ಙ್ಞಾನೋಕ್ತಿಗಳು 5 : 1 (ERVKN)
ವ್ಯಭಿಚಾರಕ್ಕೆ ದೂರವಾಗಿರು ನನ್ನ ಮಗನೇ, ನನ್ನ ಜ್ಞಾನೋಪದೇಶವನ್ನು ಕೇಳು. ನನ್ನ ವಿವೇಕದ ಮಾತುಗಳಿಗೆ ಗಮನಕೊಡು.
ಙ್ಞಾನೋಕ್ತಿಗಳು 5 : 2 (ERVKN)
ಆಗ ನೀನು ಯೋಗ್ಯವಾಗಿ ನಡೆದುಕೊಳ್ಳುವೆ; ತಿಳುವಳಿಕೆಯಿಂದ ಮಾತಾಡುವೆ.
ಙ್ಞಾನೋಕ್ತಿಗಳು 5 : 3 (ERVKN)
ಮತ್ತೊಬ್ಬನ ಹೆಂಡತಿಯ ಮಾತುಗಳು ಜೇನಿನಂತೆ ಸಿಹಿಯಾಗಿವೆ; ಎಣ್ಣೆಗಿಂತ ನಯವಾಗಿವೆ.
ಙ್ಞಾನೋಕ್ತಿಗಳು 5 : 4 (ERVKN)
ಆದರೆ ಕೊನೆಗೆ ಆಕೆಯು ವಿಷದಂತೆ ಕಹಿಯಾಗುವಳು; ಖಡ್ಗದಂತೆ ತೀಕ್ಷ್ಣವಾಗುವಳು.
ಙ್ಞಾನೋಕ್ತಿಗಳು 5 : 5 (ERVKN)
ಆಕೆಯ ಹೆಜ್ಜೆಗಳು ಮರಣದ ಕಡೆಗೆ ಹೋಗುತ್ತವೆ. ಆಕೆ ನಿನ್ನನ್ನು ನೇರವಾಗಿ ಪಾತಾಳಕ್ಕೆ ನಡೆಸುತ್ತಾಳೆ!
ಙ್ಞಾನೋಕ್ತಿಗಳು 5 : 6 (ERVKN)
ಆಕೆಯನ್ನು ಹಿಂಬಾಲಿಸಬೇಡ! ಆಕೆ ನೀತಿಮಾರ್ಗವನ್ನು ಬಿಟ್ಟುಹೋಗಿದ್ದಾಳೆ; ಅದು ಆಕೆಗೆ ಗೊತ್ತೇ ಇಲ್ಲ. ಎಚ್ಚರಿಕೆಯಿಂದಿರು! ಜೀವ ಮಾರ್ಗವನ್ನು ಹಿಂಬಾಲಿಸು!
ಙ್ಞಾನೋಕ್ತಿಗಳು 5 : 7 (ERVKN)
ಇಂತಿರಲು, ನನ್ನ ಮಗನೇ, ನನಗೆ ಕಿವಿಗೊಡು, ನನ್ನ ಮಾತುಗಳನ್ನು ಮರೆಯಬೇಡ.
ಙ್ಞಾನೋಕ್ತಿಗಳು 5 : 8 (ERVKN)
ವ್ಯಭಿಚಾರಿಣಿಯಿಂದ ದೂರವಾಗಿರು. ಅವಳ ಮನೆಯ ಬಾಗಿಲ ಸಮೀಪಕ್ಕೂ ಹೋಗಬೇಡ.
ಙ್ಞಾನೋಕ್ತಿಗಳು 5 : 9 (ERVKN)
ಒಂದುವೇಳೆ ನೀನು ಹೋದರೆ, ನಿನ್ನ ಮೇಲೆ ಜನರಿಗಿರುವ ಗೌರವವನ್ನು ಕಳೆದುಕೊಳ್ಳುವಿ; ಕ್ರೂರಿಗಳಿಂದ ಯೌವನದಲ್ಲಿಯೇ ಸಾವಿಗೀಡಾಗುವಿ.
ಙ್ಞಾನೋಕ್ತಿಗಳು 5 : 10 (ERVKN)
ನಿನಗೆ ಗೊತ್ತಿಲ್ಲದವರು ನಿನ್ನ ಐಶ್ವರ್ಯವನ್ನೆಲ್ಲಾ ತೆಗೆದುಕೊಳ್ಳುವರು; ನೀನು ದುಡಿದು ಸಂಪಾದಿಸಿದ್ದನ್ನು ಬೇರೆಯವರು ಪಡೆದುಕೊಳ್ಳುವರು.
ಙ್ಞಾನೋಕ್ತಿಗಳು 5 : 11 (ERVKN)
ಕೊನೆಯಲ್ಲಿ, ನಿನ್ನ ಆರೋಗ್ಯವೆಲ್ಲಾ ಕೆಟ್ಟುಹೋಗಿ ನಿನ್ನಲ್ಲಿರುವುದನ್ನೆಲ್ಲಾ ಕಳೆದುಕೊಂಡು ನೀನು ಗೋಳಾಡುವಿ.
