ಙ್ಞಾನೋಕ್ತಿಗಳು 7 : 1 (ERVKN)
ಜ್ಞಾನವು ನಿನ್ನನ್ನು ವ್ಯಭಿಚಾರದಿಂದ ದೂರವಿಡುತ್ತದೆ ನನ್ನ ಮಗನೇ, ನನ್ನ ಮಾತುಗಳನ್ನು ಜ್ಞಾಪಕಮಾಡಿಕೊ, ನನ್ನ ಆಜ್ಞೆಗಳನ್ನು ಮರೆಯಬೇಡ.
ಙ್ಞಾನೋಕ್ತಿಗಳು 7 : 2 (ERVKN)
ನನ್ನ ಆಜ್ಞೆಗಳಿಗೆ ವಿಧೇಯನಾಗು, ಆಗ ನೀನು ಜೀವಿಸುವೆ. ನಿನ್ನ ಕಣ್ಣುಗುಡ್ಡೆಗಳೊ ಎಂಬಂತೆ ನನ್ನ ಉಪದೇಶಗಳಿಗೆ ಎಚ್ಚರಿಕೆಯಿಂದ ವಿಧೇಯನಾಗಿರು.
ಙ್ಞಾನೋಕ್ತಿಗಳು 7 : 3 (ERVKN)
ಅವುಗಳನ್ನು ನಿನ್ನ ಬೆರಳುಗಳ ಸುತ್ತಲೂ ಕಟ್ಟಿಕೊ; ನಿನ್ನ ಹೃದಯದ ಮೇಲೆ ಬರೆದುಕೊ,
ಙ್ಞಾನೋಕ್ತಿಗಳು 7 : 4 (ERVKN)
ಜ್ಞಾನವನ್ನು ನಿನ್ನ ಸಹೋದರಿಯಂತೆ ಪ್ರೀತಿಸು. ವಿವೇಕವನ್ನು ನಿನ್ನ ಕುಟುಂಬದಂತೆ ಪ್ರೀತಿಸು.
ಙ್ಞಾನೋಕ್ತಿಗಳು 7 : 5 (ERVKN)
ಆಗ ಅವು ನಿನ್ನನ್ನು ಬೇರೆ ಹೆಂಗಸರಿಂದ ತಪ್ಪಿಸಿ ಕಾಪಾಡುತ್ತವೆ; ನಿನ್ನನ್ನು ಪಾಪಕ್ಕೆ ನಡೆಸುವಂಥ ಅವರ ಸವಿ ಮಾತುಗಳಿಂದ ತಪ್ಪಿಸಿ ಕಾಪಾಡುತ್ತವೆ.
ಙ್ಞಾನೋಕ್ತಿಗಳು 7 : 6 (ERVKN)
ಒಂದು ದಿನ ನಾನು ನನ್ನ ಮನೆಯ ಕಿಟಿಕಿಯಿಂದ ನೋಡಿದಾಗ
ಙ್ಞಾನೋಕ್ತಿಗಳು 7 : 7 (ERVKN)
ಅನೇಕ ಮೂಢ ಯೌವನಸ್ಥರನ್ನು ಕಂಡೆನು. ಅವರಲ್ಲಿ ತುಂಬಾ ಮೂಢನಾಗಿದ್ದ ಒಬ್ಬ ಯೌವನಸ್ಥನನ್ನು ಗಮನಿಸಿದೆ.
ಙ್ಞಾನೋಕ್ತಿಗಳು 7 : 8 (ERVKN)
ಅವನು ಒಬ್ಬ ಕೆಟ್ಟ ಹೆಂಗಸಿನ ಬೀದಿಯಲ್ಲಿ ಆಕೆಯ ಮನೆಯ ಕಡೆಗೆ ಹೋಗುತ್ತಿದ್ದನು.
ಙ್ಞಾನೋಕ್ತಿಗಳು 7 : 9 (ERVKN)
ಆಗ ಕತ್ತಲಾಗುತ್ತಿತ್ತು. ಸೂರ್ಯ ಮುಳುಗುತ್ತಿದ್ದನು; ರಾತ್ರಿ ಆರಂಭವಾಗುತ್ತಿತ್ತು.
