಗಿ ನ್ಯಾಯಾಲಯಕ್ಕೆ ಕೊಂಡೊಯ್ಯಬೇಡ.
ಙ್ಞಾನೋಕ್ತಿಗಳು 3 : 31 (ERVKN)
ಬಲಾತ್ಕಾರಿಯನ್ನು ಕಂಡು ಹೊಟ್ಟೆಕಿಚ್ಚುಪಡಬೇಡ; ಅವನ ನಡತೆಯನ್ನು ಅನುಸರಿಸಬೇಡ.
ಙ್ಞಾನೋಕ್ತಿಗಳು 3 : 32 (ERVKN)
ಯೆಹೋವನಿಗೆ ವಕ್ರಬುದ್ಧಿಯುಳ್ಳವರು ಅಸಹ್ಯ. ಆದರೆ ಆತನು ಯಥಾರ್ಥರೊಂದಿಗೆ ಸ್ನೇಹದಿಂದಿರುವನು.
ಙ್ಞಾನೋಕ್ತಿಗಳು 3 : 33 (ERVKN)
ದುಷ್ಟರ ಮನೆಯ ಮೇಲೆ ಯೆಹೋವನ ಶಾಪವಿರುವುದು; ಆದರೆ ನೀತಿವಂತರ ಮನೆಯ ಮೇಲೆ ಆತನ ಆಶೀರ್ವಾದವಿರುವುದು.
ಙ್ಞಾನೋಕ್ತಿಗಳು 3 : 34 (ERVKN)
ಯಾರು ಗರ್ವದಿಂದ ಬೇರೆಯವರನ್ನು ಗೇಲಿಮಾಡುತ್ತಾರೊ ಅವರನ್ನು ಯೆಹೋವನೂ ಗೇಲಿಮಾಡುತ್ತಾನೆ. ದೀನರಿಗಾದರೋ ಆತನ ಕರುಣೆ ದೊರೆಯುವುದು.
ಙ್ಞಾನೋಕ್ತಿಗಳು 3 : 35 (ERVKN)
ಜ್ಞಾನಿಗಳು ಸನ್ಮಾನ ಹೊಂದುವರು; ಮೂಢರಿಗೆ ಅವಮಾನವಾಗುವುದು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35