ಙ್ಞಾನೋಕ್ತಿಗಳು 5 : 12 (ERVKN)
(12-13) ಆಗ ನೀನು, “ನಾನೇಕೆ ನನ್ನ ತಂದೆತಾಯಿಗಳ ಮಾತನ್ನು ಕೇಳಲಿಲ್ಲ? ನಾನೇಕೆ ನನ್ನ ಉಪದೇಶಕರ ಮಾತಿಗೆ ಕಿವಿಗೊಡಲಿಲ್ಲ? ನಾನು ಅವರ ಸದುಪದೇಶವನ್ನು ದ್ವೇಷಿಸಿದ್ದರಿಂದಲೂ ಅವರ ಬುದ್ಧಿಮಾತನ್ನು ತಳ್ಳಿಬಿಟ್ಟಿದ್ದರಿಂದಲೂ
ಙ್ಞಾನೋಕ್ತಿಗಳು 5 : 13 (ERVKN)
ಙ್ಞಾನೋಕ್ತಿಗಳು 5 : 14 (ERVKN)
ನಾನು ಜನರೆಲ್ಲರ ಎದುರಿನಲ್ಲಿ ನಾಚಿಕೆಗೀಡಾಗಿದ್ದೇನೆ” ಎಂದು ಹೇಳುವಿ.
ಙ್ಞಾನೋಕ್ತಿಗಳು 5 : 15 (ERVKN)
ನಿನ್ನ ಸ್ವಂತ ಹೆಂಡತಿಗೆ ನಂಬಿಗಸ್ತನಾಗಿರು; ನಿನ್ನ ಪ್ರೀತಿಯು ಆಕೆಗೆ ಮಾತ್ರ ಸಲ್ಲಲಿ.
ಙ್ಞಾನೋಕ್ತಿಗಳು 5 : 16 (ERVKN)
ಬೇರೆ ಸ್ತ್ರೀಯರಲ್ಲಿ ನೀನು ಮಕ್ಕಳನ್ನು ಪಡೆಯುವುದು ಒಳ್ಳೆಯದಲ್ಲ.
ಙ್ಞಾನೋಕ್ತಿಗಳು 5 : 17 (ERVKN)
ನಿನ್ನ ಮಕ್ಕಳು ನಿನ್ನವರೇ ಆಗಿರಲಿ; ಪರರು ನಿನ್ನೊಂದಿಗೆ ಪಾಲುಗಾರರಾಗದಿರಲಿ.
ಙ್ಞಾನೋಕ್ತಿಗಳು 5 : 18 (ERVKN)
ಆದ್ದರಿಂದ ಯೌವನಪ್ರಾಯದಲ್ಲಿ ನೀನು ಮದುವೆಮಾಡಿಕೊಂಡ ಸ್ತ್ರೀಯೊಡನೆ ಸಂತೋಷಿಸು.
ಙ್ಞಾನೋಕ್ತಿಗಳು 5 : 19 (ERVKN)
ಆಕೆ ಸುಂದರವಾದ ಜಿಂಕೆಯಂತೆಯೂ ಅಂದವಾದ ಕಾಡುಮೇಕೆಯಂತೆಯೂ ಇದ್ದಾಳೆ. ಆಕೆಯ ಸ್ತನಗಳು ನಿನ್ನನ್ನು ಸಂಪೂರ್ಣವಾಗಿ ತೃಪ್ತಿಪಡಿಸಲಿ. ಆಕೆಯ ಪ್ರೀತಿಯಲ್ಲೇ ಲೀನವಾಗಿರು.
ಙ್ಞಾನೋಕ್ತಿಗಳು 5 : 20 (ERVKN)
ಪರಸ್ತ್ರೀಯಲ್ಲಿ ಮೋಹಗೊಂಡು ಆಕೆಯನ್ನು ಅಪ್ಪಿಕೊಳ್ಳಬೇಡ.
ಙ್ಞಾನೋಕ್ತಿಗಳು 5 : 21 (ERVKN)
ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ; ಯೆಹೋವನು ಅವುಗಳನ್ನು ಪರೀಕ್ಷಿಸುತ್ತಾನೆ.
ಙ್ಞಾನೋಕ್ತಿಗಳು 5 : 22 (ERVKN)
ಕೆಡುಕನ ದುಷ್ಕೃತ್ಯಗಳು ಅವನನ್ನೇ ಹಿಡಿಯುತ್ತವೆ. ಅವನ ಪಾಪಗಳು ಹಗ್ಗದಂತೆ ಅವನನ್ನೇ ಬಂಧಿಸುತ್ತವೆ.
ಙ್ಞಾನೋಕ್ತಿಗಳು 5 : 23 (ERVKN)
ಅವನು ಬುದ್ಧಿವಾದವನ್ನು ತಿರಸ್ಕರಿಸಿದ್ದರಿಂದ ಸಾಯುವನು; ತನ್ನ ಅತಿಮೂರ್ಖತನದಿಂದ ದಾರಿತಪ್ಪುವನು.

1 2 3 4 5 6 7 8 9 10 11 12 13 14 15 16 17 18 19 20 21 22 23