ಙ್ಞಾನೋಕ್ತಿಗಳು 7 : 10 (ERVKN)
ಆ ಹೆಂಗಸು ಅವನನ್ನು ಎದುರುಗೊಳ್ಳಲು ಮನೆಯ ಹೊರಗಡೆ ಬಂದಳು. ಆಕೆಯ ಉಡುಪು ವ್ಯಭಿಚಾರಿಣಿಯ ಉಡುಪಿನಂತಿತ್ತು. ಅವನೊಡನೆ ಪಾಪಮಾಡಬೇಕೆಂಬ ಆಸೆ ಆಕೆಯಲ್ಲಿತ್ತು.
ಙ್ಞಾನೋಕ್ತಿಗಳು 7 : 11 (ERVKN)
ಅವಳು ಸುಮ್ಮನಿರದವಳೂ ಹಟಮಾರಿಯೂ ಆಗಿದ್ದಾಳೆ. ಅವಳು ಎಂದೂ ಮನೆಯಲ್ಲಿ ಇದ್ದವಳಲ್ಲ.
ಙ್ಞಾನೋಕ್ತಿಗಳು 7 : 12 (ERVKN)
ಅವಳು ಪ್ರತಿಯೊಂದು ಮೂಲೆಯಲ್ಲೂ ಗಂಡಸರನ್ನು ಬಲೆಗೆ ಹಾಕಿಕೊಳ್ಳಲು ಕಾದುಕೊಂಡಿರುವಳು. ಅವಳು ಬೀದಿಗಳಲ್ಲಿ ನಡೆದು ಹೋದಳು.
ಙ್ಞಾನೋಕ್ತಿಗಳು 7 : 13 (ERVKN)
ಅವಳು ಆ ಯೌವನಸ್ಥನನ್ನು ಹಿಡಿದುಕೊಂಡು ಮುದ್ದಿಟ್ಟಳು. ಅವಳು ನಾಚಿಕೆಯಿಲ್ಲದೆ ಅವನಿಗೆ,
ಙ್ಞಾನೋಕ್ತಿಗಳು 7 : 14 (ERVKN)
“ಈ ದಿನ ನಾನು ಸಮಾಧಾನಯಜ್ಞವನ್ನು ಅರ್ಪಿಸಬೇಕಿತ್ತು. ನನ್ನ ಹರಕೆಯನ್ನು ಸಲ್ಲಿಸಿದೆನು. ಯಜ್ಞದಲ್ಲಿ ಉಳಿದ ಮಾಂಸ ನನ್ನಲ್ಲಿ ಬಹಳಷ್ಟಿದೆ.
ಙ್ಞಾನೋಕ್ತಿಗಳು 7 : 15 (ERVKN)
ಆದ್ದರಿಂದ ನನ್ನೊಂದಿಗೆ ಬರುವಂತೆ ನಿನ್ನನ್ನು ಕರೆಯಲು ಬಂದೆ. ನಿನಗಾಗಿ ಹುಡುಕಾಡಿ ಈಗ ನಿನ್ನನ್ನು ಕಂಡುಕೊಂಡೆ.
ಙ್ಞಾನೋಕ್ತಿಗಳು 7 : 16 (ERVKN)
ನನ್ನ ಹಾಸಿಗೆಯನ್ನು ಈಜಿಪ್ಟಿನ ಸುಂದರವಾದ ಹೊದಿಕೆಗಳಿಂದ ಹೊದಿಸಿ
ಙ್ಞಾನೋಕ್ತಿಗಳು 7 : 17 (ERVKN)
ಪರಿಮಳದ್ರವ್ಯವನ್ನು ಚಿಮಿಕಿಸಿರುವೆ. ಆ ಪರಿಮಳದ್ರವ್ಯವನ್ನು ರಕ್ತಬೋಳ, ಅಗುರು ಮತ್ತು ಲವಂಗಚಕ್ಕೆಗಳಿಂದ ತಯಾರಿಸಿರುವೆ.
ಙ್ಞಾನೋಕ್ತಿಗಳು 7 : 18 (ERVKN)
ಬಾ, ನಾವು ಮುಂಜಾನೆಯವರೆಗೆ ಪ್ರೇಮಿಸೋಣ; ರಾತ್ರಿಯೆಲ್ಲಾ ಸುಖಿಸೋಣ.
ಙ್ಞಾನೋಕ್ತಿಗಳು 7 : 19 (ERVKN)
ನನ್ನ ಗಂಡನು ವ್ಯಾಪಾರಕ್ಕಾಗಿ ದೂರದೇಶಕ್ಕೆ ಹೋಗಿದ್ದಾನೆ.
ಙ್ಞಾನೋಕ್ತಿಗಳು 7 : 20 (ERVKN)
ದೀರ್ಘಪ್ರಯಾಣಕ್ಕೆ ಬೇಕಾದಷ್ಟು ಹಣವನ್ನು ಅವನು ತನ್ನೊಡನೆ ತೆಗೆದುಕೊಂಡು ಹೋಗಿದ್ದಾನೆ; ಎರಡು ವಾರಗಳವರೆಗೆ ಅವನು ಮನೆಗೆ ಬರುವುದಿಲ್ಲ” ಎಂದು ಹೇಳಿದಳು.
ಙ್ಞಾನೋಕ್ತಿಗಳು 7 : 21 (ERVKN)
ಅವಳು ಆ ಯೌವನಸ್ಥನನ್ನು ಪ್ರೇರೇಪಿಸಲು ಈ ಮಾತುಗಳನ್ನಾಡಿದಳು. ಆಕೆಯ ಸವಿನುಡಿಗಳು ಅವನನ್ನು ಮರುಳುಗೊಳಿಸಿತು.
ಙ್ಞಾನೋಕ್ತಿಗಳು 7 : 22 (ERVKN)
(22-23) ಆ ಯೌವನಸ್ಥನು ಬಲೆಗೆ ಸಿಕ್ಕಿಕೊಳ್ಳುವುದಕ್ಕಾಗಿ ಆಕೆಯನ್ನು ತಕ್ಷಣವೇ ಹಿಂಬಾಲಿಸಿದನು. ಕೊಯ್ಯಲು ಎಳೆದೊಯ್ಯುವ ಹೋರಿಯಂತೆಯೂ ಬೇಟೆಗಾರನು ಬಾಣ ಹೂಡಿ ಎದೆಗೆ ಗುರಿಮಾಡಿದಾಗ ಜಿಗಿದುಕೊಂಡು ಹೋಗುವ ಜಿಂಕೆಯಂತೆಯೂ ಬಲೆಯೊಳಗೆ ಹಾರಿ ಹೋಗುವ ಪಕ್ಷಿಯಂತೆಯೂ ಅವನಿದ್ದನು. ತಾನು ಅಪಾಯದಲ್ಲಿರುವುದು ಅವನಿಗೆ ತಿಳಿದಿರಲಿಲ್ಲ.
ಙ್ಞಾನೋಕ್ತಿಗಳು 7 : 23 (ERVKN)
ಙ್ಞಾನೋಕ್ತಿಗಳು 7 : 24 (ERVKN)
ಗಂಡುಮಕ್ಕಳೇ, ನನಗೆ ಕಿವಿಗೊಡಿರಿ. ನಾನು ಹೇಳುವ ಮಾತುಗಳಿಗೆ ಗಮನಕೊಡಿರಿ.
ಙ್ಞಾನೋಕ್ತಿಗಳು 7 : 25 (ERVKN)
ಅಂತಹ ಹೆಂಗಸಿನ ಬಗ್ಗೆ ಯೋಚಿಸಲೂಬೇಡಿ, ಆಕೆಗಾಗಿ ಅಲೆದಾಡಲೂಬೇಡಿ.
ಙ್ಞಾನೋಕ್ತಿಗಳು 7 : 26 (ERVKN)
ಆಕೆಯಿಂದ ಅನೇಕ ಗಂಡಸರು ಬಿದ್ದುಹೋಗಿದ್ದಾರೆ; ಅವಳು ಅನೇಕ ಗಂಡಸರನ್ನು ನಾಶಮಾಡಿದ್ದಾಳೆ.
ಙ್ಞಾನೋಕ್ತಿಗಳು 7 : 27 (ERVKN)
ಅವಳ ಮನೆಯು ಪಾತಾಳದ ಮಾರ್ಗದಲ್ಲಿದೆ. ಅವಳ ದಾರಿ ನೇರವಾಗಿ ಮರಣಕ್ಕೆ ನಡೆಸುತ್ತದೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27